ರಿಪ್ಪನ್ ಪೇಟೆ : ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ :  ಶಿರಸಿ ಹಾಗೂ ಸಾಗರದ ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ  ಇಂದು ಸಂಜೆ ರಾಜ್ಯ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು. ಗೃಹ ಸಚಿವರ ದಿಢೀರ್ ಆಗಮನವಾದಾಗ ನೂರಾರು ಸಂಖ್ಯೆಯಲ್ಲಿ  ಜಮಾವಣೆಗೊಂಡ ಕಾರ್ಯಕರ್ತರನ್ನು ನೋಡಿದ ಗೃಹ ಸಚಿವರು ವಿನಾಯಕ ವೃತ್ತದಲ್ಲಿ  ಕಾರ್ ನಿಲ್ಲಿಸಿ ತಕ್ಷಣ ಕಾರ್ ನಿಂದ ಇಳಿದು ಕಾರ್ಯಕರ್ತರೊಂದಿಗೆ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ…

Read More

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಹಾಗೂ ರಿಪ್ಪನ್ ಪೇಟೆ ಗ್ರಾಮಾಡಳಿತದಿಂದ ಚಿಕ್ಕಬೀರನ ಕೆರೆಗೆ ಕಾಯಕಲ್ಪ:

ರಿಪ್ಪನ್ ಪೇಟೆ : ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಗ್ರಾಮಾಧ್ಯಕ್ಷೆ ಮಂಜುಳಾರವರ ಅಧ್ಯಕ್ಷತೆಯಲ್ಲಿ ಚಿಕ್ಕಬೀರನಕೆರೆ ಕೆರೆ ಹೂಳು ತೆಗೆಯುವ ಬಗ್ಗೆ ಸಾರ್ವಜನಿಕರ ಸಮಾಲೋಚನಾ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಸರ್ಕಾರ ಮಾಡದಂತಹ ಅಭಿವೃದ್ದಿ ಕಾರ್ಯಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಶ್ವಾರ್ಥ ಸೇವೆಯ ಮೂಲಕ ಕೆರೆಗಳ ಪುನಶ್ಚೇತನಕ್ಕೆ ಹೆಚ್ಚು ಆದ್ಯತೆ ನೀಡುವುದರೊಂದಿಗೆ ಕೆರೆಗಳಲ್ಲಿನ ಹೂಳು ತೆಗೆದು ಅಂತರ್ಜಲ ಹೆಚ್ಚಿಸುವ ಕಾರ್ಯದಲ್ಲಿ ಧರ್ಮಸ್ಥಳ…

Read More

ಸಚಿವ ಈಶ್ವರಪ್ಪ ರಾಜೀನಾಮೆ ನೀಡುವಂತೆ ಒತ್ತಾಯಿಸಿ ರಿಪ್ಪನ್ ಪೇಟೆ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ :

ರಿಪ್ಪನ್ ಪೇಟೆ : ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಘಟನೆಗೆ ಸಂಬಂಧಿಸಿದಂತೆ ಸಚಿವರಾದ ಕೆ.ಎಸ್. ಈಶ್ವರಪ್ಪನವರ ಹೆಸರು ಲಂಚಾರೋಪದಲ್ಲಿ ಪ್ರಸ್ತಾಪವಾಗಿದ್ದು, ಉಲ್ಲೇಖಿಸಿದ ವ್ಯಕ್ತಿಯು ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಘಟನೆಗೆ ಸಚಿವರು ಕಾರಣವೆಂದು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಸಚಿವರು ನೈತಿಕ ಹೊಣೆಹೊತ್ತು ಕೂಡಲೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ರಿಪ್ಪನ್ ಪೇಟೆ ಆಮ್ ಆದ್ಮಿ ಪಕ್ಷದ ವತಿಯಿಂದ ನಾಡ ಕಛೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಆಮ್ ಅದ್ಮಿ ಪಕ್ಷದ ತಾಲೂಕ್ ಉಪಾಧ್ಯಕ್ಷರಾದ ಹಸನಬ್ಬ…

Read More

ಹುಂಚಾ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನಡೆದ ನವೋದಯ ಶಾಲೆ – ಉಚಿತ ತರಬೇತಿ ಶಿಬಿರ :

