Headlines

ಸಿದ್ದರಾಮಯ್ಯ ಬಜೆಟ್ ನಲ್ಲಿ ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದೇನು .?? ಇಲ್ಲಿದೆ ಮಾಹಿತಿ | Budget

ಸಿದ್ದರಾಮಯ್ಯ ಬಜೆಟ್ ನಲ್ಲಿ ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದೇನು .?? ಇಲ್ಲಿದೆ ಮಾಹಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಹಲವು ಯೋಜನೆಗಳನ್ನ ಘೋಷಿಸಲಾಗಿದೆ. ಆಹಾರ ಪಾರ್ಕ್, IPHL ಪ್ರಯೋಗಾಲಯ, ಶಿವಮೊಗ್ಗ-ಬೊಮ್ಮನ್ ಕಟ್ಟೆ ರಸ್ತೆಯಲ್ಲಿ ರೈಲು ಮೇಲು-ಕೆಳ ಸೇತುವೆ,  ತಾರಾಲಾಯ/ವಿಜ್ಞಾನ ಕೇಂದ್ರ‌‌ ಸ್ಥಾಪನೆ, ಹೈಸೆಕ್ಯೂರಿಟಿ ಕಾರಾಗೃಹ ನಿರ್ಮಾಣದ ಘೋಷಣೆಯನ್ನ ಮಾಡಲಾಗಿದೆ. 1. ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ…

Read More

Ripponpete | ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ದಿಗೆ ಶ್ರಮಿಸಬೇಕು – ಪಿಎಸ್‌ಐ ಪ್ರವೀಣ್ ಎಸ್ ಪಿ

ರಿಪ್ಪನ್‌ಪೇಟೆ : ಸರ್ಕಾರಿ ಕನ್ನಡ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘವನ್ನು ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಿಪ್ಪನ್ ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಕರೆ ನೀಡಿದರು. ರಿಪ್ಪನ್‌ಪೇಟೆ ಪಟ್ಟಣದ ಹಳೇ ಸಂತೆ ಮಾರುಕಟ್ಟೆ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗ ಆಯೋಜಿಸಿದ್ದ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣ ಬಣ್ಣ  ಅಭಿಯಾನ” ಕ್ಕೆ ಚಾಲನೆ ನೀಡಿ, ಶ್ರಮದಾನ ನೆರವೇರಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಮೂಲ…

Read More

ರೈಲಿಗೆ ಸಿಲುಕಿ ಮಹಿಳೆ ಸಾವು

ರೈಲಿಗೆ ಸಿಲುಕಿ ಮಹಿಳೆ ಸಾವು ರೈಲಿಗೆ ಸಿಲುಕಿ ಮಹಿಳೆಯೊಬ್ಬರುಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಬಿ.ಪಿ.ಕಮಲಾ (35) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ಕಮಲಾ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು

Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಂದಾಸುರದಲ್ಲಿ ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಅಂದಾಸುರದ ಶಿಲ್ಪ (40) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮನೆಯ ಮುಂಭಾಗದ ನೀರಿನ ಟ್ಯಾಂಕ್ ನಿಂದ ನೀರು ತುಂಬಿಸಿಕೊಂಡು ಬರುತಿದ್ದಾಗ ಚಾಲಕನ ಅಜಾಗರೂಕತೆಯಿಂದ ಅತೀ ವೇಗದಿಂದ ವಾಹನ ಚಲಾಯಿಸಿಕೊಂಡು ಬಂದು ಮಹಿಳೆಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಶಿಲ್ಪಳಿಗೆ ಡಿಕ್ಕಿಯಾದ ಟಿಪ್ಪರ್ ವಾಹನ 200 ಮೀಟರ್ ಅಷ್ಟು…

Read More

ಭಾರಿ ಮಳೆಗೆ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಕುಸಿದು ಬಿದ್ದ ಮನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶೈಲಜಾ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯ ಮಳವಳ್ಳಿ ಚಂದ್ರಶೇಖರ್ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

Read More

Ripponpete | ರಜತ ಉತ್ಸವದ ಗಣಪತಿ ಮೂರ್ತಿ ಸಿದ್ದಿವಿನಾಯಕ ದೇವಸ್ಥಾನಕ್ಕೆ ಸಮರ್ಪಣೆ

Ripponpete | ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ  ರಿಪ್ಪನ್‌ಪೇಟೆ : ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ ದೀಪಾ ಎಸ್.ಹೆಬ್ಬಾರ್, ಹೆಚ್.ಎಸ್.ಸುದೀಂದ್ರಹೆಬ್ಬಾರ್ ಮತ್ತು ಸಹೋದರಿಯರು ರಜತ ಉತ್ಸವದ ಗಣಪತಿ ಮೂರ್ತಿಯನ್ನು’ ದೇವಸ್ಥಾನಕ್ಕೆ ಇಂದು ಮೆರವಣಿಗೆಯ ಮೂಲಕ ತರುವುದರೊಂದಿಗೆ ಸಮರ್ಪಿಸಿದರು. ಚಂಡೆ ವಾದ್ಯಮೇಳದೊಂದಿಗೆ ಶಿವಮೊಗ್ಗ ರಸ್ತೆಯಲ್ಲಿರುವ ಮನೆಯಿಂದ ರಜತ ಉತ್ಸವ ಮೂರ್ತಿಯನ್ನು ಹೆಚ್.ಎಸ್ ಸುದೀಂದ್ರ ಹೆಬ್ಬಾರ್ ಹೊತ್ತು ಮೆರವಣಿಗೆ ಮೂಲಕ ಸಿದ್ದಿವಿನಾಯಕ ದೇವಸ್ಥಾನಕ್ಕೆ…

