ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :
ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…


