Headlines

ಸಿಡಿಲು ಬಡಿದು ಯುವ ರೈತ ಸಾವು

ಕೃಷಿ ಚಟುವಟಿಕೆಯಲ್ಲಿ ನಿರತನಾಗಿದ್ದ ಯುವ ರೈತನೊಬ್ಬ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.  ಇಂಡುವಳ್ಳಿ ಗ್ರಾಮದ ಗೌತಮ್ ನಾಗರಾಜ (23) ಮೃತ ದುರ್ಧೈವಿ.  ಗ್ರಾಮದ ಸರ್ವೆ ನಂ 121/2 ರಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತಾಗಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಗೌತಮ್ ಮೃತ ಪಟ್ಟಿದ್ದಾರೆ.  ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

Read More

ಭಾರಿ ಮಳೆಗೆ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಕುಸಿದು ಬಿದ್ದ ಮನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶೈಲಜಾ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯ ಮಳವಳ್ಳಿ ಚಂದ್ರಶೇಖರ್ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

Read More

ಆನಂದಪುರದ ಕಣ್ಣೂರು ಸಮೀಪ ರಸ್ತೆ ಅಪಘಾತ : ಓರ್ವ ಸ್ಥಳದಲ್ಲೇ ಸಾವು,ಚಾಲಕನ ಸ್ಥಿತಿ ಚಿಂತಾಜನಕ :

ಸಾಗರ : ಇಲ್ಲಿನ ಆನಂದಪುರ ಸಮೀಪದ ಕಣ್ಣೂರು ಬಳಿ ಲಾರಿ ಹಾಗೂ ಅಶೋಕ್ ಲೈಲಾಂಡ್ ಮಿನಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅಶೋಕ್ ಲೈಲಾಂಡ್ ಮಿನಿ ವಾಹನದಲ್ಲಿ ಚಾಲಕನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಈ ವಾಹನದ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ.  ಮೃತನು ಶಿರಾಳಕೊಪ್ಪ ಮೂಲದವನು ಎಂದು ತಿಳಿದು ಬಂದಿದೆ. ಲಾರಿ ಹೊಸನಗರದಿಂದ ಶಿಕಾರಿಪುರ ಹೋಗುತ್ತಿತ್ತು,ಅಶೋಕ್ ಲೈಲಾಂಡ್ ಮಿನಿವಾಹನ ಶುಂಠಿ ತುಂಬಿಕೊಂಡು ಕುಂದಾಪುರ ಹೊಗುತ್ತಿದ್ದವು. ಅಪಘಾತದ ಸ್ಥಳದಲ್ಲಿ ಅರ್ಧ ಗಂಟೆಗೂ ಹೆಚ್ಚು ಟ್ರಾಫಿಕ್ ಜಾಮ್…

Read More

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು ಚೆನ್ನಾಗಿ ಓದಿಕೊಳ್ಳುವಂತೆ ಮನೆಯವರು ಹೇಳಿದ ಬುದ್ದಿ ಮಾತಿಗೆ ಮನನೊಂದು ನಿಖಿಲ್ ಆತ್ಮಹ**ತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿವೆ. ಈ ಕುರಿತಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ : ಮನೆಯಲ್ಲಿಯೇ ನೇ*ಣು ಬಿಗಿದುಕೊಂಡು ಹೈಸ್ಕೂಲ್ ವಿದ್ಯಾರ್ಥಿಯೋರ್ವ ಆತ್ಮಹ**ತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ನಡೆದಿದೆ. ನಿಖಿಲ್ (14) ಆತ್ಮಹ**ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು…

Read More

SHIVAMOGGA | ಹೃದಯಾಘಾತದಿಂದ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನಿಧನ

SHIVAMOGGA | ಹೃದಯಾಘಾತದಿಂದ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನಿಧನ Sub-Inspector Manjunath of Vinobanagar Police Station, Shivamogga, passed away due to a heart attack. Shivamogga Police Department and colleagues expressed deep condolences over his sudden demise. ಶಿವಮೊಗ್ಗ: ನಗರದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ನೇಹಪರ ವ್ಯಕ್ತಿತ್ವ ಹಾಗೂ ಕರ್ತವ್ಯನಿಷ್ಠೆಯಿಂದ ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ…

Read More

Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ

Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶಿವಮೊಗ್ಗ ಜಿಲ್ಲೆಯ ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಆ ನಂತರ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದಿಂದ ನೆಲದಲ್ಲಿ ಕೂರಬಾರದು…

Read More

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್|rpet

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ

ಮದುವೆಯಾಗುವುದಾಗಿ ಅಪ್ರಾಪ್ತೆಗೆ ವಂಚನೆ – ಮನನೊಂದು ವಿಷ ಸೇವಿಸಿ ಆತ್ಮಹತ್ಯೆ | ಆರೋಪಿ ಅರೆಸ್ಟ್ ಅಪ್ರಾಪ್ತೆಯೊಬ್ಬಳೊಂದಿಗೆ ಕಳೆದ ಮೂರು ವರ್ಷಗಳಿಂದ ಸುತ್ತಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಈಗ ಜಾತಿಯ ಕಾರಣ ಹೇಳಿ ವಂಚಿಸಿದ ಹಿನ್ನಲೆಯಲ್ಲಿ ಮನನೊಂದು ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಡೆದಿದ್ದೇನು..!!?? ಕಳೆದ ಮೂರು ವರ್ಷಗಳಿಂದ 17 ವರ್ಷದ ಅಪ್ರಾಪ್ತೆಯೊಬ್ಬಳೊಂದಿಗೆ ಸುತ್ತಾಡಿಕೊಂಡು ಇದ್ದ ಆರೋಪಿ ಮದುವೆಯ ಪ್ರಸ್ತಾಪ ಬಂದಾಗ ಯುವತಿಯ ಜಾತಿ ಬಗ್ಗೆ ಕೀಳಾಗಿ ಮಾತನಾಡಿ ಮದುವೆಯಾಗುವುದಿಲ್ಲ…

Read More

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು  ಷೇರು ವ್ಯವಹಾರದಲ್ಲಿ ಅತ್ಯಧಿಕ ಲಾಭವಿದೆ ಎಂದು ನಂಬಿಸಿ ಶಿವಮೊಗ್ಗದ ಗೃಹಿಣಿಯೊಬ್ಬರಿಗೆ 16.42 ಲಕ್ಷ ರೂ. ವಂಚಿಸಿರುವ ಘಟನೆ ವರದಿಯಾಗಿದೆ. ಟ್ರೇಡಿಂಗ್ ಕುರಿತು ಕೋಚಿಂಗ್ ನೀಡಲಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ಪೇಜ್ ಒಂದರಲ್ಲಿ ಪ್ರಕಟಿಸಲಾಗಿತ್ತು. ಅಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ್ದ ಶಿವಮೊಗ್ಗದ ಗೃಹಿಣಿ (ಹೆಸರು ಗೌಪ್ಯ) ಒಂದು ವಾಟ್ಸಾಪ್ ಗ್ರೂಪ್ ಸೇರಿದ್ದರು ಎನ್ನಲಾಗಿದೆ. ಅಲ್ಲಿ ಟ್ರೇಡಿಂಗ್ ಎಂದರೇನು, ಲಾಭ ಪಡೆಯುವುದು ಹೇಗೆ ಎಂಬ ಮಾಹಿತಿ ತಿಳಿಸಲಾಯಿತು. ನಿತ್ಯ ಒಂದೊಂದು ವಿಷಯ…

Read More

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ…

Read More