w
Headlines
Home » Blog » Page 7

ರಿಪ್ಪನ್ ಪೇಟೆ: ಗುರುವಾರದಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ:

ರಿಪ್ಪನ್ ಪೇಟೆ : ದಿನಾಂಕ 21ರ ಗುರುವಾರ,ಸಮಯ ಸಂಜೆ 5:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ  ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಬಿ,ಜಿ, ನಾಗರಾಜ್, ತಾಲ್ಲೂಕು ವೀಕ್ಷಕರಾದ  ಮಲ್ಲಿಕಾರ್ಜುನ್ ಹಕ್ರೆ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡ್ ರತ್ನಕರ್,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಬಿ ಪಿ ರಾಮಚಂದ್ರ,ಜಿಲ್ಲಾ ಪಂಚಾಯತ್…

Read Full News

ಯುವ ಸಾಹಿತಿ ರಫ಼ಿ ರಿಪ್ಪನ್ ಪೇಟೆ ರವರಿಗೆ ಒಲಿದ ರಾಜ್ಯ ಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ :

ರಿಪ್ಪನ್ ಪೇಟೆ : ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ರಿಪ್ಪನ್ ಪೇಟೆಯ ಯುವ ಸಾಹಿತಿ ಹಾಗೂ ಯುವ ಪತ್ರಕರ್ತ,ಸಮಾಜವಾದಿ ಚಿಂತಕ ರಫಿ ರಿಪ್ಪನ್ ಪೇಟೆ ಇವರಿಗೆ ರಾಜ್ಯಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಶ್ರೀ ಸಿದ್ದಗಂಗಾ ಮಹಾಸ್ವಾಮಿಗಳು ವಹಿಸಿದ್ದರು..  ಅಭೂತಪೂರ್ವ ಸಾಹಿತ್ಯ ಸಮ್ಮೇಳನದಲ್ಲಿ ಈಗಾಗಲೆ ರಾಜ್ಯ ಮಟ್ಟದ ಸಾಹಿತ್ಯ ಸಿರಿ ಹಾಗೂ ಗುರುಕುಲ ಶಿರೋಮಣಿ…

Read Full News

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು. ಇದೇ ರೀತಿ ದಿನನಿತ್ಯ ಬಿಜೆಪಿಯ ನಾಯಕರುಗಳು ಬಾಲಿಶತನದ ಹಾಗೂ ಜೋಕರ್ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ದೇಶದಲ್ಲಿ ಬಿಜೆಪಿ ಪಕ್ಷದ ಸಂಸ್ಕೃತಿ ಜೋಕರ್ ಸಂಸ್ಕೃತಿ ಎಂದು ತೋರಿಸುತ್ತಿದ್ದಾರೆ….

Read Full News

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಉಲ್ಲಾಸ್ ಆರ್ ಆಯ್ಕೆ :

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಯುವ ಮುಖಂಡ ಉಲ್ಲಾಸ್ ಆರ್ ರವರು ಆಯ್ಕೆಯಾಗಿದ್ದಾರೆ.  ಹೊಸನಗರ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಹೆಚ್ಚು ಗುರುತಿಸಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿರುವ ಯುವ ನಾಯಕರಿಗೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಲ್ಲಿ ಉತ್ತಮ ಹುದ್ದೆ ನೀಡುವಂತೆ ಹೊಸನಗರ ಯುವ ಕಾಂಗ್ರೆಸ್ ಸಮಿತಿಯಿಂದ ಶಿಪಾರಸು ಮಾಡಲಾಗಿತು. ಪಕ್ಷ ಸಂಘಟನೆಯ ಆದಾರದ ಮೇಲೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯ ರವರ ನಿರ್ದೇಶನದಂತೆ ಜಿಲ್ಲಾ ಯುವ ಕಾಂಗ್ರೆಸ್…

Read Full News

ಶಿವಮೊಗ್ಗ ಕೃಷಿ ಕಾಲೇಜಿನ ಪ್ರೊಫೆಸರ್ ಚಿಕ್ಕಬಾಸೂರು ಕೆರೆಯಲ್ಲಿ ಶವವಾಗಿ ಪತ್ತೆ :

ಶಿವಮೊಗ್ಗ : ಇಲ್ಲಿನ ಕೃಷಿ ಕಾಲೇಜಿನ ಜಿ.ಪಿ.ಬಿ. ವಿಭಾಗದ ಮುಖ್ಯಸ್ಥರಾದ ಪ್ರೊ. ಗಂಗಾಪ್ರಸಾದ್ ಅವರ ಮೃತದೇಹ ಹೊನ್ನಾಳಿ ತಾಲೂಕಿನ ಸ ಸಾಸ್ವೆಹಳ್ಳಿ ಸಮೀಪದ ಚಿಕ್ಕಬಾಸೂರು ತಾಂಡದ (ವಿಜಯಪುರ) ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಬಸವೇಶ್ವರ ನಗರದ ನಿವಾಸಿಯೂ, ಅಪಾರ ವಿದ್ಯಾರ್ಥಿಗಳ ಆಪ್ತ ಗುರುಗಳೂ ಆಗಿದ್ದ ಗಂಗಾಪ್ರಸಾದ್ (59) ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ.ಕೆರೆ ಮಗ್ಗುಲಲ್ಲಿ ಅವರ ಪ್ಯಾಂಟ್, ಚಪ್ಪಲಿ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಚಿಕ್ಕಬಾಸೂರು ತಾಂಡ( ವಿಜಯಪುರ) ಬಳಿ ಪತ್ತೆಯಾಗಿರುವ ಇವರ ಶವವನ್ನು ಕಾಲೇಜಿನ ವಿದ್ಯಾರ್ಥಿಯೋರ್ವ…

