ಮೈಸೂರು ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾರ್ಯಾಚರಣೆ ಯಶಸ್ವಿ: ಗೃಹ ಸಚಿವ

ಬೆಂಗಳೂರು: ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನಾನು ಈಗ ಮಾಹಿತಿ ಕೊಡಲು ಸಾಧ್ಯವಿಲ್ಲ. ಆದರೆ ಇನ್ನೆರಡು ಗಂಟೆಯ ಒಳಗೆ ನಿಮಗೆ ಎಲ್ಲಾ ಮಾಹಿತಿ ನೀಡುತ್ತೇವೆ. ನಾನು ಅಥವಾ ಪೊಲೀಸರು ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ತಿಳಿಸಿದರು. ಪ್ರಕರಣ ಸಂಬಂಧ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ….

Read More

ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಿರುತ್ತವೆ ಅದಕ್ಕೆಲ್ಲಾ ಏನೂ ಮಾಡೋಕೆ ಆಗಲ್ಲ : ಸಚಿವ ಉಮೇಶ್ ಕತ್ತಿ

ಚಾಮರಾಜನಗರ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದಂಥ ಪ್ರಕರಣಗಳು ಸಮಾಜದಲ್ಲಿ ನಡೆಯುತ್ತಿರುತ್ತವೆ. ಇದಕ್ಕೆ ಏನೂ ಮಾಡೋಕೆ ಆಗಲ್ಲ ಎಂದು  ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಇವೆಲ್ಲವೂ ಸಮಾಜದಲ್ಲಿ ನಡೆಯುತ್ತವೆ. ನಡೆಯಬಾರದು, ಆದರೂ ನಡೆಯುತ್ತವೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ. ನಾನು ಗೃಹ ಮಂತ್ರಿ ಅಲ್ಲ, ಈ ಸಮಸ್ಯೆಯನ್ನು ಗೃಹಮಂತ್ರಿ ಬಗೆ ಹರಿಸುತ್ತಾರೆ. ಗೂಂಡಾಗಳು ಗೂಂಡಾಗಿರಿ ಮಾಡುತ್ತಿದ್ದಾರೆ. ಮೂರು ಲಕ್ಷ ರುಪಾಯಿ ಕೊಟ್ಟರೆ ಬಿಡುವುದಾಗಿ…

Read More

ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ‘ ಎಂಬ ಹೇಳಿಕೆ ಹಿಂಪಡೆಯುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಆನೇಕಲ್: ‘ರೇಪ್ ಆಗಿದ್ದು ಅಲ್ಲಿ, ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ’ ಎಂಬ ಮಾತನ್ನು ಹಿಂಪಡೆಯುವುದಾಗಿ ಸೆಂಟ್ರಲ್ ಜೈಲಿನ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನನಗೆ ಬಹಳ ಆತಂಕ ಆಗಿತ್ತು, ಆತಂಕದಲ್ಲಿ ಈ ಮಾತು ಹೇಳಿದ್ದೆ. ನಾನು ನೀಡಿದ್ದ ಹೇಳಿಕೆ ಹಿಂಪಡೆಯುತ್ತೇನೆ. ಸಂತ್ರಸ್ತೆಯನ್ನು ನನ್ನ ಮಗಳ ಸ್ಥಾನದಲ್ಲಿ ನೋಡುವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ತಮ್ಮ ಈ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ, ಕಾಂಗ್ರೆಸ್‌ನವರು ಗೃಹ ಸಚಿವರ…

Read More

ಸಾಹಿತಿ ನಯನ ಕೋಟ ರವರಿಗೆ ಒಲಿದ ರಾಜ್ಯಮಟ್ಟದ ಗುರುಕುಲ ಸಾರ್ವಭೌಮ ಕವಿತಾ ಕೃಷ್ಣ ಪ್ರಶಸ್ತಿ:

ಚಿತ್ರದುರ್ಗ: ಗುರುಕುಲ ಕಲಾ ಪ್ರತಿಷ್ಠಾನ ರಾಜ್ಯ ಘಟಕದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿ “ಗುರುಕುಲ ಕಲಾ ಸಾರ್ವಭೌಮ ಕವಿತಾಕೃಷ್ಣ” ಪ್ರಶಸ್ತಿಗೆ ಚಿತ್ರದುರ್ಗದ ಸಾಹಿತಿಯಾದ ನಯನ ಕೋಟ ರವರು ಆಯ್ಕೆಯಾಗಿದ್ದಾರೆ.  ಈ ಕುರಿತು ಗುರುಕುಲ ಕಲಾ ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ ಶ್ರೀ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಯನ ಕೋಟ ರವರು ಮೂಲತಃ ಉಡುಪಿ ಜಿಲ್ಲೆಯ ಕೋಟದವರು.ಪ್ರಸ್ತುತ  25 ವರ್ಷದಿಂದ ಚಿತ್ರದುರ್ಗದ ನಿವಾಸಿ. ಇವರ ತಾಯಿ ಸಾಹಿತಿ ನಾಗರತ್ನ ಬಿ(ವನಸುಮ ವಡ್ಡರ್ಸೆ) ಅವರಿಂದ ಪ್ರೇರಣೆ ಪಡೆದು 20 ವರ್ಷಗಳಿಂದ ಎಲೆಮರೆಯ…

Read More

ಅಂತರ್ಜಾಲ ಮಕ್ಕಳ ಕವಿಗೋಷ್ಟಿಯಿಂದ 75ನೇ ಸ್ವಾತಂತ್ರ್ಯ ಸಂಭ್ರಮ:

