w
Headlines
Home » Blog » Page 12

ವಸತಿ ಗೃಹಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು 7.61ಕೋಟಿ ರೂ ಕ್ರಿಯಾ ಯೋಜನೆಗೆ ಅನುಮೋದನೆ : ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಗೋಪಿಶೆಟ್ಟಿಕೊಪ್ಪ ಮತ್ತು ಗೋವಿಂದಾಪುರದಲ್ಲಿ ನಿರ್ಮಿಸಲಾಗುತ್ತಿರುವ ಜಿ ಪ್ಲಸ್ 2 ವಸತಿಗೃಹಗಳಿಗೆ ಮೂಲಸೌಲಭ್ಯ ಕಲ್ಪಿಸಲು 7.61 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ನಗರೋತ್ಥಾನ (ಹಂತ 3) ಅನುದಾನದಲ್ಲಿ 100ಕೋಟಿ ರೂ. ಮಂಜೂರಾಗಿದ್ದು, 92.39 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬಾಕಿ ಉಳಿದಿರುವ ಮೊತ್ತವನ್ನು ಮಾರ್ಗಸೂಚಿ ಪ್ರಕಾರ ವೆಚ್ಚ ಮಾಡಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ…

Read Full News

ಸೊರಬ: ತೀ ನಾ ಶ್ರೀನಿವಾಸ್ ಹೇಳಿಕೆಗೆ ಬಿಜೆಪಿ ಖಂಡನೆ

ಸೊರಬ: ಕಾಂಗ್ರೆಸ್ ಮುಖಂಡ ತೀನಾ ಶ್ರೀನಿವಾಸ್ ರವರು ನೀಡಿರುವ ಸೊರಬದಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂಬ ಹೇಳಿಕೆಯನ್ನು ಖಂಡಿಸಿ ಸೊರಬ ಬಿಜೆಪಿ ಮುಖಂಡರು ಇಂದು ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.  ಈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಗರ್ ಹುಕುಂ ಸಮಿತಿಯ ಸದಸ್ಯರಾದ ದೇವೇಂದ್ರಪ್ಪ ಚನ್ನಾಪುರ ಅವರು ಸಾಗರದ ಕಾಂಗ್ರೆಸ್ ಮುಖಂಡರಾದ ತೀ ನಾ ಶ್ರೀನಿವಾಸ್ ರವರು ಸೊರಬ ತಾಲ್ಲೂಕಿನ ಬಗರ್ ಹುಕುಂ ಸಮಸ್ಯೆಯನ್ನು ಸಂಪೂರ್ಣವಾಗಿ ಪರಿಹರಿಸಿ ಬಿಡುತ್ತೇನೆ ಎಂಬ ವಿಚಾರವಾಗಿ  ಸೊರಬ ತಾಲ್ಲೂಕಿನ ಎಣ್ಣೆಕೊಪ್ಪ ಗುಡ್ಡೇಕೊಪ್ಪ ಹಾಯಾ ಬೆಟ್ಟದಕೂರ್ಲಿ ಸಿದ್ದಿಹಳ್ಳಿ …

Read Full News

ಪ್ರಧಾನಿಗೆ ಪೋಸ್ಟ್ ಕಾರ್ಡ್ ನಲ್ಲಿ ಪತ್ರ ಬರೆದು ಯುವಕಾಂಗ್ರೆಸ್ ವತಿಯಿಂದ ಅಂಚೆಕಚೇರಿ ಎದುರು ಬೃಹತ್ ಪ್ರತಿಭಟನೆ:

ಶಿವಮೊಗ್ಗ: ಜಿಲ್ಲೆಯಲ್ಲಿ ಸಾವಿರಾರು ಜನರಿಗೆ ಅನ್ನಕ್ಕೆ ದಾರಿದೀಪವಾಗಿದ್ದ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಗಳನ್ನ ಸರ್ಕಾರಿ ಖಾಸಗಿಯವರಿಗೆ ನೀಡಲು ಮುಂದಾಗಿದೆ ಈಗಾಗಲೆ ಇದನ್ನ ನಂಬಿಕೊಂಡಿದ್ದ ಸಾವಿರಾರು ಬಡಕಾರ್ಮಿಕರ ಕುಟುಂಭ ಬೀದಿಗೆ ಬಿದ್ದಿದೆ. ಈ ಕಾರಣ ಇದನ್ನ ಸರ್ಕಾರ ಪುನಸ್ಚೇತನ ಗೊಳಿಸುವುದರ ಬದಲೂ ಖಾಸರಿಗಯವರಿಗೆ ನೀಡುವು ಹುನ್ನಾರ ನಡೆಸಿದೆ. ಈ ಕೆಲಸವನ್ನ ಕೂಡಲೇ ಕೈ ಬಿಡಬೇಕು ಹಾಗೂ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಯನ್ನ ಉಳಿಸಬೇಕಿದೆ ಎಂದು ಒತ್ತಾಯಿಸಿ ಇಂದು ಯುವ ಕಾಂಗ್ರೆಸ್‌ ಮುಖಂಡ ಗಣೇಶ್‌ ನೇತೃತ್ವದಲ್ಲಿ ಪತ್ರಚಳುವಳಿಯನ್ನ ನಡೆಸಲಾಯಿತ್ತು. ಇಂದು…

