ರಿಪ್ಪನ್‌ಪೇಟೆ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪುರವರ ಹೆಸರಿಡಲು ಜೆಡಿಎಸ್ ಆಗ್ರಹ
ರಿಪ್ಪನ್ ಪೇಟೆ: ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವಂತೆ ಜೆಡಿಎಸ್ ರಾಜ್ಯ ಮುಖಂಡ ಆರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. ಪಟ್ಟಣದ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಮೊದಲ ಬಾರಿ ಕನ್ನಡಕ್ಕೆ ತಂದು ಕೊಟ್ಟ ಇವರು.ವಿಶ್ವಮಾನವ ಸಂದೇಶದ ಮೂಲಕ ರಾಷ್ಟ್ರಕವಿಯಾಗಿ ಜ್ಞಾನಪೀಠ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ…