ಶಿವಮೊಗ್ಗ : ನೌಕರಿ ಖಾಯಂಗೊಳಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ :

ಶಿವಮೊಗ್ಗ : ದೀರ್ಘಕಾಲದ  ಸೇವೆಯನ್ನು ಬಳಸಿಕೊಂಡ ಇಲಾಖೆಯು ಸೇವಾ ವಿಲೀನಗೊಳಿಸಿ ಕಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಉಲ್ಲೇಖ ಪತ್ರ 1ಮತ್ತು 2 ಅನುಸಾರ ದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಮತ್ತು ಶಾಶ್ವತ ನಿಯಮಾವಳಿ ರಚನೆ ಮಾಡುವ ಬಗ್ಗೆ ಪರಿಶೀಲಿಸಿ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕೆಂದು ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು. ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2000ರಿಂದ 2021ರ ಅವಧಿಯ ವರೆಗೆ ನಿಯಮಾನುಸಾರವಾಗಿ ಆಯ್ಕೆಗೊಂಡ 14.564 ಅತಿಥಿ…

Read More

ಶಿವಮೊಗ್ಗ : ಬುಡಮೇಲಾಗಿ ಮರ ಬಿದ್ದು ಕಾರು ಜಖಂ

ಶಿವಮೊಗ್ಗ : ಇಲ್ಲಿನ ತಿಲಕ್ ನಗರದ ಮುಖ್ಯ ರಸ್ತೆಯಲ್ಲಿ ಬೃಹತ್ ಮರವೊಂದು ಬುಡಮೇಲಾಗಿ ಕಾರಿನ ಮೇಲೆ ಉರುಳಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ. ತಿಲಕನಗರ ಮುಖ್ಯ ರಸ್ತೆಯ ಡಯಾನ ಬುಕ್ ಹೌಸ್ ಸಮೀಪ ಇದ್ದ ಬೃಹತ್ ಮರ ಬುಡಮೇಲಾಗಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದಿದೆ‌.ಮರ ಉರುಳಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ.  ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅರಣ್ಯ…

Read More

ಪ್ರೀತಿಸಿ ವಂಚನೆ : ಗರ್ಭವತಿಯಾಗಿದ್ದ ಯುವತಿ ಹಾಗೂ ಗರ್ಭದಲ್ಲಿದ್ದ ಏಳು ತಿಂಗಳ ಮಗು ಸಾವು

ಶಿವಮೊಗ್ಗ:ಯುವಕನೊಬ್ಬ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ ಕಾರಣ ಮುಗ್ಧ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಬದುಕಿ ಬಾಳಬೇಕಾಗಿದ್ದ ಯುವತಿಯು ಮದುವೆಗೆ ಮೊದಲೇ ಗರ್ಭವತಿಯಾಗಿ ಮಗುವಿನೊಂದಿಗೆ ತಾಯಿಯೂ ಅಸುನೀಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ ಕುಂಸಿಯ ಅಶ್ವಿನಿಗೆ ಭದ್ರಾವತಿ ಮೂಲದ ಬಸವರಾಜ್ ಎಂಬ ಯುವಕನೊಂದಿಗೆ ಪರಿಚಯವಾಗಿ ಇಬ್ಬರಲ್ಲೂ ಪ್ರೇಮಾಂಕುರವಾಗುತ್ತದೆ.ನಂತರ ಬಸವರಾಜ್ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿದ್ದನು. ಮನೆಯಲ್ಲಿ ತಾನು ಗರ್ಭವತಿ ಎಂದು ಹೇಳಿಕೊಳ್ಳದ ಅಶ್ವಿನಿ ಹೊಟ್ಟೆ ಮುಂದೆ ಬಂದಿರುವುದು ಗ್ಯಾಸ್ಟ್ರಿಕ್ ನಿಂದ ಎಂದು ಸಾಗು ಹಾಕಿದ್ದಳು. ಏಳು…

Read More

ಕ್ಷುಲ್ಲಕ ವಿಚಾರಕ್ಕೆ ತಂದೆ ಮಗನ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗ, ಕೋಪದಲ್ಲಿ ಕೋಲಿನಿಂದ  ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿದ್ದ ದಿನಸಿ ವಸ್ತುಗಳನ್ನು ಮಾರಾಟ ಮಾಡಿ,ಕುಡಿದು ಬರುತ್ತಿದ್ದ ತಂದೆಯನ್ನು ಮಗ ಪ್ರಶ್ನಿಸಿದಾಗ ತಂದೆ ಮತ್ತು ಮಗನ ಮಧ್ಯ ಗಲಾಟೆಯಾಗಿದೆ. ಕೋಪದಲ್ಲಿ ಕೋಲಿನಿಂದ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತಲೆಗೆ ಗಂಭೀರ ಗಾಯವಾಗಿದ್ದ ಆರೋಪಿಯ ತಂದೆ ಮೃತಪಟ್ಟಿದ್ದಾರೆ. ಮಂಡೇನಕೊಪ್ಪದ ಕುಮಾರ ನಾಯ್ಕ (55) ಮೃತಪಟ್ಟ ವ್ಯಕ್ತಿ. ಮನೆಯಲ್ಲಿ ತನ್ನ ಮಗ ಮಧು ಜೊತೆ…

