Headlines

ಶಿವಮೊಗ್ಗ: ಭೂಗಳ್ಳ ಅಧಿಕಾರಿಗಳು ಹಾಗು ಭ್ರಷ್ಟ ರಾಜಕಾರಣಿಗಳನ್ನು ಜೈಲಿಗಟ್ಟುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ:

  ಶಿವಮೊಗ್ಗ ತಾಲ್ಲೂಕು ವ್ಯಾಪ್ತಿ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕೆಲವು ವರ್ಷಗಳಿಂದ ಭೂ ಮಾಫಿಯಾಗಳ ಹಾವಳಿ ತೀರಾ ಹಚ್ಚಾಗಿದ್ದು ಇದನ್ನ ತಡೆಯುವ ನಿಟ್ಟಿನಲ್ಲಿ ಉನ್ನತ ಮಟ್ಟದ ಪೊಲೀಸ್ ತಂಡವನ್ನ ರಚಿಸಬೇಕು ಎಂದು ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಮೌನ ಪ್ರತಿಭಟನೆ ನಡೆಸಿದೆ.  ಶಿವಮೊಗ್ಗ ನಗರ ಪ್ರದೇಶ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಏಕಾ ಏಕಿ ಭೂ ಮಾಫಿಯಾಗಳ ಹಾವಳಿ ಹೆಚ್ಚಾಗುತ್ತಿದ್ದು ಇದರ ಹಿಂದೆ ಜಿಲ್ಲೆಯ ಪ್ರಭಾವಿ…

Read More

ತೀರ್ಥಹಳ್ಳಿ:: ಸಂಘ ಪರಿವಾರದಿಂದ ಯಶಸ್ವಿ ರಕ್ತದಾನ ಶಿಬಿರ

ತೀರ್ಥಹಳ್ಳಿ : ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಸಂಘ ಪರಿವಾರಗಳು ತೀರ್ಥಹಳ್ಳಿ ಇವರು ಆಯೋಜಿಸಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ತೀರ್ಥಹಳ್ಳಿಯ ರೋಟರಿ ರಕ್ತನಿಧಿಯಲ್ಲಿ ಇಂದು ನಡೆಯಿತು. ಸಂಘ ಪರಿವಾರದ ಸದಸ್ಯರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ  ರೋಟರಿ ರಕ್ತನಿಧಿ ತೀರ್ಥಹಳ್ಳಿಯ ಟೆಕ್ನೀಶಿಯನ್ ಅರುಣ್ ಕೆರೋಡಿ  ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ “ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂದರೆ ಸೇವೆ, ಸಂಘದಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಒಂದು ದಿನವನ್ನು ಸೇವೆಗೆ ಮುಡಿಪಾಗಿಡುತ್ತಾರೆ ಅದರಲ್ಲಿ ಸ್ವಚ್ಚತಾ…

Read More

ಹೆದ್ದಾರಿಪುರ: ಬಿಜೆಪಿ ಕಾರ್ಯಕರ್ತರ ಪಕ್ಷ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ : ಆರಗ ಜ್ಞಾನೇಂದ್ರ

ಹೆದ್ದಾರಿಪುರ : ಕರ್ನಾಟಕ ರಾಜ್ಯದ ಗೃಹ ಮಂತ್ರಿಯಾದ ಆರಗ ಜ್ಞಾನೇಂದ್ರ ರವರು ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರ ನಾಮಫಲಕ ಅನಾವರಣದ ನಿಮಿತ್ತ ಇಂದು ಹೆದ್ದಾರಿಪುರ ಬೂತ್ ನ ಅಧ್ಯಕ್ಷರಾದ ಸತೀಶ್ ಭಟ್ ರವರಿಗೆ ಅಭಿನಂದಿಸಿ ನಾಮಫಲಕ ಅನಾವರಣ ಮಾಡುವ ಮೂಲಕ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪಲಕ ಅನಾವರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಿಜೆಪಿ ಯು “ಕಾರ್ಯಕರ್ತರ ಪಕ್ಷ” ಎನ್ನುವುದು ನಮ್ಮೆಲ್ಲರಿಗೂ ಗೌರವದ ಸಂಗತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೊತೆಗೆ ಪಕ್ಷದ ಸಂಪರ್ಕವನ್ನು…

Read More

ತವರು ಕ್ಷೇತ್ರ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಭರ್ಜರಿ ಸ್ವಾಗತ :

ಶಿಕಾರಿಪುರ : ಕಾರ್ಯಕರ್ತರ ಸಭೆ ಹಿನ್ನೆಲೆಯಲ್ಲಿ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಕ್ಷೇತ್ರ ಶಿಕಾರಿಪುರದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ. ಇಂದು ಕುಮದ್ವತಿ ಕಾಲೇಜಿನಲ್ಲಿ ನಡೆದ ಕಾರ್ಯಕರ್ತರ ಸಭೆಗೆ ಆಗಮಿಸಿದ ಯಡಿಯೂರಪ್ಪನವರಿಗೆ ಕಾರ್ಯಕರ್ತರು, ಅಭಿಮಾನಿಗಳು ಪೂರ್ಣಕುಂಭದ ಸ್ವಾಗತ ನೀಡಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಡೊಳ್ಳು, ವೀರಗಾಸೆಯ ಮೂಲಕ ಕಾಲೇಜಿನ ಮುಖ್ಯದ್ವಾರದಿಂದ ಸಭಾಂಗಣದವರೆಗೂ ಮೆರವಣಿಗೆ ನಡೆಸಿದರು. ಇಲ್ಲಿನ ಸಭಾಂಗಣದಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಯಡಿಯೂರಪ್ಪ, ಸಂಸದ ರಾಘವೇಂದ್ರ, ಮಲೆನಾಡು ಅಭಿವೃದ್ಧಿ…

Read More

ಶಿವಮೊಗ್ಗ:ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಅಪಘಾತದಲ್ಲಿ ಶಿಕ್ಷಕ ಸಾವು

ಶಿವಮೊಗ್ಗ: ವಿನೋಬನಗರದಲ್ಲಿ ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಇಂದು ಬೆಳಗ್ಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರು ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ ರಂಗನಾಥ(47) ಮೃತರು. ಗೋಪಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾಗಿದ್ದರು.ಇಂದು ಬೆಳಗ್ಗೆ ಮನೆಯಿಂದ ಶಾಲೆಗೆ ಬೈಕ್‌ನಲ್ಲಿ ತೆರಳುತಿದ್ದರು. ಈ ವೇಳೆ ನೂರು ಅಡಿ ರಸ್ತೆಯ ಮೈಸೂರು ಬ್ಯಾಂಕ್ ಎದುರು ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೆ  ಮೃತಪಟ್ಟಿದ್ದಾರೆ. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಮದರಿಪಾಳ್ಯದ ಲಾರಿ ಚಾಲಕನ ವಿರುದ್ದ ಪ್ರಕರಣ…

