ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ:
ಬೆಂಗಳೂರು: ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ರಾಜ್ಯ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ವಿಧಾನ ಸೌಧದಲ್ಲಿಂದೂ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು ತಮ್ಮ ರಾಜಕೀಯ ಏಳು – ಬೀಳುಗಳನ್ನು ಹೇಳುವಾಗ ಭಾವುಕರಾದರು. ದುಃಖತಪ್ತರಾಗಿ ಮಾತನಾಡಿದ ಅವರು “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್ ಶಾರವರಿಗೆ, ಜೆ.ಪಿ ನಡ್ಡಾರವರಿಗೆ ಧನ್ಯವಾದ ತಿಳಿಸುತ್ತೇನೆ ಅವರಿಗೆ ನಾನು ಋಣಿಯಾಗಿದ್ದೇನೆ….


