w
Headlines

ನೂತನ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು – ಸಮುದಾಯ ಆಸ್ಪತ್ರೆ, ಪಟ್ಟಣ ಪಂಚಾಯಿತಿ ಕನಸು ಈಡೇರುವುದೇ???? GKB

ನೂತನ ಶಾಸಕರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು ರಿಪ್ಪನ್‌ಪೇಟೆ : ಶರಾವತಿ ಮುಳುಗಡೆ ಸಂತ್ರಸ್ತರ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ರಿಪ್ಪನ್‌ಪೇಟೆ ಹೋಬಳಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪಶು ಅಸ್ಪತ್ರೆಯ ವೈದ್ಯಾಧಿಕಾರಿಗಳ ಸಿಬ್ಬಂದಿಗಳ ಮತ್ತು ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ಮೇಲ್ದರ್ಜೇಗೇರಿಸುವುದು ಶಾಶ್ವತ ಸುಸಜ್ಜಿತ ಬಸ್ ನಿಲ್ದಾಣ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯಿತ್‌ನ್ನಾಗಿ ಮೇಲ್ದರ್ಜೇಗೇರಿಸುವುದು ಸೇರಿದಂತೆ ಇನ್ನೂ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದು ನೂತನ ಶಾಸಕ ಗೋಪಾಲಕೃಷ್ಣ ಬೇಳೂರರಿಗೆ ಎದುರಾಗಿರುವ ಪ್ರಮುಖ ಸವಾಲುಗಳು….

Read Full News

ಹೊಸನಗರ : ಬಾಲಕಿಯನ್ನು ಅಡ್ಡಗಟ್ಟಿ ನಂಬರ್ ಕೊಡುವಂತೆ ಕಿರುಕುಳ – ಇಬ್ಬರು ವಶಕ್ಕೆ|Crime News

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪೊಲೀಸ್ ಸ್ಟೇಷನ್​ ಒಂದರಲ್ಲಿ ಅಪ್ತಾಪ್ತೆಯೊಬ್ಬಳನ್ನ ಅಡ್ಡಗಟ್ಟಿ ಫೋನ್ ನಂಬರ್ ಕೇಳಿ ಕಿರುಕುಳ ನೀಡಿದ ಆರೋಪ ಸಂಬಂಧ ಕೇಸ್ ದಾಖಲಾಗಿದ್ದು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ.  ಕೇರಳದಲ್ಲಿ  ಓದುತ್ತಿರುವ ಅಪ್ರಾಪ್ತೆಯೊಬ್ಬರು ಹೊಸನಗರ ತಾಲ್ಲೂಕಿನ ಗ್ರಾಮವೊಂದರಲ್ಲಿರುವ ತಮ್ಮ ಅಜ್ಜಿ ಮನೆಗೆ ಬಂದಿದ್ದಾರೆ. ಕಳೆದ ಭಾನುವಾರ ಚರ್ಚ್​ವೊಂದರಲ್ಲಿ ಪ್ರಾರ್ಥನೆ ಮುಗಿಸಿ ವಾಪಸ್ ಆಗುವಾಗ ಇಬ್ಬರು ಆಕೆಯನ್ನು ಎರಡು ಬಾರಿ ಅಡ್ಡಗಟ್ಟಿ ಮೊಬೈಲ್ ನಂಬರ್ ಕೇಳಿದ್ಧಾರೆ.   ಅಲ್ಲದೆ  ಬೈಕ್‌ನಲ್ಲಿ ಬಂದ ಆರೋಪಿಗಳು ಬಾಲಕಿಯನ್ನು  ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ…

Read Full News

Crime News | ಸಾಗರದಲ್ಲಿ ಲಕ್ಷಾಂತರ ರೂ ಮೌಲ್ಯದ ಸಿಗರೇಟ್ ಕಳ್ಳತನ..!!!

