Headlines

ಜಂಬಳ್ಳಿ ತಿರುವಿನಲ್ಲಿ ಅಪಘಾತ – ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ|accident

ತೀರ್ಥಹಳ್ಳಿ : ಅಡ್ಡ ಬಂದ ಹಸುವನ್ನ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದ್ದು ಗಾಯಗೊಂಡಿದ್ದ ಬೈಕ್ ಸವಾರನನ್ನು ಗೃಹ ಸಚಿವರ ಬೆಂಗಾವಲು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ಮತ್ತು ತೀರ್ಥಹಳ್ಳಿ ನಡುವಿನ  ತೂದುರು ಸಮೀಪದ ಜಂಬಳ್ಳಿ ತಿರುವಿನಲ್ಲಿ ಹಸುವೊಂದು ಅಡ್ಡ ಬಂದಿದ್ದರ ಪರಿಣಾಮ ಮಂಡಗದ್ದೆ ಸಮೀಪದ ಸಿಂಗನಬಿದರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳಗ ಗ್ರಾಮದ ಬೈಕ್ ಸವಾರ ಮನೋಜ್ ಹಸುವನ್ನು ತಪ್ಪಿಸಲು ಹೋಗಿ ಅಪಘಾತಕ್ಕಿಡಾಗಿದ್ದಾರೆ.  ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ …

Read More

ಸಾಗರದ ಎಲ್ ಬಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ :

ಜೀವರಕ್ಷಣೆಗೆ  ಕಾರಣವಾಗುವ ರಕ್ತದಾನದಂತಹ ಮಹತ್ವದ ಕಾರ್ಯದಲ್ಲಿ ಭಾಗಿಯಾಗುವ ಸಾಮಾಜಿಕ ಕಾಳಜಿ ಪ್ರತಿಯೊಬ್ಬರು ಬಳಸಿಕೊಳ್ಳಬೇಕು ಎಂದು ರೋಟರಿ ರಕ್ತನಿಧಿ ವೈದ್ಯಾಧಿಕಾರಿಗಳಾದ ಬಿ ಜಿ  ಸಂಗಮ್ ಹೇಳಿದರು    ನಗರದ ಲಾಲ್ ಬಹದ್ದೂರ್ ಕಲಾ ವಿಜ್ಞಾನ ಮತ್ತು ಎಸ್ ಬಿ ಸೊಲಬಣ್ಣ ಶೆಟ್ಟಿ ವಾಣಿಜ್ಯ ಮಹಾವಿದ್ಯಾಲಯ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್ಎಸ್ಎಸ್, ಎನ್ ಸಿಸಿ, ವಿದ್ಯಾರ್ಥಿ ವೇದಿಕೆ,ಕೆ ಎಚ್ ಶ್ರೀನಿವಾಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರ  ಜಿ.ಎ.ನಾರಿಬೋಲಿ ಮಹಾವಿದ್ಯಾಲಯ ,  ಲಯನ್ಸ್ ಕ್ಲಬ್ ಸಾಗರ ಹಾಗೂ ರೋಟರಿ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ|accident

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಅಪ್ಪಳಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬಟ್ಟೆಮಲ್ಲಪ್ಪ -ಹೊಸನಗರ ರಸ್ತೆಯ ಬ್ರಹ್ಮೇಶ್ವರ ಬಳಿ ಚಾಲಕನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಅಪ್ಪಳಿಸಿದೆ. ಶಿಕಾರಿಪುರ ಮೂಲದ ಕುಟುಂಬ ಮಾರುತಿ ಸುಜ಼ೂಕಿ ಗ್ರಾಂಡ್ ವಿಟಾರ ಕಾರಿನಲ್ಲಿ ತೆರಳುವಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನ ಏರ್ ಬ್ಯಾಗ್ ತೆರೆದಿದ್ದರಿಂದ ಯಾವುದೇ ಹೆಚ್ಚಿನ ಅನಾಹುತವಾಗಿಲ್ಲ ಹೊಸನಗರ…