Read Full News

ಆರ್​ಎಸ್​​ಎಸ್​​ ಬಾಂಬ್​ ಹಾಕುವವರನ್ನ ತಯಾರು ಮಾಡುವ ಸಂಸ್ಥೆಯಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ಆರ್​​ಎಸ್​ಎಸ್​​​ ಸಂಘಟನೆ ದೇಶದ ಮೇಲೆ ಬಾಂಬ್ ಹಾಕುವವರನ್ನ ತಯಾರು ಮಾಡುವುದಿಲ್ಲ. ದೇಶವನ್ನು ಪ್ರೀತಿ ಮಾಡೋರನ್ನು ತಯಾರು ಮಾಡುತ್ತೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ವೋಟ್ ಬ್ಯಾಂಕಿಗಾಗಿ ಏನೇನೋ ಹೇಳುತ್ತಿದ್ದಾರೆ. ಅವರು ಅಧಿಕಾರದಿಂದ ಕೆಳಗಿಳಿದ ಮೇಲೆ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್​ನವರು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ, ಇದು ಸರಿಯಲ್ಲ. ಅಲ್ಪಸಂಖ್ಯಾತರ ಓಲೈಕೆಗೆ ಕಾಂಪಿಟೇಷನ್ ನಡೆಯುತ್ತಿದೆ ಎಂದರು. ಸಿಂದಗಿ, ಹಾನಗಲ್​ ಉಪ…

Read Full News

ಶಿವಮೊಗ್ಗದಲ್ಲಿ ಮತಾಂತರ ಆರೋಪ : ಹಿಂದೂ ಪರ ಸಂಘಟನೆಯ ಕಾರ್ಯಕರ್ತರಿಂದ ಆಕ್ರೋಶ

ಶಿವಮೊಗ್ಗ : ಮನೆಯ ಸದಸ್ಯರು ಮತಾಂತರ ಆಗುತ್ತಿದ್ದಾರೆ ಎಂದು ಸ್ಥಳೀಯರು ನಗರದ ಮನೆಯೊಂದರ ಮುಂದೆ ಜಮಾಯಿಸಿದ ಘಟನೆ ನಗರದಲ್ಲಿ ನಡೆದಿದೆ. ಸಾಗರದ ಗೋಪಾಲಗೌಡ ನಗರದ 2ನೇ ತಿರುವಿನಲ್ಲಿರುವ ಮನೆಯೊಂದರಲ್ಲಿ ಮನೆಯ ಸದಸ್ಯರು ಮತಾಂತರ ಆಗುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಹಾಗೂ ಯುವಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಮನೆಯವರಲ್ಲಿ ಓರ್ವರಿಗೆ ಇತ್ತೀಚಿಗೆ ಅನಾರೋಗ್ಯ ಉಂಟಾಗಿತ್ತು.‌ ಅವರು ಸಾಕಷ್ಟು ವೈದ್ಯರ ಬಳಿ ತೋರಿಸಿದ್ದರು. ಆದರೂ, ಗುಣಮುಖರಾಗಿರಲಿಲ್ಲ. ಹೀಗಾಗಿ, ಪೂಜೆ ನಡೆಸಿದ್ದಾರೆ. ಈ ವೇಳೆ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ…

Read Full News

ಭದ್ರಾವತಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ :

ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.2 ರ ಸದಸ್ಯೆ ಗೀತಾ ರಾಜ್‌ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚನ್ನಪ್ಪ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಗೀತಾ ಕೆ.ಜಿ ರಾಜ್‌ಕುಮಾರ್ ಮತ್ತು ಚನ್ನಪ್ಪ ತಲಾ 8 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಕೆ.ಜಿ ರಾಜ್‌ಕುಮಾರ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.15 ರ ಮಂಜುಳ ಬಿ.ಎಸ್ ಸುಬ್ಬಣ್ಣ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.5 ರ ಶಶಿಕಲಾ ಬಿ.ಎಸ್ ನಾರಾಯಣಪ್ಪ ಸ್ಪರ್ಧಿಸಿದ್ದು,…

Read Full News

ಹೊಂಬುಜ ಜೈನ ಮಠದಲ್ಲಿ ಅದ್ದೂರಿಯ ವಿಜಯದಶಮಿ :

