Headlines

ಶಿವಮೊಗ್ಗದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ , ಕಲ್ಲು ತೂರಾಟ

ವಾಕಿಂಗ್ ಗೆ ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವನ ಮೇಲೆ 5-6 ಜನರ ಗುಂಪೊಂದು ದಿಡೀರನೇ ಕಲ್ಲುತೂರಿದ ಘಟನೆ ಇಂದು ಸಂಜೆ ನಡೆದಿದೆ. ಈ ಘಟನೆಗೆ ಕಾರಣಗಳೇನು ಎಂಬುದು ಇನ್ನೂ ತಿಳಿದುಬರಬೇಕಿದೆ. ಗೋಪಾಳದ ಪದ್ಮಚಲನಚಿತ್ರ ಮಂದಿರದ ಸರ್ಕಾರಿ ಶಾಲೆಯ ಬಳಿ ವೆಂಕಟೇಶ್ ಎಂಬುವರು ತಮ್ಮ ಮನೆಯ ನಾಯಿಯನ್ನ ಹಿಡಿದುಕೊಂಡು ವಾಕಿಂಗ್ ಗೆ ಹೋಗುವಾಗ ದಿಡೀರನೇ ಐದಾರು ಜನರ ಗುಂಪೊಂದು ಕಲ್ಲು ತೂರಿದ್ದು ವೆಂಕಟೇಶ್ ರವರ ತಲೆಗೆ ಪೆಟ್ಟುಬಿದ್ದಿದೆ. ಅವರನ್ನ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹಿಂದೂ ಮುಖಂಡರಾದ ದೀನ್ ದಯಾಳು,…

Read More

ಶಿವಮೊಗ್ಗ ಹಿಂದೂ ಮಹಾ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ

ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಗಣಪನಿಗೆ ಪೂಜೆ ಸಲ್ಲಿಸುವ ಮೂಲಕ ರಾಜಬೀದಿ ಉತ್ಸವಕ್ಕೆ ಚಾಲನೆ ನೀಡಿದರು. ನಗರದಲ್ಲಿ ಮೆರವಣಿಗೆ ಸಾಗುವ ಹಾದಿಯಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರ ಕಣ್ಗಾವಲಿದ್ದು,. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ರ್‍ಯಾಪಿಡ್ ಆಕ್ಷನ್ ಫೋರ್ಸ್ ಸಹ ಬೀಡುಬಿಟ್ಟಿದೆ. ಗಾಂಧಿ ಬಜಾರ್, ಸೇರಿದಂತೆ ಹಲವು ಕಡೆಗಳಲ್ಲಿ ಪ್ರಸಾದ ವಿನಿಯೋಗ,…

Read More

ರಾಷ್ಟ್ರಕವಿ ಕುವೆಂಪು ಜಿಲ್ಲೆಯಲ್ಲಿ ನಾಡಗೀತೆ ಬದಲು ಮೊಳಗಿದ ತಮಿಳುನಾಡಿನ ನಾಡಗೀತೆ|election

ರಾಷ್ಟ್ರ ಕವಿ ಕುವೆಂಪು ರವರ ತವರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳು ನಾಡಗೀತೆ ಹಾಡಿರುವ ಘಟನೆ ನಡೆದಿದೆ. ನಗರದ ಎನ್ ಇಎಸ್ ಮೈದಾನದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ತಮಿಳು ಬಾಂಧವರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ  ಮಾಜಿ ಸಚಿವ ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಹಾಗೂ ಮುಖ್ಯ ಅಥಿತಿಗಳಾಗಿ ಅಣ್ಣಮಲೈ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಲು ಮುಂದಾಗಿದ್ದರು. ಆದರೆ ತಮಿಳು ನಾಡಿನ ನಾಡಗೀತೆ ಹಾಡು ಆರಂಭವಾಗಿತ್ತು. ತಕ್ಷಣವೇ ಈಶ್ವರಪ್ಪ…

Read More

ಹುಲಿಕಲ್ ಘಾಟಿ ಎರಡು ತಿಂಗಳು ಬಂದ್ – ಪರ್ಯಾಯ ಮಾರ್ಗ ಇಲ್ಲಿದೆ ನೋಡಿ|hulikal ghat

ಶಿವಮೊಗ್ಗ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ(ಹುಲಿಕಲ್) ಘಾಟ್ ನಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಯಾವೆಲ್ಲ ಬದಲಿ ಮಾರ್ಗ? ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ ರಸ್ತೆಗೆ ತಲುಪಬಹುದು….