ಶಿವಮೊಗ್ಗ : ೭೫ ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಜಿಲ್ಲಾ ಘಟಕ ಶಿವಮೊಗ್ಗದ ಸಹಯೋಗದೊಂದಿಗೆ ಅಂತರ್ಜಾಲದ ಮೂಲಕ ದಿನಾಂಕ:15-08-2021 ನೇ ಭಾನುವಾರ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಮಕ್ಕಳ ಕವಿಗೋಷ್ಠಿಯ ಕಾರ್ಯಕ್ರಮದಲ್ಲಿ ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರದ ೩೫ ಮಕ್ಕಳು ಭಾಗವಹಿಸಿ ಸ್ವಾತಂತ್ರ್ಯದ ಹಣತೆ ಎಂಬ ವಿಷಯದ ಮೇಲೆ ಕವಿತೆ ಬರೆದು ವಾಚಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕ.ರಾ.ಬ.ಸಂ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಹೆಚ್ ಮಹೇಶ್ ರವರು ಸಂಘದ ಸಾಧನೆಗಳನ್ನು ಸವಿವರವಾಗಿ ವಿವರಿಸಿದರು. ಶಿವಮೊಗ್ಗ ಜಿಲ್ಲಾ…

Read More

ವಿದ್ಯಾರ್ಥಿಗಳ ಅನುಪಸ್ಥಿತಿ ಇದ್ದರೂ ಶಾಲೆಗಳು ಸ್ವಾತಂತ್ರ್ಯೋತ್ಸವ ಆಚರಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಈ ಆಚರಣೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮುಖ್ಯಸ್ಥರಿಗೆ ಸೂಚಿಸಿದೆ.   ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವಿಡಿಯೋವನ್ನು ಶಾಲೆಗಳು ರೆಕಾರ್ಡ್ ಮಾಡಿಕೊಂಡು ಆನ್ ಲೈನ್ ಮೂಲಕ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ….

Read More

ಗಣೇಶ ಚತುರ್ಥಿ, ಮೊಹರಂ ಹಬ್ಬ; ರಾಜ್ಯ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಬಿಡುಗಡೆ:

ಬೆಂಗಳೂರು: ಗಣೇಶ ಚತುರ್ಥಿ ಮತ್ತು ಮೊಹರಂ ಆಚರಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿನ ಹಬ್ಬಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಹಬ್ಬಗಳಲ್ಲಿ ಕೊರೊನಾ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಗಣೇಶ ಹಬ್ಬ ಆಚರಿಸುವ ದೇಗುಲಗಳಲ್ಲಿ ನಿತ್ಯ ಸ್ಯಾನಿಟೈಸೇಷನ್ ನಡೆಸಬೇಕು. ದೇಗುಲಗಳಲ್ಲಿ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೇಗುಲಗಳಲ್ಲಿ ಭಕ್ತರಿಗೆ ಕನಿಷ್ಠ 6 ಅಡಿ…

Read More

ಪೊಲೀಸ್ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆ ಮಾಡುತ್ತೇನೆ: ಆರಗ ಜ್ಞಾನೇಂದ್ರ

ತುಮಕೂರು: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಹಿರಿಯರು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.  ನಾಳೆ ಗೃಹ ಇಲಾಖೆ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಲಿದ್ದೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ವಹಿಸಿಕೊಳ್ಳಲಿದ್ದೇನೆ.ಅದಕ್ಕೂ ಮುಂಚೆ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಪೊಲೀಸ್ ಇಲಾಖೆ ಸಶಕ್ತ ವಾಗಿ ಕೆಲಸ ಮಾಡುವ ಹಾಗೆ…

Read More

ಚಾಮರಾಜನಗರ: ಬಿಎಸ್ ವೈ ರಾಜೀನಾಮೆಯಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ:

ಚಾಮರಾಜನಗರ: ಬಿ.ಎಸ್​.ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದು ಅಭಿಮಾನಿಯೊಬ್ಬ ನೇಣಿಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ರವಿ (40 ವರ್ಷ) ಆಲಿಯಾಸ್ ರಾಜಾಹುಲಿ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡಿಯೂರಪ್ಪ ರಾಜೀನಾಮೆಯಿಂದ ಬೇಸರಗೊಂಡ ರವಿ ರಾತ್ರಿ ವೇಳೆ ನೇಣಿಗೆ ಕೊರಳೊಡ್ಡಿರುವುದು ತಿಳಿದುಬಂದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದು, ನನ್ನ ರಾಜೀನಾಮೆಯಿಂದ ಮನನೊಂದ ಗುಂಡ್ಲುಪೇಟೆ ತಾಲ್ಲೂಕು…

Read More

ಹೈಕಮಾಂಡ್ ನಿಂದ ಯಾವುದೇ ಒತ್ತಡ ಇಲ್ಲ: ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ:ಹಂಗಾಮಿ ಸಿಎಂ ಬಿ ಎಸ್ ವೈ

ಬೆಂಗಳೂರು: ನನಗೆ ಕೇಂದ್ರ ನಾಯಕರಿಂದ ಯಾವುದೇ ಒತ್ತಡ ಬಂದಿಲ್ಲ. ಹೊಸಬರಿಗೆ ಅವಕಾಶ ಸಿಗಬೇಕೆಂದು ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು…

Read More