ಕ್ರೈಂ ಸುದ್ದಿ:
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :
ಸಾಗರ ತಾಲೂಕು ತಾಳಗುಪ್ಪ ಸಮೀಪದ ಬಲೇಗಾರ್ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಭಟ್ಕಳದಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರುಗೆ ಗಾಯಗೊಂಡಿದ್ದು, ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಂತ್ರಿಕ ದೋಷದಿಂದ ಬಸ್ಸು ಚಾಲಕ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗುತ್ತಿದೆ. ಬಸ್ಸು ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ಕೂಡಲೆ ನೆರವಿಗೆ ಬಂದಿದ್ದಾರೆ. ಪ್ರಯಾಣಿಕರನ್ನು ಬಸ್ಸಿನಿಂದ ಮೇಲೆತ್ತಿದ್ದಾರೆ.
ತೀರ್ಥಹಳ್ಳಿಯಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರ ಬಂಧನ :
ತೀರ್ಥಹಳ್ಳಿ: ಮಾರಿಕಾಂಬ ದೇವಸ್ಥಾನದ ಎಡಭಾಗದ ಓಣಿಯಲ್ಲಿ ಗಾಂಜಾ ಸೇವಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದು ಇಬ್ಬರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಕುಶಾವತಿಯ ಅನುಜಿತ್ ಮತ್ತು ಬೆಟ್ಟಮಕ್ಕಿಯ ಸುಮಂತ್ ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ. ತೀರ್ಥಹಳ್ಳಿ ಪೊಲೀಸರು ಗಸ್ತು ತಿರುಗುವಾಗ ಅನುಜಿತ್, ಸುಮಂತ್ ಮತ್ತು ಸೊಪ್ಪುಗುಡ್ಡೆಯ ಮಂಜುನಾಥ ಅನುಚಿತವಾಗಿ ವರ್ತಿಸುತ್ತಿದ್ದರು. ಮೂವರನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದ್ದು ಇಬ್ಬರದ್ದು ಪಾಸಿಟಿವ್ ಬಂದಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ್ವಿಚಕ್ರ ವಾಹನ ತಪ್ಪಿಸಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಮೇಲೆ ಹರಿಹಾಯ್ದ ಲಗೇಜ್ ಆಟೋ :
ಸಾಗರ: ದ್ವಿಚಕ್ರ ವಾಹನವನ್ನು ಬಚಾವ್ ಮಾಡಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರೂ ಯುವತಿಯರಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದು ಅಪಘಾತವಾಗಿರುವ ಘಟನೆ ಸಾಗರದಲ್ಲಿ ಸಂಜೆ ನಡೆದಿದೆ. ಸಾಗರ ನಗರ ಬಿಹೆಚ್ ರಸ್ತೆಯಲ್ಲಿ ಇರುವ ಸುಜುಕಿ ಶೋರೂಮ್ ಎದುರು ಶುಕ್ರವಾರ ಸಂಜೆ ಲಗೇಜ್ ಆಟೋ ಒಂದು ಅಚಾನಕ್ಕಾಗಿ ರಸ್ತೆಯ ಮಧ್ಯ ಬಂದ ದ್ವಿಚಕ್ರ ವಾಹನಕ್ಕೆ ಬಚಾವ್ ಮಾಡಲು ಹೋಗಿ ಅದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಎಸ್ಎನ್ ನಗರದ ನಾಲ್ಕನೇ ತಿರುವಿನ ವಾಸಿಗಳಾದ ಆಫ಼್ರೀನ್ ಹಾಗೂ ಶಮ್ರೀನ್ ಎಂಬ …
ಸಿನಿಮೀಯ ರಿತಿಯಲ್ಲಿ ದನಗಳ್ಳರನ್ನು ಮಟ್ಟ ಹಾಕಿದ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ : ರಿಪ್ಪನ್ ಪೇಟೆ ಪೊಲೀಸರು ಬದುಕುಳಿದಿದ್ದೆ ಹೆಚ್ಚು