ರಿಪ್ಪನ್ ಪೇಟೆ : ಜೈನರ ದಕ್ಷಿಣದ ಕಾಶಿಯಾಗಿರುವ ಹೊಂಬುಜ ಕ್ಷೇತ್ರದಲ್ಲಿ ನವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪದ್ಮಾವತಿ ದೇವಿಗೆ ನವರಾತ್ರಿಯ ಒಂಬತ್ತು ದಿನಗಳು ಬೇರೆ ಬೇರೆ ರೀತಿಯಲ್ಲಿ ಅಲಂಕರಿಸಿ ಪ್ರತಿ ದಿನ ವೈಭವದಿಂದ ಆಚರಿಸಲಾಯಿತು. ಕೆಟ್ಟದ್ದರಿಂದ ನಮ್ಮನ್ನು ರಕ್ಷಿಸುವ ಮಾತೆಯಾಗಿ ದೇವಿಯನ್ನು ಈ ದಿನಗಳಲ್ಲಿ ಕಾಣಲಾಗುತ್ತದೆ.ನವರಾತ್ರಿಯ ಕೊನೆಯ ದಿನವಾದ ಶುಕ್ರವಾರದಂದು ಹೊಂಬುಜ ಕ್ಷೇತ್ರದಿಂದ ಆನೆ ಮತ್ತು ಅಶ್ವ ದೊಂದಿಗೆ ಪಲ್ಲಕ್ಕಿಯ ರಾಜಬೀದಿ ಉತ್ಸವವು ಬನ್ನಿ ಮಂಟಪಕ್ಕೆ ತೆರಳಿ   ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ಬನ್ನಿ ಮುರಿದು ಭಕ್ತರಿಗೆ ಪ್ರಸಾದ…

Read Full News

ರಿಪ್ಪನ್ ಪೇಟೆ : ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ತರಬೇತಿ ಕೇಂದ್ರ ಅಸ್ತಿತ್ವಕ್ಕೆ

ರಿಪ್ಪನ್ ಪೇಟೆ : ರೋಟರಿ ಕ್ಲಬ್ ರಿಪ್ಪನ್ ಪೇಟೆ ಮತ್ತು ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ಇವರ ಸಹಯೋಗದಲ್ಲಿ ಪಟ್ಟಣದ ರಾಷ್ಟೋತ್ಥಾನ  ಶಿಶು ಮಂದಿರದಲ್ಲಿ  ಇಂದು ಡೆಸ್ಟಿನಿ ಡ್ಯಾನ್ಸ್  ತರಬೇತಿ ಶಾಲೆಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿ ರಾವ್  ಮುಂದಿನ ದಿನಗಳಲ್ಲಿ ನೃತ್ಯ ತಂಡಗಳು ಉಳಿಯಬೇಕಾದರೆ ಕೊರಿಯೋಗ್ರಾಫರ್ ಗಳ ಸಹಕಾರ ಅತ್ಯಗತ್ಯ. ಫಿಟ್ನೆಸ್ ಗೆ ನೃತ್ಯ ಅತಿ ಅವಶ್ಯಕ ಆದ್ದರಿಂದ ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ಇದರ…

Read Full News

ಶಿವಮೊಗ್ಗ : ಯುವಕನ ಬರ್ಬರ ಕೊಲೆ: ಅನೈತಿಕ ಸಂಬಂಧ ಶಂಕೆ

 ಶಿವಮೊಗ್ಗ : ಇಲ್ಲಿನ ಬಾಪೂಜಿ ನಗರದ ಮುಖ್ಯರಸ್ತೆ ಗಂಗಾಮತ ಸಂಘದ ವಿದ್ಯಾರ್ಥಿ ನಿಲಯದ ಎದುರು ಒಬ್ಬ ಯುವಕನನ್ನ ಬರ್ಬರ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ನಗರದ ಟ್ಯಾಂಕ್‌ ಮೊಹಲ್ಲಾದ ತುಂಗಾ ವಿಧ್ಯಾರ್ಥಿನಿಲಯದ ಬಳಿಯಲ್ಲಿ ಮೊಬೈಲ್‌ ನಲ್ಲಿ ಮಾತನಾಡುತ್ತ ನಿಂತಿದ್ದ ಯುವಕನನ್ನು ಏಳು ಜನರ ತಂಡ ಮುಸುಕು ಧರಿಸಕೊಂಡು ಬಂದು ಏಕಾ ಏಕಿಯಾಗಿ ಮಚ್ಚು ಲಾಂಗಿನಿಂದ ಹಲ್ಲೆಮಾಡಿದ್ದಾರೆ. ಇದರ ಪರಿಣಾಮ ಯುವಕ ಸ್ಥಳದಲ್ಲಿ ಸಾವನಪ್ಪಿದ್ದು. ಕೊಲೆಯ ನಂತರ ಕೊಲೆ ಮಾಡಿದವರು ಯುವಕ…

Read Full News

ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆ: ಬೆಂಗಳೂರಿನ ಶರವಣಂಗೆ ಮಿಸ್ಟರ್ ಕರ್ನಾಟಕ ಪ್ರಶಸ್ತಿ

ಶಿವಮೊಗ್ಗ: ನಾಡ ಹಬ್ಬ ದಸರಾ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರನ್ನು ಹಾಗೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಅದರಂತೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ದೇಹಾದಾರ್ಢ್ಯ ಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕಟ್ಟುಮಸ್ತಾದ ದೇಹವನ್ನು ಪ್ರದರ್ಶಿಸಿದರು. ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆಯಲ್ಲಿ ಬೆಂಗಳೂರಿನ ಶರವಣಂ ಅವರಿಗೆ ಮಿಸ್ಟರ್ ಕರ್ನಾಟಕ ಅವಾರ್ಡ್ ನೀಡಿ ಗೌರವಿಸಲಾಯಿತು. 55 ರಿಂದ 85 ಕೆಜಿ ಕೆಟಗಿರಿಯ ಒಟ್ಟು…

