w
Headlines

Hosanagara | ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Hosanagara | ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಹೊಸನಗರ :  ಇಲ್ಲಿನ ಮಾವಿನಹೊಳೆ ಕ್ರಾಸ್ ನಲ್ಲಿ ಬೈಕ್ ಹಾಗೂ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರ ಹೊಂಬುಜ ಸಮೀಪದ ಗರ್ತಿಕೆರೆ ಮೂಲದವನೆಂದು…

Read Full News

Ripponpete | 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

Ripponpete | 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ   ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ  ಪ್ರೌಡ ಶಾಲೆಯೊಂದರಲ್ಲಿ 9ನೇ ತರಗತಿ ಓದುತಿದ್ದ 15 ವರ್ಷದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಹಾಲ್ ನಲ್ಲಿ ನೇಣು ಬಿಗಿದುಕೊಂಡು…

Read Full News

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು. ಅರಮನೆಕೊಪ್ಪ ಗ್ರಾಮದ ಬಪ್ಪನಮನೆಯ ಅನನ್ಯ(18) ಎಂಬ ಯುವತಿ ಮಂಗನ ಖಾಯಿಲೆಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ…

Read Full News

ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು |Shivamogga

ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ವಿದ್ಯುತ್ ಪ್ರವಹಿಸಿ ಬಾಲಕನ ಕೈ ಮತ್ತು ಕಾಲಿನ ಬೆರಳು ತುಂಡರಿಸುವ ಘಟನೆ ನಡೆದಿದೆ. ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ ಸಾವು ನೋವು ಸಂಭವಿಸಿದೆ. ಆದರೆ ಶಿವಮೊಗ್ಗದಲ್ಲಿ ನಡೆದ ಘಟನೆ ಎಂತವರ ಕಣ್ಣಲ್ಲೂ ನೀರು ತರಿಸುವಂತಿದೆ. ತಾಯಿ ಜೊತೆ ಗದ್ದೆಗೆ ಹೋಗಿದ್ದ ಬಾಲಕನು ವಿದ್ಯುತ್…

Read Full News

Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ

Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ ರಿಪ್ಪನ್‌ಪೇಟೆ : ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ್ ರವರ ನೇತ್ರತ್ವದಲ್ಲಿ ದಾಳಿ ನಡೆಸಿ ಜ್ಯೋತಿಷಿಗಳು ಬಳಸುತ್ತಿದ್ದ ಗುಲಾಬಿ ಉಂಗುರದ ಗಿಳಿ(Rose-ringed parakeet)ಹಿಡಿದು ರಕ್ಷಿಸಿದ್ದಾರೆ.  ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಮಧ್ಯಾಹ್ನ ಅಳಿವಂಚಿನಲ್ಲಿರುವ ಗುಲಾಬಿ ಉಂಗುರದ ಗಿಳಿ (Rose-ringed parakeet) ನ್ನು ಬಳಸಿ…

Read Full News

SAGARA | ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ

SAGARA | ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ ಶ್ವಾನ ಪ್ರದರ್ಶನದ ವೇಳೆಯಲ್ಲಿ ಪ್ರೇಕ್ಷಕದ ಮೇಲೆ ರಾಟ್ ವೀಲರ್  ನಾಯಿಯು ಮನಸೋ ಇಚ್ಛೆ ದಾಳಿ ನಡೆಸಿರುವ ಘಟನೆ ನಡೆದಿದೆ. ಈ ವೇಳೆ ಗಂಭೀರವಾಗಿ ಗಾಯ ಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದ ಘಟನೆ ಯಾಗಿದೆ. ರಾಟ್ ವಿಲರ್ ಜಾತಿಯ ನಾಯಿಯಿಂದ…

