
ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ
ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಅಕ್ಷರ ಮಾಂತ್ರಿಕ, ಸರಸ್ವತಿ ಸಮ್ಮಾನ್ ಪುರಸ್ಕೃತ, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ (SL Bhyrappa) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 1931ರ ಆಗಸ್ಟ್ 20ರಂದು ಜನಿಸಿದ ಸಂತೆಶಿವರ ಲಿಂಗಣ್ಣಯ್ಯ ಭೈರಪ್ಪ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದರು. ಅವರ ಕಾದಂಬರಿಗಳು ವಿಷಯ, ರಚನೆ ಮತ್ತು ಪಾತ್ರಗಳ ನಿರೂಪಣೆಯಲ್ಲಿ ವಿಶಿಷ್ಟವಾಗಿವೆ.ಭೈರಪ್ಪ ಅವರ ಕೃತಿಗಳು ನವೋದಯ, ನವ್ಯ, ಬಂದಾಯ…