18 ಕೊಲೆ,20 ಅತ್ಯಾಚಾರದ ಆರೋಪಿ ವಿಕೃತಕಾಮಿ ಉಮೇಶ್ ರೆಡ್ಡಿಯ ಗಲ್ಲು ಶಿಕ್ಷೆ ರದ್ದು!!!!!!!|Umesh Reddy

ಕರ್ನಾಟಕ ಹೈಕೋರ್ಟ್ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ (CJI) ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸುಮಾರು ಹತ್ತು ವರ್ಷಗಳ ಕಾಲ ಅಕ್ರಮ ಏಕಾಂತವಾಸವನ್ನು ಪರಿಗಣಿಸಿ ವಿಕೃತ ಕಾಮಿ ಉಮೇಶ್‌ ರೆಡ್ಡಿಯ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.  1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು…

Read More

ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಶಾಸಕ ಆನಂದ್ ಮಾಮನಿ ನಿಧನ|Bangalore

ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರೂ ಆಗಿದ್ದ ಆನಂದ್ ಚಂದ್ರಶೇಖರ್ ಮಾಮನಿ (56) ಅವರು ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಸ್ವರೂಪದ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ…

Read More

ಹೃದಯಾಘಾತದಿಂದ ಆಹಾರ ಸಚಿವ ಉಮೇಶ್ ಕತ್ತಿ ನಿಧನ :

ಆಹಾರ ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ಇಂದು ( ಮಂಗಳವಾರ) ರಾತ್ರಿ ನಿಧನರಾದರು. ಈ ಬಗ್ಗೆ ಎಲ್ಲ ಟಿವಿ ಮಾಧ್ಯಮಗಳು ವರದಿ ಮಾಡಿದ್ದು, ಈ ವರೆಗೆ ಆಸ್ಪತ್ರೆಯಿದ ಅಧಿಕೃತ ಘೋಷಣೆಯಾಗಿಲ್ಲ.   ನಗರದ  ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಟುಂಬದ ಸದಸ್ಯರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.  ಸದ್ಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ ಕ್ಷೇತ್ರದ ಶಾಸಕರಾಗಿದ್ದು, ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ…

Read More

ರಿಪ್ಪನ್‌ಪೇಟೆ ಮೂಲದ ಟೆಂಪಲ್ ಆಫ್ ಸಕ್ಸಸ್ ನ ಶ್ರೀ ರಘುನಾಥ್ ಗುರೂಜಿ ಇನ್ನಿಲ್ಲ : ರಾಷ್ಟ್ರದ ಪ್ರಮುಖ ಗುರೂಜಿಗಳಲ್ಲಿ ಒಬ್ಬರಾಗಿದ್ದರು.

ರಿಪ್ಪನ್‌ಪೇಟೆ : ಟೆಂಪಲ್ ಆಫ್ ಸಕ್ಸಸ್ ನ ಸಾಯಿದತ್ತ ರಘುನಾಥ್ ಗುರೂಜಿಯವರು ಬೆಂಗಳೂರಿನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ತೀವ್ರ ಅಸೌಖ್ಯ ಗೊಂಡಿದ್ದ ರಘುನಾಥ್ ಗುರೂಜಿ ಅವರು ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರೂಜಿಯವರು ಅಪಾರ ಭಕ್ತವೃಂದವನ್ನು ಹೊಂದಿದ್ದಾರೆ. ನಿನ್ನೆ (30th August 2022) ವಿಧಿವಶರಾದ ರಘುನಾಥ್ ಗುರೂಜಿ ಅವರ ಅಂತ್ಯಕ್ರಿಯೆ ಸೆಪ್ಟೆಂಬರ್ 2 ರಂದು ಮಣಿಪಾಲದಲ್ಲಿ ನಡೆಯಲಿದೆ. ಅನುಯಾಯಿಗಳು ಬೆಂಗಳೂರು ಬಸವನಗುಡಿಯ ವಾಣಿ ನಿಲಾಸ ರಸ್ತೆಯಲ್ಲಿರುವ ಟೆಂಪಲ್ ಆಫ್ ಸಕ್ಸಸ್…

Read More

ನ್ಯಾಷನಲ್ ಪ್ಲಸ್ ಸೈಜ಼್ ಬ್ಯೂಟಿ ಸ್ಪರ್ಧೆಗೆ ಆಯ್ಕೆಯಾದ ಹೊಸನಗರದ ಸೀಮಾ ಕಿರಣ್ :

ಬೆಂಗಳೂರಿನಲ್ಲಿ ಜುಲೈ30 ರಂದು ನಡೆದ ಮಾವಿನ್ ಪ್ಲಸ್ ಇಂಡಿಯಾ ಬ್ಯೂಟಿ ಪೆಜೆನ್ಟ್ ಅಡಿಷನ್ ನಲ್ಲಿ ಹೊಸನಗರದ ಜೆಸಿಐ ಕೊಡಚಾದ್ರಿ ಅಧ್ಯಕ್ಷೆ ಸೀಮಾ ಶೆರಾವೊ ನ್ಯಾಷನಲ್ ಬ್ಯೂಟಿ ಪೆಜೆನ್ಟ್ ಗೆ ಆಯ್ಕೆಯಾಗಿದ್ದು, ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ನ್ಯಾಶನಲ್ ಬ್ಯೂಟಿ ಪೆಜೆನ್ಟ್ ಸೆ.22 ರಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದ್ದು ಸೀಮಾ ಶೆರಾವೊ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ಹೊಸನಗರದ ಸೀಮಾ 11 ವರ್ಷದಿಂದ ಹೊಸನಗರದ ಸಿಯಂಟೋ ಬ್ಯೂಟಿ ಸಲೂನ್ ನಡೆಸುತ್ತಿದ್ದು, 20 -22ರ ಜೆಸಿಐ ಹೊಸನಗರ ಕೊಡಚಾದ್ರಿಯ…