Read Full News

ಮಂಗನ ಖಾಯಿಲೆಗೆ(KFD) ಹೊಸನಗರ ತಾಲೂಕಿನ 18 ವರ್ಷದ ಯುವತಿ ಬಲಿ

ಮಂಗನ ಖಾಯಿಲೆಗೆ ಹೊಸನಗರ ತಾಲೂಕಿನ 18 ವರ್ಷದ ಯುವತಿ ಬಲಿ  ಮಂಗನ ಕಾಯಿಲೆ (ಕೆಎಫ್‌ಡಿ) ಯುವತಿಯೊಬ್ಬಳನ್ನು ಬಲಿ ಪಡೆದಿದ್ದು ರಾಜ್ಯದಲ್ಲೇ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಬಪ್ಪನಮನೆ ಗ್ರಾಮದ ಅನನ್ಯ (18) ಕೆಎಫ್‌ಡಿಗೆ ಬಲಿಯಾದ ಯುವತಿ. ಈಕೆ ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ನಗರ, ಹೊಸನಗರ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಜ್ವರ ಉಲ್ಬಣಗೊಂಡಿದ್ದರಿಂದ ಕೆಎಫ್‌ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್‌ನಲ್ಲಿ ನೆಗೆಟಿವ್, ಎರಡನೇ ಬಾರಿ ಆರ್‌ಟಿಸಿಪಿಆರ್…

Read Full News

SAGARA | ಪ್ರೇಮವಿವಾಹ ದುರಂತ ಅಂತ್ಯ | ವಿಷ ಸೇವಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ದ ಕೇಸ್

SAGARA | ಪ್ರೇಮವಿವಾಹ ದುರಂತ ಅಂತ್ಯ | ವಿಷ ಸೇವಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪೊಲೀಸ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ದ ಕೇಸ್ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ : ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಕೆಳದಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಮೃತ ಶಾಲಿನಿ (33) ಹಾಗೂ ಜಯರಾಮ್ ದಂಪತಿವಾಸಿಸುತ್ತಿದ್ದರು.  ಈ ನಡುವೆ ಇಬ್ಬರ ನಡುವೆ ಮನಸ್ತಾಪ ಬಂದಿದ್ದು, ಇದೀಗ ಅನುಮಾನಸ್ಪದ ರೀತಿಯಲ್ಲಿ…

Read Full News

Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ

Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶಿವಮೊಗ್ಗ ಜಿಲ್ಲೆಯ ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಆ ನಂತರ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದಿಂದ ನೆಲದಲ್ಲಿ ಕೂರಬಾರದು…

Read Full News

ಮಗನೊಂದಿಗೆ ಸೇರಿಕೊಂಡು ಪತಿಯನ್ನು ಕೊಂದ ಪತ್ನಿ – ಅಸ್ವಾಭಾವಿಕ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | Crime News

ಮಗನೊಂದಿಗೆ ಸೇರಿಕೊಂಡು ಪತಿಯನ್ನು ಕೊಂದ ಪತ್ನಿ – ಅಸ್ವಾಭಾವಿಕ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಸೀಗೆಬಾಗಿಯ ಈಶ್ವರ ದೇವಸ್ಥಾನದ ಬಳಿ ಇತ್ತೀಚೆಗೆ ಅಪರಿಚಿತ ಮೃತ ದೇಹವೊಂದು ಪತ್ತೆಯಾಗಿದ್ದು ಈ ಪ್ರಕರಣ ಈಗ ತಿರುವು ಪಡೆದುಕೊಂಡಿದೆ. ಪತ್ನಿ ಮತ್ತು ಪುತ್ರನಿಂದಲೇ ತಂದೆಯ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಘಟನೆಯ ಹಿನ್ನಲೆ : ಸೊರಬ ತಾಲೂಕಿನ ಯಲವಾಲ ಗ್ರಾಮದ ನಿವಾಸಿಯಾಗಿದ್ದ ಮೌನೇಶಪ್ಪ(50) ಎರಡು ಮದುವೆಯಾಗಿದ್ದರು. ಮೊದಲನೇ ಪತ್ನಿ ಮಂಜುಳಾರವರ ಜೊತೆಗಿದ್ದ ಮೌನೇಶಪ್ಪ ಬ್ಯಾಡಗಿ ತಾಲೂಕಿನ ಮಸಣಗಿಯಲ್ಲಿ…

Read Full News

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ | CEO

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ ಅಕ್ರಮವಾಗಿ ಮಣ್ಣು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪ ಸಂಬಂಧ ವರದಿ ಕೇಳಿದರೂ, ವರದಿ ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್‌ ಲೇಖಂಡೆ ಸುಧಾಕರ್ ವಿಳಂಬ ಮಾಡಿದ್ದಾರೆ ಎಂದು ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮುದ್ದಣ್ಣನ ಕೆರೆಯಿಂದ 500 ಲೋಡು ಮಣ್ಣು ತೆಗೆಯಲು ಅನುಮತಿ ನೀಡಲಾಗಿತ್ತು. ಆದರೆ, ಕಾನೂನು ಬಾಹಿರವಾಗಿ 15,004 ಲೋಡ್ ಮಣ್ಣನ್ನು ತೆಗೆಯಲಾಗಿದೆ. ಇದರಿಂದ…

Read Full News

ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಕಾಡುಕೋಣ ಸಾವು | Soraba

ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಕಾಡುಕೋಣ ಸಾವು |  ಕೃಷಿ ಹೊಂಡದಲ್ಲಿ ಕಾಡುಕೋಣ ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಅಂದವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇಣುಕಮ್ಮ ಕೃಷ್ಣಪ್ಪ ಎಂಬವರ ಜಮೀನಿನ ಕೃಷಿ ಹೊಂಡದಲ್ಲಿ ಕಳೆದ ಗುರುವಾರ ರಾತ್ರಿ ನೀರು ಕುಡಿಯಲು ಬಂದ ಸಂದರ್ಭದಲ್ಲಿ  ಕಾಡುಕೋಣ ಕೃಷಿ ಹೊಂಡಕ್ಕೆ ಬಿದ್ದಿದೆ ಎನ್ನಲಾಗುತ್ತಿದೆ. ಇನ್ನೂ ಕೃಷಿ ಹೊಂಡದಲ್ಲಿ ಸುಮಾರು 10 ಅಡಿ ಆಳದಷ್ಟು ನೀರು ತುಂಬಿದ್ದರಿಂದ ಕಾಡುಕೋಣ ಅಲ್ಲಿಯೇ ಸಾವನ್ನಪ್ಪಿದೆ.  ಶುಕ್ರವಾರ ಮನೆಯವರು…

Read Full News

ಹೊಸನಗರ ತಾಲೂಕಿನ ಯುವತಿಗೆ ಕೆಎಫ಼್ ಡಿ(KFD) ಪಾಸಿಟಿವ್, ಸ್ಥಿತಿ ಗಂಭೀರ – ಮಣಿಪಾಲ್ ಗೆ ರವಾನೆ

ಹೊಸನಗರ ತಾಲೂಕಿನ ಯುವತಿಗೆ ಕೆಎಫ಼್ ಡಿ(KFD) ಪಾಸಿಟಿವ್, ಸ್ಥಿತಿ ಗಂಭೀರ – ಮಣಿಪಾಲ್ ಗೆ ರವಾನೆ ಹೊಸನಗರ ತಾಲೂಕಿನ 18 ವರ್ಷದ ಯುವತಿಗೆ ಕೆಎಫ್‌ಡಿ (ಮಂಗನ ಕಾಯಿಲೆ) ಪಾಸಿಟಿವ್ ಬಂದಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತಾಲೂಕಿನ ಅರಮನೆಕೊಪ್ಪದ ಗ್ರಾಮದ ವ್ಯಾಪ್ತಿಯ ಯುವತಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಕೆಎಫ್‌ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್‌ನಲ್ಲಿ ನೆಗೆಟಿವ್, ಎರಡನೇ ಬಾರಿ ಆರ್‌ಟಿಸಿಪಿಆರ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ಮೂರು ದಿನಗಳ ಕಾಲ ಮೆಗ್ಗಾನ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು ಶುಕ್ರವಾರ…

Read Full News

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೂವರಿಗೆ ಡಿಕ್ಕಿಯಾಗಿ ಲೈಟ್​ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತುಂಡಾದ ಲೈಟ್ ಕಂಬ ಕಾರಿನ ಮೇಲೇಯೆ ಬಿದ್ದಿದೆ.  ಸಾಗರ ತಾಲ್ಲೂಕಿನ ಆನಂದಪುರದ ಹೊಸೂರು ಸಮೀಪ ಈ ಘಟನೆ ಸಂಭವಿಸಿದೆ. ಶಿರಸಿ ಕಡೆಗೆ ಹೋಗುವವರು ಕಾರಿನಲ್ಲಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು. ಈ ವೇಳೆ ಹೊಸೂರು ಸಮೀಪ ಕಾರು ಅಪ್​ಸೆಟ್ ಆಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು…

