ರಿಪ್ಪನ್ ಪೇಟೆ : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಸುಗೂಸು : ಸಹಾಯಕ್ಕಾಗಿ ಯಾಚನೆ
ರಿಪ್ಪನ್ ಪೇಟೆ :ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ ಹಸುಗೂಸು ಉಸಿರಾಟದ ಸಮಸ್ಯೆಯಿಂದ ಸಾವು ಬದುಕಿನ ಮದ್ಯೆ ಹೋರಾಡುತ್ತಿದೆ. ಸದ್ಯ ಮಗುವಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಲಕ್ಷಾಂತರ ರೂ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದೆ. ಈ ಕುಟುಂಬದಲ್ಲಿ ಲಕ್ಷಾಂತರ ವೆಚ್ಚ ಪಾವತಿಸಲು…