ಹೊಸನಗರ : ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ|Accident
ಮಂಗಳೂರಿನಿಂದ ಶಿವಮೊಗ್ಗದತ್ತ ಹೊರಟಿದ್ದ ಪೆಟ್ರೋಲ್ ಟ್ಯಾಂಕರ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಇಂದು ಸಂಜೆ ನಡೆದಿದೆ. ಬಿದನೂರು ನಗರದ ಶಾಂತಿಕೆರೆ ಸರ್ಕಲ್ ನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದ್ದು ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಹೊಸನಗರ – ನಗರ ರಸ್ತೆ ಸಂಚಾರ ವ್ಯತ್ಯಯವಾಗಿದ್ದು, ಸಾವಿರಾರು ಲೀಟರ್ ಪೆಟ್ರೋಲ್ ಸೋರಿಕೆಯಾಗಿದ್ದ ಹಿನ್ನಲೆಯಲ್ಲಿ ನಗರ ಪೊಲೀಸ್…