Read Full News

ಚಂದ್ರಗುತ್ತಿ: ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹ

ಚಂದ್ರಗುತ್ತಿ:  ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ ಪಿ ರತ್ನಾಕರ್ ಉದ್ಘಾಟನೆ ಮಾಡಿದರು. ಪೌಷ್ಟಿಕ ಆಹಾರದ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದ ಚಂದ್ರಗುತ್ತಿ ಸರ್ಕಾರಿ ಆಸ್ಪತ್ರೆಯ ನರ್ಸ್  ಮಲ್ಲಮ್ಮ ನುಗ್ಗೆ ಸೊಪ್ಪು ಪೇರಳೆ ಹಣ್ಣು ಕರಿಬೇವಿನ ಸೊಪ್ಪು ಲಿಂಬೆ ಹಾಗೂ ಏಕದಳ ದಾನ್ಯ ದ್ವಿದಳ ದಾನ್ಯ ಹಾಗೂ ಅಯೋಡಿನ್ ಯುಕ್ತ ಉಪ್ಪನ್ನೇ ಬಳಸಿ ಎಂದು  ಇವುಗಳ ಮಹತ್ವ ತಿಳಿಸಿದರು ನಂತರ ಮಾತನಾಡಿದ ಶಿಶು ಅಭಿವೃದ್ಧಿ ಅಧಿಕಾರಿ…

Read Full News

ಗಣೇಶ ಚತುರ್ಥಿ ಆಚರಣೆ ಮಾರ್ಗಸೂಚಿಗೆ ಶಿವಮೊಗ್ಗದ ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ:

ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯ ಆತಂಕ ಹಿನ್ನೆಲೆಯಲ್ಲಿ ಸರ್ಕಾರವು ಗಣಪತಿ ಹಬ್ಬ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ತಜ್ಞರ ಸಲಹೆ ಸೂಚನೆ ಮೇರೆಗೆ ಕೆಲ ನಿರ್ಬಂಧ ವಿಧಿಸಲಾಗಿದೆ. ಆದರೆ, ಶಿವಮೊಗ್ಗದಲ್ಲಿ ಸರ್ಕಾರದ ಮಾರ್ಗಸೂಚಿಗೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಮನೆ, ದೇವಸ್ಥಾನ, ಸರ್ಕಾರಿ ಹಾಗೂ ಖಾಸಗಿ ಸಾರ್ವಜನಿಕ ಬಯಲು ಪ್ರದೇಶದಲ್ಲಿ ಗಣೇಶ ಪ್ರತಿಷ್ಠಾಪಿಸಿ, ಕನಿಷ್ಠ ಸಂಖ್ಯೆಯ ಜನರೊಂದಿಗೆ ಹಬ್ಬ ಅಚರಿಸಲು ಸರ್ಕಾರ ಸೂಚಿಸಿದೆ. ಇದರ ಜೊತೆಗೆ ನಗರ ಭಾಗದಲ್ಲಿ ವಾರ್ಡ್​ಗೆ ಒಂದು ಗಣೇಶನ ಪ್ರತಿಷ್ಠಾಪನೆಗೆ ಸರ್ಕಾರ…

Read Full News

ಸಾಕು ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ! ಶಿಕ್ಷಕಿಯಿಂದ ಬೆಳಕಿಗೆ ಬಂತು ಪ್ರಕರಣ

ತೀರ್ಥಹಳ್ಳಿ: ಸಾಕು ತಂದೆಯೇ ಅಪ್ರಾಪ್ತ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆ ತಾಲೂಕಿನ ಗಬಡಿ ಗ್ರಾಮದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಸಾಕು ತಂದೆ ಮಂಜುನಾಥ್ (36) ಹಾಗು ಮಂಜುನಾಥನ ಸಂಬಂಧಿ ಎದುರುಮನೆ ಯುವಕ ರಾಮು(43) ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಘಟನೆಯ ವಿವರ: ಮೊದಲ ಪತ್ನಿ ತೊರೆದಿದ್ದ ಮಂಜುನಾಥ್ ಕೂಲಿ ಕೆಲಸ ಮಾಡುತ್ತಿದ್ದು, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾದ ವಿಧವೆಯನ್ನು ಮದುವೆಯಾಗಿದ್ದ.ಎರಡನೇ ಪತ್ನಿಗೆ ಹೆಣ್ಣು ಮಗುವಿತ್ತು. ಆ ಅಪ್ರಾಪ್ತ…

Read Full News

ಬೀದಿ ನಾಯಿಗಳ ಮಾರಣಹೋಮ:: 150ಕ್ಕೂ ಹೆಚ್ಚು ನಾಯಿಗಳ ಜೀವಂತ ಸಮಾಧಿ

ಶಿವಮೊಗ್ಗ: ಸುಮಾರು 150ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಜೀವಂತವಾಗಿ ಹೂತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗ್ರಾಮ ಪಂಚಾಯಿತಿಯ ಕಂಬದಾಳು-ಹೊಸೂರು ವ್ಯಾಪ್ತಿಯ ರಂಗನಾಥಪುರದಲ್ಲಿ ನಡೆದಿದೆ.  ತಮ್ಮಡಿಹಳ್ಳಿ ಎಂಪಿಎಂ‌ ಅರಣ್ಯದ ಎಸ್‌ಎಲ್ ನಂಬರ್ 863, 864, 865, 858ರ ಪ್ರದೇಶದಲ್ಲಿ ನಾಯಿಗಳು ಪತ್ತೆಯಾಗಿದ್ದು, ಐದು ದಿನಗಳ ಹಿಂದೆ ನಾಯಿಗಳನ್ನು ಹೂತಿಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ಬೀದಿ ನಾಯಿಗಳನ್ನು ಹಿಡಿದು ಜೀವಂತವಾಗಿ ಹೂತಿಡುವ ವೇಳೆ ನಾಯಿಗಳ ಚೀರಾಟ ಕೇಳಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಎನಿಮಲ್ ರೆಸ್ಕ್ಯೂ ಕ್ಲಬ್​ಗೆ ಗ್ರಾಮದ ಯುವಕರು…