Read More

ರಿಪ್ಪನ್ ಪೇಟೆ : ಕುಗ್ರಾಮದಲ್ಲೊಂದು ಖಾಸಗಿ ಶಾಲೆಯನ್ನು ಮೀರಿಸುವಂತಹ ಸುಸಜ್ಜಿತ ಸರ್ಕಾರಿ ಶಾಲೆ

ರಿಪ್ಪನ್ ಪೇಟೆ: ಸರ್ಕಾರಿ ಶಾಲೆ ಎಂದು ಮೂಗು ಮುರಿಯುವವರೆಲ್ಲ ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿ ಶಾಲೆಗೆ ಒಮ್ಮೆ ಭೇಟಿ ನೀಡಬೇಕು. ಮೂಗಿನ ಮೇಲೆ ಬೆರಳಿಟ್ಟುಕೊಂಡು ಅಹುದಹುದು ಎನ್ನದಿದ್ದರೆ ಹೇಳಿ! ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡಿದೆ. ಶಿಕ್ಷಕರ ನಿಸ್ವಾರ್ಥ ಸೇವೆ, ಶಿಕ್ಷಣ  ಪ್ರೇಮ, ಊರವರ ಸಹಾಯ-ಸಹಕಾರ ಸೇರಿದರೆ ಸರ್ಕಾರಿ ಶಾಲೆಯೊಂದು ಹೇಗೆ ಅಭಿವೃದ್ಧಿ ಪಥದಲ್ಲಿ…

Read More

ಶಿವಮೊಗ್ಗ: ಆಗಸ್ಟ್ 29ರಂದು ಕ್ರೀಡಾ ದಿನದ ಪ್ರಯುಕ್ತ ಫಿಟ್ ಇಂಡಿಯಾ ಫ್ರೀಡಂ ರನ್ :

ಶಿವಮೊಗ್ಗ :ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವರು ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸುತ್ತಿದ್ದು, ಇದರ ಅಂಗವಾಗಿ 75 ನೇ ಫಿಟ್ ಇಂಡಿಯಾ ಫ್ರೀಡಮ್ ರನ್ 2.0 ಕಾರ್ಯಕ್ರಮವನ್ನು ದೇಶಾದ್ಯಂತ ಆಯೋಜಿಸಲಾಗುತ್ತಿದೆ. ಮಾರ್ಚ್ 12 ರಂದು ಭಾರತದ ಪ್ರಧಾನ ಮಂತ್ರಿಯವರು ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಕುರಿತು ಸ್ಪೂರ್ತಿದಾಯಕ ಭಾಷಣದ ಮೂಲಕ ಆಜಾದಿ ಕಾ ಅಮೃತ ಮಹೋತ್ಸವದ ಪರಿಕಲ್ಪನೆ ಬಗ್ಗೆ ತಿಳಿಸಿ, ಮಹೋತ್ಸವಕ್ಕೆ ಹಸಿರು ನಿಶಾನೆ ತೋರಿಸಿದ್ದರು. ಆಜಾದಿ ಕಾ ಅಮೃತ ಮಹೋತ್ಸವದ…

Read More

ರಿಪ್ಪನ್ ಪೇಟೆ: ಮಳೆ ಬಂದಾಗ ಈಜುಕೊಳವಾಗುವ ಆಟೋ ಸ್ಟ್ಯಾಂಡ್, ಕಾಟಾಚಾರದ ಬ್ಯಾರಿಕೇಡ್ ನಿಂದ ಸುಗಮ ಸಂಚಾರಕ್ಕೆ ಅಡ್ಡಿ:

ರಿಪ್ಪನ್ ಪೇಟೆ :ಪಟ್ಟಣದ ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿರುವ ಆಟೋ ಸ್ಟ್ಯಾಂಡ್ ಬಳಿ ಮಳೆ ಬಂದರೆ ಸಾಕು ಮಳೆ ನೀರು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಈಜುಕೊಳದಂತಾಗಿ ರಸ್ತೆಯ ಮೇಲೆ ನೀರು ಹರಿಯುತ್ತದೆ ಇದರಿಂದ ಪಾದಚಾರಿಗಳಿಗೆ ಹಾಗು ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ ಇದರಿಂದ ಅನೇಕ ಸಣ್ಣಪುಟ್ಟ ಅಪಘಾತಗಳು ನಡೆದ ಉದಾಹರಣೆಗಳಿವೆ.  ಒಂದು ಕಡೆ ಮಳೆ ನೀರು ಹೋಗಲು ವ್ಯವಸ್ಥೆ ಇಲ್ಲದೆ ಈಜುಕೊಳವಾಗಿದ್ದರೆ ಇನ್ನೊಂದು ಕಡೆ ಕಾಟಚಾರಕ್ಕೆ ಹಾಕಿರುವ ಬ್ಯಾರಿಕೇಡ್, ತೀರ್ಥಹಳ್ಳಿ ರಸ್ತೆ ಯಲ್ಲಿ ಒಂದು ಕಡೆ…

