ರಿಪ್ಪನ್‌ಪೇಟೆಯಲ್ಲಿ ಕಾನೂನು ಬಾಹಿರ ಟ್ಯಾಕ್ಸಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹ :
ರಿಪ್ಪನ್‌ಪೇಟೆ : ಸರ್ಕಾರಕ್ಕೆ ತೆರಿಗೆಯನ್ನು ವಂಚಿಸುತ್ತಿರುವ ಪಟ್ಟಣದ ವೈಟ್ ಬೋರ್ಡ್ ಕಾನೂನು ಬಾಹಿರ ಟ್ಯಾಕ್ಸಿಗಳು ಪ್ರವಾಸಿ ಸ್ಥಳಗಳಿಗೆ ಬಾಡಿಗೆ ಹೋಗುವುದರ ಬಗ್ಗೆ ಕಾನೂನು ರೀತಿಯ ಕ್ರಮಗಳನ್ನು ಕೈಗೊಂಡು ಅವುಗಳನ್ನು ನಿಷೇಧಿಸಬೇಕೆಂದು ಕರ್ನಾಟಕ ಪ್ರವಾಸಿ ವಾಹನ ಚಾಲಕರ ಸಂಘದ ವತಿಯಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್ ಐ ಶಿವಾನಂದ್ ಕೋಳಿ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪ್ರವಾಸಿ ವಾಹನಗಳ ಸಂಘದ ಜಿಲ್ಲಾಧ್ಯಕ್ಷರಾದ ಕಾರ್ತಿಕ್ ಶೆಟ್ಟಿ ಪ್ರವಾಸಿ ವಾಹನಗಳ ನಿಲ್ದಾಣಗಳಲ್ಲಿ ವೈಟ್‌ಬೋರ್ಡ್ ಖಾಸಗಿ ಲಘು ವಾಹನಗಳನ್ನು ತಂದು…