w
Headlines

ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ | Iruvakki

ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ  ಕೋಡೂರು : ಅತಿಯಾದ ಮಳೆ , ಮಳೆ ಕೊರತೆ, ಅಕಾಲಿಕ ಮಳೆ, ಪ್ರವಾಹ ಮತ್ತು ಬರಗಾಲ  ಮುಂತಾದ ಹವಾಮಾನ ಬದಲಾವಣೆಗಳು ಇತ್ತೀಚಿನ ದಿನಮಾನಗಳಲ್ಲಿ ಸರ್ವೇಸಾಮಾನ್ಯವಾಗಿದ್ದು ,  ಕೃಷಿ ಕ್ಷೇತ್ರದ ಮೇಲೆ ವಿಪರೀತ ಪರಿಣಾಮ ಬೀರಿದೆ. ಈ ಬದಲಾವಣೆಯಿಂದಾಗಿ ಭೂಮಿಯು ತನ್ನ ಸಮತೋಲನವನ್ನು ಕಳೆದುಕೊಂಡು, ಕೃಷಿ ಉತ್ಪಾದನೆಯು ಕುಂಠಿತಗೊಂಡಿದೆ ಎಂದು ಗುಂಪು ಚರ್ಚೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತಿ. ಕೆಳದಿ ಶಿವಪ್ಪ ನಾಯಕ ಕೃಷಿ…

Read Full News

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಾಯಿಗೆ 30 ಸಾವಿರ ರೂ. ದಂಡ

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಾಯಿಗೆ 30 ಸಾವಿರ ರೂ. ದಂಡ ಶಿವಮೊಗ್ಗ : 17 ವರ್ಷದ ಬಾಲಕನಿಗೆ ವಾಹನ ಚಾಲನ ಪರವಾನಗಿ ಇಲ್ಲದೇ ದ್ವಿಚಕ್ರ ವಾಹನ ನೀಡಿದ್ದ ತಾಯಿಗೆ ಶಿವಮೊಗ್ಗ ನ್ಯಾಯಾಲಯ 30 ಸಾವಿರ ರೂ. ದಂಡ ವಿಧಿಸಿದೆ.  ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್​ಪಿಎಂ ರಸ್ತೆ ಬಳಿ ಸಂಚಾರಿ ಪೊಲೀಸರು ವಾಹನ ತಪಾಸಣೆ ನಡೆಸುವಾಗ ಬಾಲಕನನ್ನು ತಡೆದು ಪರಿಶೀಲನೆ ನಡೆಸಿದ್ದರು. ಈ ವೇಳೆ, ಆತ ಅಪ್ರಾಪ್ತನಾಗಿರುವುದು ಮತ್ತು ಚಲಾಯಿಸುತ್ತಿದ್ದ ಬೈಕ್​ ಆತನ…

Read Full News

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ. NSUI ಕಾರ್ಯಕರ್ತರ ಬಂಧನ

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ – NSUI ಕಾರ್ಯಕರ್ತರ ಬಂಧನ ಶಿವಮೊಗ್ಗ – ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್‌ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಎನ್‌ಎಸ್ ಯೂಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ…

Read Full News

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read Full News

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ. ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ…

Read Full News

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ ಶಿವಮೊಗ್ಗ : ಯುಟ್ಯೂಬ್, ಗೂಗಲ್ ಮ್ಯಾಪ್‌ನಲ್ಲಿ ರೆಸ್ಟೋರೆಂಟ್‌ಗಳಿಗೆ ರಿವ್ಯೂ ಬರೆದು ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ ಉಪನ್ಯಾಸಕಿಯೊಬ್ಬರು 12.69 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜ.22ರಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್‌ ಲಿಂಕ್ ಕ್ಲಿಕ್ ಮಾಡಿದ್ದ ಉಪನ್ಯಾಸಕಿ ಟೆಲಿಗ್ರಾಂನಲ್ಲಿ ಡೈಲಿ ಟಾಸ್ಕ್ ಮತ್ತು ರಿಸೆಪ್ಷನಿಸ್ಟ್ ಪ್ರಿಯಾ ಎಂಬ ಗ್ರೂಪ್‌ಗಳಿಗೆ ಜಾಯಿನ್ ಆಗಿದ್ದರು. ಪ್ರತಿ ರಿವ್ಯೂಗೆ 50…

Read Full News

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ -Grama One

ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ…

Read Full News

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ‌ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ‌ ಮಗು ಕೈಗೆ ಆಟ ಆಡಲು‌‌ ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು‌ ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…

Read Full News

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ ಹೊಸನಗರ ತಾಲೂಕಿನ ಒಕ್ಕಲಿಗರ ಸಂಘದ ನಿರ್ದೇಶಕ ಸಂಘದ ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ, ಹಾರೈಸಿದ ಎಲ್ಲಾ ಕುಲ ಭಾಂದವರಿಗೆ ಪರಾಜಿತ ಅಭ್ಯರ್ಥಿಗಳಾದ ರವೀಂದ್ರ ಕೆರೆಹಳ್ಳಿ ಹಾಗೂ ಹೆಚ್ ಎಸ್ ಕೃಷ್ಣಮೂರ್ತಿ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಮತದಾರರು ಯಾವುದೇ ಹಣ ಹಾಗೂ ಬಾಡೂಟದ ಅಮಿಷಕ್ಕೆ ಒಳಗಾಗದೇ ಹೆಚ್ಚಿನ ಮತ ನೀಡುವ…

Read Full News

Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ

Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ ಹೊಸನಗರ ತಾಲ್ಲೂಕು ಒಕ್ಕಲಿಗ ಸಂಘ ರಿಪ್ಪನ್‌ಪೇಟೆ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಎಂ.ಬಿ.ಲಕ್ಷ್ಮಣಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಘದಲ್ಲಿ ತಮಮ್ ಹಿಡಿತವನ್ನು ಸಾಧಿಸಿದ್ದಾರೆ. ಭಾನುವಾರ ರಿಪ್ಪನ್‌ಪೇಟೆಯ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ 2 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿ 17 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಎಂ.ಬಿ.ಲಕ್ಷ್ಮಣ ಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು …

Read Full News

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷನಿಂದ ಸದಸ್ಯನಿಗೆ ಚಪ್ಪಲಿಯೇಟು ಆರೋಪ – ಬಿಜೆಪಿ ಹಾಗೂ SDMC ಸದಸ್ಯರಿಂದ ಭಾರಿ ಪ್ರತಿಭಟನೆ

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷನಿಂದ ಸದಸ್ಯನಿಗೆ ಚಪ್ಪಲಿಯೇಟು ಆರೋಪ – ಬಿಜೆಪಿ ಹಾಗೂ SDMC ಸದಸ್ಯರಿಂದ ಭಾರಿ ಪ್ರತಿಭಟನೆ   ಹೊಸನಗರ(Hosanagara): ಪಟ್ಟಣದದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಸ್‌ಡಿಎಂಸಿ ಅಧ್ಯಕ್ಷರು ಎಸ್‌ಡಿಎಂಸಿ ಸದಸ್ಯ ನೇರಲೆ ರಮೇಶ್‌ ಮೇಲೆ ಹಲ್ಲೆ ನಡೆಸಿದ್ದಾರೆಂದು ಖಂಡಿಸಿ ತಾಲ್ಲೂಕು ಬಿಜೆಪಿ ಮುಖಂಡರು, ಜೇಸಿಐ ಮತ್ತು ಶಾಲೆಯ ಎಸ್‌ಡಿಎಂಸಿ ಸದಸ್ಯರು ಹಾಗೂ ಮಕ್ಕಳ ಪೋಷಕ ವರ್ಗದವರು ಬಸ್ ನಿಲ್ದಾಣದ ಆವರಣದಿಂದ ಶಾಲೆಯ…