Read Full News

ಬಿಜೆಪಿ ಕಾರ್ಯಕರ್ತರ ಪಕ್ಷ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಬಿಜೆಪಿ ಪಕ್ಷ ಸದೃಢವಾಗಿದ್ದು ಅಭಿವೃದ್ದಿ ಕಾರ್ಯದಲ್ಲಿ ಈ ಹಿಂದಿನ ಸರ್ಕಾರಗಳು ಮಾಡಲಾಗದಷ್ಟು ಅಭಿವೃದ್ದಿಯನ್ನು ಕೇವಲ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಮಾಡಿದೆ. ಎಲ್ಲ ಸಮುದಾಯದ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರ ನಾಮಫಲಕ ಅನಾವರಣದ ನಿಮಿತ್ತ ಇಂದು ರಿಪ್ಪನ್ ಪೇಟೆ ಹೋಬಳಿಯ ಬೂತ್ ನ ಅಧ್ಯಕ್ಷರುಗಳಿಗೆ ಅಭಿನಂದಿಸಿ ನಾಮಫಲಕ ಅನಾವರಣ ಮಾಡಿದ ಅವರು ಬಿಜೆಪಿಯು “ಕಾರ್ಯಕರ್ತರ ಪಕ್ಷ” ಎನ್ನುವುದು ನಮ್ಮೆಲ್ಲರಿಗೂ ಗೌರವದ…

Read Full News

ಭದ್ರಾವತಿ: ಕೆಎಸ್ಆರ್ ಟಿಸಿ ನೌಕರ ಆತ್ಮಹತ್ಯೆಗೆ ಶರಣು

ಭದ್ರಾವತಿ : ಕೆಎಸ್ಆರ್ ಟಿಸಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೊಸ ಸಿದ್ದಾಪುರದಲ್ಲಿ ನಡೆದಿದೆ. ಕೆಎಸ್‌ಆರ್ ಟಿಸಿ ಚಾಲಕ ಗಂಗಾಧರ್ (46) ಎಂಬವರೇ ನೇಣಿಗೆ ಶರಣಾದ ವ್ಯಕ್ತಿ. ಹೊಸ ಸಿದ್ದಾಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೇಣಿಗೆ ಕೊರಳೊಡ್ಡುವ ಮುನ್ನ ಗಂಗಾಧರ್ ತಾನೇ ಹೂವಿನ ಹಾರ ಹಾಕಿಕೊಂಡಿದ್ದಾರೆ. ಹಾರದ ಜೊತೆಗೆ ಹೊಸ ಶರ್ಟ್ ಧರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read Full News

ಕುಂಸಿ : ಅಪರಿಚಿತ ವ್ಯಕ್ತಿಯ ಶವ : ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ:: ತಾಲ್ಲೂಕಿನ ಹಾರನಹಳ್ಳಿ ಸಂತೆ ಮೈದಾನದ ಬಳಿ ಸುಮಾರು 50 ರಿಂದ 55 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ.     ಅಪರಿಚಿತ ವ್ಯಕ್ತಿಯು ಸುಮಾರು 5.4 ಅಡಿ ಎತ್ತರ ಇದ್ದು, ಬಿಳಿ ಮತ್ತು ಕಪ್ಪುಮಿಶ್ರಿತ ಗಡ್ಡ ಇರುತ್ತದೆ. ತಲೆಯಲ್ಲಿ 2 ಇಂಚು ಉದ್ದನೆಯ ಕಪ್ಪು ಮಿಶ್ರತ ಬಿಳಿ ಕೂದಲಿದ್ದು, ನೀಲಿ ಬಣ್ಣದ ಬಿಳಿ ಗೆರೆಯಿರುವ ತುಂಬು ತೋಳಿನ ಶರ್ಟ್ ಧರಿಸಿರುತ್ತಾರೆ. ಒಂದು ಸಿಮೆಂಟ್ ಮಿಶ್ರಿತ ಕೆಂಪು ಬಣ್ಣದ…

Read Full News

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ:: ಶಿವಮೊಗ್ಗ ಪೊಲೀಸರಿಂದ ಕರಪತ್ರದ ಮೂಲಕ ಜಾಗೃತಿ

ಶಿವಮೊಗ್ಗ : ಸಾರ್ವಜನಿಕ ಗಣೇಶಮೂರ್ತಿ ಪ್ರತಿಷ್ಠಾಪನೆ ವೇಳೆ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರಿ, ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು ಕರಪತ್ರ ಮುದ್ರಿಸಿ ಜನಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.  ಮಂಗಳವಾರ ನಗರದ ಹೊರವಲಯ ಸೋಮಿನಕೊಪ್ಪ ಕೆ.ಹೆಚ್.ಬಿ. ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ ವಿನೋಬನಗರ ಠಾಣೆ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ವೇಳೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ಒಳಗೊಂಡ ಕರಪತ್ರಗಳ ವಿತರಿಸಿದರು. ಈ ವೇಳೆ ಬೀಟ್ ಪೊಲೀಸರಾದ ಧನರಾಜ್, ಮೂರ್ತಿರವರು ಉಪಸ್ಥಿತರಿದ್ದರು.   ಕೊರೊನಾ…

