w
Headlines

ಕೆಲವೇ ಕ್ಷಣಗಳಲ್ಲಿ ಪ್ರಧಾನಿಯಿಂದ ಕುವೆಂಪು ವಿಮಾನ ನಿಲ್ದಾಣ ಉದ್ಘಾಟನೆ – ವಿಶೇಷತೆ ಏನು ಗೊತ್ತಾ..???|airport

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಬೆಳಿಗ್ಗೆ 11.30ಕ್ಕೆ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಇದಕ್ಕಾಗಿ ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ಬಳಿ ಬೃಹತ್‌ ವೇದಿಕೆ ನಿರ್ಮಿಸಲಾಗಿದೆ. 1 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಒಂದೂವರೆಲಕ್ಷದಷ್ಟು ಜನ ಸೇರುವ ನಿರೀಕ್ಷೆ ಇದೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ….

Read Full News

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ|mescom

ರಿಪ್ಪನ್‌ಪೇಟೆ : ಇತ್ತೀಚೆಗೆ ಹರತಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿತರಿಸಿದರು. ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಶೇಷಗಿರಿ ಬಿನ್ ಬಸವನಾಯ್ಕ ರವರು ಮೃತಪಟ್ಟಿದ್ದು, ಮೃತರ ವಾರಸುದಾರರಾದ ಸುಧಾರಾಣಿ ಶೇಷಗಿರಿಯವರಿಗೆ ಸಾಗರದಲ್ಲಿ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು…

Read Full News

ಜನವಾರ್ತೆ ಪತ್ರಿಕೆಯ ಸಂಪಾದಕ ನಾಗರಾಜ್ ಇನ್ನಿಲ್ಲ

ಶಿವಮೊಗ್ಗ ಪತ್ರಿಕಾ ರಂಗದಲ್ಲಿ ಸಂಚಲನ ಮೂಡಿಸಿದ್ದ ಜನವಾರ್ತೆ ಕನ್ನಡ ದಿನಪತ್ರಿಕೆಯ ಸಂಪಾದಕರಾದ  ಜಿ.ಎಸ್. ನಾಗರಾಜ್ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಅವರು ಸ್ಪಂದಿಸದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.. ಮುಂಗೋಪಿ, ಅಷ್ಟೇ ಮೃದು ಸ್ವಭಾವದ ನಾಗರಾಜ್ 1996 ರಲ್ಲಿ ಶಿವಮೊಗ್ಗ ಪತ್ರಿಕಾ ರಂಗದಲ್ಲಿ ಬದಲಾವಣೆ ತಂದು ಸಂಚಲನ ಮೂಡಿಸಿದ್ದ ಧೀಮಂತ ಪತ್ರಿಕಾ ಸಂಪಾದಕ ಹಾಗೂ ಸಂಸ್ಥಾಪಕರಾಗಿದ್ದರು. ಬಹುತೇಕ ಪತ್ರಕರ್ತರು ಇವರ…

Read Full News

ಸೌಮ್ಯ ಪೆರ್ನಾಜೆಗೆ ಗಡಿನಾಡ ಧ್ವನಿ ” ಮಧು ಭೂಷಣ” ರಾಜ್ಯ ಪ್ರಶಸ್ತಿ ಪ್ರಧಾನ|award

ಸೌಮ್ಯ ಪೆರ್ನಾಜೆಗೆ ಗಡಿನಾಡ ದ್ವನಿ ” ಮಧು ಭೂಷಣ”   ರಾಜ್ಯ ಪ್ರಶಸ್ತಿ ಪ್ರಧಾನ  ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ) ಇದರ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆ ರವರಿಗೆ ಮಧುಭೂಷಣ ರಾಜ್ಯ ಪ್ರಶಸ್ತಿ ಪ್ರಧಾನ  ಮಾಡಿರುತ್ತಾರೆ. ಪ್ರಶಸ್ತಿ ಪ್ರಧಾನ ಮಹಾ ಸಮ್ಮೇಳನವು ಗಡಿನಾಡ ಪ್ರದೇಶವಾದ ಒಡ್ಯ ಸಹಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ 2023 (25) ಫೆಬ್ರವರಿ ರಂದು ನಡೆಯಿತು. ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಮಲಾರ್ ಜಯರಾಮ್ ರೈ…

