Headlines

ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ|fest

ಹೊಸನಗರದಲ್ಲಿ ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ ಹೊಸನಗರ : ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದಲ್ಲಿ ಕ್ರೈಸ್ತ ಬಾಂಧವರು ಮ ಮೊ0ತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಹೊಸ ಬಟ್ಟೆ ಧರಿಸಿ ವರ್ಣ ರಂಜಿತವಾಗಿ ಆಚರಿಸಿದರು. ತೆನೆ ಹಬ್ಬವೆಂದು ಕರೆಯಲ್ಪಡುವ ಈ ಹಬ್ಬದ ಪ್ರಯುಕ್ತ ಚರ್ಚಿನಲ್ಲಿ ವಿಶೇಷ ಬಲಿಪೂಜೆ ಹೊಸ ತೆನೆಯ ಆಶೀರ್ವಚನ ವಿತರಣೆ ಮಾಡಿ ಮೆರವಣಿಗೆಗೆ ಪುಷ್ಪಾರ್ಚನೆ ಮೂಲಕ ಧರ್ಮ ಗುರುಗಳಾದ ರೆವರೆಂಡ್ ಫಾದರ್ ಸೈಮನ್ ಚಾಲನೆ ನೀಡಿ ಸಂದೇಶ ಹಾಗೂ ಶುಭಾಶಯ ವಿನಿಮಯ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಹೊಸನಗರ :ಸಾರ್ವಜನಿಕ ಆಸ್ಪತ್ರೆಯಲ್ಲೆ ನೇಣಿಗೆ ಶರಣಾದ ರೋಗಿ:

ಹೊಸನಗರ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಅನಾರೋಗ್ಯ ನಿಮಿತ್ತ ದಾಖಲಾಗಿದ್ದ  ಸೊನಲೆಯ ರೋಗಿಯೊಬ್ಬ ಆಸ್ಪತ್ರೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೊನಲೆಯ ವಾಸಿ ಕೃಷಿಕ ವೃತ್ತಿ ಮಾಡಿಕೊಂಡಿದ್ದ ಜಗದೀಶ್ (50) ಎಂಬುವವರು ಅನಾರೋಗ್ಯ ನಿಮಿತ್ತ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು,ಶನಿವಾರ ಮಧ್ಯರಾತ್ರಿ ತಾನು ಮಲಗಿದ್ದ ಕೊಠಡಿಯಿಂದ ಹೊರಬಂದ ಜಗದೀಶ್ ಸಾರ್ವಜನಿಕ ಆಸ್ಪತ್ರೆ ಎರಡನೆ ಅಂತಸ್ತಿಗೆ ತೆರಳುವ ಮೆಟ್ಟಿಲುಗಳಿಗೆ ಅಳವಡಿಸಿದ ಸರಳುಗಳಿಗೆ ತಾನು ಧರಿಸಿದ ಲುಂಗಿಯಿಂದಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ….

Read More

Shivamogga | ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ – ಅಧಿಕೃತವಾಗಿ ಹೊರಬಿತ್ತು ಪ್ರಕಟಣೆ| ಯಾವೆಲ್ಲಾ ಹುದ್ದೆಗಳಿವೆ ಗೊತ್ತಾ..?? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲೆಯಿಂದ ವಿಮಾನಯಾನ ಸೇವೆ ಆರಂಭಸಿಲು ಸಜ್ಜಾಗಿರುವ ಸ್ಟಾರ್‌ ಏರ್‌ (STAR AIR) ಸಂಸ್ಥೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಜ್ಜಾಗಿದೆ. ನ.6ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗದ ಬಿ.ಹೆಚ್‌.ರಸ್ತೆಯಲ್ಲಿರುವ ರಾಯಲ್‌ ಆರ್ಕಿಡ್‌ ಹೊಟೇಲ್‌ನಲ್ಲಿ ಸಂದರ್ಶನ ನಡೆಸಲಿದೆ. ಈ ಕುರಿತು ಸ್ಟಾರ್‌ ಏರ್‌ ಸಂಸ್ಥೆ ತನ್ನ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಪ್ರಕಟಿಸಿದೆ. ಸ್ಟಾರ್​ ಏರ್​ ಸೋಶಿಯಲ್ ಮೀಡಿಯಾದಲ್ಲಿ ನೀಡಿದ ಜಾಹಿರಾತಿನ ಪ್ರಕಾರ, ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಕಮರ್ಷಿಯಲ್‌ ವಿಭಾಗದಲ್ಲಿ ಡ್ಯೂಟಿ ಸೂಪರ್‌ವೈಸರ್‌…

Read More

ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ

ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ ರಿಪ್ಪನಪೇಟೆ, 9 ಅಕ್ಟೋಬರ್  2025: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿರುವುದಾಗಿ, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು ಘೋಷಿಸಿದ್ದಾರೆ.   ಈ ಮೂಲಕ  ಗ್ರಾಮೀಣ ಭಾರತಕ್ಕೆ ಆರೋಗ್ಯ ಸೇವೆ  ಲಭ್ಯವಾಗುವಂತೆ ಮಾಡುವ ಧ್ಯೇಯವನ್ನು ಹೊಂದಿದ್ದ…