Read More

ರಿಪ್ಪನ್‌ಪೇಟೆ : ಪಾದಚಾರಿಗೆ ಬೈಕ್ ಡಿಕ್ಕಿ – ಗಂಭೀರ ಗಾಯಗೊಂಡ ಪಾದಚಾರಿ ಮೆಗ್ಗಾನ್ ಗೆ ದಾಖಲು |Accident

ರಿಪ್ಪನ್‌ಪೇಟೆ : ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಪಟ್ಟಣದ ವಿನಾಯಕನಗರದ ಬಾಲಕಿಯರ ಹಾಸ್ಟೆಲ್ ಮುಂಭಾಗದಲ್ಲಿ ನಡೆದಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್ (34) ಗಂಭೀರ ಗಾಯಗೊಂಡಿದ್ದಾರೆ. ವಿನಾಯಕನಗರದಿಂದ ರಿಪ್ಪನ್‌ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ರಿಪ್ಪನ್‌ಪೇಟೆ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಡಗಾಲು ಮುರಿದಿದ್ದು ,ತಲೆ ಹಾಗೂ ಎಡಪಕ್ಕೆಗೆ ತೀವ್ರತರವಾದ ಪೆಟ್ಟಾಗಿದ್ದು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್…

Read More

ತರಗತಿಗೆ ಹಾಜರಾಗದೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು : ದೂರು ದಾಖಲು |Exams

ಸಾಗರ : ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಡಾ. ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ತರಗತಿಗೆ ಹಾಜರಾಗದೆ ಬಿಎಡ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ತನಿಖೆ ನಡೆಸುವಂತೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಥಮ ಸೆಮಿಸ್ಟರ್ ನಲ್ಲಿ 37, 2ನೇ ವರ್ಷದಲ್ಲಿ 27 ವಿದ್ಯಾರ್ಥಿಗಳು ಬಿಎಡ್ ತರಗತಿಗೆ ಹಾಜರಾಗದೆ ಪರೀಕ್ಷೆ ಬರೆದಿದ್ದು, ತನಿಖೆ ನಡೆಸುವಂತೆ ಪ್ರತಿಷ್ಠಾನದ ಕೋಶಾಧ್ಯಕ್ಷ ಕವಲಕೊಡು ವೆಂಕಟೇಶ್ ದೂರು ನೀಡಿದ್ದಾರೆ. ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಕೆಲವರು…

Read More

ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ

ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ ಹೊಳೆಹೊನ್ನೂರು ಜಂಕ್ಷನ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಟಿವಿಎಸ್ ಎಕ್ಸ ಎಲ್ ಸವಾರ ಮೃತಪಟ್ಟು ಹಿಂಬದಿ ಕುಳಿತಿದ್ದ ಮಹಿಳೆಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ನಡೆದಿದೆ.ಈ ಅಪಘಾತಕ್ಕೆ ಅವೈಜ್ಞಾನಿಕ ರಸ್ತೆಯೇ ಕಾರಣ ಎಂದು ಆರೋಪಿಸಿ ಸ್ಥಳದಲ್ಲಿ ನೆರೆದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಪುಟ್ಟಪ್ಪ ಎಂಬ ವ್ಯಕ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹೊಳೆಹೊನ್ನೂರಿನಿಂದ ಶಿವಮೊಗ್ಗಕ್ಕೆ ತೆರಳುವ ನೂತನ ರಸ್ತೆಯಲ್ಲಿ ಅಶೋಕ್ ಲೈಲ್ಯಾಂಡ್…

Read More

ರಿಪ್ಪನ್‌ಪೇಟೆ : ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಾರದಾ ರಾಮಕೃಷ್ಣ ವಿದ್ಯಾ ಶಾಲೆಯ ಮಕ್ಕಳ ಉತ್ತಮ ಸಾಧನೆ

ರಿಪ್ಪನ್ ಪೇಟೆ : ಇಲ್ಲಿನ ಶಾರದಾ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ರಿಪ್ಪನ್ ಪೇಟೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಿಲೇ ಸ್ಪರ್ಧೆಯಲ್ಲಿ ಬಾಲಕ ಬಾಲಕಿಯರು ದ್ವಿತೀಯ ಹಾಗು ತೃತೀಯ ಸ್ಥಾನವನ್ನು ಪಡೆಯುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 1500 ಹಾಗೂ 800 ಮೀಟರ್ ಓಟದಲ್ಲಿ…

Read More