ಶಿವಮೊಗ್ಗ ಜಿಲ್ಲೆ ಸಾಗರ ಟೌನ್​ನಲ್ಲಿ ಬರೋಬ್ಬರಿ 17 ಲಕ್ಷ ರೂಪಾಯಿಯ ಸಿಗರೇಟ್ ಕಳ್ಳತನವಾಗಿದೆ. ಈ ಸಂಬಂಧ ಸಾಗರ ಟೌನ್​ ಪೊಲೀಸ್ ಸ್ಟೇಷನ್​ನಲ್ಲಿ ದೂರು ಕೂಡ ದಾಖಲಾಗಿದೆ. ಇಲ್ಲಿನ ಸೊರಬ ರಸ್ತೆಯ ಯುನೈಟೆಡ್ ಟ್ರೇಡಿಂಗ್ ಕಂಪೆನಿಯಲ್ಲಿ ಭಾನುವಾರ ರಾತ್ರಿ ₹17 ಲಕ್ಷ ಮೌಲ್ಯದ ಸಿಗರೇಟ್ ಬಂಡಲ್‌ಗಳು ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ.  ಸಾಗರ ತಾಲ್ಲೂಕಿನ ವಿವಿಧ ಅಂಗಡಿಗಳಿಗೆ ಸಿಗರೇಟ್ ಪೂರೈಕೆ ಮಾಡುವ ಕೆಲಸಮಾಡುತ್ತಿರುವ ಈ ಅಂಗಡಿಯಲ್ಲಿ ರೋಲಿಂಗ್​ ಶೆಟ್ಟರ್​ ಒಡೆದು ಕಳ್ಳತನ ಮಾಡಲಾಗಿದೆ.  ಶೆಟರ್ ಮುರಿದು ಒಳಕ್ಕೆ ಬಂದಿರುವ ಕಳ್ಳರು,…

Read Full News

ಸಿದ್ದರಾಮಯ್ಯರ ಜನಪ್ರಿಯತೆ ಹಾಗೂ ಡಿಕೆಶಿ ರವರ ಪರಿಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೇರಿದೆ – ಬಂಡಿ ರಾಮಚಂದ್ರ

ಡಿಕೆಶಿ ಜನ್ಮದಿನಾಚರಣೆ ಮತ್ತು ಬೇಳೂರು ಗೆಲುವಿಗೆ ಕಾರ್ಯಕರ್ತರಿಗೆ ಮತದಾರರಿಗೆ ಆಭಿನಂದನೆ’’ ರಿಪ್ಪನ್‌ಪೇಟೆ : ಸಿದ್ದರಾಮಯ್ಯರವರ ಜನಪ್ರಿಯತೆ ಹಾಗೂ ಡಿ ಕೆ ಶಿವಕುಮಾರ್ ರವರ ರವರ ಶ್ರಮದಿಂದ ಪಕ್ಷ ಅಧಿಕಾರಕ್ಕೇರಿದೆ ಎಂದು ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹೇಳಿದರು. ಅವರು ಇಂದು ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ನಂತರ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಅಡಳಿತ ನಡೆಸಿದ ಬಿಜೆಪಿ ಭ್ರಷ್ಟಾಸರ್ಕಾರವನ್ನು ಕಿತ್ತು ಹಾಕುವುದೇ ನಮ್ಮ…

Read Full News

Ex Mla |ರಿಪ್ಪನ್‌ಪೇಟೆ : ಮಾಜಿ ಶಾಸಕ ಡಾ. ಉಮಾಕಾಂತ್ ಬಿ ಬೋರ್ಕರ್ ನಿಧನ

ರಿಪ್ಪನ್‌ಪೇಟೆ : ಶಿರಸಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬೋರ್ಕರ್ ಉಮಾಕಾಂತ್(84) ರವರು ಇಂದು ಮುಂಜಾನೆ ವಯೋಸಹಜ ನಿಧನರಾಗಿದ್ದಾರೆ. ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ 1978ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಬೋರ್ಕರ್ ಉಮಾಕಾಂತ್ ಗೆಲುವು ಸಾಧಿಸಿದ್ದರು. ಹಲವಾರು ವರ್ಷಗಳಿಂದ ಅವರು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದಲ್ಲಿ ವಾಸಿಸುತಿದ್ದು ಅವರ ಪತ್ನಿ ಮಂಜುಳಾ ಬೋರ್ಕರ್ ಪ್ರಮುಖ ರಾಜಕೀಯ ಪಕ್ಷವಾದ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದಾರೆ. 1978 ರಲ್ಲಿ ತುರ್ತು ಪರಿಸ್ಥಿತಿಯ ಪ್ರಭಾವದಿಂದ ಬೋರ್ಕರ್ ಉಮಾಕಾಂತ್ ಕಾಂಗ್ರೆಸ್‌ನ ರೇವಣಕರ್‌ ಶಂಕರ್‌ ಪುರುಷೋತ್ತಮ್‌…