Read Full News

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..??| Crime News

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..?? ಶಿವಮೊಗ್ಗ (Shivamogga) : ಮುಸ್ಲಿಂ ಖಬರ್ ಸ್ಥಾನದ ಜಾಗದಲ್ಲಿ ಮರ ಕಡಿದ ವಿಚಾರಕ್ಕೆ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ(assault) ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ(bhadravathi) ತಾಲೂಕಿನ ಜಂಬರಘಟ್ಟೆಯಲ್ಲಿ ನಡೆದಿದೆ. ಹೊಸ ಜಂಬಘಟ್ಟೆ ನಿವಾಸಿ ರವಿ (20) ಹಲ್ಲೆಗೊಳಗಾದ ವ್ಯಕ್ತಿ.ಹಲ್ಲೆ ನಡೆಸಿದ ಬಳಿಕ ಯುವಕರು ಪರಾರಿಯಾಗಿದ್ದಾರೆ. ಜೀವನೋಪಾಯಕ್ಕಾಗಿ ಕುರಿಗಳನ್ನ ಸಾಕಿರುವ ರವಿ. ಮನೆಯಲ್ಲಿ ಕುರಿ ಕಟ್ಟುವ ಗೂಟ ಮುರಿದ ಕಾರಣ…

Read Full News

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga  ಕಾಂಗ್ರೆಸ್‌ನವರು ಅಧಿ ಕಾರದಲ್ಲಿದ್ದಾಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬಹುದಿತ್ತು. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿ  ತಮಗೆ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ.ತಮ್ಮ ತಂದೆಗೆ ಕೊಟ್ಟಿದ್ದಾರೆ. ಕಾಂಗ್ರೆಸ್‌ ಅಧಿ ಕಾರದಲ್ಲಿದ್ದಾಗ ಅವರಿಗೆ ಅವರೇ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ. ಅಡ್ವಾಣಿ ಅವರಿಗೆ ಕೊಟ್ಟಾಗ ತಕರಾರು ಎತ್ತುವುದು ಸರಿಯಲ್ಲ….

Read Full News

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ ನಿಗೂಢ ಕೆಲಸಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ಬಯಲಿಗೆ ಬಂದಿದೆ. ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾ| ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದೆ . ಫೆಬ್ರವರಿ 1 ರಂದು…

Read Full News

ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ | Crime News

ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಎಚ್‌ಎಂ ಟಿಂಬರ್ ಆಯಂಡ್ ಫರ್ನಿಚ‌ರ್ ಅಂಗಡಿ ಹಿಂಭಾಗದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆಯಾಗಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ. ಘಟನೆ ಸಂಬಂಧ ಆರೋಪಿ ಮೋಮಿನ್‌ ಎಂಬಾತನನ್ನು ಬಂಧಿಸಿದ ಪೊಲೀಸರು. ಹಿಂದೂ ಸಂಘಟನೆ ಕಾರ್ಯಕರ್ತ ಅರಳಿಹಳ್ಳಿ ದೇವರಾಜ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ರಾಶಿ ರಾಶಿ ಗೋವಿನ ಮೂಳೆ ಪತ್ತೆ ಮಾಡಿದ್ದಾರೆ….

Read Full News

Ripponpete | ಮನುಷ್ಯ ಮನುಷ್ಯನನ್ನ ಪ್ರೀತಿಸಬೇಕು ಮತ್ತು ಗೌರವಿಸಬೇಕು – ಧರ್ಮಗುರು ರೋಮನ್ ಪಿಂಟೋ

ಮನುಷ್ಯ ಮನುಷ್ಯನನ್ನ ಪ್ರೀತಿಸಬೇಕು ಮತ್ತು ಗೌರವಿಸಬೇಕು  – ಧರ್ಮಗುರು ರೋಮನ್ ಪಿಂಟೋ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು ಮತ್ತು ಗೌರವಿಸಬೇಕು,ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಪ್ರಭು ಏಸು ಸ್ವಾಮಿಯವರ ಶುಭ ಸಂದೇಶ ಇಂದಿಗೂ ಪ್ರಸ್ತುತ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ  ಧರ್ಮಗುರು ರೋಮನ್  ಪಿಂಟೋ ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ವಾರ್ಷಿಕ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಶುಭ ಸಂದೇಶವನ್ನು ನೀಡಿದ…

Read Full News

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!??

