ಗೋಡಂಬಿ ಹೆಸರಿನಲ್ಲಿ ಕಳಪೆ ಅಡಿಕೆ ಆಮದು: ಸೂಕ್ತ ಕ್ರಮಕ್ಕೆ ಶಾಸಕ ಆರಗ ಜ್ಞಾನೇಂದ್ರ ಒತ್ತಾಯ
ರಿಪ್ಪನ್ ಪೇಟೆ:ದೇಶದಲ್ಲಿನ ಅಡಿಕೆ ವ್ಯಾಪಾರಿಗಳ ವಂಚಕರ ಜಾಲವು ಗೋಡಂಬಿ ಹೆಸರಿನಲ್ಲಿ ಕಳಪೆ ಗುಣಮಟ್ಟದ ಅಡಿಕೆಯನ್ನು ಇಂಡೋನೇಶಿಯಾದಿಂದ ಆಮದು ಮಾಡಿಕೊಳ್ಳುವ ಮೂಲಕ ದೇಶದ ಅಡಿಕೆ ಬೆಳೆಗಾರರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿ ಕೊಳ್ಳುವಂತೆ ಮಾಡುತ್ತಿದ್ದಾರೆ. ಈ ತರಹದ ಕಳಪೆ ಅಡಿಕೆ ಆಮದು ಮಾಡಿಕೊಳ್ಳುವವರ ವಿರುದ್ಧ ಕೇಂದ್ರ ಸರ್ಕಾರವು ಈ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಸಕ ಮತ್ತು ಗೃಹ ಮಂಡಳಿ ಅಧ್ಯಕ್ಷರಾದ ಶ್ರೀ ಆರಗ ಜ್ಞಾನೇಂದ್ರ ಇಂದಿಲ್ಲಿ ಒತ್ತಾಯಿಸಿದರು. ಪಟ್ಟಣದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಅಡಿಕೆ ವಂಚಕರ ಜಾಲವು…