Read Full News

ಆಂಬ್ಯುಲೆನ್ಸ್ ಮತ್ತು ಬೈಕ್‌ ನಡುವೆ ಡಿಕ್ಕಿ – ಯುವಕ ಸ್ಥಳದಲ್ಲಿಯೇ ಸಾವು|accident

ಬೈಕ್ ಮತ್ತು ಆಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ನ್ಯಾಮತಿ ತಾಲೂಕಿನ ಪುನೀತ್(26) ಅಲಿಯಾಸ್ ಕುಲ್ಡ ಪುನೀತ್ ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  ಆಯನೂರಿನ ಚೆನ್ನಳ್ಳಿ ಕ್ರಾಸ್ ಬಳಿ ಸಾಗರದಿಂದ ಬರುತ್ತಿದ್ದ ಸರ್ಕಾರಿ ಅಂಬ್ಯುಲೆನ್ಸ್  ಬೈಕ್ ಗೆ ಡಿಕ್ಕಿ ಹೊಡೆದಿದೆ. ಶಿವಮೊಗ್ಗದಿಂದ ಆಯನೂರು ಮೂಲಕ ಬೆಳಗುತ್ತಿಗೆ ಹೋಗುವಾಗ ಈ ಘಟನೆ ಸಂಭವಿಸಿದೆ. ಪುನೀತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪುನೀತ್ ಬೆಳಗುತ್ತಿಯಲ್ಲಿ  ಕೋಳಿ ಮಾಂಸದ ಅಂಗಡಿ ನಡೆಸುತಿದ್ದರು ಎನ್ನಲಾಗುತ್ತಿದೆ….

Read Full News

ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election News

ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಎಲ್ಲಾ ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಆಲುವಳ್ಳಿ  ಬೇಳೂರು ಗೋಪಾಲಕೃಷ್ಣ – 368 ಹರತಾಳು ಹಾಲಪ್ಪ – 350 ಮಾದಾಪುರ …

Read Full News

ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election Result

ರಿಪ್ಪನ್‌ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಏಳು ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಬರುವೆ 1  ಬೇಳೂರು ಗೋಪಾಲಕೃಷ್ಣ – 486 ಹರತಾಳು ಹಾಲಪ್ಪ – 371 ಬರುವೆ…

Read Full News

Election Result | ಆರಗ ಜ್ಞಾನೇಂದ್ರ , ಬೇಳೂರು ಗೋಪಾಲಕೃಷ್ಣ ಗೆಲುವು – ಗೆಲುವಿನ ಅಂತರವೆಷ್ಟು..???

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಆರಗ ಜ್ಞಾನೇಂದ್ರ ಗೆಲುವಿನ ನಗೆ ಬೀರಿದ್ದಾರೆ. 19ನೇ ಸುತ್ತು ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ರವರಿಗಿಂತ 12080 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ 16000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಬೇಳೂರು ಗೋಪಾಲಕೃಷ್ಣ 88143 ಮತ ಪಡೆದರೆ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 72227…

Read Full News

Election | ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ಭಾರಿ ಮುನ್ನಡೆ

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಭಾರಿ ಮುನ್ನಡೆಯನ್ನು ಸಾಧಿಸಿದ್ದಾರೆ. 11.10 ನಿಮಿಷದ ಫಲಿತಾಂಶದ ಪ್ರಕಾರ 35001 ಮತ ಗಳಿಸಿದ್ದಾರೆ . ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 25994 ಮತ ಗಳಿಸಿದ್ದಾರೆ. ಬೇಳೂರು ಗೋಪಾಲಕೃಷ್ಣ 9007 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಆಮ್ ಆದ್ಮಿಯ ದಿವಾಕರ್ 412 ಮತ ಗಳಿಸಿದ್ದಾರೆ.

Read Full News

Election |ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಯಾರೆಲ್ಲಾ ಮುನ್ನಡೆ???