Read More

ಹೆಣ್ಣು ಮಕ್ಕಳು ಮನೆಯಲ್ಲೆ ಇರಿ ಎನ್ನಲು ಪೊಲೀಸ್ ವ್ಯವಸ್ಥೆ ಬೇಕಾ : ಕಿಮ್ಮನೆ ರತ್ನಾಕರ್:

ತೀರ್ಥಹಳ್ಳಿ : ಆರಗ‌ ಜ್ಞಾನೇಂದ್ರ ರವರ ಹೇಳಿಕೆಯಿಂದ ತೀರ್ಥಹಳ್ಳಿಯ ಘನೆತೆಗೆ ಕುಂದು ಬರುತ್ತಿದೆ. ಅವರು ಪ್ರಭುದ್ಧತೆಯಿಂದ ಹೇಳಿಕೆಗಳನ್ನು ನೀಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ‌ ಜ್ಞಾನೇಂದ್ರ ಅವರ ಹೇಳಿಕೆಯಿಂದ ಗೃಹ ಸಚಿವ ಸ್ಥಾನಕ್ಕೆ ಅರ್ಹರಲ್ಲ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್​ನವರನ್ನು ಗುರಿಯಾಗಿಟ್ಟುಕೊಂಡು ಹೇಳಿಕೆಗಳನ್ನು ನೀಡಬಾರದು. ರಾಜ್ಯದ 6 ಕೋಟಿ ಜನರನ್ನು ನೋಡಿಕೊಂಡು ಹೇಳಿಕೆಗಳನ್ನು ನೀಡಬೇಕು. ಅಧಿಕಾರದಲ್ಲಿದ್ದಾಗ ಒಂದು ಪಕ್ಷದ ಪರವಾಗಿ ಮಾತನಾಡಬಾರದು. ಕಾಂಗ್ರೆಸ್​ನವರು ಅತ್ಯಾಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದು…

Read More

ರಿಪ್ಪನ್‌ಪೇಟೆ: ಪ್ರೀತಿಯನ್ನು ಶಂಕಿಸಿ ಯುವತಿಯನ್ನು ಕೊಲೆಗೈದು ವಿಷ ಸೇವಿಸಿದ್ದ ಭಗ್ನ ಪ್ರೇಮಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು!

ರಿಪ್ಪನ್‌ಪೇಟೆ: ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ನ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಗರ ತಾಲೂಕಿನ ಜೋಗ ಸಮೀಪದ ಕಾನೂರು ಗ್ರಾಮದ ಯುವತಿ ಕವಿತಾ (21) ಎಂಬಾಕೆಯನ್ನು ರಿಪ್ಪನ್‌ಪೇಟೆಯಲ್ಲಿ ಪಿಯುಸಿ ಓದುತ್ತಿರುವಾಗ ಪರಿಚಯ ಮಾಡಿಕೊಂಡು ಕಳೆದ ಐದಾರು ವರ್ಷದಿಂದ ಪ್ರೀತಿಸಿ ನಂತರ ಆಕೆ ಮೋಸ ಮಾಡಿ ಬೇರೊಂದು ಹುಡುಗನನ್ನು ಪ್ರೀತಿ ಮಾಡುತ್ತಿದ್ದಾಳೆಂಬ ಕಾರಣಕ್ಕೆ ತನ್ನ ಊರಿಗೆ ಕರೆಯಿಸಿಕೊಂಡು ವೇಲ್ ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ ನಂತರ ತಾನು ಕಳೆನಾಶಕ ಕುಡಿದು ಆಸ್ಪತ್ರೆ ಸೇರಿದ ಯುವಕ ಚಿಕಿತ್ಸೆ…

Read More