Read Full News

ರಿಪ್ಪನ್‌ಪೇಟೆ : ದೇವಸ್ಥಾನದ ಬೀಗ ಮುರಿದು ಸಾವಿರಾರು ರೂ ಕಳ್ಳತನ|theft

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವುಣೆ ಗ್ರಾಮದ ಶ್ರೀ ಕಲಾನಾಥೇಶ್ವರ ದೇವಸ್ಥಾನ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಕಳ್ಳರು ರಾತ್ರಿಯ ವೇಳೆಯಲ್ಲಿ ದೇವಸ್ಥಾನದ ಮುಂಭಾಗಿಲಿನ ಬೀಗ ಮುರಿದು ದೇವಸ್ಥಾನದ ಒಳಭಾಗಕ್ಕೆ ಪ್ರವೇಶಿಸಿ ದೇವರ ಮುಂಭಾಗದಲಿದ್ದ ಒಂದು ಕಬ್ಬಿಣದ ಮತ್ತು ಸ್ಟೀಲ್ ನ ಕಾಣಿಕೆ ಡಬ್ಬಿಗಳನ್ನು ದೇವಸ್ಥಾನದ ಹೊರಭಾಗ ಎತ್ತಿಕೊಂಡು ಹೋಗಿ ಅಲ್ಲಿ ಅವುಗಳ ಬೀಗವನ್ನು ಮುರಿದು ಅದರ ಒಳಭಾಗದಲ್ಲಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಕಾಣಿಕೆ ಡಬ್ಬಿಗಳು…

Read Full News

ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ – ಕ ಸಾ ಪ|airport

ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ ರಿಪ್ಪನ್ ಪೇಟೆ :ಶಿವಮೊಗ್ಗದ ಸೋಗಾನೆಯಲ್ಲಿ ಆರಂಭವಾಗಲಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಕೇಂದ್ರ ಸರ್ಕಾರ ಉದ್ಘಾಟನೆಯ ದಿನದಂದು ಘೋಷಣೆ ಮಾಡಬೇಕೆಂದು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ.ಮ. ನರಸಿಂಹ ಆಗ್ರಹಿಸಿದರು. ಶನಿವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಕುವೆಂಪು ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿಮಾನ ನಿಲ್ದಾಣದ ನಾಮ ಫಲಕಗಳಲ್ಲಿ ಕನ್ನಡ ಭಾಷೆಯನ್ನು ನಮೂದಿಸಬೇಕು . ಕನ್ನಡ ನಾಮಫಲಕವನ್ನು ಮಧ್ಯಂತರದಲ್ಲಿ ತೆರವುಗೊಳಿಸುವ…

Read Full News

ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ – ಯಡಿಯೂರಪ್ಪ ಸ್ಪಷ್ಟನೆ|BSY

ನಾನು ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ಅಧಿವೇಶನದಲ್ಲಿ ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೆ. ಹಾಗೆಂದರೆ ರಾಜಕಾರಣದಿಂದ ದೂರ ಉಳಿಯುವುದಲ್ಲ.  ರಾಜಕಾರಣದಲ್ಲಿ ಇದ್ದುಕೊಂಡೇ ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಇದರ ಬಗ್ಗೆ ಯಾವುದೇ ಸಂಶಯವಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ.ವಿದಾಯದ ಬಳಿಕ ಕೆಲವರು ನಾನು ಚುನಾವಣೆಗೆ ನಿಲ್ಲಬೇಕು ಎಂದು…

