
ಜಿಲ್ಲಾ ಸುದ್ದಿ:

ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ ಪಥಸಂಚಲನ
ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣ ಧರಿಸಿ ಜನಾಕರ್ಷಕ ಪಥಸಂಚಲನ ರಿಪ್ಪನ್‌ಪೇಟೆ | 76 ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷ ಭೂಷಣ ಪಥಸಂಚಲನ ಸಾರ್ವಜನಿಕರನ್ನು ಅಕರ್ಷಿಸಿತು. ಕೋಡೂರು ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ದೇವಸ್ಥಾನದಿಂದ ಸ್ವಾಮಿ ವಿವೇಕಾನಂದರ ವೇಷ ಭೂಷಣದೊಂದಿಗೆ ಮಕ್ಕಳ ಪಥ ಸಂಚಲನಕ್ಕೆ ತಾಲ್ಲೂಕ್ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಬ್ಲಾಸಂ ಅಕಾಡಮಿ ಆಧ್ಯಕ್ಷ ಚಂದ್ರುಮೌಳಿಗೌಡರು ಚಾಲನೆ ನೀಡಿ ಮಾತನಾಡಿ ದೇಶದ…

RIPPONPETE | ವಿವಿಧಡೆಯಲ್ಲಿ 76 ನೇ ಗಣರಾಜ್ಯೋತ್ಸವ
ರಿಪ್ಪನ್‌ಪೇಟೆಯ ವಿವಿಧಡೆಯಲ್ಲಿ 76 ನೇ ಗಣರಾಜ್ಯೋತ್ಸವ ರಿಪ್ಪನ್‌ಪೇಟೆ | ೭೬ ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ಸಂಭ್ರಮ ಸಡಗರದೊಂದಿಗೆ ನೆರವೇರಿತು. ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿದರು, ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಎಸ್.ಪಿ.ಪ್ರವೀಣ್ ದ್ವಜಾರೋಹಣ ನೆರವೇರಿಸಿ ದ್ವಜಾವಂದನೆ ಸ್ವೀಕರಿಸಿದರು.ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು,ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಪಾಠಶಾಲೆಯಲ್ಲಿ ಎಸ್.ಡಿ.ಎಂ.ಸಿ.ಆಧ್ಯಕ್ಷ ಮಂಜಪ್ಪ, ಸಮಾಜಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಮೇಲ್ವಿಚಾರಕ ರಾಘವೇಂದ್ರ, ಬಿಸಿಎಂ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಸುಮಿತ್ರ, ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಆಧಿಕಾರಿ,ಬರುವೆ…

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ
ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಹಲವಾರು ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದ ಆನೆಗಳ ಹಿಂಡನ್ನು ಅರಣ್ಯ ಇಲಾಖೆಯ ಕಾರ್ಯಾಚರಣೆ ನಡೆಸಿ ಓಡಿಸುವ ಸಂಧರ್ಭದಲ್ಲಿ ಸೂಡೂರಿನಲ್ಲಿ ರಸ್ತೆ ಮಧ್ಯೆ ಆನೆಗಳು ಪುಂಡಾಟ ನಡೆಸಿದ ಹಿನ್ನೆಲೆಯಲ್ಲಿ ಕೆಲ ಕಾಲ ಶಿವಮೊಗ್ಗ-ರಿಪ್ಪನ್ ಪೇಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದ ಘಟನೆ ನಡೆದಿದೆ. ಮಲೆನಾಡಿನ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಬೀಡು ಬಿಟ್ಟಿರುವ…

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್
ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಉದ್ದೇಶಕ್ಕಾಗಿ ನಿರ್ಮಿಸಿದ ರಸ್ತೆಯನ್ನು ಅಕ್ರಮಿಸಿ ಮಣ್ಣಿನ ತಡೆಗೋಡೆ ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆ ನೀಡುವುದರ ಜೊತೆಗೆ ಪ್ರಶ್ನಿಸಲು ತೆರಳಿದ ಗ್ರಾಮಸ್ಥರ ಮೇಲೆ ಹಲ್ಲೆಗೆ ಯತ್ನಿಸಿರುವವರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳುವಂತೆ ಗ್ರಾಮಸ್ಥರು ಪಟ್ಟಣದ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್‍ನ ಕಾಳೇಶ್ವರ ಗ್ರಾಮದಲ್ಲಿ…