ಹೊಸನಗರ : ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ದನಗಳ್ಳರು ಗ್ರಾಮದ ಹಸುಗಳನ್ನು ಕದ್ದು ಸಾಗಿಸುತ್ತಿದ್ದ ಎಂಟು ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ನಡೆದಿದೆ. ಬುಧವಾರ ರಾತ್ರಿ ಮೇಲಿನಬೆಸಿಗೆಯ ಗ್ರಾಮಸ್ಥರು ಅಕ್ರಮ ದನಗಳ್ಳರ ವಾಹನವನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ದನಕಳ್ಳರು ಮಾರಕಾಸ್ತ್ರಗಳಿಂದ ಬೆದರಿಸಿ ವಾಹನ ಚಲಾಯಿಸಿದ್ದಾರೆ.ಕೂಡಲೇ ಗ್ರಾಮಸ್ಥರು ತಹಸಿಲ್ದಾರ್ ವಿ.ಎಸ್. ರಾಜೀವ್ ಮತ್ತು ಸಿಬ್ಬಂದಿಗಳ ತಂಡಕ್ಕೆ ಮಾಹಿತಿ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತರಾದ ರಾಜೀವ್ ದನಗಳ್ಳರ ವಾಹನ ಹೊಸನಗರದಿಂದ ರಿಪ್ಪನ್ ಪೇಟೆ…
ಅಕ್ರಮ ಗೋಮಾಂಸ ಸಾಗಿಸುತ್ತಿದ್ದವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು
ಮೂಡಿಗೆರೆ : ಗೋಮಾಂಸ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಭಜರಂಗದಳದ ಕಾರ್ಯಕರ್ತರು ಸೆರೆಹಿಡಿದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಪ್ರತೀ ಶುಕ್ರವಾರದಂದು ಗೋಮಾಂಸ ಸಾಗಾಟ ನಡೆಸಿ ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಅಲಿ ಎಂಬ 35 ವರ್ಷದವನ್ನು, ಮುತ್ತಿಗೆಪುರದ ಹಂಡಗುಳಿ ದಾರಿಯಲ್ಲಿ ಭಜರಂಗದಳದ ಕಾರ್ಯಕರ್ತರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈತನು ಈ ಹಿಂದೆ ಸಾಗಾಟ ನಡೆಸಿದ ಆರೋಪದ ಮೇರೆಗೆ ಭಜರಂಗದಳದ ಕಾರ್ಯಕರ್ತರು ಈತನನ್ನು ಬಹಳ ಸಮಯ ಕಾದು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಆರೋಪಿಯನ್ನು…
ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಚರಣೆ : ಕಳ್ಳತನವಾಗಿದ್ದ ವಸ್ತುಗಳು ವಾರಸುದಾರರಿಗೆ ವಾಪಾಸ್
ಶಿವಮೊಗ್ಗ: 2021 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 518 ಸ್ವತ್ತು ಕಳವು ಪ್ರಕರಣ ವರದಿಯಾಗಿದ್ದು ಅಂದಾಜು ಮೌಲ್ಯ 6,23,91,2147 ರೂ. ಎಂದು ಅಂದಾಜಿಸಲಾಗಿದೆ. ಅದರಲ್ಲಿ 3,03,59,176 ರೂ. ಮೌಲ್ಯದ ಮಾಲುಗಳನ್ನು ಪತ್ತೆ ಮಾಡಲಾಗಿದ್ದು, ಸದರಿ ಮಾಲಿನ ವಾರಸುದಾರರಿಗೆ ಬಿಟ್ಟು ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಿ ಪ್ರಸಾದ್ ಹೇಳಿದ್ದಾರೆ. ಅವರು ಇಂದು ಡಿಎಆರ್ ಸಭಾಂಗಣದಲ್ಲಿ ಕಳವು ಪ್ರಕರಣಗಳಲ್ಲಿ ಪತ್ತೆ ಮಾಡಿದ ಮಾಲ್ ಗಳನ್ನು ವಾರಸುದಾರರಿಗೆ ಬಿಟ್ಟುಕೊಡುವ ಸಮಾರಂಭದ ಸುದ್ದಿಗಾರರೊಂದಿಗೆ ಮಾತನಾಡಿದರು….
ಆನಂದಪುರದಲ್ಲಿ ಮನೆಯ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!!
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದ ಹಳೆ ಸಂತೆ ಮಾರ್ಕೆಟ್ ರಸ್ತೆಯ ನಿವಾಸಿ ಮಹೇಶ್ (31) ವರ್ಷ ಇಂದು ಮಧ್ಯಾಹ್ನ ಮನೆಯ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ತರಕಾರಿ ಅಂಗಡಿ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ಹಾಗೂ ಕೊರೋನಾ ಸಂದರ್ಭದಲ್ಲಿ ಅವರ ತಾಯಿಯವರು ಕೂಡ ಕರೋನಾಗೆ ಬಲಿಯಾಗಿದ್ದರು ಇದರಿಂದಲೂ ತೀವ್ರ ಮಾನಸಿಕ ಜಿಗುಪ್ಸೆಯನ್ನು ಹೊಂದಿದ್ದರ ಪರಿಣಾಮ ಹಾಗೂ ಇತ್ತೀಚೆಗೆ ಕೆನರಾ ಬ್ಯಾಂಕ್ ನಲ್ಲಿ ತರಕಾರಿ ಅಂಗಡಿಗೆ ಸಾಲವನ್ನು…
ದೀಪಾವಳಿ ಸಂಭ್ರಮಕ್ಕೆ ಬೀಗರ ಮನೆಗೆ ಹೊರಟಿದ್ದ ಕುಟುಂಬದವರ ಮೇಲೆ ಜವರಾಯನ ಅಟ್ಟಹಾಸ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣ ಸಾವು!!!