Read Full News

ತೀರ್ಥಹಳ್ಳಿ:ಆಸ್ತಿ ವಿಚಾರಕ್ಕೆ ಗಲಾಟೆ – ರಸ್ತೆ ಮಧ್ಯೆದಲ್ಲೇ ಸೀಮೆಎಣ್ಣೆ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆ

ತೀರ್ಥಹಳ್ಳಿ :  ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿಕೊಂಡು   ಬೈಕ್ ನಲ್ಲಿ ಸಾಗುವಾಗ ಮಾರ್ಗ ಮಧ್ಯೆಯೇ ಬೈಕ್ ನಿಲ್ಲಿಸಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ತೀರ್ಥಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಅಕ್ಲಾಪುರದ ನಿವಾಸಿ ರಾಘವೇಂದ್ರ (40)  ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಅಕ್ಲಾಪುರದ ಮನೆಯಿಂದ ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಬೈಕ್ ನಿಲ್ಲಿಸಿ ರಾಘವೇಂದ್ರ ಸೀಮೆಎಣ್ಣೆ ಕೊಂಡೊಯ್ದು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಆಸ್ತಿ ವಿಚಾರಕ್ಕೆಗಲಾಟೆಯಾಗಿದ್ದು ಇದೆ  ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ತೀರ್ಥಹಳ್ಳಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read Full News

ಶಿವಮೊಗ್ಗ : ಅನ್ನದಾತರನ್ನು ಕೊಂದವರು ಅಧಿಕಾರದಲ್ಲಿರೋದು ಬೇಡ : ಕಾಂಗ್ರೆಸ್ ಮೌನ ಪ್ರತಿಭಟನೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್‌ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.  ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು. ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್‌ ಮಿಶ್ರ…

Read Full News

ಹಿಂದುತ್ವದ ಸುದ್ದಿಗೆ ಬಂದರೆ ಅನುಭವಿಸುತ್ತೀರಿ! :ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ

ಶಿವಮೊಗ್ಗ: ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೇ ನೀಡಿರೋ ಗ್ರಾಮೀಣಾಭಿವೃದ್ಧಿ ಸಚಿವರಾಗಿರೋ ಕೆ.ಎಸ್‌ ಈಶ್ವರಪ್ಪ ಶಿಕಾಳಕೊಪ್ಪದಲ್ಲಿ ನಡೆದ ಘಟನೆಯನ್ನ ಖಂಡಿಸಿದಿದ್ದಾರೆ. ಕೆಲವು ಮುಸಲ್ಮಾನರು ಬಹಳ ತಲೆಹರಟೆಗಳಾಗಿದ್ದು,ಅವರೇ ಮುಸ್ಲೀಂರ ಉದ್ದಾರಕರು ಅನ್ನೋ ರೀತಿ ವರ್ತಿಸುತ್ತಿದ್ದಾರೆ. ಇದು ಸರಿಯಲ್ಲ ಎಂದುಹೇಳಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಅವರು ಶಿರಾಳಕೊಪ್ಪದಲ್ಲಿ ಮುಸ್ಲಿಂ ಯುವಕರು ಹಿಂದೂ ಯುವಕನ ಮೇಲೆ ನಡೆಸಿದ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರೀಯಿಸಿದ ಅವರು ಚೈತ್ರಾ ಕುಂದಾಪುರ ಅವರ ಹೇಳಿಕೆಯನ್ನು ಹಿಂದೂ ಯುವಕನೊಬ್ಬ ಕೇವಲ ಮೊಬೈಲ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದಕ್ಕೆ ಅಂಗಡಿಗೆ ನುಗ್ಗಿ ಹೊಡೆಯುತ್ತಾರೆ…

Read Full News

ರಿಪ್ಪನ್ ಪೇಟೆ : ಕೇಂದ್ರ ಗೃಹ ಸಚಿವ ಅಮಿತ್ ಷಾ ರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಜೆಡಿಎಸ್ ವತಿಯಿಂದ ರಾಷ್ಟ್ರಪತಿಗಳಿಗೆ ಮನವಿ:

ರಿಪ್ಪನ್ ಪೇಟೆ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆಯಾಗುತ್ತಾರೆ ಎಂಬ ಬಾಲಿಷ ಹೇಳಿಕೆ ನೀಡಿರುವ ದೇಶದ ಗೃಹ ಮಂತ್ರಿ ಅಮಿತ್ ಷಾ ರವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದ ವತಿಯಿಂದ ರಾಷ್ಟ್ರಪತಿಗಳಿಗೆ ಉಪತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು. ಇತ್ತೀಚೆಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಷಾ ಟಿವಿ ಸಂದರ್ಶನವೊಂದರ ವೇಳೆ ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ. ಅಂತಹ ವ್ಯಕ್ತಿಯು ಉತ್ತಮ…

Read Full News

ಸೊರಬ : ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪಂಚಕಜ್ಜಾಯ,ಉಡಿ ಸೇವೆಗೆ ಚಾಲನೆ

