Headlines

ಕಾರು ಡಿಕ್ಕಿಯಾಗಿ ಬಾಲಕ ಸಾವು :ನಡು ರಸ್ತೆಯಲ್ಲೆ ಶವವಿಟ್ಟು ಪ್ರತಿಭಟನೆ ಮಾಡಿದ ಗ್ರಾಮಸ್ಥರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಹೆಚ್ಚುತ್ತಿದ್ದು ವಾಹನ ವೇಗ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕುಂಸಿ ಗ್ರಾಮಸ್ಥರು ಗುರುವಾರ ಅಪಘಾತದಿಂದ ಮೃತಪಟ್ಟ ಬಾಲಕನ ಶವವಿಟ್ಟು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬುಧವಾರ ಸಾಗರ ಕಡೆಯಿಂದ ಬರುತ್ತಿದ್ದ ಕಾರು ಶಾಲೆಯಿಂದ ವಾಪಸು ಮನೆಗೆ ಬರುತ್ತಿದ್ದ ಕುಂಸಿ ಗ್ರಾಮದ ಚಿಕ್ಕಣ್ಣ ದಂಪತಿಗಳ ಪುತ್ರ 9 ವರ್ಷದ ಬಾಲಕ ವೇಣುಗೋಪಾಲ್‌ಗೆ ಡಿಕ್ಕಿ ಹೊಡೆದಿತ್ತು.  ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ನಂತರ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಹಾಗೂ…

Read More

ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಾಲನೆ.

ಶಿವಮೊಗ್ಗ : ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಘಟಿಕೋತ್ಸವದಲ್ಲಿ ಹೆಸರಾಂತ ಅಣು ಜೀವಶಾಸ್ತ್ರಜ್ಞ ಭಾರತೀಯ ಸಂಜಾತ ವಿಜ್ಞಾನಿ ಡಾ.ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ನಂತರ ವಿವಿಧ ಶಿಕ್ಷಣ ವಿಭಾಗದಲ್ಲಿ 28 ವಿದ್ಯಾರ್ಥಿಗಳಿಗೆ 35 ಚಿನ್ನದ ಪದಕ ಹಾಗೂ 15 ವಿದ್ಯಾರ್ಥಿಗಳಿಗೆ ಪಿಎಚ್ ಡಿ ಪದವಿ ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ…

Read More

ಜೋಗ ಜಲಪಾತ, ಹುಲಿ ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ :: ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಇವತ್ತು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು. ಗುರುವಾರ ಬೆಳಗ್ಗೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜೋಗ ಜಲಪಾತ, ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದ ಕುರಿತು ಮಾಹಿತಿ ಪಡೆದರು. ಅಲ್ಲದೆ ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣದ ಕುರಿತು ತಿಳಿದುಕೊಂಡರು. ರಾಜ್ಯಪಾಲ…

Read More

ಶಿವಮೊಗ್ಗದ ಚೋರ್ ಬಜಾರ್ ನಲ್ಲಿ ಗಲಾಟೆ ; ಮುಂಜಾಗ್ರತೆಯಿಂದ ಬಜಾರ್ ಬಂದ್

ಶಿವಮೊಗ್ಗ : ಚೋರ್ ಬಜಾರ್ ನಲ್ಲಿ ಗಲಾಟೆ ಆಗಿದ್ದು ಬಜಾರ್ ನ್ನು ಬಂದ್ ಮಾಡಲಾಗಿದೆ. ವ್ಯಾಪಾರಸ್ಥರ ನಡುವೆಯೇ ಈ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ. ಸುಮಾರು 8-10 ಜನ ಗಲಾಟೆ ಮಾಡಿದ್ದೂ ಇವರಲ್ಲಿ ಕೆಲವರ ಬಳಿ ಹರಿತವಾದ ಆಯುಧಗಳು ಕಂಡು ಬಂದಿದೆ.  ಯಾವುದೇ  ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಬಟ್ಟೆ ಮಾರುಕಟ್ಟೆಯನ್ನ ಬಂದ್ ಮಾಡಲಾಗಿದೆ. ನಗರದ ಗಾಂಧಿ ಬಜಾರ್ ಸಮೀಪದ ಶಿವಮೊಗ್ಗ ಚೋರ್ ಬಜಾರ್ ಖ್ಯಾತಿಯ ಬಟ್ಟೆ ಮಾರುಕಟ್ಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ…

Read More

ನಾಳೆ ಪೆಸಿಟ್ ಕಾಲೇಜಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ !

ಶಿವಮೊಗ್ಗ : ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲಟ್ ಅವರು ನಗರದ ಪ್ರತಿಷ್ಠಿತ ಪಿಇಎಸ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಅಂದು ಸಂಸ್ಥೆಯ ಪ್ರೇರಣಾ ಕನ್ವೆಷನ್ ಹಾಲ್‌ನಲ್ಲಿ ಮಧ್ಯಾಹ್ನ 3:30 ಗಂಟೆಗೆ ಸರಿಯಾಗಿ ಆಯೋಜಿಸಲಾಗಿರುವ ಸಮಾರಂಭದಲ್ಲಿ LANDSCAPE OF NATIONAL EDUCATION POLICY, 2020 WHAT, WHY AND HOW? ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ಸಮಾರಂಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಪಿಇಎಸ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿಗಳಾಗಿರುವ ಶ್ರೀ…

Read More

ನಾನು ಕ್ಷೇತ್ರದಲ್ಲಿ ಇರುವುದು ಕಿಮ್ಮನೆ ಅವರಿಗೆ ಸಹಿಸಲು ಆಗುತ್ತಿಲ್ಲ – ಆರಗ ಜ್ಞಾನೇಂದ್ರ

ಶಿವಮೊಗ್ಗ : ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ  ಗೃಹಸಚಿವರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಿನ್ನೆ ಟೀಕಿಸಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ನಾನು ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವನಲ್ಲ. ಇಡೀ ರಾಜ್ಯಕ್ಕೆ ನಾನು ಗೃಹ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಸ್ವಂತ ಕ್ಷೇತ್ರದಲ್ಲಿ ಕೆಲಸ ಮಾಡುವುದು ಕಿಮ್ಮನೆ ಅವರಿಗೆ ಇಷ್ಟ ಇಲ್ಲದಂತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕಿಮ್ಮನೆ ಮತ್ತು ಮಂಜುನಾಥ ಗೌಡರು ನಿರಂತರ ಪಾದಾಯಾತ್ರೆ…

Read More

ಆರಗ ಜ್ಞಾನೇಂದ್ರ ವಿರುದ್ಧವೇ ಕೇಸುಗಳಿವೆ, ಈಗ ಅವರೇ ಗೃಹ ಮಂತ್ರಿ!!! ಹೀಗಾದರೆ ನ್ಯಾಯ ಸಿಗುತ್ತಾ? -ಕಿಮ್ಮನೆ ರತ್ನಾಕರ್ ವ್ಯಂಗ್ಯ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ ಹಿಂದೆ ಆರಗ ಜ್ಞಾನೇಂದ್ರರ ಪಾತ್ರ ಇದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟ್​ಕಾಯಿನ್ ವಿಷಯದಲ್ಲಿ ಗೃಹ ಸಚಿವರು ಬಾಲಿಷವಾಗಿ ಮಾತನಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಬಗ್ಗೆ ಲಘುವಾಗಿ ಹೇಳಿಕೆ ನೀಡುತ್ತಿದ್ದಾರೆ. ಬಿಟ್​ಕಾಯಿನ್ ವಿಷಯದ ಗಂಭೀರತೆ ಅರಿತು ಪ್ರಧಾನಿ ಮೋದಿ ರಾತ್ರೋರಾತ್ರಿ ತರಾತುರಿಯಲ್ಲಿ ಸಭೆ ನಡೆಸಿದ್ದಾರೆ. ಸದ್ಯದ ಮಟ್ಟಿಗೆ ಆರಗ ಜ್ಞಾನೇಂದ್ರ ರಾಜ್ಯಕ್ಕಲ್ಲ, ತೀರ್ಥಹಳ್ಳಿಗೆ ಗೃಹ ಸಚಿವರಾಗಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ…