Read Full News

SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ‌ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್

SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ‌ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್  ಸಾಗರ:  ರೈತ ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದಿಂದ ನಕಲಿ ಚೆಕ್ ಮೂಲಕ 4.25 ಕ್ವಿಂಟಾಲ್ ಕಾಳು ಮೆಣಸು ಖರೀದಿಸಿ, ಬೇರೆಯವರಿಗೆ ಮಾರಾಟ ಮಾಡಲು ಮುಂದಾಗಿದ್ದ ವಿದ್ಯಾವಂತ ಕಳ್ಳರನ್ನು ಪೇಟೆ ಠಾಣೆ ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಅಕ್ಷಯ್, ಹರ್ಷಿತ್, ಕುಮಾರ್,  ಅಭಿನಂದನ ರನ್ನು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಉನ್ನತ ವ್ಯಾಸಂಗ ಮಾಡಿದವರಾಗಿದ್ದಾರೆ. ಆರೋಪಿತರಿಂದ 2.76…

Read Full News

ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಕಾರ್ಯವೈಖರಿಗೆ ಪೊಲೀಸ್ ಇಲಾಖೆಯಿಂದ ಪ್ರಶಂಸನಾ ಪತ್ರ | PSI

ರಿಪ್ಪನ್‌ಪೇಟೆ : ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರ ಕಾರ್ಯವೈಖರಿ ಹಾಗೂ ಶೀಘ್ರ ಕಡತ ವಿಲೇವಾರಿಯನ್ನು ಮೆಚ್ಚಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಸನಾ ಪತ್ರ ವಿತರಿಸಲಾಗಿದೆ. ಶುಕ್ರವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಇಲಾಖಾ ಕರ್ತವ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಆರ್ ಹಿತೇಂದ್ರ IPS  ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಬೆಂಗಳೂರು ಅವರು ಪ್ರಶಂಸನಾ ಪತ್ರ ವಿತರಿಸಿದರು. ರಿಪ್ಪನ್‌ಪೇಟೆ ಪಿಎಸ್‌ಐ…

Read Full News

Ripponpete | ಬರುವೆ ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟವಾ..!!??

Ripponpete | ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಶಾಲೆ ಆವರಣದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಾಟರ್ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಕಳಪೆಯಾಗಿದ್ದು ಮುಂದಿನ ದಿನಗಳಲ್ಲಿ ಭಾರಿ ಅನಾಹುತಕ್ಕೆ ಎಡೆ ಮಾಡಿಕೊಡಲಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ಅಭಿಪ್ರಾಯ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಜಲಶಕ್ತಿ ಮಂತ್ರಾಲಯವು ಜಲಜೀವನ್ ಮಿಷನ್‌ ಅಡಿಯಲ್ಲಿ ಅನುಷ್ಠಾನಕ್ಕೆ ತಂದ ಮನೆ ಮನೆ ಗಂಗೆ (ಹರ್‌ ಘರ್‌ ಜಲ್‌) ಯೋಜನೆಯು ಪಟ್ಟಣದಲ್ಲಿ ಗ್ರಾಪಂ…

Read Full News

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ 500 ಕ್ಕೂ ಅಧಿಕ ಕೆಪಿಎಸ್ ಶಾಲೆ ತೆರೆಯಲು ಚಿಂತನೆ – ಮಧು ಬಂಗಾರಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ನಡ ಪಠ್ಯದೊಂದಿಗೆ ಇಂಗ್ಲಿಷ್ ಬೋಧನೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಗೆ ಪ್ರಗತಿಗೆ ಕಾರಣವಾಗುವುದೆಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.     ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ “ಕರ್ನಾಟಕ ಪಬ್ಲಿಕ್ ಸ್ಕೂಲ್’’ನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಎಲ್.ಕೆ.ಜಿ. ಯು.ಕೆ.ಜಿ.ಯಿಂದ…

Read Full News

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಪ್ರಥಮ ಬಾರಿಗೆ ರಿಪ್ಪನ್‌ಪೇಟೆಗೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ | Ripponpete