ಶಿವಮೊಗ್ಗ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ 10.30 ರವರೆಗಿನ ಫಲಿತಾಂಶ ಸಾಗರ – ಗೋಪಾಲಕೃಷ್ಣ ಬೇಳೂರು (ಕಾಂಗ್ರೆಸ್)‌ – 7571ಮತಗಳ ಅಂತರದಲ್ಲಿ ಮುನ್ನಡೆ ಶಿವಮೊಗ್ಗ ಗ್ರಾಮಾಂತರ – ಶಾರದಾ ಪೂರ್ಯಾನಾಯ್ಕ್‌ (ಜೆಡಿಎಸ್)‌ – 4479 ಮತಗಳ ಅಂತರದಲ್ಲಿ ಮುನ್ನಡೆ ಭದ್ರಾವತಿ  – ಬಿ.ಕೆ.ಸಂಗಮೇಶ್ವರ (ಕಾಂಗ್ರೆಸ್)‌ – 913 ಮತಗಳ ಅಂತರದಲ್ಲಿ ಮುನ್ನಡೆ ಶಿವಮೊಗ್ಗ – ಚನ್ನಬಸಪ್ಪ (ಬಿಜೆಪಿ) – 10576 ಮತಗಳ ಅಂತರದಲ್ಲಿ ಮುನ್ನಡೆ ತೀರ್ಥಹಳ್ಳಿ – ಆರಗ ಜ್ಞಾನೇಂದ್ರ – 1892 ಮತಗಳ ಅಂತರದಲ್ಲಿ ಮುನ್ನಡೆ…

Read Full News

ELECTION |ಜಿಲ್ಲೆಯ ಮೊದಲ ಸುತ್ತಿನ ಎಣಿಕೆ ಪೂರ್ಣ – ಯಾರೆಲ್ಲಾ ಮುನ್ನಡೆ?? ಬೇಳೂರು ಮುನ್ನಡೆ,ಕಿಮ್ಮನೆಗೆ ಹಿನ್ನಡೆ

ಮತ ಎಣಿಕೆಯಲ್ಲಿ ಮೊದಲ ಸುತ್ತಿನಲ್ಲಿ ಅಭ್ಯರ್ಥಿಗಳ ಮುನ್ನಡೆ ಹೀಗಿದೆ. ಸಾಗರದಲ್ಲಿ ಕಾಂಗ್ರೆಸ್ ಪಕ್ಷದ ಗೋಪಾಲ ಕೃಷ್ಣ ಬೇಳೂರು ಮುನ್ಬಡೆ ಇದ್ದರೆ,  ಬಿಜೆಪಿ : ಹರತಾಳು ಹಾಲಪ್ಪ : ಹಿನ್ನಡೆಯಲ್ಲಿದ್ದಾರೆ. ಮೊದಲ ಸುತ್ತಿನಲ್ಲಿ 1600 ಮತಗಳ ಮುನ್ನಡೆ ಇದ್ದಾರೆ‌. ಭದ್ರಾವತಿಯಲ್ಲಿ ಜೆ ಡಿ ಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ ಮುನ್ನಡೆಯಲ್ಲಿದ್ದಾರೆ.ಕಾಂಗ್ರೆಸ್ ಬಿಕೆ ಸಂಗಮೇಶ್ ಹಿನ್ನಡೆಯಲ್ಲಿದ್ದಾರೆ.600 ಮತಗಳ ಮುನ್ನಡೆಯಲ್ಲಿದ್ದಾರೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 1400 ಮತಗಳ ಮುನ್ನಡೆಯಲ್ಲಿದ್ದಾರೆ.ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪಗೆ 1500…

Read Full News

SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗೆ ಸನ್ಮಾನ

ಭದ್ರಾವತಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 573(91.56) ಅಂಕಗಳನ್ನು ಗಳಿಸಿ ಅದ್ವಿತೀಯ ಸಾಧನೆಗೈದ ಶ್ರೀ ಬಾಲಗಂಗಾಧರ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಶಶಾಂಕ್ ರವರಿಗೆ ಹಳೇನಗರ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಹಳೇನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಚನ್ನಕೇಶವ ಮತ್ತು ಲತಾಮಣಿ ದಂಪತಿಗಳ ಪುತ್ರನಾದ ಶಶಾಂಕ್ ರವರು ನ್ಯೂಟೌನ್ ನ ಶ್ರೀ ಬಾಲಗಂಗಾಧರ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಯಾಗಿದ್ದು SSLC ಪರೀಕ್ಷೆಯಲ್ಲಿ 91.56% ಅಂಕ ಗಳಿಸುವ ಮೂಲಕ ಶಾಲೆಯಲ್ಲಿಯೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಗುರುವಾರ ಹಳೇನಗರ ಪೊಲೀಸ್ ಠಾಣೆಯಲ್ಲಿ…

Read Full News

ಹೊಸನಗರದ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ – ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ|missing

