Headlines

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ ಹೊಸನಗರ ತಾಲ್ಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರೂರ ಘಟನೆ ರಾಜ್ಯಾದ್ಯಾಂತ ಆತಂಕ ಉಂಟುಮಾಡಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಹಾಕಿರುವ ಘಟನೆನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ..!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು…

Read More

ಕೌಟುಂಬಿಕ ಕಲಹ : ಪತಿಯಿಂದ ಪತ್ನಿಯ ಮೇಲೆ ಆಸಿಡ್ ದಾಳಿ|acid

ಹೆಂಡತಿಯೊಂದಿಗೆ ಜಗಳ ಮಾಡಿಕೊಂಡು ಸಿಟ್ಟಿನಿಂದ ಹೆಂಡತಿಯ ಮೈಮೇಲೆ ಆಸಿಡ್ ಎರಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಗ್ರಾಮವೊಂದರ ನಿವಾಸಿಯಾದ ಸಂತ್ರಸ್ತೆಯು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ಧಾರೆ. ಬಿಡುವಾದಾಗ ತನ್ನ ಮಕ್ಕಳನ್ನು ನೋಡಲು ತನ್ನ ತಾಯಿ ಮನೆಗೆ ಬರುತ್ತಿದ್ದರು. ಇನ್ನೂ ಪತ್ನಿಯ ಜೊತೆಗೆ ಜಗಳ ತೆಗೆದು ದೂರವೇ ಇದ್ದ ಪತಿಯು ಆಗಾಗ ಪತ್ನಿಯ ತಾಯಿ ಮನೆಗೆ ಬಂದು ಮಕ್ಕಳನ್ನು ನೋಡಿಕೊಂಡು ಹೋಗುತ್ತಿದ್ದನಂತೆ. ಈ ನಡುವೆ ಕಳೆದ ಸಂಕ್ರಾಂತಿಯ ಸಂದರ್ಭದಲ್ಲಿ ಪತ್ನಿಯ ತಾಯಿ ಮನೆಗೆ ಬಂದ ಗಂಡ, ಅದೇ…

Read More

40% ಕಮಿಷನ್ ಆರೋಪ : ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ (ESHWARAPPA)

  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಸಿಲುಕಿದ ಕೆ.ಎಸ್. ಈಶ್ವರಪ್ಪ ಕೊನೆಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಮೊಗ್ಗದಿಂದ ಇಂದು ರಾತ್ರಿ ನಗರಕ್ಕೆ ಆಗಮಿಸಿದ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸದಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಇಲ್ಲದ ಕಾರಣ ಸೋಮವಾರ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯಿದೆ. ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವ ವೇಳೆ ಸಿಎಂ ನಿವಾಸದ ಬಳಿ…

Read More

ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ :ಶ್ರೀ ರೇಣುಕಾನಂದ ಸ್ವಾಮೀಜಿ

ರಿಪ್ಪನ್ ಪೇಟೆ : ಮಾನವನ ಬದುಕಿನಲ್ಲಿ ಶಿಕ್ಷಣ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಪೋಷಕರು  ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ ಎಂದು ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು.  ಹಾರಂಬಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು….

Read More

Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು

Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕನಲ್ಲಿ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.  ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ. ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋಗುತಿದ್ದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಸಧ್ಯಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಯುವಕ ಪ್ರಾಣಾಪಾಯದಿಂದ ಬಜಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಲಾಗಿದೆ….

Read More

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ ರಿಪ್ಪನ್ ಪೇಟೆ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ ರವರನ್ನು ನಾಮನಿರ್ದೇಶನಗೊಳಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಆದೇಶಿಸಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅಮೀರ್ ಹಂಜಾರವರನ್ನು ಈ ಕೂಡಲೇ  ಜಾರಿಗೆ ಬರುವಂತೆ ಪ್ರಧಾನಮಂತ್ರಿಗಳ 15 ಅಂಶ ಅನುಷ್ಠಾನ ಸಮಿತಿಗೆ ಜಿಲ್ಲಾ…