ಸೊರಬ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಪ್ರಸಿದ್ಧ ದೇವತೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರ ಬಹುದಿನದ ಬೇಡಿಕೆಯಾಗಿದ್ದ  ಪಂಚಕಜ್ಜಾಯ ಪ್ರಸಾದ್ ಹಾಗೂ ಉಡಿ ಸೇವೆಗೆ ಇಂದು ಚಾಲನೆ ನೀಡಲಾಯಿತು. ಇಂದು ದೇವಸ್ಥಾನದ ನಿರ್ವಹಣಾಧಿಕಾರಿಯಾದ ರಂಗಪ್ಪನವರು ದೇವಿಗೆ ನೈವೇದ್ಯ ಪೂಜೆ ಮಾಡಿಸಿ ನಂತರ ಭಕ್ತರಿಗೆ ವಿತರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

Read Full News

ಹೊಸನಗರ ತಾಲೂಕ್ ವೀರಶೈವ-ಲಿಂಗಾಯತ ಪರಿಷತ್ ನ ಅಧ್ಯಕ್ಷರಾಗಿ ಆನಂದ್ ಮೆಣಸೆ ಆಯ್ಕೆ :

ಹೊಸನಗರ : ತಾಲ್ಲೂಕು ವೀರಶೈವ-ಲಿಂಗಾಯತ ಪರಿಷತ್ ನ ಸರ್ವ ಸದಸ್ಯರ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ವೀರಶೈವ-ಲಿಂಗಾಯತ ಪರಿಷತ್ ನ ಅಧ್ಯಕ್ಷರಾಗಿ ಆನಂದ್ ಮೆಣಸೆ ರವರು ಆಯ್ಕೆಯಾಗಿದ್ದಾರೆ.  ಪ್ರಧಾನ ಕಾರ್ಯದರ್ಶಿಗಳಾಗಿ ಮಹೇಶ್ ದೇವರಸಲಕಿ,ದೇವು ಹುಳಿಗದ್ದೆ,ಲೋಕೇಶ್ ಶುಂಠಿಕೊಪ್ಪ,ಖಜಾಂಚಿಯಾಗಿ ಚಂದ್ರಶೇಖರ್ ಹಾಲುಗುಡ್ಡೆ,ಉಪಾದ್ಯಕ್ಷರುಗಳಾಗಿ ಜಗದೀಶ್ ಕುಕ್ಕಳಲೆ,ದಯಾಕರ್,ವಿಶ್ವನಾಥ್ ಹೊನ್ನೆಬೈಲು,ಪ್ರವೀಣ್ ಎಂ.ಗುಡ್ಡೆಕೊಪ್ಪ,ಕಮಲಾಕರ್ ಕಮದೂರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳಾಗಿ ಸಚಿನ್ ಗೌಡ ಗರ್ತಿಕೆರೆ,ನಿರಂಜನ್ ರಿಪ್ಪನ್ ಪೇಟೆ,ಟಿ.ಎಲ್ ಷಣ್ಮುಖ,ಶಿವಮೂರ್ತಿ ಹರತಾಳು,ಸುದಾಕರ್ ಬೆನವಳ್ಳಿ.ಹಾಗೂ 26 ಜನ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು. ಹಾಗೂ ವೀರಶೈವ-ಲಿಂಗಾಯತ ಕಾವಲು ಪರಿಷತ್ತು,ಕಾನೂನು‌‌ ಪರಿಷತ್ತು,ಪ್ರಚಾರ ಪರಿಷತ್ತು ಗಳನ್ನು…

Read Full News

ದಲಿತ ರೈತರ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ : ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ:

ಶಿವಮೊಗ್ಗ: ದರಕಾಸ್ತಿನಿಂದ ದಲಿತರಿಗೆ ಮಂಜೂರಾಗಿದ್ದ ಜಮೀನನ್ನು ವಶಕ್ಕೊಪ್ಪಿಸಲು ಬಿಡದ ಅರಣ್ಯಾಧಿಕಾರಿಗಳ ಅಧಿಕಾರಿಗಳು ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಲ್ಲದೇ ನಾಲ್ವರ ಮೇಲೆ ಏಳೆಂಟು ಸುಳ್ಳು ಮೊಕದ್ದಮೆ ದಾಖಲಿಸಿರುವ‌ ಬಗ್ಗೆ ತಾಲೂಕಿನ ದೇವಕಾತಿಕೊಪ್ಪ‌ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಇಂದು ಮದ್ಯಾಹ್ನದಿಂದ ಪ್ರತಿಭಟನೆಗಿಳಿದಿದ್ದಾರೆ. ದೇವಕಾತಿಕೊಪ್ಪ ಹೊರವಲಯದ ಸರ್ವೇ ನಂ115ರಿಂದ 126ರ ವರೆಗಿನ ಭೂಮಿಯಲ್ಲಿ 12ದಲಿತರಿಗೆ 1979ರಲ್ಲಿ ಅಂದಿನ ಸರ್ಕಾರ ತಲಾ 2ಎಕರೆಯಂತೆ 24 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಕಂದಾಯ ಇಲಾಖೆ ಈ ಭೂಮಿಗೆ ಪಹಣಿ ಹಾಗೂ ಖಾತೆ ಮಾಡಿ…

