Headlines

ವಿಧಾನ ಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಡಿ ಎಸ್​ ಅರುಣ್

ಶಿವಮೊಗ್ಗ :  ಶಿವಮೊಗ್ಗದಲ್ಲಿ ವಿಧಾನಪರಿಷತ್​ ಚುನಾವಣಾ ಕಣ ರಂಗೇರಿದೆ. ಇಂದು ಬಿಜೆಪಿ ಪಕ್ಷದಿಂದ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿರವರ ಪುತ್ರ ಡಿ.ಎಸ್.ಅರುಣ್ ರವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಾರ್ಯಕರ್ತನೆಂಬ ಹೆಮ್ಮೆಯಿಂದ ಚುನಾವಣಾ ಕಣಕ್ಕೆ ಇಳಿದಿದ್ದೇವೆ. ಪಕ್ಷದ ಹಿರಿಯರ, ಜನಪ್ರತಿನಿಧಿಗಳ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪನವರ ಆಶೀರ್ವಾದದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಳೆದ 16 ವರ್ಷಗಳಿಂದ ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ…

Read More

ಶಿವಮೊಗ್ಗದಲ್ಲಿ ಪೌರಕಾರ್ಮಿಕರ ಮೇಲೆ ಹಲ್ಲೆ ವಿಚಾರ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಖುದ್ದು ಎಸ್ಪಿಗೆ ಕರೆ ಮಾಡಿದ್ದೇಕೆ !!! ದೂರವಾಣಿಯಲ್ಲಿ ಹೇಳಿದ್ದಾದರೂ ಏನು ???

ಶಿವಮೊಗ್ಗ : ನಗರದಲ್ಲಿ ಇತ್ತೀಚೆಗೆ ಪೌರ ಕಾರ್ಮಿಕರ ಮೇಲೆ ಕೆಲವು ಕಿಡಿಗೇಡಿಗಳು ಕಸ ವಿಲೇವಾರಿಗೆ ಸಂಬಂಧಿಸಿದಂತೆ ಹಲ್ಲೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಪೌರ ಕಾರ್ಮಿಕರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಸಚಿವ ಕೆ.ಎಸ್. ಈಶ್ವರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಸ ವಿಲೇವಾರಿ ಮಾಡುವವರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಪೌರ ಕಾರ್ಮಿಕರು ಜನರ ಸೇವೆ ಮಾಡುತ್ತಾರೆ. ಅವರ ಮೇಲೆ ಹಲ್ಲೆ ಮಾಡುವಷ್ಟರಮಟ್ಟಿಗೆ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ರಾಯಭಾರ ಮತ್ತೆ ಎಂ.ಶ್ರೀಕಾಂತ್ ಹೆಗಲಿಗೆ, ಜಿಲ್ಲಾಧ್ಯಕ್ಷರು ಜೆಡಿಎಸ್ ಗೆಲುವಿಗೆ ರೂಪಿಸಿರುವ ಕಾರ್ಯತಂತ್ರಗಳೇನು!!! ಕಾರ್ಯಕರ್ತರು ಇದರ ಬಗ್ಗೆ ಏನನ್ನುತ್ತಾರೆ.?

ಶಿವಮೊಗ್ಗ: ಜಿಲ್ಲೆಯಲ್ಲಿ ಜೆಡಿಎಸ್ ಮತ್ತೆ ಪುನಶ್ಚೇತನಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ. ಈ ಹಿಂದೆ ಜಿಲ್ಲಾಧ್ಯಕ್ಷರಾಗಿ ಜೆಡಿಎಸ್ ನಲ್ಲಿ ಸಂಚಲನ ಮೂಡಿಸಿದ್ದ ಎಂ. ಶ್ರೀಕಾಂತ್ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಿಂದ ಸ್ವಲ್ಪ ದೂರವೇ ಉಳಿಸಿದ್ದರು. ಆದರೆ, ಮೊನ್ನೆ ನಡೆದ ಜೆಡಿಎಸ್ ವಿಷನ್-2021ರ ಸಮಾವೇಶದಲ್ಲಿ ಪಕ್ಷದ ವರಿಷ್ಟರು ಜಿಲ್ಲಾ ಜೆಡಿಎಸ್ ನ ನಾಯಕತ್ವವನ್ನು ಮತ್ತೆ ಶ್ರೀಕಾಂತ್ ಹೆಗಲಿಗೆ ಹೊರಿಸಿದ್ದಾರೆ. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಂ. ಶ್ರೀಕಾಂತ್ 20 ಸಾವಿರಕ್ಕೂ ಹೆಚ್ಚು ಮತಗಳಿಸುವ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ.ಶ್ರೀಕಾಂತ್ ಮರುಆಯ್ಕೆ