Read Full News

ತೀರ್ಥಹಳ್ಳಿ :ಸರ್ಕಾರದ ಮಾರ್ಗಸೂಚಿ ಪಾಲಿಸಿ ಈ ಬಾರಿಯ ಗಣೇಶೋತ್ಸವವನ್ನು ಆಚರಿಸಿ : ತಹಸೀಲ್ದಾರ್ ಡಾ. ಶ್ರೀಪಾದ್

ತೀರ್ಥಹಳ್ಳಿ : ಕೊರೊನಾ ಸೋಂಕಿನ ಸಂದರ್ಭದಲ್ಲಿ  ಗಣೇಶೋತ್ಸವ ಆಚರಣೆ ಅತ್ಯಂತ ಸರಳವಾಗಿ ಶ್ರದ್ಧಾ ಭಕ್ತಿ ಭಾವದಿಂದ ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸಿ ಸರ್ಕಾರದ ಎಲ್ಲಾ ಮಾನದಂಡ ಮತ್ತು.ಮಾರ್ಗಸೂಚಿ ಪಾಲಿಸಿ ಈ ಬಾರಿಯ ಗಣೇಶೋತ್ಸವವನ್ನು ಆಚರಿಸಿ ಎಂದು ತೀರ್ಥಹಳ್ಳಿ  ತಹಶೀಲ್ದಾರ್‌ ಡಾ. ಶ್ರೀಪಾದರವರು ಗಣೇಶೋತ್ಸವ ಆಚರಣೆ ಮಾಡುವ ಸಮಿತಿಯವರಿಗೆ ಸೂಚನೆ ನೀಡಿದರು. ಇಂದು ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಪೋಲೀಸ್ ಇಲಾಖೆ ವತಿಯಿಂದ ಕರೆಯಲಾಗಿದ್ದ ಗಣೇಶೋತ್ಸವ ಆಚರಣೆಯ ಕುರಿತಾದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಕೊರೊನ…

Read Full News

ರಿಪ್ಪನ್ ಪೇಟೆ : ನಿಂತಿದ್ದ ಟಿಪ್ಪರ್ ಗೆ ಆಟೋ ಡಿಕ್ಕಿ ,ಚಾಲಕನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಹಳೂರಿನಲ್ಲಿ  ನಿಲ್ಲಿಸಿದ್ದ ಟಿಪ್ಪರ್ ಗೆ ಹಿಂಬದಿಯಿಂದ ಬಂದ  ಪ್ಯಾಸೇಂಜರ್ ಆಟೋ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ರಿಪ್ಪನ್ ಪೇಟೆ ವಾಸಿ ಕಿರಣ್  ತೀವ್ರವಾಗಿ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಹೊಸನಗರ-ಶಿವಮೊಗ್ಗ ಮುಖ್ಯ ರಸ್ತೆಯಲ್ಲಿ ಗವಟೂರು ಹೊಳೆ ಸಮೀಪ ಮಧ್ಯ ರಸ್ತೆಯಲ್ಲಿ ಯಾವುದೇ ಇಂಡಿಕೇಟರ್ ಹಾಕದೇ ನಿಲ್ಲಿಸಿದ್ದ ಟಿಪ್ಪರ್ ಗೆ ರಿಪ್ಪನ್ ಪೇಟೆ ಕಡೆಯಿಂದ ಜೇನಿ ಕಡೆಗೆ ಹೋಗುತ್ತಿದ್ದ ಪ್ಯಾಸೇಂಜರ್ ಆಟೋ ಹಿಂಬದಿಯಿಂದ ಡಿಕ್ಕಿ ಹೊಡೆದ…

Read Full News

ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ : ಬಿ ಕೆ ಸಂಗಮೇಶ್

ಭದ್ರಾವತಿ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ. ಅಮೂಲ್ಯ ಸೇವೆಸಲ್ಲಿಸುತ್ತಿರುವ ಶಿಕ್ಷಕರೇ ಸಮಾಜದ ನಿಜವಾದ ಸಂಪತ್ತು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಮಂದಿರದಲ್ಲಿಂದು ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗು ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.   ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಜ್ಞಾನ ನೀಡುವ ಪ್ರತ್ಯಕ್ಷ…

Read Full News

ಶಿವಮೊಗ್ಗ: ಪ್ರಧಾನಿ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ಕಟು ಪದ ಬಳಕೆ: ಬಿಜೆಪಿ ಐಟಿ ಸೆಲ್ ನಿಂದ ದೂರು

ಶಿವಮೊಗ್ಗ : ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಬಗ್ಗೆ ಫೇಸ್‌ಬುಕ್‌  ಖಾತೆಯಲ್ಲಿ ಕಟು ಪದಗಳಲ್ಲಿ ನಿಂದಿಸಿದ ಮೋಹನ್ ಕುಮಾರ್ ಎಂಬುವವರನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ಕ್ರಮ ಜರುಗಿಸಿಬೇಕೆಂದು ನಗರದ ದೊಡ್ಡಪೇಟೆ ಠಾಣೆಯಲ್ಲಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ವತಿಯಿಂದ ದೂರು ನೀಡಲಾಯಿತು. ಸಾಮಾಜಿಕ ಜಾಲಾತಾಣದಲ್ಲಿ ಪ್ರಧಾನಿಯವರ ಬಗ್ಗೆ ಕಟು ಪದಗಳನ್ನು ಬಳಸಿದ್ದಾರೆ, ಈ ಕೂಡಲೇ ಮೋಹನ್ ಕುಮಾರ್ ಎಂಬಾತನನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಯಿತು  ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶರತ್ ಕಲ್ಯಾಣಿ,ಜಿಲ್ಲಾ ಸಹ…

Read Full News

ಭದ್ರಾವತಿ ನಗರಸಭೆ: ಜೆಡಿಎಸ್​​ ಅಭ್ಯರ್ಥಿಗೆ ಭರ್ಜರಿ ಗೆಲುವು, ಠೇವಣಿ ಕಳೆದುಕೊಂಡ ಬಿಜೆಪಿ

ಭದ್ರಾವತಿ : ಇಲ್ಲಿನ ನಗರಸಭೆ 29ನೇ ವಾರ್ಡ್‌ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಅಭ್ಯರ್ಥಿ ನಾಗರತ್ನ ಅನಿಲ್ ಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 450 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಗೆಲುವಿನಿಂದ ಭದ್ರಾವತಿ ನಗರಸಭೆ ಯಲ್ಲಿ ಜೆಡಿಎಸ್ ಸ್ಥಾನ 12ಕ್ಕೆ ಏರಿಕೆಯಾಗಿದೆ. ಇನ್ನು ಬಿಜೆಪಿ ಅಭ್ಯರ್ಥಿ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡಿದ್ದಾರೆ. ಜೆಡಿಎಸ್​ನ ನಾಗರತ್ನ ಅನಿಲ್‌ ಕುಮಾರ್ 1,282 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ನ ಲೋಹಿತಾ ನಂಜಪ್ಪ 832 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ…

Read Full News

ನಿಗದಿತ ಅವಧಿಯ ಒಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುತ್ತೆ: ಸಚಿವ ಸಿ.ಸಿ.ಪಾಟೀಲ್

ಶಿವಮೊಗ್ಗ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 386 ಕೋಟಿ ರೂ. ವೆಚ್ಚದಲ್ಲಿ ಏರ್ ಬಸ್ ನಂತಹ ಬೃಹತ್ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ಸುಸಜ್ಜಿತ ವಿಮಾನ ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿದೆ. ಮಳೆಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಾಮಗಾರಿ ಸ್ವಲ್ಪ ನಿಧಾನವಾಗಿದ್ದರೂ, ನಿಗದಿತ ಅವಧಿಯ…

Read Full News

ಜಾನಪದ ಸಮೂಹ ಗಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ :

ಹೊಸನಗರ : ಇತ್ತೀಚೆಗೆ ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕ್ರತಿಕ ಮೇಳದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಶಿಕ್ಷಕರ ಸಮೂಹವು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಇದೇ ತಿಂಗಳು 15,16,17 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ 75ನೇ ಆಜಾದ್ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ  ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಸಾಧನೆಗೈದ ತಾಲೂಕಿನ ಪ್ರತಿಭಾವಂತ ಶಿಕ್ಷಕರುಗಳಾದ ತೀರ್ಥಕುಮಾರ್ ,ದುಗ್ಗಪ್ಪ,ಮೋಹನ್ ಕುಮಾರ್ ಸಿ,ಪ್ರಕಾಶ್,ಮೋಹನ್ ಹೆಚ್ ಆರ್ ,ತಿಮ್ಮಪ್ಪ ಕಣಬಂದೂರು ,ದೊಡ್ಡಪ್ಪ,ಸೈಯದ್ ಇರ್ಫ಼ಾನ್ ,ಮನೋಹರ…

Read Full News

ಸೊರಬ:ವಿದ್ಯುತ್ ತಗುಲಿ ಮಹಿಳೆ ಸಾವು ಪ್ರಕರಣ,ಕುಟುಂಬಕ್ಕೆ ಸಾಂತ್ವಾನ

ಸೊರಬ: ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಮೀಪದ ಕತ್ವಾಯಿ ಗ್ರಾಮದಲ್ಲಿ ನಡೆದಿತ್ತು.ಇಂದು ಅವರ ಮನೆಗೆ ಬಿಜೆಪಿ ಮುಖಂಡ ಕಡಸೂರು ಶಿವಕುಮಾರ್ ಭೇಟಿ ನೀಡಿ ಸಾಂತ್ವಾನ ಹೇಳಿದರು. ಕುಟುಂಬದವರಿಗೆ ಸಾಂತ್ವಾನ ಹೇಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದ ಅವರು ಕುಟುಂಬದವರಲ್ಲಿ ಮುಂದಿನ ದಿನಗಳಲ್ಲಿ ಜೊತೆಯಲ್ಲಿರುತ್ತೇವೆ ಎಂದು ಧೈರ್ಯ ತುಂಬಿದರು.  ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಸಲೀಂ, ಮುಖಂಡರಾದ ದಿನೇಶ್ ಹೆಚ್ ನಾಯ್ಕ, ಕನದಾಸ ಕಲ್ಲಂಬಿ, ಪಕ್ಕೀರಪ್ಪ ದ್ಯಾಮಪ್ಪ ಆನಂದಣ್ಣ ಮತ್ತಿತರರು ಇದ್ದರು. ಮಂಗಳವಾರ ನಡೆದಿತ್ತು…