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲುಸಾಲೆ ಮಳವಳ್ಳಿ ಗ್ರಾಮ ವಾಸಿ ಸದಾನಂದ ಎಂ.ಎಂ. ಎಂಬುವವರ ಪತ್ನಿ ಗೀತಾ (30) ಎಂಬ ಮಹಿಳೆಯು ತನ್ನ 11 ವರ್ಷದ ಮಗಳು ಪ್ರಿಯಾಂಕ ಹಾಗೂ 9 ವರ್ಷದ ಮಗ ಪ್ರಸಾದ್ ಇವರುಗಳನ್ನು ಕರೆದುಕೊಂಡು ಏ.11 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ ದುಂಡುಮುಖ, ಸಾಧಾರಣ ಮೈಕಟ್ಟು, 5 ಅಡಿ ಎತ್ತರ, ಎಡಕೆನ್ನೆಯ ಮೇಲೆ ಹಳೆ ಗಾಯದ ಗುರುತು ಇರುತ್ತದೆ. ಕೆಂಪು ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಈ…

Read Full News

ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನಲೆ ಇಂದು ಸಂಜೆ 6 ರಿಂದ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ – ವಿಜಯೋತ್ಸವ,ಪಟಾಕಿ ಸಿಡಿಸಲು,ಬೈಕ್ ರ್‍ಯಾಲಿಗೆ ಇಲ್ಲ ಅವಕಾಶ

ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಸಂಜೆ 6 ಗಂಟೆಯಿಂದ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮೇ 12ರ ಸಂಜೆ 6 ರಿಂದ ಮೇ14 ರ ರಾತ್ರಿ 10 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಪೂರ್ಣ…

Read Full News

ಚೋರಡಿ ಅಪಘಾತ – ಮತ್ತೊಬ್ಬ ಗಾಯಾಳು ಸಾವು | ನಿನ್ನೆ ಕರ್ತವ್ಯ ಪ್ರಜ್ಞೆ ಮೆರೆದ ಜಿಲ್ಲೆಯ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು – ಅಪಘಾತದ ಸಂಪೂರ್ಣ ಮಾಹಿತಿ

ನಿನ್ನೆ ಚೋರಡಿಯಲ್ಲಿ  ಸಂಭವಿಸಿದ ಭೀಕರ ಅಪಘಾತದ ಘಟನೆಯಲ್ಲಿ ಸಾವನ್ನಪ್ಪಿರುವ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇವತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ಧಾರೆ.  ನಿನ್ನೆ ಸಂಜೆ ಸುಮಾರು ಆರು ಗಂಟೆಯ ಹೊತ್ತಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಇವತ್ತು ಶಿಕಾರಿಪುರ ತಾಲೂಕಿನ ಜೋಗಿಹಳ್ಳಿ ಗ್ರಾಮದ ಮಹೇಶ್ (45 ವರ್ಷ) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕುಮದ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಹಿಂದಿನಿಂದಲೂ ಡೇಂಜರಸ್​ ಸ್ಪಾಟ್. ಹಳೇಸೇತುವೆ ಪಕ್ಕದಲ್ಲಿ ಅಗಲವಾದ ಹೊಸಸೇತುವೆ ಕಟ್ಟಿ, ಹೈವೆ ಮಾಡಿದರೂ ಇಲ್ಲಿ…

Read Full News

ಚೋರಡಿ ಬಸ್ ಅಪಘಾತ ಪ್ರಕರಣ – ಮೆಗ್ಗಾನ್ ಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ : ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..???Accident

ಶಿವಮೊಗ್ಗ ಜಿಲ್ಲೆಯ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದೌಡಾಯಿಸಿದ ಸಂಸದ ಬಿ ವೈ ರಾಘವೇಂದ್ರ ಬಸ್ ಅಪಘಾತದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ  ದೌಡಾಯಿಸಿದ್ದಾರೆ….

Read Full News

ಚೋರಡಿಯ ಬಳಿ ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ – 8 ರಿಂದ ಹತ್ತು ಮಂದಿ ಸಾವನ್ನಪ್ಪಿರುವ ಶಂಕೆ

