ವಿಶ್ವದಲ್ಲಿಯೇ ಭಾರತ ಅತ್ಯಂತ ಸುರಕ್ಷಿತ ದೇಶ : ಕೆ ಎಸ್ ಈಶ್ವರಪ್ಪ
ಶಿವಮೊಗ್ಗ : ವಿಶ್ವದಲ್ಲಿಯೇ ಭಾರತ ಅತ್ಯಂತ ಸುರಕ್ಷಿತ ರಾಷ್ಟ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸದ ಅಂಗವಾಗಿ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಶನಿವಾರ ಆಯೋಜಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಗತ್ತಿನ ರಾಷ್ಟ್ರಗಳಲ್ಲಿ ಭಾರತ ಶಾಂತಿಪ್ರಿಯ ದೇಶವಾಗಿದೆ. ಇಲ್ಲಿ ಧರ್ಮಗಳ ಮಧ್ಯೆ ಪ್ರೀತಿ, ಮಾನವೀಯತೆ ಇದೆ. ಇಲ್ಲಿ ಜೀವಿಸುವುದೇ ನಮ್ಮ ಪುಣ್ಯ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಚಟುವಟಿಕೆಗಳನ್ನು ಕಂಡರೆ ಇದು ಅರ್ಥವಾಗುತ್ತದೆ. ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ…