ಜುಲೈ 30 ರ ಹುಬ್ಬಳ್ಳಿ ಕಾಂಗ್ರೆಸ್ ಸಮಾವೇಶದಲ್ಲಿ ಮಧುಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ: ಅರ್ ಎಂ ಮಂಜುನಾಥ ಗೌಡ
ಸಾಗರ: ಸೊರಬದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ಆರ್ ಎಂ ಮಂಜುನಾಥ ಗೌಡರವರು ಹೇಳಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜುಲೈ 30ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ ರವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ…