ಶಿವಮೊಗ್ಗ : ಬುಡಮೇಲಾಗಿ ಮರ ಬಿದ್ದು ಕಾರು ಜಖಂ
ಶಿವಮೊಗ್ಗ : ಇಲ್ಲಿನ ತಿಲಕ್ ನಗರದ ಮುಖ್ಯ ರಸ್ತೆಯಲ್ಲಿ ಬೃಹತ್ ಮರವೊಂದು ಬುಡಮೇಲಾಗಿ ಕಾರಿನ ಮೇಲೆ ಉರುಳಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ. ತಿಲಕನಗರ ಮುಖ್ಯ ರಸ್ತೆಯ ಡಯಾನ ಬುಕ್ ಹೌಸ್ ಸಮೀಪ ಇದ್ದ ಬೃಹತ್ ಮರ ಬುಡಮೇಲಾಗಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದಿದೆ.ಮರ ಉರುಳಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅರಣ್ಯ…