ಶಿವಮೊಗ್ಗ – ಸಾಗರ ಹೆದ್ದಾರಿಯ ಚೋರಡಿ ಬಳಿಯಲ್ಲಿ ಕೆಲವು ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸಾವು ನೋವುಗಳು ಸಂಭವಿಸಿವೆ ಎನ್ನಲಾಗುತ್ತಿದೆ. ಬಲ್ಲ ಮೂಲಗಳ ಪ್ರಕಾರ 8 ರಿಂದ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.ಅನೇಕ ಮಂದಿಗೆ ಗಂಭೀರ ಗಾಯಗಳಾಗಿರುವ ಮಾಹಿತಿ ಇದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಬಸ್ಸು ಹಾಗೂ ಶಿಕಾರಿಪುರದಿಂದ (ಹಿತ್ಲ ಕಲ್ಮನೆ ಮಾರ್ಗ) ಶಿವಮೊಗ್ಗಕ್ಕೆ ತೆರಳುತಿದ್ದ ಎರಡು ಬಸ್ ಗಳ ನಡುವೆ ಡಿಕ್ಕಿಯಾಗಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ 5 ಅಂಬ್ಯುಲೆನ್ಸ್ ಗಳು ಮತ್ತು ಅಗ್ನಿಶಾಮಕ…

Read Full News

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ – ಸಂಚಾರದಲ್ಲಿ ವ್ಯತ್ಯಯ |Rain – storm

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಹೆದ್ದಾರಿಯಲ್ಲಿ ಭಾರಿ ಗಾಳಿ ಮಳೆಗೆ  ಮರವೊಂದು ನೆಲಕ್ಕುರುಳಿದ್ದು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಬಳಿ ರಸ್ತೆ ಬದಿಯಲ್ಲಿದ್ದ ಮಾವಿನ ಮರವೊಂದು ಭಾರಿ ಗಾಳಿಯ ಪರಿಣಾಮ ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದ ರಿಪ್ಪನ್‌ಪೇಟೆ – ತೀರ್ಥಹಳ್ಳಿ ಸಂಪರ್ಕ ರಸ್ತೆಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಿತ್ತು.  ಈಗ ಬೈಪಾಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತಿದ್ದು ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.

Read Full News

ರಿಪ್ಪನ್‌ಪೇಟೆ : ಬಿರುಗಾಳಿ ಸಹಿತ ಭಾರಿ ಮಳೆಗೆ ಧರೆಗುರುಳಿದ ಮರಗಳು – ಲಕ್ಷಾಂತರ ರೂ ನಷ್ಟ | ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ |Rain with storm

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಭಾರಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ವಿಷಯ ತಿಳಿಯುತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಗುಡುಗು, ಸಿಡಿಲಬ್ಬರದ ಮಳೆ ಸುರಿದಿದ್ದು ಈ ವೇಳೆ ಬೀಸಿದ ಭಾರಿ ಪ್ರಮಾಣದ ಬಿರುಗಾಳಿಗೆ ಗ್ರಾಮದ ಅನೇಕ ಮನೆ,…

Read Full News

ಶಿವಮೊಗ್ಗ ಜಿಲ್ಲೆಯಲ್ಲಿ ಶೇ 80% ರಷ್ಟು ಮತದಾನ – ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಶೇ.80%ರಷ್ಟು ಮತದಾನವಾಗಿದೆ. ಶಾಂತಿಯುತವಾಗಿ ಮತದಾನ ನಡೆದಿದ್ದು, ಕೆಲವೆಡೆ ಇವಿಎಂ ಕೈ ಕೊಟ್ಟ ಹಿನ್ನೆಲೆಯಲ್ಲಿ ಮತದಾನ ಕೆಲ ಸ್ಥಗಿತಗೊಂಡಿತ್ತು.ವಿವಿಧ ಸುಮಾರು 20 ಮತದಾನ ಕೇಂದ್ರದಲ್ಲಿ ಹೆಚ್ಚುವರಿ ಸಮಯ ನೀಡಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹೇಳಿದರು. ಎಲ್ಲೂ ಮರು ಮತದಾನ ನಡೆಸುವ ಅಗತ್ಯ ಕಂಡು ಬಂದಿಲ್ಲವೆಂದು ತಿಳಿಸಿರುವ ಡಿಸಿಮತ ಎಣಿಕೆ ಸಂಬಂಧ ಅಗತ್ಯ ಸಿದ್ಧತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು. ಅಂತಿಮ ಹಾಗೂ ಒಟ್ಟಾರೆ ಶೇಕಡಾವಾರು ಮತದಾನದ ವಿವರ ಲಭ್ಯವಾಗಿದೆ. ಚುನಾವಣಾ…

Read Full News

ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ – ಇಬ್ಬರ ಸ್ಥಿತಿ ಗಂಭೀರ

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಸಮೀಪ ಅರೆಕಲ್ಲು ಬಳಿ ಆಗುಂಬೆ ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ.  ಭದ್ರಾವತಿಯ ದಡಮಘಟ್ಟದಿಂದ ಮಂಗಳೂರು ವೆನ್​ ಲಾಕ್ ಆಸ್ಪತ್ರೆಗೆ ರೋಗಿಯೊಬ್ಬರನ್ನ ನೋಡಲು ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಇವತ್ತು ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೈಕ್​ ನಲ್ಲಿ ವೆನ್​ಲಾಕ್ ಆಸ್ಪತ್ರೆಗೆ ಇಬ್ಬರು ಭದ್ರಾವತಿಯಿಂದ ಹೊರಟಿದ್ದರು. ಈ ವೇಳೆ ಆಗುಂಬೆಯ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್​ ಸ್ಪೀಡ್​ನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಡಿಕ್ಕಿಯಾದ ರಭಸಕ್ಕೆ ಬೈಕ್​ನಲ್ಲಿದ್ದ ಇಬ್ಬರು ಸಹ ಬಹಳಷ್ಟು ದೂರ…

Read Full News

EXIT POLL | ರಾಜ್ಯದಲ್ಲಿ ಅತಂತ್ರ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದ ನಾಲ್ಕು ಸಮೀಕ್ಷೆಗಳು – ಐದು ಸಮೀಕ್ಷೆಗಳಲ್ಲಿ ಯಾವ ಪಾರ್ಟಿಗೆ ಎಷ್ಟು ಸ್ಥಾನ??? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಕರ್ನಾಟಕ ಅತಂತ್ರ ಅಸೆಂಬ್ಲಿಯತ್ತ ಸಾಗುತ್ತಿದೆ ಎಂದು ಐದು ಎಕ್ಸಿಟ್ ಪೋಲ್‌ಗಳಲ್ಲಿ 4 ಭವಿಷ್ಯ ನುಡಿದಿವೆ ಮತ್ತು ಅವುಗಳಲ್ಲಿ ಬಹುಪಾಲು ಕಾಂಗ್ರೆಸ್‌ಗೆ ಸ್ವಲ್ಪಮಟ್ಟಿನ ಲಾಭವಿರುವ ಕುರಿತು ಭವಿಷ್ಯ ನುಡಿದಿವೆ. ಎಚ್‌ಡಿ ಕುಮಾರಸ್ವಾಮಿ ಅವರ ಜನತಾ ದಳ ಸೆಕ್ಯುಲರ್ ಕಿಂಗ್‌ಮೇಕರ್ ಆಗುವ ಸಾಧ್ಯತೆಯಿದೆ ಎಂದು ಹೇಳಿವೆ. 224 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 113 ಸ್ಥಾನಗಳನ್ನು ಪಟೆಯಬೇಕಿದೆ.ಕೇವಲ ಒಂದು ಎಕ್ಸಿಟ್ ಪೋಲ್ – ಝೀ ನ್ಯೂಸ್ ಮ್ಯಾಟ್ರಿಜ್ ಏಜೆನ್ಸಿ – ಕಾಂಗ್ರೆಸ್‌ಗೆ ಗರಿಷ್ಠ ಮಿತಿ 118 ಎಂದು ಭವಿಷ್ಯ ನುಡಿದಿದೆ. ಇನ್ನೆರಡು…

Read Full News

ಮಧ್ಯಾಹ್ನ 03 ಗಂಟೆ ವರೆಗಿನ ಶಿವಮೊಗ್ಗ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾನದ ವಿವರ

ಮಧ್ಯಾಹ್ನ 03 ಗಂಟೆಗೆ ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತದಾನ ವಿವರ. 111- ಶಿವಮೊಗ್ಗ ರೂರಲ್ 58.25% 112 – ಭದ್ರಾವತಿ 53.16% 113 – ಶಿವಮೊಗ್ಗ 50.02% 114 – ತೀರ್ಥಹಳ್ಳಿ 60.00% 115 – ಶಿಕಾರಿಪುರ  61.08% 116 – ಸೊರಬ  57.92% 117 – ಸಾಗರ 54.51% ಒಟ್ಟು 55.39%

Read Full News

ಕುಟುಂಬದವರೊಂದಿಗೆ ಆಗಮಿಸಿ ಮತ ಚಲಾಯಿಸಿದ ಬೇಳೂರು ಗೋಪಾಲಕೃಷ್ಣ|election

ಸಾಗರ : ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರು ಬೇಳೂರು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಮ್ಮ ಪತ್ನಿ ರಂಜಿತರಾಧ ಮತ್ತು ಕುಟುಂಬದ ಸದಸ್ಯರೊಂದಿಗೆ ಬೇಳೂರು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.