Read Full News

ಆಹ್ವಾನ ಸಿಗದಿದ್ದಕ್ಕೆ ಕಾರ್ಯಕ್ರಮದಲ್ಲೇ ಕಾಂಗ್ರೆಸ್​ MLC ಪ್ರತಿಭಟನೆ : ಕೈ ಮುಗಿದು ವೇದಿಕೆಗೆ ಕರೆದ ಈಶ್ವರಪ್ಪ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್​ಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಅರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ-ಚಿತ್ರದುರ್ಗ ರಸ್ತೆ ಮೇಲ್ದರ್ಜೆಗೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆ ಹಾಗೂ ತುಂಗಾ ನದಿಗೆ ನೂತನ ಸೇತುವೆ ಕಾಮಗಾರಿ ಸೇರಿ ಒಟ್ಟು 580.98 ಕೋಟಿ ರೂ ಕಾಮಗಾರಿಗೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಚಾಲನೆ ನೀಡಲು ಆಗಮಿಸಿದ್ದರು. ಈ ವೇಳೆ ಹೊಳೆಹೊನ್ನೂರು ರಸ್ತೆಯಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದ…

Read Full News

ಮಾಜಿ ಸಿಎಂ ಬಿಎಸ್​ವೈ ಒಡೆತನದ ಕಾಲೇಜು ಬಸ್​ಗಳಲ್ಲಿ ಡೀಸೆಲ್​ ಕದ್ದಿದ್ದ ಕಳ್ಳರ ಬಂಧನ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಒಡೆತನದ ಖಾಸಗಿ ಕಾಲೇಜಿನ ನಾಲ್ಕು ಬಸ್ಸುಗಳಲ್ಲಿ 580 ಲೀಟರ್ ಡೀಸೆಲ್​ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಪ್ರಕರಣ ಬೆನ್ನತ್ತಿದ್ದ ವಿನೋಬಾನಗರ ಪೊಲೀಸರು ಟಿಪ್ಪುನಗರದ ಸೈಯದ್ ತಬರೇಕ್ (24)ಹಾಗೂ ಸೈಯದ್ ಜಾಫರ್ (24) ಎಂಬಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 90 ಲೀಟರ್ ಡೀಸೆಲ್​ ಹಾಗೂ ಕಳ್ಳತನಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. *ಘಟನೆ ವಿವರ :* ಶಿವಮೊಗ್ಗದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್​ಮೆಂಟ್ ಬಳಿ…

Read Full News

ರಿಪ್ಪನ್ ಪೇಟೆ: ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ :ಬೈಕ್ ಸವಾರನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪ್ಪದ ಬಳಿಯಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರವಾದ ಪೆಟ್ಟಾಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ರಿಪ್ಪನ್ ಪೇಟೆ ಮಾರ್ಗದಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರ್ ತೀರ್ಥಹಳ್ಳಿ ಮಾರ್ಗದಿಂದ ಬರುತ್ತಿದ್ದ ಸ್ಕೂಟಿ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು ಸ್ಕೂಟಿ ಸವಾರ ಮುಸ್ತಾಫಾ ಗೆ ತೀವ್ರತರನಾದ…

Read Full News

ಭದ್ರಾವತಿ : ಈಜಲು ಅಣೆಕಟ್ಟೆಗೆ ಹೋದ ಇಬ್ಬರು ಕಾಲೆಜು ವಿದ್ಯಾರ್ಥಿಗಳು ಸಾವು

ಭದ್ರಾವತಿ ಸಮೀಪದ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು ಕಂಡ ಹೃದಯ ವಿದ್ರಾವಕ ಘಟನೆ ಇಂದು ಮಧ್ನಾಹ್ನ ಗೊಂದಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಗಾಡಿಕೊಪ್ಪ ಹಾಗೂ ಕೊಮ್ಮನಾಳ್‌ ಗ್ರಾಮದ ಕಿರಣ್‌ ಹಾಗೂ ಶಶಾಂಕ್‌ (19 ವರ್ಷ) ಎಂಬುವರೇ ಸಾವು ಕಂಡ ನತದೃಷ್ಟ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಶಿವಮೊಗ್ಗದ ಎಡುಕೇರ್‌ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಈ ನತದೃಷ್ಟರು ಸ್ನೇಹಿತರೊಂದಿಗೆ ಗೊಂದಿ ಗ್ರಾಮದಲ್ಲಿರುವ ನೈಸರ್ಗಿಕ ಸೊಬಗನ್ನು ನೋಡಲು ಬಂದಿದ್ದಾರೆ, ಒಟ್ಟು ಐವರು ಕಾಲೇಜು ವಿದ್ಯಾರ್ಥಿಗಳಲ್ಲಿ…

Read Full News

ರಿಪ್ಪನ್ ಪೇಟೆ : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಸುಗೂಸು : ಸಹಾಯಕ್ಕಾಗಿ ಯಾಚನೆ

ರಿಪ್ಪನ್ ಪೇಟೆ :ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ ಹಸುಗೂಸು ಉಸಿರಾಟದ ಸಮಸ್ಯೆಯಿಂದ ಸಾವು ಬದುಕಿನ ಮದ್ಯೆ ಹೋರಾಡುತ್ತಿದೆ. ಸದ್ಯ ಮಗುವಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಲಕ್ಷಾಂತರ ರೂ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದೆ. ಈ ಕುಟುಂಬದಲ್ಲಿ  ಲಕ್ಷಾಂತರ ವೆಚ್ಚ ಪಾವತಿಸಲು…

Read Full News

ಅರ್ಧ ಲಕ್ಷ ರೂ. ದಾಟಿದ ಕೆಂಪಡಕೆ ದರ, ಹಬ್ಬಕ್ಕೂ ಮುನ್ನ ಅಡಕೆ ಬೆಳೆಗಾರರಿಗೆ ಭರ್ಜರಿ ಗಿಫ್ಟ್‌!