Read More

ಬೇಳೂರು ಗೋಪಾಲಕೃಷ್ಣ ಒಬ್ಬ ಶೋಕಿಲಾಲ ರಾಜಕಾರಣಿ:: ವೀರೇಶ್ ಆಲುವಳ್ಳಿ

ಹೊಸನಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಒಬ್ಬ ಶೋಕಿಲಾಲ ರಾಜಕಾರಣಿ ಅವರಿಗೆ ಕಿಂಚಿತ್ತು ಸಾಮಾಜಿಕ ಬದ್ದತೆ ಇಲ್ಲ ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ರವರು ವಾಗ್ದಾಳಿ ನಡೆಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಟಿ ನಡೆಸಿ ಮಾತನಾಡಿ, ಮಾಜಿ ಶಾಸಕರು ಸುತ್ತಾ ಗ್ರಾಮದಲ್ಲಿ  ಮರಳು ಮಾಫ಼ಿಯ ನಡೆಯುತ್ತಿದೆ ಎಂದು ತಮ್ಮ ಹಾಗೂ ಸುರೇಶ್ ಸ್ವಾಮಿರಾವ್ ವಿರುದ್ದ ಗಂಭೀರ ಆರೋಪ ಹೊರಿಸಿದಲ್ಲದೇ ಇದರ ಹಿಂದೆ ಶಾಸಕರ ಕೈವಾಡ ಇದೆ ಎಂದು ಆರೋಪಿಸಿದ್ದಾರೆ ಇದು ಸತ್ಯಕ್ಕೆ ದೂರವಾಗಿದ್ದು…

Read More

ಮತಾಂತರ ಆರೋಪ – ಪಾದ್ರಿ ಮನೆಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರು|protest

ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಆರೋಪ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ಮನೆಗೆ ಬಜರಂಗ ದಳ ಮುತ್ತಿಗೆ ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಪ್ರಾರ್ಥನೆ ನಡೆಸುತ್ತಿದ್ದ ಮನೆಯಲ್ಲಿ ಬಜರಂಗ ದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಮನೆಯೊಂದರಲ್ಲಿ ಪ್ರತಿ ಭಾನುವಾರ ಹಿಂದೂಗಳನ್ನು ಕರೆಸಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಪಾದ್ರಿ ಮಣಿಕಂಠ ಮತ್ತವರ ತಂಡದವರು ಪ್ರತಿ ಭಾನುವಾರ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜನೆ ಮಾಡುತ್ತಿದ್ದರು. ಪ್ರಾರ್ಥನೆ ಆಯೋಜಿಸುತ್ತಿದ್ದವರ ವಿರುದ್ಧ…

Read More

ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಹೇಳಿಕೆ – ಕುಮಾರ್ ಬಂಗಾರಪ್ಪ ಮನೆ ಮೇಲೆ ಅಭಿಮಾನಿಗಳಿಂದ ಮುತ್ತಿಗೆ | Shivarajkumar – kumarbangarappa

ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಹೇಳಿಕೆ – ಕುಮಾರ್ ಬಂಗಾರಪ್ಪ ಮನೆ ಮೇಲೆ ಅಭಿಮಾನಿಗಳಿಂದ ಮುತ್ತಿಗೆ | Shivarajkumar – kumarbangarappa ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಸೋತ ಬೆನ್ನಲ್ಲೇ ನಟ ಶಿವರಾಜಕುಮಾರ್ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ( Kumar Bangarppa ) ಅವರ ಬೆಂಗಳೂರಿನ ಸದಾಶಿವನಗರ ಮನೆ ಮೇಲೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿತ್ತು….

Read More

ಮೇ 13 ರಿಂದ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ ಉರೂಸ್ ಸಮಾರಂಭ :

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ 2022-23 ರ ಉರೂಸ್‌ ಸಮಾರಂಭದ ದಿನಾಂಕ ನಿಗದಿಯಾಗಿದೆ. ಇಂದು ದರ್ಗಾ ಸಮಿತಿ ಅಧ್ಯಕ್ಷರಾದ ಜೆ ಮಹಮ್ಮದ್ ಸಾಬ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಮೇ 13,14,15,16 ರ ನಾಲ್ಕು ದಿನ ಉರೂಸ್ ಕಾರ್ಯಕ್ರಮ ನಡೆಸಲು, ಉರೂಸ್ ಸಮಾರಂಭಕ್ಕೆ ಮಂತ್ರಿಗಳು ಹಾಗೂ ಶಾಸಕರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಉರೂಸ್ ಸಮಾರಂಭವನ್ನು ಸರ್ಕಾರ ಸುತ್ತೋಲೆಯಂತೆ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ ವಿನಾಯಕ ಉಡುಪ…

Read More

ಬಂಕಾಪುರದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಜನರ ಧ್ವನಿ ಆಲಿಸಿದ ಶಾಸಕ

ಬಂಕಾಪುರದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಜನರ ಧ್ವನಿ ಆಲಿಸಿದ ಶಾಸಕ ಬಂಕಾಪುರ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಿಥಿಲಾವಸ್ಥೆಯಲ್ಲಿರುವ ನಾಡಕಚೇರಿ ವೀಕ್ಷಣೆಗೆ ಭೇಟಿ ನೀಡಿದ ಶಾಸಕ ಯಾಸೀರ್ ಅಹಮದ್ ಖಾನ್ ಪಠಾಣ್ ಅವರಿಗೆ ಸಾರ್ವಜನಿಕರು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು. ನಾಡಕಚೇರಿ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಅದನ್ನು ನವೀಕರಿಸಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪ ತಹಸೀಲ್ದಾರ್ ಕಚೇರಿಯನ್ನು ಇದೇ ಕಟ್ಟಡದಲ್ಲಿ ಮುಂದುವರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು. ಇದರಿಂದ…

Read More