
ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ
ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ ಶಿವಮೊಗ್ಗ : ಅನಾಮಧೇಯ ವ್ಯಕ್ತಿಯೋರ್ವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ವಕೀಲ ಕೆ.ಪಿ. ಶ್ರೀಪಾಲ್ ಆಗ್ರಹಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,೮ ವರ್ಷದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ೯೮ ಪ್ರಕರಣ ಅಸಹಜ ಸಾವೆಂದು ವರದಿಯಾಗಿದೆ. ಹೂತಿಟ್ಟಿರುವ ನೂರಾರು ಶವಗಳಲ್ಲಿ ೧೨ ರಿಂದ ೧೫ ವರ್ಷದ ಹೆಣ್ಣು ಮಕ್ಕಳು, ಪುರುಷರು, ಮಹಿಳೆಯರು…