Read Full News

ಹೊಂಬುಜ,ಮೂಲೆಗದ್ದೆ ಮತ್ತು ಮಳಲಿ ಶ್ರೀಗಳಿಂದ ಮತ ಚಲಾವಣೆ|election

ಹೊಂಬುಜ,ಮೂಲೆಗದ್ದೆ ಮತ್ತು ಮಳಲಿ ಶ್ರೀಗಳಿಂದ ಮತ ಚಲಾವಣೆ ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೊಂಬುಜ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಸ್ವಾಮಿಗಳು ಹೊಸನಗರ ತಾಲೂಕಿನ ಹುಂಚ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮೂಲೆಗದ್ದೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಸರ್ಕಾರಿ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

Read Full News

ಕುಟುಂಬದೊಂದಿಗೆ ಆಗಮಿಸಿ ಮತ ಚಲಾಯಿಸಿದ ಆರಗ ಜ್ಞಾನೇಂದ್ರ|election

ತೀರ್ಥಹಳ್ಳಿ:  ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಗುಡ್ಡೆಕೊಪ್ಪದ ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಒಂದೇ ಪಕ್ಷದಿಂದ ದಾಖಲೆಯ ಹತ್ತನೇ ಬಾರಿಗೆ ಸ್ಪರ್ಧಿಸುತ್ತಿರುವ,  ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ತಮ್ಮ ಕುಟುಂಬದ ಸದಸ್ಯರೊಂದಿಗೆ, ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಹಾಗೂ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.

Read Full News

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಕಿಮ್ಮನೆ ರತ್ನಾಕರ್|election

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ  ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ : ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೊಪ್ಪುಗುಡ್ಡೆ ಬೂತ್ ನಂಬರ್-180 ರಲ್ಲಿ ಬಂದು ಮತ ಚಲಾವಣೆ ಮಾಡಿದರು. ಜೊತೆಯಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಶಬನಮ್ ಕೂಡ ಮತ ಚಲಾಯಿಸಿದರು.

Read Full News

ಕುಟುಂಬದವರೊಂದಿಗೆ ಆಗಮಿಸಿ‌ ಮತ ಚಲಾಯಿಸಿದ ಶಾಸಕ ಹರತಾಳು ಹಾಲಪ್ಪ|election

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಹರತಾಳು ಇಂದು ತಮ್ಮ ಪತ್ನಿ ಯಶೋಧ ಹಾಲಪ್ಪ ಮತ್ತು ಕುಟುಂಬದ ಸದಸ್ಯರೊಂದಿಗೆ ಹರತಾಳು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ…

Read Full News

Election | ಮದ್ಯ ಸೇವಿಸಿ ಚುನಾವಣೆ ಕಾರ್ಯಕ್ಕೆ ಹಾಜರಾದ ಸಿಬ್ಬಂದಿ – ಆರೋಪ : ಇಬ್ಬರು ಸಿಬ್ಬಂದಿಗೆ ವೈದ್ಯಕೀಯ ಪರೀಕ್ಷೆ

ರಾಜ್ಯಾದ್ಯಂತ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು ಮತದಾನಕ್ಕೆ ಅಗತ್ಯವಾದ ವಿದ್ಯುನ್ಮಾನ ಮತಯಂತ್ರ (ಇವಿಎಂ) ಸೇರಿ ವಿವಿಧ ವಸ್ತುಗಳ ಜತೆಗೆ ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ನಿಯೋಜಿಸಲು ಸೋಮವಾರ ಆಯಾ ಕ್ಷೇತ್ರಗಳಲ್ಲಿ ಸೋಮವಾರ ಮಸ್ಟರಿಂಗ್‌ ಕಾರ್ಯ ನಡೆದಿದೆ.  ಈ ನಡುವೆ ಮದ್ಯ ಸೇವನೆ ಶಂಕೆ ಮೇರೆಗೆ ಇಬ್ಬರು ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿರುವುದು ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ್ದ ಇಬ್ಬರು ಚುನಾವಣಾ ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಒಬ್ಬರು ತೋಟಗಾರಿಕೆ ಇಲಾಖೆಯ ಸಿಬ್ಬಂದಿ,ಇನ್ನೂಬ್ಬರು…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.