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಬಳಿ ಬೈಕ್ ಹಾಗೂ 407 ಟೆಂಪೋ ವಾಹನದ ನಡುವೆ ಮುಖಾಮುಖಿ ಅಪಘಾತ ವಾಗಿದ್ದು ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ತಂದೆ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಎದುರು ಭಾಗದಿಂದ ಬಂದ 407 ಟೆಂಪೋ ವಾಹನ ಡಿಕ್ಕಿ ಹೊಡೆದಿದ್ದು ರಾಮಚಂದ್ರ ವೀರಪ್ಪ ( 42) ಪುಟಾಣಿ ಮಕ್ಕಳಾದ ಶಶಾಂಕ್( 11) ಆದರ್ಶ( 5)ಸ್ಥಳದಲ್ಲೇ ಅಸುನೀಗಿದ್ದಾರೆ. ಇನ್ನೂ ಪತ್ನಿ ಭಾಗ್ಯಮ್ಮನಿಗೂ ಕೂಡ…
ಮಲೆನಾಡಿನಲ್ಲಿ ಮನೆ ಮುರಿದರೇ ಪೊಲೀಸರು ?? ಪೊಲೀಸರ ಗೂಂಡಾ ವರ್ತನೆಯ ಆರೋಪಕ್ಕೆ ಕಡೂರು ಪಿಎಸ್ಸೈ ರಮ್ಯಾ ಹೇಳಿದ್ದೇನು !!
ಮಲೆನಾಡಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಗೂಂಡಾ ವರ್ತನೆ ತೊರಿದ್ದು. ಮನೆಯ ಬಾಗಿಲು, ಹಂಚು ಮುರಿದು ರೌಡಿಗಳಂತೆ ಪೊಲೀಸರು ಮನೆಯ ಒಳ ಭಾಗವನ್ನು ಪ್ರವೇಶಿಸಿದ್ದಾರೆ ಎಂದು ಕುಟುಂಬದ ಸದಸ್ಯರಿಂದ ಪೋಲಿಸರ ಮೇಲೆ ಆರೋಪ ಕೇಳಿಬಂದಿದೆ. ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಬಾರ್ ವಿರುದ್ಧ ಸ್ಥಳೀಯರು ಪ್ರತಿಭಟಿಸಿದ್ದರು. ಅಪ್ರಾಪ್ತ ಬಾಲಕ, ಮೂವರು ಮಹಿಳೆಯರು ಸೇರಿ 7 ಜನರನ್ನ ಖಾಕಿ ಪಡೆ ಎಳೆದೊಯ್ದಿದ್ದಾರೆ ಎಂದು ಕುಟುಂಬದ ಓರ್ವ ಸದಸ್ಯರು ಆರೋಪಿಸಿದ್ದಾರೆ.ಒಂದೇ ಮನೆಯ ಮೂವರನ್ನ ಪೊಲೀಸರು ಬಂಧಿಸಿದ್ದಾರೆ….
ಹಣದ ವಿಚಾರವಾಗಿ ಖಾರದ ಪುಡಿ ಎರಚಿ ದಾಳಿ ಸ್ಥಳದಲ್ಲಿ ಬೈಕ್ ಸುಟ್ಟು ಭಸ್ಮ!! ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು !!
ಹಣದ ವಿಚಾರದಲ್ಲಿ ಹಾರನಹಳ್ಳಿ ರಫೀಕುಲ್ಲಾ(37) ಎಂಬುವರಿಗೆ ಖಾರದ ಪುಡಿ ಎರಚಿ ಥಳಿಸಿದ್ದು ಬೈಕ್ ನ್ನ ಸುಟ್ಟು ಭಸ್ಮ ಮಾಡಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ನಡೆದಿದೆ. ತರಕಾರಿ, ಕಾರ್ಪೆಂಟ್ ಕೆಲಸ ಮಾಡಿಕೊಂಡಿದ್ದ ರಫೀಕುಲ್ಲಾ ಹಾರನಹಳ್ಳಿಯಿಂದ ಶಿವಮೊಗ್ಗಕ್ಕೆ ಬಜಾಜ್ ಪ್ಲಾಟಿನ ದಲ್ಲಿ ಬರುವಾಗ ಯರೇಕೊಪ್ಪದ ಅರಣ್ಯ ಇಲಾಖೆಯ ಪ್ರವೇಶದ್ವಾರದ ಬಳಿ ಖಾರದ ಪುಡಿ ಎರಚಿ ಮೂವರು ದಾಳಿ ನಡೆಸಿದ್ದಾರೆ ಕಳೆದ ಎರಡು ತಿಂಗಳ ಹಿಂದೆ ರಫಿಕುಲ್ಲಾ ಪತ್ನಿ ರಿಹಾನಾ ಭಾನು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. 13…