ಶಿವಮೊಗ್ಗ : ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಈ ಹಿಂದೆ ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿದ್ದ ಶ್ರೀಕಾಂತ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದರು. ಅಪ್ಪಾಜಿಗೌಡ, ಶಾರದಾ ಪೂರ್ಯ ನಾಯಕ್, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ 3ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಯಶಸ್ವಿಯಾಗಿದ್ದರು. ವಿಧಾನಪರಿಷತ್ ಸದಸ್ಯರಾದ ಬೋರೇಗೌಡರ ಗೆಲುವಿಗೂ ಹೆಗಲಾಗಿದ್ದರು.  ಎರಡು ಬಾರಿ ಶಿವಮೊಗ್ಗ ನಗರದ ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.ಕೇವಲ ರಾಜಕಾರಣಿ ಮಾತ್ರವಾಗಿರದೆ ಸಮಾಜ ಸೇವಕರಾಗಿದ್ದಾರೆ. ಜಿಲ್ಲೆಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು…

Read More

ಕಿಮ್ಮನೆ ಹಾಗೂ ಮಂಜುನಾಥ್ ಗೌಡ ನಡುವೆ ತೀರ್ಥಹಳ್ಳಿ ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್ ತಾರಕಕ್ಕೆ!!!!!!

ಶಿವಮೊಗ್ಗ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಎರಡು ವರ್ಷ ಬಾಕಿ ಇದ್ದರು ಈಗಲೇ ವಿವಿಧ ಪಕ್ಷಗಳಲ್ಲಿ  ಟಿಕೆಟ್ ಪೈಪೋಟಿ ಆರಂಭವಾಗಿದೆ. ಇತ್ತ ಕಾಂಗ್ರೆಸ್‌ನಲ್ಲಿಯು ಟಿಕೆಟ್‌ಗಾಗಿ ಜಟಾಪಟಿ ಜೋರಾಗಿಯೇ ಇದೆ. ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಇಬ್ಬರು ಪ್ರಭಾವಿ ಮುಖಂಡರ ನಡುವೆ ಜಿದ್ದಾ ಜಿದ್ದಿ ಏರ್ಪಟ್ಟಿದ್ದೆ.  ಒಂದು ಕಡೆ ಜೆಡಿಎಸ್  ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಆಕಾಂಕ್ಷಿಯಾಗಿರುವ ಮಂಜುನಾಥ್ ಗೌಡ  ಆದರೆ ಇನ್ನೊಂದು ಕಡೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್  ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಟಿಕೆಟ್‌ಗಾಗಿ ಈಗಲೇ ಇಬ್ಬರ…

Read More

ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಬೀದಿಗಿಳಿದ ಜಿಲ್ಲಾ ಕಾಂಗ್ರೆಸ್ :

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಜಿಲ್ಲಾ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರಕುತ್ತಿಲ್ಲ. ಆಸ್ಪತ್ರೆ ಸಿಬ್ಬಂದಿ ವೈದ್ಯಕೀಯ ಪರಿಕರಗಳ ಸರಿಯಾದ ನಿರ್ವಹಣೆ ಮಾಡುತ್ತಿಲ್ಲ ಎಂದು ಆರೋಪಿಸಿರುವ ಕಾರ್ಯಕರ್ತರು ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Read More

ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ: ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್

ಶಿವಮೊಗ್ಗ: ಹಾನಗಲ್​ನಲ್ಲಿ ಮುಳುಗುವ ಹಂತದಲ್ಲಿ ಕಡ್ಡಿ ಹಿಡಿದು ಬದುಕುವ ಪ್ರಯತ್ನ ಮಾಡಿದ್ದಾರೆ. ಅದೇ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರಿಗೆ ಸುನಾಮಿ ಎನಿಸಿಬಿಟ್ಟಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಆಡಳಿತ ವಿರೋಧಿ ಸುನಾಮಿ ಎಂಬ ಸಿದ್ದಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ಸುನಾಮಿಯಲ್ಲಿ ಸಿದ್ದರಾಮಯ್ಯನವರೇ ಕೊಚ್ಚಿ ಹೋದರು. ಉಪಚುನಾವಣೆ ಸುನಾಮಿಯಲ್ಲಿ ಕಾಂಗ್ರೆಸ್​ನವರು ಸಿಂದಗಿಯಲ್ಲಿ ಸಹ ಈಗ ಕೊಚ್ಚಿ ಹೋಗಿದ್ದಾರೆ. ಹಾನಗಲ್​ನಲ್ಲಿ ಕಡಿಮೆ ಅಂತರದಲ್ಲಿ ಆಕಸ್ಮಿಕವಾಗಿ ಗೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ ಎಂದರು. ಪ್ರಾದೇಶಿಕ ಪಕ್ಷಗಳಿಗೆ ಯಾವುದೇ…

