ಡಿನೋಟಿಫಿಕೇಷನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಅತಂತ್ರಗೊಂಡ ಶರಾವತಿ ಮುಳುಗಡೆ ಸಂತ್ರಸ್ತರ ಬದುಕು|Sharavathi
ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿನ ಕನಸು ಮತ್ತೆ ಕಮರಿ ಹೋಗಿದೆ.ನ್ಯಾಯಾಂಗ ನಿಂದನೆ ಭಯದಿಂದ ರಾಜ್ಯ ಸರ್ಕಾರ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈ ಮೂಲಕ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿರುವ ಮುಳುಗಡೆ ಸಂತ್ರಸ್ತರನ್ನು ಸರ್ಕಾರ ಮತ್ತೊಮ್ಮೆ ಅನಾಥರನ್ನಾಗಿಸಿದೆ. ಹೌದು, ವಿದ್ಯುತ್ ಉತ್ಪಾದನೆ ಸಲುವಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಶಿವಮೊಗ್ಗದ ಸಾಗರ, ಹೊಸನಗರ ತಾಲೂಕಿನ 166 ಗ್ರಾಮಗಳ 6,177 ಕುಟುಂಬಗಳನ್ನು ಎತ್ತಂಗಡಿ ಮಾಡಲಾಗಿತ್ತು. ಅಂದಿನ ರಾಜ್ಯ ಸರ್ಕಾರ 1962 ರಲ್ಲಿಯೇ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನ…