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!?? ಹೊಸನಗರ : ಶಾಲಾ ಶತಮಾನೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸದಸ್ಯನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿದ್ದು ಸೋಮವಾರ ಮಾಜಿ ಸಚಿವರ ನೇತ್ರತ್ವದಲ್ಲಿ…

Read Full News

ಅಕ್ರಮ ಗೋ ಸಾಗಾಟ – ವಾಹನ ಸಮೇತ ಹಸುಗಳನ್ನು ಪೊಲೀಸ್ ವಶಕ್ಕೆ ನೀಡಿದ ಸ್ಥಳೀಯರು | crime news

ಅಕ್ರಮ ಗೋ ಸಾಗಾಟ – ವಾಹನ ಸಮೇತ ಪೊಲೀಸ್ ವಶಕ್ಕೆ! ತೀರ್ಥಹಳ್ಳಿ : ಯಾವುದೇ ದಾಖಲೆ ಇಲ್ಲದೆ ಟಾಟಾ ಲೈಲ್ಯಾಂಡ್ ವಾಹನದಲ್ಲಿ 3 ಹಸುಗಳನ್ನು ತುಂಬಿಕೊಂಡು ಹೋಗುತ್ತಿದ್ದಾಗ ಕುರುವಳ್ಳಿಯಲ್ಲಿ ಸ್ಥಳೀಯರು ಹಿಡಿದು ವಾಹನ ಸಮೇತ ಹಸುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಶುಂಠಿಕಟ್ಟೆಯಿಂದ – ಭದ್ರಾವತಿಗೆ ಹಸುವನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು ಯಾವುದೇ ದಾಖಲಾತಿ ಇರದ ಕಾರಣ ವಶಕ್ಕೆ ಪಡೆಯಲಾಗಿದೆ. ಯಾವ ಕಾರಣಕ್ಕೆ ಹಸು ಸಾಗಿಸಲಾಗುತ್ತಿತ್ತು ಎಂಬುದು ತಿಳಿದು ಬಂದಿಲ್ಲ. ದಾಖಲೆ ಇಲ್ಲದ ಕಾರಣ ಪ್ರಕರಣ ದಾಖಲಾಗುವ ಸಾಧ್ಯತೆ ಇದ್ದು ತೀರ್ಥಹಳ್ಳಿ…

Read Full News

ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ

ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ ಹೊಸನಗರ(Hosanagara) ತಾಲೂಕಿನ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ 25 ವರ್ಷದ ಯುವಕನಿಗೆ ಶಿವಮೊಗ್ಗ(shivamogga)ದ ಫಾಸ್ಟ್‌ಟ್ರ್ಯಾಕ್ ಸ್ಪೆಷಲ್ ಕೋರ್ಟ್‌ 20 ವರ್ಷಗಳ ಕಠಿಣ ಸಜೆ ವಿಧಿಸಿದೆ. ಹೊಸನಗರ ತಾಲೂಕು ಗ್ರಾಮ ಒಂದರಲ್ಲಿ 2022ರಲ್ಲಿ ಆರೋಪಿ ಯುವಕ ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.ಇದರಿಂದ ಬೇಸತ್ತ ಬಾಲಕಿ ಮನೆಯವರಿಗೆ ತಿಳಿಸಿದ್ದಳು. ಇದಾದ ಬಳಿಕ ಬಾಲಕಿ ಹೊಸನಗರ…

Read Full News

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ | Job News

ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ (Shivamogga) ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್‌ಪೇಟೆ, ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ,  ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ…

Read Full News

ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು | Crime News

ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ.  ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು.ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆ. ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು…

Read Full News

ಶಿವಮೊಗ್ಗದಲ್ಲಿ ರೌಡಿಗಳಿಂದ ಟ್ರಾಫಿಕ್ ಪೊಲೀಸರಿಗೇ ಕೊಲೆ ಬೆದರಿಕೆ – ಇಬ್ಬರ ಬಂಧನ | ವೀಡಿಯೋ ವೈರಲ್ SMG