ಶಿವಮೊಗ್ಗ : ನಗರದ ಅಡಿಕೆ ಮಾರುಕಟ್ಟೆಯಲ್ಲಿ ಕೆಂಪಡಿಕೆ ಶುಕ್ರವಾರ ಪ್ರತಿ ಕ್ವಿಂಟಲ್‍ಗೆ ಸರಾಸರಿ ₹51 ಸಾವಿರ ದರ ಕಂಡಿದೆ. ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಅಡಿಕೆ ದರ ಗಗನಮುಖಿಯಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಹೆಚ್ಚಿದ ದರದಿಂದಾಗಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿ ಅಡಿಕೆ ಮಾರುಕಟ್ಟೆಯಲ್ಲಿ ಆವಕ ಹೆಚ್ಚುತ್ತಿದೆ. ಅತೀ ಹೆಚ್ಚು ಅಡಿಕೆ ಬೆಳೆಯುವ ಹೊಸನಗರ,ತೀರ್ಥಹಳ್ಳಿ, ಸಾಗರ ಬಾಗದ ರೈತರ ಮನೆಯಲ್ಲಿ ಹಬ್ಬದ ವಾತಾವರಣವಾಗಿದೆ. ಕಳೆದ ಕೆಲ ತಿಂಗಳಿನಿಂದ ₹40 ಸಾವಿರ ಆಸುಪಾಸಿನಲ್ಲಿ ಅಡಿಕೆ ಖರೀದಿ ಆಗುತ್ತಿತ್ತು. ನಾಲ್ಕು ದಿನಗಳ…

Read Full News

ಸೊರಬ: ಚಲಿಸುತ್ತಿದ್ದಾಗ ಧಗ ಧಗನೇ ಹೊತ್ತಿ ಉರಿದ ಕಾರು

ಸೊರಬ :  ತಾಲೂಕಿನ ಚಿಕ್ಕಚೌಟಿಯಿಂದ ಆನವಟ್ಟಿಗೆ ಹೊರಟಿದ್ದ ಮಾರುತಿ ಸ್ವಿಫ್ಟ್ ಡಿಸೈರ್  ಕಾರಿನಲ್ಲಿ ದಟ್ಟನೆ ಹೊಗೆ ಕಾಣಿಸಿಕೊಂಡಿದೆ. ರಾಜು ಎಂಬುವರು ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದು ರಸ್ತೆಯ ಪಕ್ಕಕ್ಕೆ ವಾಹನ ನಿಲ್ಲಿಸಿದ್ದಾರೆ. ನಿಲ್ಲಿಸಿದ ಕ್ಷಣ ಮಾತ್ರದಲ್ಲಿ ಇಡೀ ವಾಹನಕ್ಕೆ ಧಗ್ಗನೇ ಬೆಂಕಿ ಹೊತ್ತಿಕೊಂಡಿದೆ. ಧಗ ಧಗನೇ ಬೆಂಕಿಗೆ ವಾಹನ ಸಂಪೂರ್ಣ ಹೊತ್ತಿ ಉರಿದಿದೆ. ಅಕ್ಕ ಪಕ್ಕದ ತೋಟದ ಮನೆಯವರು ಬಂದು ಬೆಂಕಿ ಆರಿಸಲು ಯತ್ನಿಸಿದ್ದಾರೆ. ಚಲಿಸುತ್ತಿದ್ದ ಮಾರುತಿ ಸ್ವಿಫ್ಟ್ ಡಿಸೈರ್‌ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಮೊದಲಿಗೆ ಬ್ಯಾನೆಟ್ ನಲ್ಲಿ…

Read Full News

ರಿಪ್ಪನ್ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ನೂತನ ಸಾರ್ವಜನಿಕ ಹೈಟೆಕ್ ಶೌಚಾಲಯ:

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ಸುಮಾರು ಹದಿನೈದು ಲಕ್ಷ ರೂಪಾಯಿ ಅನುದಾನದಲ್ಲಿ ನೂತನ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಸಿದ್ದವಾಗುತ್ತಿದ್ದು ಶೀಘ್ರದಲ್ಲಿ ಅತ್ಯಾಧುನಿಕ ಸುಸಜ್ಜಿತ ಶೌಚಾಲಯ ಸಾರ್ವಜನಿಕರ ಉಪಯೋಗಕ್ಕೆ ಮುಕ್ತವಾಗುತ್ತದೆ.ಈ ಹಿಂದೆ ಇದ್ದ ಶಿಥಿಲಗೊಂಡಿದ್ದ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.      { ….ನೂತನ ಹೈಟೆಕ್ ಶೌಚಾಲಯದ ನೀಲನಕ್ಷೆ…} ಸುತ್ತಮುತ್ತ ನೂರಾರು ಹಳ್ಳಿಗಳ  ಕೇಂದ್ರ ಬಿಂದುವಾಗಿರುವ ರಿಪ್ಪನ್ ಪೇಟೆಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದ ಹಳೆಯ ಸಾರ್ವಜನಿಕ ಶೌಚಾಲಯ ಪಾಳು ಬಿದ್ದು ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಯಲ್ಲಿದ್ದು…

Read Full News

ಶಿಕಾರಿಪುರದ ತಾಲೂಕ್ ಕ್ರೀಡಾಂಗಣದ ನೂತನ ಜಿಮ್ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ.