Read Full News

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ|excise

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read Full News

ಮಾರ್ಚ್ 1 ರಿಂದ ಸರ್ಕಾರಿ ನೌಕರರು ಕೆಲಸಕ್ಕೆ ಬರಲ್ಲ – ಯಾವ ಸರ್ಕಾರಿ ಕೆಲಸವು ನಡೆಯುವುದಿಲ್ಲ : ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಷಡಾಕ್ಷರಿ

ಮಾರ್ಚ್ 1 ರಿಂದ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ‌ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.  ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗ ಜಾರಿ ಹಾಗೂ ಎನ್​ಪಿಎಸ್​ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿ ಮಾಡಬೇಕೆಂಬ ಬೇಡಿಕೆಯನ್ನಿಟ್ಟುಕೊಂಡ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿರುವುದಾಗಿ…

Read Full News

ಆನಂದಪುರ ಸಮೀಪದ ಕೆಂಜಿಗಾಪುರದಲ್ಲಿ ಒಂಟಿ ಮನೆ ದರೋಡೆ – ಒಂದೇ ವಾರದಲ್ಲಿ ಎರಡು ಬಾರಿ ದರೋಡೆಗೊಳಗಾದ ಭಟ್ಟರ ಮನೆ|Robbery

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆತಂಕ ಮೂಡಿಸುವಂತಹ ದರೋಡೆ ಪ್ರಕರಣವೊಂದು ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ಸಮೀಪದ ಕೆಂಜಿಗಾಪುರ ಭಟ್ಟರೊಬ್ಬರ ಮನೆಯಲ್ಲಿ ರಾಬರಿ ನಡೆದಿದೆ. ಎಫ್​ಐಆರ್​ನಲ್ಲಿ ದಾಖಲಾಗಿರುವ ಪ್ರಕಾರ ಎರಡು ಸಲ ರಾಬರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ ಮೂರು ಸಲ ನಡೆದಿರಬಹುದು ಎನ್ನಲಾಗುತ್ತದೆ.  ಒಂದೇ ಮನೆಯನ್ನು ಟಾರ್ಗೆಟ್ ಮಾಡಿ ಕೇವಲ ಒಂದು ವಾರದಲ್ಲಿ ಎರಡು ಸಲ ರಾಬರಿ ಮಾಡಲಾಗಿದೆ.  ಹಿರಿಯ ವೃದ್ಧರನ್ನ ಕೈ ಕಾಲು ಕಟ್ಟಿ ರಾಬರಿ ಮಾಡಿ ಹೋಗುತ್ತಿರುವವರು ಯಾರು?…

Read Full News

ವಿಐಎಸ್‌ಎಲ್ ಪುನಶ್ಚೇತನಕ್ಕೆ ಆಗ್ರಹಿಸಿ ಕರೆ ನೀಡಿದ್ದ ಭದ್ರಾವತಿ ಬಂದ್‌ ಯಶಸ್ವಿ|VSIL

ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಮುಚ್ಚುವ ನಿರ್ಧಾರದ ಬೆನ್ನಲ್ಲೇ ಗುತ್ತಿಗೆ ಕಾರ್ಮಿಕರು ಆರಂಭಿಸಿದ ಪ್ರತಿಭಟನೆ ಗುರುವಾರಕ್ಕೆ (ಫೆ.24) 37ನೇ ದಿನಕ್ಕೆ ಕಾಲಿಟ್ಟಿದೆ. ವಿಐಎಸ್‌ಎಲ್ ಮುಚ್ಚುವ ಕೇಂದ್ರ ಸರ್ಕಾರದ ನಿರ್ಧಾರದಿಂದ ಆಕ್ರೋಶ ಗೊಂಡಿರುವ ಗುತ್ತಿಗೆ ಕಾರ್ಮಿಕರು ಗುರುವಾರ ಕರೆ ನೀಡಿರುವ ಭದ್ರಾವತಿ ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕಾರ್ಖಾನೆ ಜತೆಗೆ ತಮ್ಮನ್ನು ಉಳಿಸಿ ಎಂದು ಆಗ್ರಹಿಸಿ ವಿಐಎಸ್‌ಎಲ್ ಕಾರ್ಮಿಕರು ಕಳೆದ 37 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಶಿವಮೊಗ್ಗ ಚಲೋ ನಡೆಸಿದ್ದ ಗುತ್ತಿಗೆ ಕಾರ್ಮಿಕರು, ಶಿವಮೊಗ್ಗ…

Read Full News

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಹೆಚ್ ಡಿ ಕುಮಾರಸ್ವಾಮಿ|HDK

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಎಚ್ ಡಿ ಕುಮಾರಸ್ವಾಮಿ ರಿಪ್ಪನ್ ಪೇಟೆ : ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಾಜ್ಯದ 28 ಜಿಲ್ಲೆಗಳಲ್ಲಿ ಪಂಚರತ್ನ ರಥ ಯಾತ್ರೆಯ ಮೂಲಕ ಪ್ರವಾಸ ಕೈಗೊಂಡಿದ್ದೇನೆ. ಇತರೆ ಪಕ್ಷಗಳಲ್ಲಿ ನಾಯಕರುಗಳ ಗುಂಪೆ ಇದೆ ಆದರೆ ನನ್ನದು ಏಕಾಂಗಿ ಹೋರಾಟ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಶುಕ್ರವಾರ ಸಮೀಪದ ಹುಂಚದ ಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಸಲುವಾಗಿ ಆಗಮಿಸಿದ್ದ ಅವರು ಸುದ್ದಿಗಾರರನ್ನು…

Read Full News

ಹೊಂಬುಜಾ ಜಗನ್ಮಾತೆ ಪದ್ಮಾವತಿ ದರ್ಶನಾಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ|hombuja

ರಿಪ್ಪನ್‌ಪೇಟೆ;-ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಇಂದು ಹೊಂಬುಜ ಜೈನಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ  ದರ್ಶನಾಶಿರ್ವಾದ ಪಡೆದರು. ನಂತರ ಮಠದ ಜಗದ್ಗುರು ಡಾ.ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಶ್ರೀಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಿ ಅಶೀರ್ವದಿಸಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್,ಎಂ.ಎಲ್.ಸಿ. ಬೋಜೆಗೌಡರು,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್,ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್…

Read Full News

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೇ ವಿಮಾನ ಆಗಮನ – 4 ಕಾರು ಸಹಿತ ಆಗಮಿಸಿದ ಪ್ರಧಾನಿ ಭದ್ರತಾ ಪಡೆ|SPG

ಶಿವಮೊಗ್ಗ : ಇವತ್ತು ಇಂಡಿಯನ್ ಏರ್ ಫೋರ್ಸ್ ನ ಎರಡನೆ ವಿಮಾನ ಸೋಗಾನೆಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 11.30ರ ಹೊತ್ತಿಗೆ ಆಗಮಿಸಿತು. ರಷ್ಯಾ ನಿರ್ಮಿತ ಇಲ್ಯೂಷಿನ್ 76 ಮಾದರಿಯ ವಿಮಾನ ಇದಾಗಿದೆ. ಭಾರತೀಯ ವಾಯು ಸೇನೆಯಲ್ಲಿ ಕ್ಯಾರಿಯರ್ ವಿಮಾನ. ಸೇನೆಗೆ ಅಗತ್ಯವಿರುವ ಸರಕು ಸಾಗಣೆಗೆ ಈ ವಿಮಾನ ಬಳಕೆಯಾಗುತ್ತದೆ. ವಿಮಾನದಲ್ಲಿ SPG ತಂಡ ಭಾರತೀಯ ವಾಯು ಸೇನೆಯ ಕ್ಯಾರಿಯರ್ ವಿಮಾನದಲ್ಲಿ ದೆಹಲಿಯಿಂದ ಭದ್ರತಾ ಪಡೆಗಳ ತಂಡ ಆಗಮಿಸಿತು. ವಿಮಾನದಲ್ಲಿ ನಾಲ್ಕು ಕಾರುಗಳ ಸಹಿತ ಹಲವು ಸಿಬ್ಬಂದಿ ಆಗಮಿಸಿದರು….

