Headlines

ಏಕ ಕಾಲದಲ್ಲಿ 5 ಲಕ್ಷ ಜನ ಕನ್ನಡ ಗೀತೆಗಳನ್ನು ಹಾಡಿದ್ದು, ಇತಿಹಾಸ ಸೃಷ್ಟಿಸಿದ ದಿನ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂದು ಕನ್ನಡದ ವಿಶೇಷ ಮೂರು ಗೀತೆಗಳನ್ನು ಹಾಡಿದ್ದು, ಇತಿಹಾಸ ಸೃಷ್ಟಿಸಿದ ದಿನವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ತಿಳಿಸಿದ್ದಾರೆ. ಇಂದು ನಗರದಲ್ಲಿ ನಡೆದ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮದ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿ ಎಂದು ನಡೆದ ಸಾಮೂಹಿಕ ಗಾಯನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ರಾಜ್ಯದ ಇತಿಹಾಸದಲ್ಲಿ ಈ ದಿನವನ್ನು ನೆನಪಿಟ್ಟುಕೊಳ್ಳಬೇಕು. ಈ ಯಶಸ್ವಿ ಕಾರ್ಯಕ್ರಮಕ್ಕೆ ಕಾರಣರಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

Read More

ಅ.30ರ ಶನಿವಾರ ಶಿವಮೊಗ್ಗಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ !

ಶಿವಮೊಗ್ಗ : ವಿವಿಧ ಕಾರ್ಯಕ್ರಮಗಳ ನಿಮಿತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅ. 30ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.  ಅಂದು ಬೆಳಗ್ಗೆ 10 ಗಂಟೆಗೆ  ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 11 ಗಂಟೆಗೆ  ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.  ಅನಂತರ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಆಯೋಜಿಸಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ನಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಗೆ ಭೇಟಿ ನೀಡಿ  ಸಭೆಯಲ್ಲಿ ಭಾಗಿಯಾಗಲಿದ್ದಾರೆ.  ಸಂಜೆ 4 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ. 

Read More

ಗೃಹಸಚಿವರ ಸ್ವ ಕ್ಷೇತ್ರದ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು !!!

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರಾದ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ಇಂದು ನೆಡೆದಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳು ಜಯಭೇರಿಯನ್ನು ಬಾರಿಸಿದ್ದಾರೆ.  ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಶಬನಂ ಹಾಗೂ ಜಯಪ್ರಕಾಶ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು.  ಬಿಜೆಪಿಯಿಂದ ಜ್ಯೋತಿ ಮೋಹನ್ ಹಾಗೂ ರವೀಶ್ ( ಬಾಬೀ )  ನಾಮಪತ್ರ ಸಲ್ಲಿಸಿದ್ದರು.  ಆಪರೇಷನ್ ಕಮಲದ ಬಗ್ಗೆ ತೀರ್ಥಹಳ್ಳಿಯಲ್ಲಿ ಬಾರಿ ಚರ್ಚೆ ನೆಡೆದಿದ್ದರು ಇಂದು ಸಂದೇಶ್ ಜವಳಿ ಮಾತನಾಡಿ…

Read More

ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ :

ತೀರ್ಥಹಳ್ಳಿ : ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಪಕ್ಷ ಗಾದಿ ಹಿಡಿಯಲು ಬಹುತೇಕ ಸಜ್ಜಾಗಿದ್ದು ಮಹಿಳಾ ಅಭ್ಯರ್ಥಿಗಳು ಅಧ್ಯಕ್ಷರಾಗುತ್ತಾರೆ ಎಂದು ಹೇಳಲಾಗುತ್ತಿದೆ.  ಬಿಜೆಪಿ ಪಕ್ಷ ಈ ಬಾರಿ ವಿರೋಧ ಪಕ್ಷದಲ್ಲಿ ಕೂರುವುದು ಖಚಿತವಾದಂತೆ ಕಾಣಿಸುತ್ತಿದೆ. ಕಾರಣ ಆರಗ ಜ್ಞಾನೇಂದ್ರ ಅವರು ನಾಳೆ ತೀರ್ಥಹಳ್ಳಿಯಲ್ಲಿ ಇರುವುದಿಲ್ಲ ಎಂದು ತಿಳಿಸಿದ್ದು ಅವರ ಮತ ಬೀಳುವುದು ಅನುಮಾನ ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರದಲ್ಲಿ ಕೂರುವುದು ಖಚಿತವಾಗಿದೆ. …

Read More

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲರನ್ನ ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಪ್ರತಿಕೃತಿ ದಹನ

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಇಂದು ಪಟ್ಟಣದ ಮಹಾವೀರ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು. ರಾಹುಲ್ ಗಾಂಧಿಯನ್ನ ಡ್ರಗ್ ಪೆಡ್ಲರ್ ಎಂದು ಹೇಳಿದ ನಳೀನ್ ಕುಮಾರ್ ಕಟೀಲ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿದ ತಪ್ಪುಗಳನ್ನ ಮರೆಮಾಚಿಸಲು ಜನರ ಗಮನ ಬೇರೆಡೆ ತಿರುಗುವಂತೆ ಮಾಡಲು ಬಿಜೆಪಿ ಯತ್ನಿಸುತ್ತಿದ್ದು…

Read More