Read More

ಉಪಚುನಾವಣೆ : ಸಿಂಧಗಿಯಲ್ಲಿ ಬಿಜೆಪಿ ಗೆಲುವಿನ ಕೇಕೆ : ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ : ಜೆಡಿಎಸ್ ಗೆ ತೀವ್ರ ಹಿನ್ನಡೆ

ಸಿಂಧಗಿ: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ ಭೂಸನೂರ 93,865  ಮತ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ನ ಅಶೋಕ ಮಲ್ಲಪ್ಪ ಮನಗೂಳಿ 62,680 ಪಡೆದುಕೊಂಡಿದ್ದಾರೆ. ಮತ್ತು ಜೆಡಿಎಸ್ ನಾಝಿಯಾ ಶಕೀಲ್ ಅಂಗಡಿ ಕೇವಲ 4,353  ಪಡೆದುಕೊಂಡಿದ್ದಾರೆ. ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು ಪ್ರಚಾರಕ್ಕೆ ಬಂದಿದ್ದರು. ಹಾನಗಲ್…

Read More

ಉಪ ಚುನಾವಣೆಯಲ್ಲಿ ಬಿಜೆಪಿ ಕವರ್ ನಲ್ಲಿ ಹಣ ಹಂಚಿದರೆ, ಕಾಂಗ್ರೆಸ್ ನೇರವಾಗಿ ಹಣ ಹಂಚಿದೆ : ಸಚಿವ ಈಶ್ವರಪ್ಪ ಆರೋಪ

ಶಿವಮೊಗ್ಗ : ಚುನಾವಣೆಯಲ್ಲಿ ಮತ ಪಡೆಯಲು ಬಿಜೆಪಿ ಕವರ್ ಹಂಚಿದೆ ಎಂಬ ಡಿಕೆಶಿ ಆರೋಪಕ್ಕೆ ಸಚಿವ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಬಿಜೆಪಿ ಕವರ್ ನೀಡಿದರೆ ಕಾಂಗ್ರೆಸ್ ನೇರವಾಗಿ ಹಣ ನೀಡಿದೆ ಎಂದು ಹೇಳುವ ಮೂಲಕ ಸಚಿವರು ಅಚ್ಚರಿ ಮೂಡಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನವರು ಬಿಜೆಪಿ ಕವರ್ ನೀಡಿ ಚುನಾವಣೆ ಗೆಲ್ಲಲು ತಂತ್ರಗಾರಿಕೆ ಮಾಡುತ್ತಿದೆ ಎಂದು ಆರೋಪಿಸಿದೆ. ನಾವು ಕವರ್ ನಲ್ಲಿ ಕೊಟ್ಟರೆ ಕಾಂಗ್ರೆಸ್ ನೇರವಾಗಿ ಹಣ ಹಂಚುತ್ತಿದೆ ಎಂದು ತಿರುಗೇಟು ನೀಡಿದರು. ನಾವು ಕದ್ದುಮುಚ್ಚಿ…

Read More

ಪುನೀತ್ ರಾಜ್‍ಕುಮಾರ್ ನಿಧನ ಹಿನ್ನಲೆ ಭದ್ರಾವತಿ ಸ್ವಯಂ ಪ್ರೇರಿತ ಬಂದ್ :

ಭದ್ರಾವತಿ : ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನಲೆಯಲ್ಲಿ ಭದ್ರಾವತಿಯ ಪಟ್ಟಣದ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡುವುದರ ಮೂಲಕ ವರ್ತಕರು ಗೌರವ ಸಲ್ಲಿಸಿದ್ದಾರೆ.  ಇನ್ನು ಚಾಮೇಗೌಡ ಲೈನ್ ನ  ರಾಜ್ ಕುಮಾರ್ ಅಭಿಮಾನಿ ಬಳಗದಿಂದ ಬಂದ್ ಮಾಡುವಂತೆ ಆಟೋಗಳಲ್ಲಿ ಪ್ರಚಾರ ಮಾಡಲಾಗುತ್ತಿದ್ದು ಬಂದ್ ಮಾಡುವಂತೆ ಮನವಿ ಮಾಡುತ್ತಿದ್ದಾರೆ.  ಹುಚ್ಚು ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಪ್ರಕ್ಷುಬ್ಧ ವಾತವರಣ ನಿರ್ಮಿಸುತ್ತಿದ್ದು ಪೊಲೀಸರು ಹುಚ್ಚು ಅಭಿಮಾನಿಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಯಾವುದೇ ರೀತಿಯಲ್ಲಿ ತೊಂದರೆ ಹಾಗೂ…

Read More