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ
ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಶುಕ್ರವಾರ ಸಂಜೆ ಗೋದೂಳಿ ಲಗ್ನದಲ್ಲಿ ಅದ್ದೂರಿ ಮಂತ್ರ ಮಾಂಗಲ್ಯವೊಂದು ಜರುಗಿದೆ. ಕುವೆಂಪು ಸದಾಶಯದ ಮಂತ್ರ ಮಾಂಗಲ್ಯ ಎಲ್ಲಾ ರೀತಿಯ ಸರಳ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭವೊಂದು ಹೈಫೈ ರೂಪದಲ್ಲಿ ನಡೆದಿದೆ. ಹೇಮಾಂಗಣದ ಮುಂಭಾಗದಲ್ಲಿ ತಳಿರುತೋರಣಗಳಿಂದ ಸಿಂಗರಿಸಿ, ಫಲ, ಪುಷ್ಪಗಳನ್ನು ಬಳಸಿಕೊಂಡು ವಿಭಿನ್ನವಾಗಿ ಮಂತ್ರ ಮಾಂಗಲ್ಯ ವಿವಾಹ ಮಾಡಲಾಗಿದೆ. ಕುವೆಂಪು ಸರಳ ನಿಯಮಗಳಿಂದ ತಮ್ಮ ಪುತ್ರ ತೇಜಸ್ವಿ ವಿವಾಹವನ್ನು ಮಾಡಿದ್ದರು….

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ
ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಬೇಡಿಕೆಯಿದ್ದ MBBS ಮಹಿಳಾ ಮತ್ತು ಮಕ್ಕಳ ತಜ್ಞ ವೈದ್ಯರು ಇನ್ನೂ ಮುಂದೆ ಪ್ರತಿ ನಿತ್ಯ ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಲಭ್ಯವಿರುತ್ತಾರೆ. ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಪ್ರತಿ ನಿತ್ಯ ಸಂಜೆ 4ರಿಂದ 9 ಗಂಟೆಯವರೆಗೆ ಪ್ರಖ್ಯಾತ ಮಹಿಳಾ ಮತ್ತು ಮಕ್ಕಳ ತಜ್ಞರಾದ ಡಾ.ಶೋಭಾ…

ಆನೆ ದಾಳಿಗೆ ಬೆಳೆ ಹಾನಿ : ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ
ಆನೆಯಿಂದ, ಬೆಳೆ ಹಾನಿ: ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ ಶಿವಮೊಗ್ಗ : ರೈತರ ಬೆಳೆ ನಾಶ ಮಾಡುತ್ತಿರುವ ಆನೆಗಳನ್ನು ಕೂಡಲೇ ಸ್ಥಳಾಂತರಿಸಬೇಕು. ಬೆಳೆ ನಷ್ಟವಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಮಲೆನಾಡು ಪ್ರದೇಶದ ರೈತರು ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಪ್ರತಿನಿತ್ಯ ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿದೆ….

ANANDAPURA | ಹೆದ್ದಾರಿ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್
ANANDAPURA | ಹೆದ್ದಾರಿ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರಂ ಸಮೀಪ ಕೋಣೆ ಹೊಸೂರು ಬಳಿ ಆನೆಗಳ ಹಿಂಡು ಹೊನ್ನಾವರ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206 ಬಳಿ ಪ್ರತ್ಯಕ್ಷವಾಗಿದ್ದ ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಹೆದ್ದಾರಿ ಮೇಲೆ ಬಂದಿರುವ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡಬೇಕಾಯಿತು, ಅಲ್ಲದೆ ಕಾಡಾನೆಗಳನ್ನು…

2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ
2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ 2024-25ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯುವ ಸಂಬಂಧ, ಇದೀಗ ಪ್ರವೇಶಾತಿ ಅರ್ಹತಾ ಪರೀಕ್ಷೆಗೆ ಅಧಿಸೂಚನೆ ಪ್ರಕಟವಾಗಿದೆ. ಪ್ರಸ್ತುತ 5ನೇ ತರಗತಿ ಓದುತ್ತಿರುವವರು, ಮುಂದಿನ ವರ್ಷದಲ್ಲಿ ಈ ಕೆಳಗಿನ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಬಯಸಿದಲ್ಲಿ ಅರ್ಜಿ ಸಲ್ಲಿಸಿ. ಎಂಟ್ರ್ಯಾನ್ಸ್ ಪರೀಕ್ಷೆ ಬರೆಯುವ ಮೂಲಕ ಅರ್ಹತೆ ಪಡೆದು, ಈ ಶಾಲೆಗಳಲ್ಲಿ…

ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ
ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ | ರಚನಾತ್ಮಕ ಸತ್ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ ; ರಂಭಾಪುರಿ ಜಗದ್ಗುರುಗಳು ರಿಪ್ಪನ್‌ಪೇಟೆ ; ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ ಸತ್ಕಾರ್ಯಗಳಿಂದ ಮಾತ್ರ ಸಮಾಜ ಮತ್ತು ಧರ್ಮ ಬಲಗೊಳ್ಳಲು ಸಾಧ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ,…