ಶಿಕಾರಿಪುರದ ವಿವಿಧ ಸಮಾರಂಭದಲ್ಲಿ ಭಾಗವಹಿಸಿದ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ,ಇಂದು ಶಿಕಾರಿಪುರದ ತಾಲೂಕು ಕ್ರೀಡಾಂಗಣದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಮಲ್ಟಿ ಜಿಮ್ ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಮಾತಾನಾಡಿದ ಸಂಸದ ಬಿ ವೈ ರಾಘವೇಂದ್ರ ಈ ಸುಸಜ್ಜಿತ ವ್ಯಾಯಾಮ ಶಾಲೆಯ ಉಪಯೋಗವನ್ನು ನಗರದ ಯುವಕರು ಪಡೆದುಕೊಳ್ಳಬೇಕು. ಯುವ ಶಕ್ತಿಯೇ ರಾಷ್ಟ್ರದ ಶಕ್ತಿ, ಯುವಜನತೆ ಸದೃಢರಾದರೆ ದೇಶವು ಎಂದಿಗೂ ಸದೃಢ.ದೇಶದ ಜನ ದೇಹವನ್ನು ಬಲಿಷ್ಠವಾಗಿ ಹಾಗು ಆರೋಗ್ಯಕರವಾಗಿ ಇದ್ದರೆ ಯಾವ ಅರೋಗ್ಯದ ಸಮಸ್ಯೆ ಇಲ್ಲದೆ ಬದುಕಬಹುದು ಎಂದು ಹೇಳಿದರು. ಶಿವಮೊಗ್ಗ…

Read Full News

ರಿಪ್ಪನ್ ಪೇಟೆ : ಪರಸ್ತ್ರೀ ವ್ಯಾಮೋಹಕ್ಕೆ ಪತಿ ಪರಾರಿ!! : ಪತ್ನಿಯಿಂದ ನಾಪತ್ತೆ ದೂರು ದಾಖಲು

ರಿಪ್ಪನ್ ಪೇಟೆ : ಪಟ್ಟಣದ ಗಾಂಧಿನಗರ ನಿವಾಸಿ 37 ವರ್ಷದ ಜಾಫರ್ ಎಂಬ ವ್ಯಕ್ತಿಯು ಆಗಸ್ಟ್ 22 ರಿಂದ ಕಾಣೆಯಾಗಿದ್ದಾರೆ ಎಂದು ಆತನ ಪತ್ನಿ ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪಟ್ಟಣದ ಗಾಂಧಿನಗರ ನಿವಾಸಿ ಮಹಮ್ಮದ್ ಜಾಫರ್ ಹೊಸನಗರ ರಸ್ತೆಯಲ್ಲಿ ಗ್ಯಾರೇಜ್ ಹೊಂದಿದ್ದು ಹದಿಮೂರು ವರ್ಷದ ಹಿಂದೆ ಗಾಂಧಿನಗರ ವಾಸಿ ನಜ್ಮಾ ಎಂಬಾಕೆಯನ್ನು ಮದುವೆಯಾಗಿದ್ದು ಈ ದಂಪತಿಗಳಿಗೆ ಮೂವರು ಮಕ್ಕಳಿದ್ದಾರೆ.ಆಗಸ್ಟ್ 22ರ ಬೆಳಗ್ಗೆ ಎಂದಿನಂತೆ ಮೆಕ್ಯಾನಿಕ್ ಕೆಲಸಕ್ಕೆ ಹೋದ ಜಾಫರ್ ಹಿಂದಿರುಗಿ ವಾಪಾಸ್ ಮನೆಗೆ…

Read Full News

ಶಿವಮೊಗ್ಗವನ್ನು ಅಂತರಾಷ್ಟೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತೇವೆ : ಬಿ ವೈ ರಾಘವೇಂದ್ರ

ಶಿವಮೊಗ್ಗ:  ನಗರದ ನವುಲೆ ಬಳಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಅಲಂಕಾರಿಕ ವಿದ್ಯುತ್ ದೀಪಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು.  ನವುಲೆ ಸಮೀಪದ ಗಣಪತಿ ದೇವಸ್ಥಾನದ ಬಳಿ ಸಂಸದ ಬಿ.ವೈ.ರಾಘವೇಂದ್ರ ಅವರು ಅಲಂಕಾರಿ ವಿದ್ಯುತ್ ದೀಪಗಳಿಗೆ ಚಾಲನೆ ನೀಡಿದರು. ಬಳಿಕ ಮಾತಿನಾಡಿದ ಅವರು ಶಿಕಾರಿಪುರ, ಶಿರಾಳಕೊಪ್ಪ, ಸೊರಬ ತಾಲೂಕಿನ ಆನವಟ್ಟಿಯಲ್ಲಿಯು ಇದೆ ಮಾದರಿಯ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ 7.12 ಕೋಟಿ ರೂ. ವೆಚ್ಚದಲ್ಲಿ ಅಲಂಕಾರಿ ದೀಪಗಳನ್ನು ಅಳವಡಿಸಲಾಗುತ್ತದೆ ಎಂದರು. ರಸ್ತೆಯ ಒಂದು ಕಿ.ಮೀ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.