Read More

ರಿಪ್ಪನ್‌ಪೇಟೆ : ಪ್ರಾರ್ಥನಾ ಮಂದಿರದ ಬಳಿ ಮದ್ಯದಂಗಡಿ ಪ್ರಾರಂಭಕ್ಕೆ ಯತ್ನ – ಸರ್ವಪಕ್ಷಗಳಿಂದ ಬೃಹತ್ ಪ್ರತಿಭಟನೆ|protest

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿನ ಜುಮ್ಮಾ ಮಸೀದಿ ಮುಂಭಾಗದ ರಾಯಲ್ ಕಂಫರ್ಟ್ ಕಟ್ಟಡದಲ್ಲಿ ಮದ್ಯದಂಗಡಿ ಆರಂಭಿಸುವ ಹುನ್ನಾರ ನಡೆಯುತ್ತಿದ್ದು ಇದನ್ನು ವಿರೋಧಿಸಿ ಇಂದು ರಿಪ್ಪನ್‌ಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಮತ್ತು ಸರ್ವ ಪಕ್ಷಗಳಿಂದ ಪ್ರತಿಭಟನೆ ನಡೆಸಿದರು. ಕಳೆದ ಒಂದು ವಾರದ ಹಿಂದೆ ಶಿವಮೊಗ್ಗ ಅಬಕಾರಿ ಜಿಲ್ಲಾಧಿಕಾರಿಗಳಿಗೂ ಮತ್ತು ಜಿಲ್ಲಾಧಿಕಾರಿಗಳ ಕಛೇರಿಗೆ ಪಟ್ಟಣದಿಂದ ಸರ್ವಪಕ್ಷಗಳ ನಿಯೋಗ ತೆರಳಿ ಯಾವುದೇ ಕಾರಣಕ್ಕೂ ಪ್ರಾರ್ಥನಾ ಮಂದಿರದ ಸನಿಹದಲ್ಲಿ ಸಿಎಲ್-7 ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ…

Read More

ಮೊಬೈಲ್ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಒಂಬತ್ತು ಮಂದಿ ವಶಕ್ಕೆ|crime-news

ಮೊಬೈಲ್ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಒಂಬತ್ತು ಮಂದಿ ವಶಕ್ಕೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಪ್ರದೇಶದಲ್ಲಿ  ನಿನ್ನೆ ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ. ಘಟನೆಯ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್​ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಘಟನೆಯ ಹಿನ್ನಲೆ : ಭದ್ರಾವತಿಯ ಹೊಸಮನೆಯ ಹನುಮಂತನಗರದಲ್ಲಿ ಗಾರೆ ಕೆಲಸ ಮಾಡುವ ಯುವಕ ನಂದಾ ಎಂಬಾತ ತನ್ನ ಮೊಬೈಲ್​ವೊಂದನ್ನ ಅಡವಿಟ್ಟಿದನಂತೆ. ಅದನ್ನು ಬಿಡಿಸಿಕೊಳ್ಳಲು ಹೋಗಿದ್ದ ಸಂದರ್ಭದಲ್ಲಿ ,ಅಡವಿಟ್ಟುಕೊಂಡಿದ್ದವರು ಮೊಬೈಲ್ ಕೊಡಲು ನಿರಾಕರಿಸಿದ್ದಾರೆ. ಈ ಸಂಬಂಧ…

Read More

ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಖಾಸಗಿ ಕಾಲೇಜು ವಿದ್ಯಾರ್ಥಿ ಸಾವು|train

