ಶಾಸಕ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ
ರಿಪ್ಪನ್ ಪೇಟೆ : ಹರತಾಳು ಗ್ರಾಮದಲ್ಲಿ ಸಾಗರ- ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂ ಎಸ್ ಐ ಎಲ್ ಅಧ್ಯಕ್ಷ ಹರತಾಳು ಹಾಲಪ್ಪರವರು ತಮ್ಮ ಕುಟುಂಬ ವರ್ಗದವರು, ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಭೂಮಿ ಹುಣ್ಣಿಮೆಯ ಹಬ್ಬವನ್ನು ತಮ್ಮ ಹೊಲದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ, ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದಾಗಿದ್ದು, ಭೂ ತಾಯಿ ಗರ್ಭಿಣಿಯೆಂಬ…