ಸಾರ್ವಜನಿಕವಾಗಿ ರೌಡಿ ಪಟಾಲಂಗಳು ಶಿವಮೊಗ್ಗದಲ್ಲಿ ಮತ್ತೆ ಗರಿಬಿಚ್ಚಿದ್ದು, ಹಾಡಹಗಲೇ, ಅದರಲ್ಲೂ ಪೊಲೀಸ್ ಸಿಬ್ಭಂದಿ ಮೇಲೆ ಮರ್ಡರ್ ಬೆದರಿಕೆ, ಅವಾಚ್ಯವಾಗಿ ಬೈದು ಧಮ್ಕಿ ಹಾಕಿರುವ ಘಟನೆ ಸದ್ಯ ಮಲೆನಾಡಿನಲ್ಲಿ ಸಂಚಲನ ಮೂಡಿಸಿದೆ. ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರಿಗೇ ಅವಾಜ್ ಹಾಕಲಾಗಿದೆ. ನಟೋರಿಯಸ್ ಹಿನ್ನೆಲೆಯುಳ್ಳ ಪುಡಾರಿಗಳು, ಟ್ರಾಫಿಕ್ ಪೊಲೀಸರು ಹಿಡಿಯುತ್ತಾರೆ ಅಂತಾ ತಾವೇ ಬೈಕಿನಲ್ಲಿ ಬಿದ್ದು, ತಾವೇ ವಿಡಿಯೋ ಮಾಡಿ ತಗಲಾಕಿಕೊಂಡಿದ್ದಾರೆ. ಟ್ರಾಫಿಕ್ ಪೊಲೀಸ್ ಸಿಬ್ಭಂಧಿಗೆ ಪ್ರಾಣ ಬೆದರಿಕೆ ಒಡ್ಡಿರುವ ರೌಡಿ ಶೀಟರ್ ಗಳು, ತಮ್ಮ ಹುಡುಗರನ್ನು ಕರೆಸಿ, ಹಲ್ಲೆ ಮಾಡಲು…

Read Full News

ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕಾರ | GKB

ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕಾರ – ಆರ್ ಎಂಎಂ, ಕಿಮ್ಮನೆ, ಶ್ರೀಕಾಂತ್ ಸೇರಿ ಗಣ್ಯರ ಭೇಟಿ : ಶುಭಾಶಯ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರು ಶುಕ್ರವಾರ ಬೆಂಗಳೂರಿನ ಮಲ್ಲೇಶ್ವರಂ ವನವಿಕಾಸ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕಾಂಗ್ರೆಸ್ ಮುಖಂಡರಾದ ಬಿ.ಕೆ ಹರಿಪ್ರಸಾದ್, ಆಯನೂರು ಮಂಜುನಾಥ್, ಆರ್.ಎಂ.ಮಂಜುನಾಥ್ ಗೌಡರು, ನಟ ಶ್ರೀನಗರ ಕಿಟ್ಟಿ,…

Read Full News

ವಿವಾಹಿತ ಮಹಿಳೆಗೆ ಪದೇ ಪದೇ ಕಿರುಕುಳ ನೀಡುತಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ

ವಿವಾಹಿತ ಮಹಿಳೆಗೆ ಪದೇ ಪದೇ ಕಿರುಕುಳ ನೀಡುತಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಸಾಗರ – ವಿವಾಹಿತ ಮಹಿಳೆಗೆ ಕಿರುಕುಳ ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಆರೋಪಿಗೆ ಜೆಎಂಎಫ್‌ಸಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದ ಘಟನೆ ನಡೆದಿದೆ. ಸಮೀಪದ ಶಿರವಾಳ ಗ್ರಾಮದ ರತನ್ ಕುಮಾರ್ ಎಂಬಾತ ಮಹಿಳೆಗೆ 2013ರಿಂದ ನಿರಂತರ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದನು. 2021ರಲ್ಲಿ ಸಾಗರದಲ್ಲಿ ಅಡ್ಡಗಟ್ಟಿ ಹಲ್ಲೆ ಸಹ ನಡೆಸಿದ್ದನು. ಈ ಸಂಬಂಧ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಸಾಗರ ನಗರ ಠಾಣೆಯಲ್ಲಿ…