Read More

ಹೊಸ ಶಿಕ್ಷಣ ನೀತಿಯನ್ನು ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಲಿ : ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚಿಸಿ ನಂತರ ಜಾರಿಗೆ ತರಬೇಕೆಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಪ್ರೆಸ್ ಟ್ರಸ್ಟ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚೆಗೆ ಬಿಟ್ಟು ಜಾರಿಗೊಳಿಸಬೇಕು ಇಲ್ಲವಾದಲ್ಲಿ ಇದು ಪ್ರಜಾಪ್ರಭುತ್ವ ವಿರೋಧಿ ನೀತಿ ಆಗಲಿದೆ ಎಂದರು. ಒಂದು ವರ್ಷ ತಡವಾಗಿಯಾದರೂ ಜಾರಿಗೆ ತಂದರೂ ಪರವಾಗಿಲ್ಲ. ಆದರೆ ಶಿಕ್ಷಣ ನೀತಿಯನ್ನ ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಬೇಕೆಂದು…

Read More

ಯಶಸ್ವಿನಿ ಯೋಜನೆಯನ್ನು ಮುಂದುವರಿಸುವಂತೆ ಮುಖ್ಯಮಂತ್ರಿಗಳಿಗೆ ರೈತ ಸಂಘದಿಂದ ಮನವಿ:

ಶಿವಮೊಗ್ಗ: ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪರವರು ಇಂದು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯಿಯವರನ್ನು ‌ಭೇಟಿ ಮಾಡಿ ಗಾಂಧಿ ಕಥನ ಪುಸ್ತಕವನ್ನು ನೀಡಿ ಅಭಿನಂದಿಸಿದರು. ಈ ಸಂಧರ್ಭದಲ್ಲಿ ರೈತರ ಆಶಾಕಿರಣವಾದ ಯಶಸ್ವಿನಿ ಯೋಜನೆಯಿಂದ ಸಾಕಷ್ಟು ಬಡ ರೈತರಿಗೆ ಅನುಕೂಲವಾಗಿತ್ತು. ಆದ್ದರಿಂದ ಯಶಸ್ವಿನಿ ಯೋಜನೆಯನ್ನು ಮುಂದುವರಿಸವಂತೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಭದ್ರಾ ನದಿಯಿಂದ 12.5TMC ತುಂಗಾ ನದಿಯಿಂದ 17.4TMC ನೀರೆತ್ತಿ ಕೊಡಲು DPR ಆಗಿ ಕಾಮಗಾರಿ ಪ್ರಗತಿಯಲ್ಲಿದೆ, ಆದರೆ ಭದ್ರಾ ಅಣೆಕಟ್ಟು…

Read More

ಶಿವಮೊಗ್ಗ: ಅಕ್ರಮ ಗಾಂಜಾ ಮಾರಾಟ ಜಾಲ ಪತ್ತೆ,ಮೂವರು ಆರೋಪಿಗಳು ವಶಕ್ಕೆ :

ಶಿವಮೊಗ್ಗ: ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ.ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ ಆಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ಈ ಘಟನೆ ಸಂಭವಿಸಿದೆ.  ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತುಂಗಾ ನಗರ ಪೊಲೀಸರು  ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ. ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟಗಾರರು ಪ್ರತಿದಿನ ಬರುತ್ತಿದ್ದರು. ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ…

Read More

ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ : ಬಿ ವೈ ರಾಘವೇಂದ್ರ

ಶಿವಮೊಗ್ಗ : ನಗರದ ವಿಮಾನ ನಿಲ್ದಾಣದಿಂದ ಐದು ಮಾರ್ಗಗಳಲ್ಲಿ ವಿಮಾನ ಹಾರಾಟ ನಡೆಸಲು ನಿರ್ಧರಿಸಲಾಗಿದೆ.  ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸುವ ಕುರಿತು ಸಿದ್ಧತೆ ನಡೆಯುತ್ತಿದೆ. ಶಿವಮೊಗ್ಗದ ಸಾಗರ ರಸ್ತೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಟಕ್ಕೆ ನಿರ್ಧರಿಸಲಾಗಿದೆ ಎಂದರು. ಶಿವಮೊಗ್ಗದಿಂದ ಬೆಂಗಳೂರು, ಚೆನ್ನೈ, ಮುಂಬೈ ಸೇರಿ ಐದು ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ….

Read More

ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯ: ಬಿ ವೈ ರಾಘವೇಂದ್ರ

ಶಿವಮೊಗ್ಗ : ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ ಎಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ…

Read More

ವಸತಿ ಗೃಹಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು 7.61ಕೋಟಿ ರೂ ಕ್ರಿಯಾ ಯೋಜನೆಗೆ ಅನುಮೋದನೆ : ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಗೋಪಿಶೆಟ್ಟಿಕೊಪ್ಪ ಮತ್ತು ಗೋವಿಂದಾಪುರದಲ್ಲಿ ನಿರ್ಮಿಸಲಾಗುತ್ತಿರುವ ಜಿ ಪ್ಲಸ್ 2 ವಸತಿಗೃಹಗಳಿಗೆ ಮೂಲಸೌಲಭ್ಯ ಕಲ್ಪಿಸಲು 7.61 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ನಗರೋತ್ಥಾನ (ಹಂತ 3) ಅನುದಾನದಲ್ಲಿ 100ಕೋಟಿ ರೂ. ಮಂಜೂರಾಗಿದ್ದು, 92.39 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬಾಕಿ ಉಳಿದಿರುವ ಮೊತ್ತವನ್ನು ಮಾರ್ಗಸೂಚಿ ಪ್ರಕಾರ ವೆಚ್ಚ ಮಾಡಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ…

Read More