 ಹುಂಚ ಗ್ರಾಮದ ಶ್ರೀ ರಂಗರಾವ್ ಸ್ಮಾರಕ ಸಭಾಭವನ, ಶ್ರೀ ಪದ್ಮಾಂಬಾ ಪ್ರೌಢಶಾಲೆಯಲ್ಲಿ ನವೋದಯ ಶಾಲೆ – ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಭಾಗವಾಗಿ “ಪೋಷಕರ ಸಭೆ ಮತ್ತು ಸಂವಾದ” ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ಹುಂಚ ಗ್ರಾಮ ವ್ಯಾಪ್ತಿಯ, 8 ವಿವಿಧ ಶಾಲೆಗಳಿಂದ, 5ನೇ ತರಗತಿಯಲ್ಲಿ ಓದುತ್ತಿರುವ, ನವೋದಯ ಪ್ರವೇಶ ಪರೀಕ್ಷೆ ಕಟ್ಟಿರುವ 21 ಮಕ್ಕಳು ಮತ್ತು ಅವರ ಪೋಷಕರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಅತಿಥಿಗಳಾಗಿ ಲೇಖಕರು ನವೋದಯ ಮಾಸ್ಟರ್ ಗೈಡ್ ಮತ್ತು ಉಪನ್ಯಾಸಕರಾದ…

Read More

ರಿಪ್ಪನ್ ಪೇಟೆ : ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ರಿಪ್ಪನ್ ಪೇಟೆ : 2021-22 ನೇ ಸಾಲಿನಲ್ಲಿ ನೂತನ  ರಾಷ್ಟ್ರೀಯ ಶಿಕ್ಷಣ ನೀತಿ 2022 ರ ಅಡಿಯಲ್ಲಿ ಪ್ರಥಮ ಬಿಎ, ಬಿಬಿಎ ಮತ್ತು ಬಿಎಸ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ದಿಢೀರ್  ಏರಿಕೆ ಮಾಡಿರುವುದನ್ನು ಖಂಡಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಹಿಂದಿನ ವರ್ಷಗಳಲ್ಲಿ 700 ರೂ ಇದ್ದ ಪರೀಕ್ಷಾ ಶುಲ್ಕವನ್ನು 2020 ರೂ ಗೆ ಏರಿಸಿರುವುದು ಖಂಡನಾರ್ಹ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕುಟುಂಬಕ್ಕೆ…

Read More

“ಹಳ್ಳಿ ಮಕ್ಕಳ ರಂಗ ಹಬ್ಬ” ಶಿಬಿರಕ್ಕೆ ಆಸಕ್ತ ಮಕ್ಕಳಿಂದ ಅರ್ಜಿ ಆಹ್ವಾನ :

ರಿಪ್ಪನ್‌ಪೇಟೆ: ದಿ || ಎಂ.ಕೆ.ರೇಣುಕಪ್ಪಗೌಡ ಪ್ರತಿಷ್ಠಾನ ಮಸರೂರು ಮತ್ತು ಮಲೆನಾಡು ಕಲಾ ತಂಡ ರಿಪ್ಪನ್‌ಪೇಟೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 13ರಿಂದ 15ದಿನಗಳ ಕಾಲ ರಿಪ್ಪನ್‌ಪೇಟೆಯ ಸರ್ಕಾರಿ ಮಾದರಿ ಹಿರಿಯ ಬಾಲಕರ ಪಾಠ ಶಾಲೆಯಲ್ಲಿ “ಹಳ್ಳಿ ಮಕ್ಕಳ ರಂಗ ಹಬ್ಬ” ರಂಗ ಹಬ್ಬವನ್ನು ಆಯೋಜಿಸಲಾಗಿದೆ ಎಂದು ಮಲೆನಾಡು ಕಲಾ ತಂಡದ ಸಂಚಾಲಕ ಗಣೇಶ ಮಸರೂರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ರಂಗ ಹಬ್ಬದಲ್ಲಿ 9 ವರ್ಷದಿಂದ…

Read More

ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ :ಶ್ರೀ ರೇಣುಕಾನಂದ ಸ್ವಾಮೀಜಿ

ರಿಪ್ಪನ್ ಪೇಟೆ : ಮಾನವನ ಬದುಕಿನಲ್ಲಿ ಶಿಕ್ಷಣ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಪೋಷಕರು  ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ ಎಂದು ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು.  ಹಾರಂಬಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು….

