ಸೇವಾ ನಿವೃತ್ತಿ ಹೊಂದಿದ ಆರ್. ಉಮೇಶ್ ರವರ ಸೇವೆ ಎಲ್ಲರಿಗೂ ಪ್ರೇರಣೆ : ಜೇನಿ ಗ್ರಾ.ಪಂ ಅಧ್ಯಕ್ಷೆ ಶಾರದಾ
ರಿಪ್ಪನ್ ಪೇಟೆ : ಇಲ್ಲಿನ ಚಿಕ್ಕಜೇನಿ ಪ್ರೌಢಶಾಲೆ ಮುಖ್ಯಶಿಕ್ಷಕರಾಗಿ ಉತ್ತಮ ಕರ್ತವ್ಯ ನಿರ್ವಹಿಸಿ, ವಯೋನಿವೃತ್ತಿ ಹೊಂದಿದ ಆರ್ ಉಮೇಶ ರವರ ಸೇವೆ ಪ್ರಶಂಸನೀಯ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾರದಾ ರವರು ಹೇಳಿದರು. ಅವರು ಶುಕ್ರವಾರ ಇಲ್ಲಿಗೆ ಸಮೀಪದ ಚಿಕ್ಕಜೇನಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಸಲ್ಲಿಸಿ ನಿವೃತ್ತರಾದ ಆರ್. ಉಮೇಶ್ ರವರಿಗೆ ಸನ್ಮಾನಿಸಿ ನೀಡಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಹೇಳಿದರು. ತಾಲ್ಲೂಕಿನಲ್ಲಿಯೇ ಪ್ರೌಢಶಾಲೆಗೆ ಒಳ್ಳೆಯ ಹೆಸರು ತರುವಲ್ಲಿ ಉಮೇಶ್ ಅವರ ಪಾತ್ರ ಮಹತ್ವದ್ದು ಎಂದು ಹೇಳಿದರು. ಕ್ಷೇತ್ರ…