Read More

ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 17ಕ್ಕೆ

ರಿಪ್ಪನ್‌ಪೇಟೆ: ಪಟ್ಟಣದ ರೋಟರಿ ಕ್ಲಬ್‌ನ ನೂತನ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜುಲೈ 17ರ ಭಾನುವಾರ ವಿಶ್ವಮಾನವ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ನೂತನ ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ತಿಳಿಸಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು ನಮ್ಮ ಸಂಸ್ಥೆಯ ಸದಸ್ಯರು ಪ್ರಪ್ರಥಮವಾಗಿ ಮಹಿಳಾ ಅಧ್ಯಕ್ಷರು ಮತ್ತು ಕಾರ್ಯದರ್ಶಿಯನ್ನು ಆಯ್ಕೆ ಮಾಡಿದ್ದಾರೆ, ಇದರ ಉದ್ದೇಶ ಮಹಿಳಾ ಸಬಲೀಕರಣವಾಗಿದ್ದು ಸೇವೆಯಲ್ಲಿ ಮಹಿಳೆಯರ ಹೆಚ್ಚು ಪಾಲ್ಗೊಳ್ಳುವಿಕೆಯನ್ನು ಪ್ರತಿನಿಧಿಸುತ್ತದೆ. ಸಂಸ್ಥೆಯು ಇಮ್ಯಾಜಿನ್ ರೋಟರಿ ಎಂಬ ಕಲ್ಪನೆಯನ್ನು ಕೊಟ್ಟಿದ್ದು ಸಮಾನ ಶಿಕ್ಷಣ,…

Read More

ರಿಪ್ಪನ್‌ಪೇಟೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ : ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ನಡೆದಿದ್ದು, ಈ ಘಟನೆಯ ಭಯಾನಕ‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ತಳಲೆ ಗ್ರಾಮದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೋಡೂರು ಗ್ರಾಮದ ಚೂಡಾಮಣಿ ಮತ್ತು ಪತ್ನಿ ಮೋಹಿನಿ ಬೈಕ್ ನಲ್ಲಿ ತಳಲೆ ಕಡೆ ಹೋಗುತಿದ್ದಾಗ ಮೂಗೂಡ್ತಿಗೆ ಬರುತಿದ್ದ  ಮುತ್ತಿನಕೊಪ್ಪ ಗ್ರಾಮದ ಕೃಷ್ಣಮೂರ್ತಿ…

Read More

ತುಂಗಾ ನದಿಯಲ್ಲಿ ಯುವಕನೊಬ್ಬ ನೀರುಪಾಲು : ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಶೋಧ ಕಾರ್ಯ

ತುಂಗಾ ನದಿಯಲ್ಲಿ ಯುವಕನೋರ್ವ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಳೆ ಬಸ್ ಸ್ಟ್ಯಾಂಡ್  ಬಳಿ 25 ರಿಂದ 30 ವರ್ಷ ಅಸುಪಾಸಿನ ಯುವಕ ನೀರಿಗೆ ಹಾರಿರುವುದಾಗಿ ಕೆಲವರು ಹೇಳಿದರೆ ಇನ್ನು ಕೆಲವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ಹೇಳುತಿದ್ದು,ಸ್ಪಷ್ಟ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಆತನ ಶೋಧಕಾರ್ಯಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ಶೋಧಕಾರ್ಯ ಆರಂಭಿಸಿದ್ದಾರೆ.  ಸಂತೋಷ್ ಎಂಬ 27 ವರ್ಷದ ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋದವನು ಎಂದು ಹೇಳಲಾಗುತ್ತಿದೆ. ಪುರಲೆ ನಿವಾಸಿಯವನು ಎಂದು ತಿಳಿದು ಬಂದಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ರಿಪ್ಪನ್‌ಪೇಟೆ : ಚಲನಚಿತ್ರ ನಟ ದರ್ಶನ್ ಭೇಟಿಗಾಗಿ ಪರಿತಪಿಸಿ ಖಿನ್ನತೆಗೊಳಗಾದ ಮತ್ತಿಕೊಪ್ಪದ ಯುವಕ ಸುದೀಪ್|DBOSS

ರಿಪ್ಪನ್‌ಪೇಟೆ;-ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾದ  ಅಭಿಮಾನಿ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕ ಸುದೀಪ್. ಚಿತ್ರ ನಟ ದರ್ಶನರವರ ಸಾರಥಿ, ಅರ್ಜುನ ಐಪಿಎಸ್,ನವಗ್ರಹ, ಸ್ವಾಮಿ, ಹೀಗೆ ಅವರು ನಟಿಸಿರುವ ಹಲವು ಚಿತ್ರಗಳನ್ನು ನೋಡಿ ಅಕರ್ಷಿತನಾದ ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತ್ತಿಕೊಪ್ಪ ವಾಸಿ ಬಡಕೂಲಿ ಕಾರ್ಮಿಕ ಹಿರಿಯಣ್ಣ ಮತ್ತು ತಾರಾ ಎಂಬುವರ ದ್ವಿತೀಯ ಪುತ್ರ ಇಪ್ಪತ್ನಾಲ್ಕು ವರ್ಷದ ಸುದೀಪ್ ಚಿತ್ರನಟ ದರ್ಶನ್ ದರ್ಶನಕ್ಕಾಗಿ ಹಾತೊರೆಯುತಿದ್ದಾನೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ…

Read More