ರಿಪ್ಪನ್‌ಪೇಟೆ: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಪ್ರಥಮ ಬಾರಿ ರಿಪ್ಪನ್‌ಪೇಟೆಗೆ ಭೇಟಿ ನೀಡಿದ ಹರತಾಳು ಹಾಲಪ್ಪನವರಿಗೆ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿ ಅಭಿನಂದಿಸಿದರು. ನಂತರ ಬಿಜೆಪಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು ಅಮೃತ ಮಹೋತ್ಸವ ಆಚರಣೆಯ ವರ್ಷದ ಸಂದರ್ಭದಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರತದ ಬಾವುಟವನ್ನು ಮನೆಮನೆಗಳಲ್ಲಿ ಹಾರಿಸುವ ಮೂಲಕ ಪಕ್ಷದ ಗಮನಸೆಳೆದಿರುವುದರೊಂದಿಗೆ ಬಿಜೆಪಿ ಬೂತ್ ಮಟ್ದದ ಅಧ್ಯಕ್ಷರ ಮನೆಗೆ ಭೇಟಿ ನೀಡಿ ನಾಮಫಲಕವನ್ನು ಅಳವಡಿಸಿದ ಪರಿಣಾಮದಿಂದಾಗಿ ರಾಷ್ಟ್ರೀಯ ಬಿಜೆಪಿ ನಾಯಕರು…

Read Full News

ಇನ್ನೂ ಮುಂದೆ “ರಕ್ತ ಮಾರಾಟಕ್ಕಿಲ್ಲ” | ಸಂಸ್ಕರಣಾ ಶುಲ್ಕ ಹೊರತುಪಡಿಸಿ ಉಳಿದೆಲ್ಲಾ ಶುಲ್ಕ ಮನ್ನಾ – ಕೇಂದ್ರ ಸರ್ಕಾರದ ಮಹತ್ವದ ಕ್ರಮ GOOD NEWS

ಇನ್ನೂ ಮುಂದೆ “ರಕ್ತ ಮಾರಾಟಕ್ಕಿಲ್ಲ” | ಸಂಸ್ಕರಣಾ ಶುಲ್ಕ ಹೊರತುಪಡಿಸಿ ಉಳಿದೆಲ್ಲಾ ಶುಲ್ಕ ಮನ್ನಾ – ಕೇಂದ್ರ ಸರ್ಕಾರ ಮಹತ್ವದ ಕ್ರಮ ಆಸ್ಪತ್ರೆಗಳು ಮತ್ತು ಖಾಸಗಿ ರಕ್ತ ಬ್ಯಾಂಕುಗಳಲ್ಲಿ ರಕ್ತಕ್ಕೆ ಹೆಚ್ಚಿನ ಶುಲ್ಕ ವಿಧಿಸುವ ತೊಂದರೆಯನ್ನ ಪರಿಹರಿಸಲು, ಸಂಸ್ಕರಣಾ ಶುಲ್ಕವನ್ನ ಹೊರತುಪಡಿಸಿ ಎಲ್ಲಾ ಶುಲ್ಕಗಳನ್ನ ಕೇಂದ್ರ ಸರ್ಕಾರ ಮನ್ನಾ ಮಾಡಿದೆ. “ರಕ್ತವು ಮಾರಾಟಕ್ಕಿಲ್ಲ” ಎಂಬ ಆಧಾರದ ಮೇಲೆ ಈ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ, ಇದರ ಆಧಾರದ ಮೇಲೆ ಆರೋಗ್ಯ ನಿಯಂತ್ರಕವು ಭಾರತದಾದ್ಯಂತ ರಕ್ತ ವಿತರಣೆಯನ್ನ ಹೊರತುಪಡಿಸಿ ಎಲ್ಲಾ ಶುಲ್ಕಗಳನ್ನ…

Read Full News

HOSANAGARA | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್

ಹೊಸನಗರದಲ್ಲಿ 10ನೇ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್ ಹೊಸನಗರ: ಮಕ್ಕಳಲ್ಲಿ ಹುದುಗಿರುವ ಅಮೂಲ್ಯವಾದ ಸಾಹಿತ್ಯ ಶಕ್ತಿಯನ್ನು ವೃದ್ಧಿಪನಗೊಳಿಸಿ ಮಕ್ಕಳನ್ನು ಕೂಡ ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ಎಂದು 10ನೇ ತರಗತಿಯ ವಿದ್ಯಾರ್ಥಿ ಅರ್ಜುನ್‌ರಾಜ್‌ರವರು ಹೇಳಿದರು. ಪಟ್ಟಣದ ಹೊರವಲಯದ ಮಾವಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತೀಕ ವೇದಿಕೆ ಕನ್ನಡ ಸಾಹಿತ್ಯ ಪರಿಷತ್, ತಾಲ್ಲೂಕು…

Read Full News

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..??

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..?? ತನ್ನ ಪತ್ನಿಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಡೈವೋರ್ಸ್ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಘಟನೆ ಸಂಬಂಧ ಆರೋಪಿ ಬೆಳಗಾವಿಯ ಕಿರಣ್ ಪಾಟೀಲ್ ಎಂಬಾತನನ್ನು ಬಂಧಿಸಲಾಗಿದೆ. ಪತ್ನಿ ಬುದ್ಧಿ ಹೇಳಿದರೂ ಕೇಳ ಪತಿ. ಡೈವೋರ್ಸ್‌ ಗಾಗಿ ಪತ್ನಿ ಅಶ್ಲೀಲ್ ವಿಡಿಯೋ ಮಾಡಿಕೊಂಡಿರುವ ವಿಕೃತ ಪತಿರಾಯ. ಪತ್ನಿಯೊಂದಿಗೆ ಏಕಾಂತದಲ್ಲಿದ್ದಾಗಿನ ಫೋಟೊ ವಿಡಿಯೋಗಳು ರೆಕಾರ್ಡ್. ಅಶ್ಲೀಲ ವಿಡಿಯೋ ಇಟ್ಟುಕೊಂಡು…

Read Full News

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನವನ್ನು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಗಿಳಾಲಗುಂಡಿ ಸಮೀಪದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್​ ಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ಧಾರಿ ಬದಿಗೆ ಬಸ್ ಇಳಿದಿದ್ದು , ಗೂಡ್ಸ್ ವಾಹನವು ಜಖಂ ಆಗಿದೆ. ಇಲ್ಲಿನ ಕೋಣೆಹೊಸೂರು ಹಾಗೂ ಗಿಳಾಲಗುಂಡಿ ನಡುವೆ ಇಂದು ಬೆಳಗ್ಗೆ ಈ…

Read Full News

HOSANAGARA | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಾಗರದ ಚಂದ್ರು ಎಂಬಾತನಿಗೆ ಸೇರಿದ(KA 19 AB 9021) ಮತ್ತು…

Read Full News

Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ

Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ ರಿಪ್ಪನ್‌ಪೇಟೆ : ನಂದಗೋಕುಲ ಗೋಶಾಲೆ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಹೊಸನಗರದಲ್ಲಿರುವ ಗೋಶಾಲೆಗೆ ಪಟ್ಟಣದ ಬಜರಂಗದಳ ಘಟಕದ ವತಿಯಿಂದ ಉಚಿತ ಮೇವು ಸಂಗ್ರಹ ಅಭಿಯಾನ ನಡೆಯಿತು. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮಸ್ಥರು ಸುಮಾರು 100 ಕ್ಕೂ ಹೆಚ್ಚು ಹೊರೆ ಹುಲ್ಲನ್ನು ನೀಡುವ ಮೂಲಕ ಈ ಮೇವು ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.ಈ ಮೂಲಕ ಮೇವುಗಳನ್ನು ಹೊಸನಗರದ ರಮಿತ್ ನೇತ್ರತ್ವದ ಗೋಶಾಲೆಗೆ ಕಳುಹಿಸಿಕೊಡಲಾಗಿದೆ. ಈ…

Read Full News

ಜ.5ಕ್ಕೆ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಹೊಸನಗರ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಯಕ್ಷರತ್ನ ನಗರ ಜಗನ್ನಾಥಶೆಟ್ಟಿ ವೇದಿಕೆ ಶ್ರೀ ವ್ಯಾಸ ಮಹರ್ಷಿ ಗುರುಕುಲ ವಿದ್ಯಾಲಯದ ಆವರಣ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಲನವನ್ನು ಅರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ತ.ಮ.ನರಸಿಂಹ ಹೇಳಿದರು. ಪಟ್ಟಣದ ಶೀತಲ್ ಹೋಟೆಲ್ ಆವರಣದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ, ಈ ಕಾರ್ಯಕ್ರಮ ಜ.5ರ ಬೆಳಿಗ್ಗೆ 9 ಗಂಟೆಗೆ ಹೊಸನಗರ ತಹಶೀಲ್ದಾರ್ ರಶ್ಮಿಯವರು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದು ನಾಡಧ್ವಜವನ್ನು ಕ.ಸಾ.ಪ. ಜಿಲ್ಲಾಧ್ಯಕ್ಷರಾದ ಡಿ….

Read Full News

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ..!! Crime News

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ! ತೀರ್ಥಹಳ್ಳಿ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಡಿ.31ರಂದು ಎನ್.ಆರ್.ಪುರ. ತಾಲೂಕು ಕಣಿವೆ ಬಳಿ ಪತ್ತೆಯಾಗಿದೆ.  ತೀರ್ಥಹಳ್ಳಿ ತಾಲೂಕು ಕೂಡಿಗೆ ಗ್ರಾಮದ ಗೋಪಾಲ್ ಮೃತ ವ್ಯಕ್ತಿಯಾಗಿದ್ದಾರೆ. ಹಲವು ವರ್ಷಗಳ ಕಾಲ ಬಾಂಬೆಯಲ್ಲಿದ್ದು ಬಳಿಕ ಜಮೀನು ಮಾಡಿಕೊಂಡು ಊರಲ್ಲಿ ಇದ್ದರು. 3 ತಿಂಗಳು ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಶವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವ ಸಂಪೂರ್ಣ ಕೊಳೆತು…

Read Full News

Ripponpete | ಪ್ರಸ್ತುತ ಸನ್ನಿವೇಶದಲ್ಲಿ ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ

ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ : ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ರಿಪ್ಪನ್‌ಪೇಟೆ : ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ,ಹಾಗೇಯೆ ಏಡ್ಸ್ ಹರಡುವ ವಿಧಾನಗಳು,ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಚಿಕಿತ್ಸೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್ ಕ್ಲಬ್,  ಯುವ ರೆಡ್ ಕ್ರಾಸ್ ಘಟಕ, ತಾಲೂಕು ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಪ್ರಾಥಮಿಕ ಆರೋಗ್ಯ…

Read Full News

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸ್ವಕ್ಷೇತ್ರಕ್ಕೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ| haratalu halappa

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸ್ವಕ್ಷೇತ್ರಕ್ಕೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ ಆನಂದಪುರ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕವಾಗಿ ಆನಂದಪುರಕ್ಕೆ ಆಗಮಿಸಿದ ಮಾಜಿ ಸಚಿವ ಹರತಾಳು ಹಾಲಪ್ಪನವರಿಗೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತ ಕೋರಿದರು. ಆನಂದಪುರ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಪಕ್ಷದ ಕಾರ್ಯಕರ್ತರು ಕಾರ್ಯಕರ್ತರು ವಿಜಯೇಂದ್ರ, ಯಡಿಯೂರಪ್ಪ ಹಾಗೂ ಹರತಾಳು ಹಾಲಪ್ಪ ರವರ ಘೋಷಣೆಗಳನ್ನು ಕೂಗಿದರು. ಈ ಸಂಧರ್ಭದಲ್ಲಿ ಮಾತನಾಡಿದ ಹರತಾಳು ಹಾಲಪ್ಪ ಮೋದಿ…

Read Full News

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕರಿಂದ ಸನ್ಮಾನ

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕರಿಂದ ಸನ್ಮಾನ ರಿಪ್ಪನ್‌ಪೇಟೆ : ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿ ಗೌರವಿಸಿದರು. ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ನಾಲ್ವರು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠದ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಹಾಗೂ 14 ವರ್ಷ ವಯೋಮಿತಿಯ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರಮವಾಗಿ ಪ್ರಥಮ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.