Read Full News

ಹೊಸನಗರ : ಮಾರುತಿಪುರ ಗ್ರಾಪಂ ಮಾಜಿ ಅಧ್ಯಕ್ಷರಾದ ಓಂಕೇಶ್ ಗೌಡ್ರು ನಿಧನ :

ಹೊಸನಗರ : ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ ಓಂಕೇಶ್ ಗೌಡ್ರು ಸಂಪಳ್ಳಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.  ದೀರ್ಘಕಾಲದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಓಂಕೇಶ್ ಇಂದು ಬೆಳಿಗ್ಗೆ ಹೃದಯಘಾತದಿಂದ ನಿಧನರಾಗಿದ್ದು. ಶ್ರೀಯುತರು 20 ವರ್ಷಕ್ಕೂ ಹೆಚ್ಚು ಕಾಲ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿ,ಸತತ 2 ಬಾರಿ ಮಾರುತಿಪುರ ಪಂಚಾಯತ್ ಸಂಪಳ್ಳಿ ಕ್ಷೇತ್ರದಿಂದ ಸದಸ್ಯರಾಗಿ, ಪಂಚಾಯತ್ ಅಧ್ಯಕ್ಷರು ಆಯ್ಕೆಯಾಗಿದ್ದರು. ಓಂಕೇಶ  ಗೌಡ್ರು  ಸಂಪಳ್ಳಿ ಅವರ ಅಕಾಲಿಕ ನಿಧನಕ್ಕೆ  ಸಂಬಂಧಿಕರು,ಸ್ನೇಹಿತರೂ…

Read Full News

ಶಿವಮೊಗ್ಗದಲ್ಲಿ ಚಿರತೆ ದಾಳಿ : ದನ-ಕರು ಸಾವು

ಶಿವಮೊಗ್ಗ: ಚಿರತೆ ದಾಳಿಯಿಂದ ದನ ಹಾಗೂ ಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಉಂಬ್ಳೇಬೈಲು ಸಮೀಪದ ಸಾಲಿಗೆರೆ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಸಾಲಿಗೆರೆ ಗ್ರಾಮದ ಕೃಷ್ಣಮೂರ್ತಿ ಎಂಬುವರ ಮನೆಯ ಕೊಟ್ಟಿಗೆಗೆ ನುಗ್ಗಿದ ಚಿರತೆ ದನ ಹಾಗೂ ಕರು ಮೇಲೆ ದಾಳಿ ಮಾಡಿದೆ. ಈ ಘಟನೆಯಿಂದ ಗ್ರಾಮದಲ್ಲಿ ಚಿರತೆ ದಾಳಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದಷ್ಟೇ ಸಾಲಿಗೆರೆಯ ಗ್ರಾಮಸ್ಥರು ಕಾಡಾನೆ ದಾಳಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದರು. ಉಂಬ್ಳೇಬೈಲು, ಸಾಲಿಗೆರೆ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿಗೆ…

Read Full News

ಭದ್ರಾವತಿಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ರವರಿಗೆ ಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ:

ಭದ್ರಾವತಿ : ತಾಲ್ಲೂಕಿನ ಕಡದಕಟ್ಟೆಯ ನವಚೇತನ ಕನ್ನಡ ಹಿ.ಪ್ರಾ.ಶಾಲೆಯ ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ರವರಿಗೆಹೆಮ್ಮೆಯ ಕನ್ನಡಿಗ ರಾಜ್ಯ ಪ್ರಶಸ್ತಿ ಲಭಿಸಿದೆ. ಧಾರವಾಡದ ಚೇತನ್ ಫೌಂಡೇಶನ್  ವತಿಯಿಂದ ಡಾ.ಪಾಟೀಲ್ ಪುಟ್ಟಪ್ಪ  ಸಭಾಭವನದ ವಿದ್ಯಾವರ್ಧಕ ಸಂಘದಲ್ಲಿ ಹಮ್ಮಿಕೊಂಡಿದ್ದ ದಸರಾ ಉತ್ಸವದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸೇವೆ ಹಾಗೂ ಕನ್ನಡ ಸಾಹಿತ್ಯದ ಸೇವೆ ಸಾಧನೆ ಪರಿಗಣಿಸಿ ಸಿ.ಎಚ್.ನಾಗೇಂದ್ರಪ್ಪರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Read Full News

ಅವಿದ್ಯಾವಂತರು ದೇಶಕ್ಕೆ ಹೊರೆ ಎಂಬ ಅಮಿತ್ ಶಾ ಹೇಳಿಕೆಗೆ ಖಂಡನೆ:

ರಿಪ್ಪನ್ ಪೇಟೆ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆಯಾಗುತ್ತಾರೆ. ಅನಕ್ಷರಸ್ಥರು ಭಾರತದ ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ ಎಂಬ ಗೃಹ ಸಚಿವ ಅಮಿತ್‌ ಶಾ ಹೇಳಿಕೆಯನ್ನು ಜೆಡಿಎಸ್ ರಾಜ್ಯ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಖಂಡಿಸಿದ್ದಾರೆ. ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿ 20 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಸದ್‌ ಟಿವಿಗೆ ಅಮಿತ್‌ ಶಾ ಸಂದರ್ಶನದ ವೇಳೆ ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ….