ಶಿವಮೊಗ್ಗ  : ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ರೈಲಿಗೆ  ಸಿಲುಕಿ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿದ್ಯಾಲಯದ ಬಳಿ ಘಟನೆ ಸಂಭವಿಸಿದೆ. ರೈಲ್ವೆ ಹಳಿ  ಮೇಲೆ ಯುವಕನೊಬ್ಬನ ಮೃತದೇಹ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದರು. ಮೃತನಿಗೆ ಅಂದಾಜು 17 ವರ್ಷ ಎಂದು ತಿಳಿದು ಬಂದಿದೆ. ಈತ ಶಿವಮೊಗ್ಗ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಎಂದು ಗೊತ್ತಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ರೈಲ್ವೆ…

Read More

ಆಯನೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು – ನಾಲ್ವರಿಗೆ ಗಾಯ! | accident

ಆಯನೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು – ನಾಲ್ವರಿಗೆ ಗಾಯ! | accident ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನಲ್ಲಿದ್ದವರು ಚಿತ್ರದುರ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು ಆಯನೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್‌…

Read More

ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಹೃದಯಾಘಾತದಿಂದ ನಿಧನ :

ಪ್ರಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ( 84) ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯ ಸ್ಥಂಬನದಿಂದ ನಿಧನರಾಗಿದ್ದಾರೆ. ಗಾಯಕ ಶಿವಮೊಗ್ಗ ಸುಬ್ಬಣ್ಣರಿಗೆ 84 ವರ್ಷ ವಯಸ್ಸಾಗಿತ್ತು. ನಿನ್ನೆ ಸಂಜೆ ಹೃದಯಾಘಾತದಿಂದ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ರಾತ್ರಿ 10.30 ರ ಸುಮಾರಿಗೆ  ನಿಧರಾಗಿದ್ದಾರೆ. ಶಿವಮೊಗ್ಗ ಸುಬ್ಬಣ್ಣರಿಗೆ ಭಾಗ್ಯಶ್ರಿ, ಶ್ರೀರಂಗ ಇಬ್ಬರು ಮಕ್ಕಳು. ಕಾಡು ಕುದುರೆ ಸಿನಿಮಾದ ಕಾಡು ಕುದುರೆ ಓಡಿಬಂದಿತ್ತಾ ಹಾಡಿಗೆ ರಾಷ್ಟ್ರ ಪ್ರಶಸ್ತಿಯನ್ನು ಗಾಯಕ ಶಿವಮೊಗ್ಗ ಸುಬ್ಬಣ್ಣ ಪಡೆದಿದ್ದರು. ರಜತ ಕಮಲ , ಶಿಶುನಾಳ ಷರೀಫ್…

Read More

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??

ರಿಪ್ಪನ್‌ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ ನಾಳೆ(10-09-2022) ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದೆ.ಈ ಬಾರಿ ಅದ್ದೂರಿ ಮೆರವಣಿಗೆಗೆ ಸಿದ್ದತೆ ನಡೆಸಲಾಗಿದೆ. ಕೊರೊನಾ ಹಿನ್ನಲೆಯಲ್ಲಿ ಕಳೆದ ಎರಡು ವರ್ಷ ಅದ್ದೂರಿ ಮೆರವಣಿಗೆ ನಡೆದಿರಲಿಲ್ಲ ನಾಳೆ ನಡೆಯುವ ಅದ್ದೂರಿ ಮೆರವಣಿಗೆಯಲ್ಲಿ ಕಲಾ ತಂಡಗಳು,ಮಂಗಳವಾದ್ಯ,ಚಂಡೇಮೇಳ ,ಡೊಳ್ಳು ಕುಣಿತ ,ಕಹಳೆ ಸೇರಿದಂತೆ ವಿವಿಧ ಜಾನಪದ ಕಲಾ…

Read More

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು ಬಿರಿಯಾನಿ ತಿನ್ನಲು ಹೊಟೇಲ್ ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್‌ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಹೊಳೆಹೊನ್ನೂರಿನ ಕನಸಿನಕಟ್ಟೆ ರಸ್ತೆಯ ಬಾರ್ ನಲ್ಲಿ ನಡೆದಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ಸಂಭವಿಸಿದೆ. ರವಿ…

Read More