Read More

ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ : ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸಿ :ನಾಗರಾಜ ಪರಿಸರ.

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನದಲ್ಲಿ  ಶಿಕ್ಷಣ  ಪಡೆಯುತ್ತಿರುವ ಯುವ ಸಮೂಹ  ಪ್ರತಿಯೊಬ್ಬರನ್ನು  ಗೌರವಿಸುವ  ಮನೋಭಾವನೆಯನ್ನು ಬೆಳೆಸಿಕೊಂಡರೆ  ಉತ್ತಮ ಸಮಾಜ  ನಿರ್ಮಾಣ ಮಾಡಬಹುದು ಎಂದು ಕುವೆಂಪು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜನೆ ಅಧಿಕಾರಿ  ಡಾ. ನಾಗರಾಜ  ಪರಿಸರ  ಹೇಳಿದರು.  ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂದಿನ ಯುವ ಸಮೂಹ ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸುವಂತಾಗಬೇಕು. ಅಂತ ಮನೋಭಾವನೆಯನ್ನು…

Read More

“ಸ್ವಧರ್ಮದಲ್ಲಿ ನಿಷ್ಠೆ, ಪರ ಧರ್ಮದಲ್ಲಿ ಸಹಿಷ್ಣುತಾ “: ಭಾವವನ್ನು ಹೊಂದಿರುವ ದೇಶ ನಮ್ಮದು : ಮಳಲಿ ಶ್ರೀ

 ರಿಪ್ಪನ್ ಪೇಟೆ : ನಮ್ಮ ದೇಶವು ಅನೇಕ ಧರ್ಮಗಳ ಮಹಾಸಾಗರ ವಾಗಿದ್ದು ಅನೇಕತೆಯಲ್ಲಿ ಏಕತೆಯನ್ನು ಹೊಂದಿ ಸ್ವಧರ್ಮದಲ್ಲಿ ನಿಷ್ಠೆ ಪರಧರ್ಮ ದಲ್ಲಿ ಸಹಿಷ್ಣುತಾ ಭಾವವನ್ನು ಹೊಂದಿರುವ ದೇಶವಾಗಿದೆ ಎಂದು ಮಳಲಿ ಮಠದ  ಶ್ರೀ ಡಾ.  ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.  ರಿಪ್ಪನ್ ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಇಂದು ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಹೊಸವರ್ಷದ ಧ್ವಜಾರೋಹಣದ  ಯುಗಾದಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ  ಸ್ವಾಮೀಜಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.  ವಿಶ್ವದ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಭಾರತವು…

Read More

ಬಡಮಕ್ಕಳ ಶಿಕ್ಷಣದಿಂದ ಸಮಾಜ ಸುಶಿಕ್ಷಿತ : ಕೋಣಂದೂರು ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ರಿಪ್ಪನ್‌ಪೇಟೆ: ಬಡಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ. ಎಂಬ ಕಲ್ಪನೆಯಲ್ಲಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹೊಂದಿದ್ದರು ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಿದ್ಧಗಂಗಾ ಶ್ರೀಗಳ ಭಕ್ತವೃಂದದವತಿಯಿಂದ ಇಂದು ಶ್ರೀ ಡಾ. ಶಿವಕುಮಾರಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಆರ್ಥಿಕ ಸಬಲರಲ್ಲದ ಗ್ರಾಮೀಣ ಭಾಗದ  ಮಕ್ಕಳಿಗೆ ಶಿಕ್ಷಣ ದುರ್ಲಬವಾಗಿದ್ದ ಸಂದರ್ಭದಲ್ಲಿ ಸ್ವಾಮೀಜಗೆ ಶ್ರೀಮಠದಲ್ಲಿ ವಿದ್ಯಾ ಕೇಂದ್ರವನ್ನು ತೆರೆದು ತನ್ಮೂಲಕ, ಅನ್ನ, ಅಕ್ಷರ…

Read More