Read Full News

ಲಖಿಂಪುರದ ರೈತರ ಹತ್ಯೆ ಖಂಡಿಸಿ ಸಾಗರ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಹಾಗು ‘ಮೌನಚಾರಣೆ …!

  ಸಾಗರ: ಇಲ್ಲಿನ  ಕಾಂಗ್ರೆಸ್ ಪಕ್ಷದ ಕಛೇರಿ ಮುಂಭಾಗದಲ್ಲಿ   ಸಾಗರ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ವತಿಯಿಂದ ಇಂದು ಸಂಜೆ ನಗರ ಅಧ್ಯಕ್ಷರಾದ  ಸುರೇಶ್ ಬಾಬು ರವರ ನೇತೃತ್ವದಲ್ಲಿ ಉತ್ತರ ಪ್ರದೇಶದ ಲಖೀಂಪುರ ಗ್ರಾಮದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಅಜಯ್ ಮಿಶ್ರಾ ಅವರ ಪುತ್ರನಾದ ಆಶಿಶ್ ಮಿಶ್ರಾ ವಾಹನವನ್ನು ಚಲಾಯಿಸಿ ಹತ್ಯೆಯನ್ನು ಖಂಡಿಸಿ ಹಾಗೂ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಮೇಣದ ಬತ್ತಿ ಬೆಳಗಿಸಿ  ಶ್ರದ್ಧಾಂಜಲಿ ಹಾಗು ಮೌನಚಾರಣೆ …

Read Full News

ಸಾಗರ : ಶಾಸಕರು ಸಾಗರ ನಗರವನ್ನು ಎಣ್ಣೆ ಸಾಗರ ಮಾಡಲು ಹೊರಟಿದ್ದಾರೆ : ಗೋಪಾಲಕೃಷ್ಣ ಬೇಳೂರು

ಸಾಗರ : ನಗರಸಭೆಯಲ್ಲಿ ಒಂದು ವಾರದಿಂದ ನೀರು ಬಿಡಲು ಯಾಂತ್ರಿಕ ತೊಂದರೆ ಎಂಬ ಕಾರಣ ಕೊಟ್ಟಿದ್ದಾರೆ. ಹಿನ್ನೀರಿನಿಂದ ನೀರು ತರುವ ಕೆಲಸವನ್ನ ನನ್ನ ಅವಧಿಯಲ್ಲಿ ಮಾಡಿದ್ದೆ, ಅಲ್ಲಿನಿಂದ ನೀರನ್ನೇಕೆ ಸಾಗರದ ಜನತೆಗೆ ನೀಡಿಲ್ಲ. ಸಾಗರದಲ್ಲಿ ಬೀದಿ ನಾಯಿಗಳ ಹಾವಳಿ, ಬಿಡಾಡಿ ದನಗಳ ಹಾವಳಿ, ಹಂದಿಗಳ ಹಾವಳಿ ತಡೆಯಲು ನಗರಸಭೆ ಆಡಳಿತ ವಿಫಲವಾಗಿದೆ. ಶಾಸಕ ಹರತಾಳು ಹಾಲಪ್ಪ ಸಾಗರ ನಗರವನ್ನು ‘ಎಣ್ಣೆ’ ಸಾಗರ ಮಾಡಲು ಹೊರಟಿದ್ದಾರೆ ಎಂದರು. ಕಾರ್ಗಲ್ ಜೋಗ ಭಾಗಕ್ಕೆ ಇರುವ ಒಂದು ಪೋಲೀಸ್ ಠಾಣೆಯನ್ನು ತುಮರಿ ಭಾಗಕ್ಕೆ…

Read Full News

ಭದ್ರಾವತಿ : ಕಡಜದ ಹುಳಗಳ ದಾಳಿಗೆ ಮತ್ತೋರ್ವ ರೈತ ಬಲಿ !

ಭದ್ರಾವತಿ: ಕಳೆದ ಕೆಲವು ದಿನಗಳ ಹಿಂದೆ ಕಡಜದ ಹುಳುಗಳ ದಾಳಿಯಿಂದ ಇಬ್ಬರು ಮೃತಪಟ್ಟಿದ್ದರು.ಇದೀಗ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿರುವ ಘಟನೆಸೋಮವಾರ ನಡೆದಿದೆ. ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ ಕುಮಾರ್‌(38) ಮೃತಪಟ್ಟಿದ್ದು, ಇವರು ತಮ್ಮ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಭಾನುವಾರ ಬೆಳಿಗ್ಗೆ ಕಡಜದ ಹುಳುಗಳು ದಾಳಿ ನಡೆಸಿವೆ. ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Read Full News

ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೈಕಲ್ ನಲ್ಲಿ 3,500 ಕಿ ಮೀ ಏಕಾಂಗಿ ಯಾತ್ರೆ