Read More

ಮದುವೆ ಊಟ ಮಾಡಿದ ಭದ್ರಾವತಿಯ ಗ್ರಾಪಂ ಕಾರ್ಯದರ್ಶಿ ಸಾವು: 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಭದ್ರಾವತಿ : ನಾಲ್ಕು ದಿನಗಳ ಹಿಂದೆ ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ ಹಲವರ ಪೈಕಿ ಇಂದು ದಾಸರಕಲ್ಲಳ್ಳಿ ಗ್ರಾಮಪಂಚಾಯತ್ ಕಾರ್ಯದರ್ಶಿ ಮೃತಪಟ್ಟಿದ್ದಾರೆ. ದಿನೇಶ್ ಸಿಂಗ್ ಮೃತಪಟ್ಟಿರುವ ದುರ್ದೈವಿ. ನಾಗತಿಬೆಳಗಲು ಗ್ರಾಮದ ಕಲ್ಯಾಣಮಂಟಪದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ  ಚಿಕಿತ್ಸೆ ಫಲಿಸದೆ ದಿನೇಶ್ ಸಿಂಗ್ ಮೃತಪಟ್ಟಿದ್ದಾರೆ. ಅರದೊಟ್ಟು ಗ್ರಾಮದ ನಿವಾಸಿಯೊಬ್ಬರ ಮದುವೆ ನಾಗತಿಬೆಳಗಲು ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆದಿತ್ತು. ಈ ಮದುವೆಯಲ್ಲಿ ಭಾಗಿಯಾಗಿ…

Read More

ಶಿವಮೊಗ್ಗದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣ: ಎಲ್ಲಾ ಆಸ್ಪತ್ರೆಗಳು ರೋಗಿಗಳಿಂದ ಹೌಸ್​ಫುಲ್​

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣಗೊಂಡಿದ್ದು, ಎಲ್ಲಾ ಆಸ್ಪತ್ರೆಗಳು ಹೌಸ್​ಫುಲ್​ ಆಗಿವೆ. ರಾಜ್ಯದಲ್ಲೇ ಅತಿ ಹೆಚ್ಚು ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿವೆ. ಜಿಲ್ಲೆಯ ಹಲವೆಡೆ ಜನರು ಶೀತ, ಜ್ವರ, ವಾಂತಿ, ಮೈ-ಕೈ ನೋವಿನಿಂದ ಬಳಲುತ್ತಿದ್ದಾರೆ. ಒಬ್ಬರಿಂದ ಮನೆ ಮಂದಿಗೆಲ್ಲಾ ರೋಗ ಹರಡುತ್ತಿದ್ದು, ಜನರು ಆತಂಕದಲ್ಲಿದ್ದಾರೆ.  ಶಂಕಿತ ಡೆಂಗ್ಯೂ ಪ್ರಕರಣಗಳ ಪತ್ತೆಗೆ ಆರೋಗ್ಯ ಇಲಾಖೆ 3,374 ರಕ್ತದ ಮಾದರಿ ಸಂಗ್ರಹಿಸಿತ್ತು. ಈ ಪೈಕಿ 407 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಶಂಕಿತ ಚಿಕುನ್ ಗುನ್ಯಾ ಪ್ರಕರಣಗಳ ಪತ್ತೆಗೆ 1,927…

Read More

ಶಿವಮೊಗ್ಗ ಜಿಲ್ಲಾ ಕಸಾಪ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತಗಳ ವಿವರ :

ಶಿವಮೊಗ್ಗ : ಬಹಳ ಕುತೂಹಲ ಹುಟ್ಟಿಸಿದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಡಿ.ಮಂಜುನಾಥ್ ಜಯಭೇರಿ ಗಳಿಸಿದ್ದಾರೆ. ಇದರಿಂದ 4 ನೇ ಬಾರಿಗೆ ಕಸಾಪ ಜಿಲ್ಲಾಧ್ಯಕ್ಷರಾಗುತ್ತಿದ್ದಾರೆ. ಸುಮಾರು 450 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಡಿ.ಬಿ.ಶಂಕರಪ್ಪರವರನ್ನ ಸೋಲಿಸಿ ಡಿ ಮಂಜುನಾಥ್ ಗೆಲುವಿನ ನಗೆ ಬೀರಿದ್ದಾರೆ. ತಾಲೂಕುವಾರು ಪಟ್ಟಿ: ಸೊರಬ:ಡಿ. ಮಂಜುನಾಥ್ – 179,ಶಂಕರಪ್ಪ – 129 ಸಾಗರ:ಡಿ ಮಂಜುನಾಥ್ – 391,ಶಂಕರಪ್ಪ – 194 ಶಿವಮೊಗ್ಗ:ಡಿ ಮಂಜುನಾಥ್ – 286,ಶಂಕರಪ್ಪ – 256 ತೀರ್ಥಹಳ್ಳಿ :ಡಿ.ಮಂಜುನಾಥ್…

Read More