ಹಿಜಾಬ್ ಕುರಿತು ಬಹುನಿರೀಕ್ಷಿತ ತೀರ್ಪು ಪ್ರಕಟ : ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರಿಗೆ ಭಾರಿ ನಿರಾಸೆ !!!!!!!
ಹಿಜಾಬ್ ಇಸ್ಲಾಂನ ಅತ್ಯಗತ್ಯವಾದ ಭಾಗವಲ್ಲ ಎಂದು ಹೈಕೋರ್ಟ್ ಹೇಳಿದ್ದು, ಈ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಕಾನೂನು ಬದ್ಧವಾಗಿಯೇ ಇದೆ ಎಂದಿದೆ. ಅಲ್ಲದೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ .ಹಿಜಬ್ ಗೆ ಅವಕಾಶ ಕೋರಿದ್ದ ಎಲ್ಲಾ ರಿಟ್ ಅರ್ಜಿಗಳನ್ನ ವಜಾ ಮಾಡಿದೆ. ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಉಡುಪಿಯ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್…