ಶಿವಮೊಗ್ಗ  : ಬೆಂಗಳೂರಿನ ಬನ್ನೇರುಘಟ್ಟದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಯಾಗಿರುವ 19 ವರ್ಷದ ಕಿರಣ್ ಕುಮಾರ್, ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸುವಂತೆ ಆಗ್ರಹಿಸಿ 3500 ಕಿ ಮೀ  ಸೈಕಲ್ ಮುಖಾಂತರ ಸಂಚರಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಭೇಟಿ ಮಾಡಿ ಮನವಿ ಸಲ್ಲಿಸುತ್ತಿದ್ದಾರೆ. ಬೆಂಗಳೂರು ನಗರ, ತುಮಕೂರು, ಬಳ್ಳಾರಿ, ಬೆಳಗಾವಿ, ಗದಗ, ರಾಯಚೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಈಗಾಗಲೇ ಸೈಕಲ್ ಯಾತ್ರೆ ಮುಗಿಸಿದ್ದು, ನಾಳೆ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ…

Read Full News

ಸಮಾಜದಲ್ಲಿ ಪರಿವರ್ತನೆಯನ್ನು ತಂದ ಕೀರ್ತಿ ಹಾನಗಲ್ ಶಿವಕುಮಾರ ಸ್ವಾಮೀಜಿಗೆ ಸಲ್ಲುತ್ತದೆ : ಬಿ ಎಸ್ ಯಡಿಯೂರಪ್ಪ

ಶಿಕಾರಿಪುರ  : ಸಮಾಜದಲ್ಲಿನ ಮೂಢನಂಬಿಕೆ, ಅಸಮಾನತೆ ತೊಡೆದು ಪರಿವರ್ತನೆ ತಂದವರು ಹಾನಗಲ್ಲ ಶಿವಕುಮಾರ ಶ್ರೀಗಳು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಶಿಕಾರಿಪುರ ತಾಲೂಕು ಘಟಕದ ವತಿಯಿಂದ ಹಾನಗಲ್ ಶಿವಕುಮಾರ ಸ್ವಾಮಿಗಳ 154ನೇ ಜಯಂತಿ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ‌ ಅವರು ಉದ್ಘಾಟಿಸಿ ಮಾತನಾಡಿದರು. ಅಂಧ ಶ್ರದ್ಧೆಯಿಂದ ಬಡವನಾಗಿದ್ದ ಸಮಾಜಕ್ಕೆ ಆಚಾರದ ಅರಿವು, ಶರಣ ಸಂಸ್ಕೃತಿ ನೆಲೆಯಲ್ಲಿ ಪುನಶ್ಚೇತನಗೊಳಿಸಿದ್ದಾರೆ ಎಂದು ಹೇಳಿದರು. ಶೈಕ್ಷಣಿಕವಾಗಿ ಹಿಂದುಳಿದ ಸಮಾಜದಲ್ಲಿ ಗುಲಾಮಗಿರಿ, ಅನಕ್ಷರತೆಯಯನ್ನು ಗಮನಿಸಿ,…

Read Full News

ಅರಣ್ಯ ಸಂಚಾರಿ ದಳದ ಮಿಂಚಿನ ಕಾರ್ಯಾಚರಣೆ ಅಕ್ರಮವಾಗಿ ಜಿಂಕೆ ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸಿದವನ ಬಂಧನ.

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರದ ಅಧಿಕಾರಿ ಮತ್ತು ಸಿಬ್ಬಂದಿಯವರು ಅಕ್ರಮವಾಗಿ  ಜಿಂಕೆ ಕೊಂಬುಗಳನ್ನು ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ತಾಲೂಕು ಯರೇಕೊಪ್ಪ ವಾಸಿ ಟಿ ನಾಗೇಶ್ ನಾಯ್ಕ ಬಿನ್ ಟೀಕ್ಯಾ ನಾಯ್ಕ ಎಂಬಾತನನ್ನು  ಶಿವಮೊಗ್ಗದ ತ್ಯಾವರೆ ಕೊಪ್ಪದ ಬಳಿ ಮಾಲು ಸಮೇತ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು  ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ದಾಳಿಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ಮಲ್ಲಿಕಾರ್ಜುನ  ಬಿ ಮತ್ತು ದಫೆದಾರ್…

Read Full News

ಭದ್ರಾವತಿ : ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸುಮಾರು 20 ಕೆ ಜಿ ಗಾಂಜಾ ವಶ

ಭದ್ರಾವತಿ : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೊಂದಿ ಚೆಕ್ ಪೋಸ್ಟ್ ನಲ್ಲಿ  ಭದ್ರಾವತಿ ಕಡೆಯಿಂದ ಬಂದ ಬುಲೆರೋ ಪಿಕಪ್ ವಾಹನ ಸಂಖ್ಯೆKA14C2174 ಗಾಡಿಯಲ್ಲಿ 20ಕೆಜಿ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ.  ಗೊಂದಿ ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿರುವಾಗ ಭದ್ರಾವತಿ ಕಡೆಯಿಂದ ಬಂದ ಬೊಲೇರೊ ಪಿಕಪ್ ನಿಲ್ಲಿಸಲು ಸೂಚಿಸಿದರು ನಿಲ್ಲಿಸಿದೆ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಸಿ ಗಲಾಟೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಆರೋಪಿಗಳನ್ನು ವಿಚಾರಿಸಿದಾಗ ಸದರಿ ವಾಹನದಲ್ಲಿ ಆಂಧ್ರಪ್ರದೇಶದ ತುಣಿ ಎಂಬ ಊರಿನ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.