Read More

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls ಶಿವಮೊಗ್ಗ : ರಾಜ್ಯಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿದ್ದ ಯಡೂರು ಸಮೀಪದ ಅಬ್ಬೆ ಜಲಪಾತದ ವೀಕ್ಷಣೆಗೆಂದು ಬಂದು ಈಜಾಡಲು ತೆರಳಿದ್ದ ಪ್ರವಾಸಿಗ ಸಾಫ್ಟ್‌ವೇರ್ ಇಂಜನಿಯರ್ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗ ಮುಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ…

Read More

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ ಶಿವಮೊಗ್ಗ : ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಅನಿಲ್ ಕುಮಾರ್ 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ…

Read More

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ -Grama One

ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ…

Read More

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ-PRK

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ ಮೊನ್ನೆ ಮೊನ್ನೆ ನಡೆದಿದೆಯೇನೋ.. ಎಂಬ ಭಾವನೆ ಇಂದಿಗೂ ಜನರ ಮನಸ್ಸಿನಲ್ಲಿದೆ. ಅಪ್ಪು ಅಗಲಿಕೆಗೆ ಆಗಲೇ ಎರಡು ವರ್ಷ. ಆ ದಿನ ಇಡೀ ಕರುನಾಡು ಕಣ್ಣೀರಿಟ್ಟಿತ್ತು. ಕರ್ನಾಟಕ ರತ್ನ ಡಾ| ಪುನೀತ್ ರಾಜ್‍ಕುಮಾರ್ ರವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ…

Read More

ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ|rally

ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಸೌಹಾರ್ದತೆಗೆ ಸಾಕ್ಷಿಯಾಗಿತ್ತು.ಇಲ್ಲಿನ ಗಣಪತಿ ಮೆರವಣಿಗೆಯಲ್ಲಿ ಹಿಂದೂ ಮುಸ್ಲಿಂರು ಇಬ್ಬರೂ ಮೆರವಣಿಗೆ ಭಾಗಿಯಾಗಿ ಭಾವೈಕ್ಯತೆ ಮೆರೆದಿದ್ದಾರೆ. ಶಿರಾಳಕೊಪ್ಪದಲ್ಲಿ ಹಿಂದು ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಇಂದು ವಿಸರ್ಜಿಸಲಾಗುತ್ತಿದೆ.ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆಯಲಾಗಿದೆ. ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ  ಮುಸ್ಲಿಂ ಭಾಂಧವರು, ಹಿಂದು ಯುವಕರ ಜೊತೆ ಕುಣಿದು ಕುಪ್ಪಳಿಸಿದ್ದಾರೆ.ಈ ಮೆರವಣಿಗೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

Read More

ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ

ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳ ಕೃತ್ಯ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಆವರಣದಲ್ಲಿ ರಾತ್ರಿ ವೇಳೆ ಕಿಡಿಗೇಡಿಗಳು ನುಗ್ಗಿ ಶಾಲಾ ಕಟ್ಟಡದ ಒಳಗೆ ಕುಡಿಯುವ ‘ಎಣ್ಣೆ ಪಾರ್ಟಿ’ ಮಾಡಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರ ಪ್ರಕಾರ, ಕಳೆದ ಹಲವು ದಿನಗಳಿಂದ ರಾತ್ರಿ ವೇಳೆ ಶಾಲೆ ಆವರಣದಲ್ಲಿ ಅನಾಮಿಕ…

Read More
Exit mobile version