Read Full News

Ripponpete | ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ

ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ  ಫಲವತ್ತಾದ ಮಣ್ಣಿನಿಂದ ಉತ್ತಮ ಮತ್ತು ಆರೋಗ್ಯಕರ ಬೆಳೆ ಬೆಳೆಯಲು  ಸಾಧ್ಯ , ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರು ಡಾ. ಗಣಪತಿ ಹೇಳಿದರು. ರಿಪ್ಪನ್ ಪೇಟೆ  ಸಮೀಪದ ಗವಟೂರಿನ ರಾಮಚಂದ್ರರವರ ತೋಟದಲ್ಲಿ ರೋಟರಿ ಕ್ಲಬ್ ರಿಪನ್ ಪೇಟೆ  ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ…

Read Full News

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು – 24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು –  24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಮನೆಗೆ ನುಗ್ಗಿ ರೂ.4.65 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳನ್ನು 24 ಗಂಟೆಯೊಳಗೆ ಆಭರಣ ಸಹಿತ ನಗರ ಠಾಣೆ ಪಿಎಸ್‌ಐ ರಮೇಶ್ ಪಿ ಎಸ್ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ ನೂಲಿಗ್ಗೇರಿ ನಿವಾಸಿಗಳಾದ ಸುಹಾನ್ 21, ಅಶೋಕ 24, ಗಣೇಶ 30 ಬಂಧಿತ ಆರೋಪಿಗಳು. ನಡೆದಿದ್ದೇನು..?? ಬಿದನೂರಿನ ನೂಲಿಗ್ಗೇರಿ ನಿವಾಸಿ ರಾಜಮ್ಮ ಮನೆಯಲ್ಲಿರದ ವೇಳೆಯನ್ಬು…

Read Full News

Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ

Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ : ಕಳೆದ 40 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು. ಕುಗ್ರಾಮವಾದ ಕಲ್ಲೂರು ಗ್ರಾಮದ ಯುವಕ ಸೈನಿಕ ಸೇವೆಗಾಗಿ ಕಳೆದ…

Read Full News

Ripponpete | ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!

Ripponpete | ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪೊಲೀಸ್ ಪಿಎಸ್ ಐ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಬುಧವಾರ ರಾತ್ರಿ ಪಟ್ಟಣದ ಪಿಎಸ್ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ…

Read Full News

ಮದುವೆಯಾಗಿ ಒಂದು ತಿಂಗಳಲ್ಲೇ ಡ್ರೈವರ್ ಜತೆ ಓಡಿಹೋದ ಹೆಂಡತಿ – ಪತ್ನಿ ಹಾಗೂ ಪ್ರಿಯಕರನನ್ನು ಕೊಲೆಗೈದ ಪತಿರಾಯ | Crime News

ಮದುವೆಯಾಗಿ ಒಂದು ತಿಂಗಳಲ್ಲೇ ಡ್ರೈವರ್ ಜತೆ ಓಡಿಹೋದ ಹೆಂಡತಿ – ಪತ್ನಿ ಹಾಗೂ ಪ್ರಿಯಕರನನ್ನು ಕೊಲೆಗೈದ ಪತಿರಾಯ ಮದುವೆಯಾಗಿ ಕೇವಲ ಒಂದು ತಿಂಗಳಿಗೆ ಕೈಕೊಟ್ಟು ಓಡಿ ಹೋದ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಯಾಸಿನ ಬಾಗೊಡೆ (21) ಹಾಗೂ ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ಜೋಡಿಯಾಗಿದ್ದಾರೆ. ತೌಫಿಕ್ ಕ್ಯಾಡಿ (24) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇನ್ನು ಇಬ್ಬರ ಮೇಲೆ ಹಲ್ಲೆ…

Read Full News

SSLC ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ

2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿವೆ. ಇಲ್ಲಿದೆ ವೇಳಾಪಟ್ಟಿ 26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ 27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ 28 -02-2024 : ತೃತೀಯ ಭಾಷೆ-…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.