Read More

ಹೆಚ್ ಡಿ ಕುಮಾರಸ್ವಾಮಿ ಸಾಂತ್ವಾನ : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು,ಮಸೂದ್,ಫಾಝಿಲ್ ಮನೆಗೆ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಮೃತ ಪ್ರವೀಣ್ ನೆಟ್ಟಾರು, ಮಸೂದ್ ಮತ್ತು ಸುರತ್ಕಲ್‌ನ ಪಾಝಿಲ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು. ಮೂವರೂ ಮೃತರ ಕುಟುಂಬಗಳಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್‌ಗಳನ್ನು ಈ ಸಂದರ್ಭದಲ್ಲಿ ಅವರು ಹಸ್ತಾಂತರ ಮಾಡಿದರು. ಸೋಮವಾರ ಬೆಳಿಗ್ಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಮನೆಗೆ…

Read More

ಕಸ್ತೂರಿರಂಗನ್ ವರದಿ ಬಗ್ಗೆ ನಿಮಗೆಷ್ಟು ಗೊತ್ತು..???? ವರದಿ ಅನುಷ್ಟಾನಗೊಂಡರೆ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಹಳ್ಳಿಗಳು ನಶಿಸಿಹೋಗುತ್ತವೆ ಗೊತ್ತಾ???? ಈ ಬಗ್ಗೆ ಕಂಪ್ಲೀಟ್ ಸ್ಟೋರಿ ಇಲ್ಲಿ ಓದಿ….

ಮಲೆನಾಡು ಪ್ರದೇಶಕ್ಕೆ ಮರಣಶಾಸನವಾಗಿರುವ ಕಸ್ತೂರಿ ರಂಗನ್ ವರದಿಯ  ಆದಾರದ ಮೇಲೆ ಕೆಂದ್ರ ಸರ್ಕಾರ ಕರಡು ಮಸೂದೆ ಅಂಗಿಕರಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲವಕಾಶ ನೀಡಿದ್ದು, ರಾಜ್ಯ ಸರ್ಕಾರ ಇದರ ಬಗ್ಗೆ ಈಗಾಗಲೇ ಎಚ್ಚರಗೊಂಡಿದ್ದು ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಮುಂದಾಗಿದೆ.  ಆದರೆ ಇಲ್ಲಿ ಸರ್ಕಾರಗಳಿಗಿಂತ ಜನಸಾಮಾನ್ಯರು ಈ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕಾಗುತ್ತದೆ, ಈಗಾಗಲೇ ಕೇರಳ ರಾಜ್ಯ ಸರ್ಕಾರ ಬುದ್ದಿವಂತಿಕೆಯಿಂದ ವೈಜ್ಞಾನಿಕವಾದ ವರದಿ ಮಂಡಿಸಿದ ಪರಿಣಾಮ ಕರಡು ಮಸೂದೆಯ ಪಟ್ಟಿಯಲ್ಲಿ ಕೇರಳ ರಾಜ್ಯವನ್ನು ಕೈ…

Read More

ಈಶ್ವರಪ್ಪರವರಿಗೆ ಮತ್ತೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ : ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಬಿ ರಿಪೋರ್ಟ್ ಸಿಕ್ಕ ಹಿನ್ನೆಲೆಯಲ್ಲಿ  ಮರಳಿ ಅವರಿಗೆ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯಲಿದೆಯೇ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಾನಮಾನ ನೀಡುವುದು ವರಿಷ್ಟರಿಗೆ ಬಿಟ್ಟ ವಿಚಾರ ಎಂದರು. ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ವಡಾಹೊಸಳ್ಳಿ ಗ್ರಾಮದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಈಶ್ವರಪ್ಪ…

Read More

ಸ್ವಯಂ ಪ್ರೇರಿತ ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ – ಸುಪ್ರೀಂಕೋರ್ಟ್

ವೇಶ್ಯಾವಾಟಿಕೆ ಎನ್ನುವುದು ಒಂದು ವೃತ್ತಿಯಾಗಿದೆ. ಲೈಂಗಿಕ ಕಾರ್ಯಕರ್ತೆಯರು ಕಾನೂನಿನ ಅಡಿಯಲ್ಲಿ ಘನತೆ ಹಾಗೂ ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಈ ತೀರ್ಪು ನೀಡಿದ್ದು, ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು  ನಿರ್ದೇಶನಗಳನ್ನು ಕೂಡ ಇದೇ ವೇಳೆ ನೀಡಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು  ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ…

Read More

ನಾಳೆ ನೂತನ ‘ಜೆಡಿಎಸ್ ರಾಜ್ಯಾಧ್ಯಕ್ಷ’ರಾಗಿ ‘ಸಿ.ಎಂ ಇಬ್ರಾಹಿಂ’ ಪದಗ್ರಹಣ :

 ನಾಳೆ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ( JDS State President ) ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ…

Read More