Read Full News

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಎರಡು ಅಂಗಡಿಗಳ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಬಂಗ್ಲಿದಿಬ್ಬ ಸರ್ಕಲ್ ನಲ್ಲಿರುವ ದಿನಸಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಚಂದ್ರಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಬೆಳ್ಳೂರು ಗ್ರಾಮದ ಕೋಳಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ…

Read Full News

ಕೊರೊನಾ ಪಾಸಿಟಿವ್ ಹಿನ್ನಲೆ ರಜೆ ಮೇಲೆ ಹೋಗಿದ್ದ ಕಾನ್ಸ್ ಟೇಬಲ್ ನಾಪತ್ತೆ – ಅದೇ ಸ್ಟೇಷನ್ ನಲ್ಲಿ ದಾಖಲಾಯ್ತು ಕೇಸ್|missing

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್​ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್​ಐಆರ್ ಕೂಡ ದಾಖಲಾಗಿದೆ.   ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ  24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.  ಆನಂತರ  ವಾಪಸ್‌ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ…

Read Full News

ರಿಪ್ಪನ್‌ಪೇಟೆ : ನುಗ್ಗೆಕಾಯಿ ಕಿತ್ತ ವಿಚಾರದಲ್ಲಿ ಗಲಾಟೆ – ಒಬ್ಬನಿಗೆ ಮೂವರಿಂದ ಹಲ್ಲೆ,ಜೀವಬೆದರಿಕೆ|Assault

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಲ ಗ್ರಾಮದಲ್ಲಿ ನುಗ್ಗೆಕಾಯಿ ವಿಚಾರಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದೆ.  ಸೋಮವಾರ ಸಂಜೆ ಕೆಂಚನಾಲ ಗ್ರಾಮದ ರಾಮ್ ಕುಮಾರ್  ರಿಪ್ಪನ್​ಪೇಟೆಗೆ ಹೋಗಿ ವಾಪಸ್​ ಮನೆಗೆ ಬರುವಾಗ, ಅದೇ ಗ್ರಾಮದ ನಿವಾಸಿ  ನಾಗೇಶ್ ತನ್ನ ಮನೆ ಹಿತ್ತಲಿನಲ್ಲಿ  ಬೆಳೆದಿದ್ದ ನುಗ್ಗೆಕಾಯಿಯನ್ನು ಕೀಳುತ್ತಿರುವುದು ಕಾಣಿಸಿದೆ. ಸಹಜವಾಗಿಯೇ ನಮ್ಮನೆಯ ಹಿತ್ಲಿಂದ ಯಾಕೆ ನುಗ್ಗೆಕಾಯಿ ಕಿತ್ಕೊಂಡು ಹೋಗ್ತಿದ್ದಿಯಾ, ಹೇಳೋದು ಕೇಳೋದು ಏನು ಇಲ್ವಾ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ಸಿಟ್ಟಾದ ವ್ಯಕ್ತಿ ಅದು ನಿನ್ನ…

Read Full News

ಶ್ರೀಕ್ಷೇತ್ರ ಹೊಂಬುಜಾ ಮಠದಲ್ಲಿ ಹಲವು ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ಶಿಬಿರ|hombuja

ರಿಪ್ಪನ್‌ಪೇಟೆ : ಸಮೀಪದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಭಾವುಕ ಕ್ಷಣಗಳಿಗೆ ಸಾಕ್ಷಿಯಾಗುವಂತಹ ಕಾರ್ಯಕ್ರಮವೊಂದನ್ನು ಹೊಂಬುಜ ಮಠದ ವತಿಯಿಂದ ಆಯೋಜಿಸಲಾಗಿತ್ತು. ಕೆಲವೊಂದು ಕಾರಣಗಳಿಂದ ಕೈ ಮತ್ತು ಕಾಲು ಕಳೆದುಕೊಂಡ 72 ವಿಕಲಚೇತನರಿಗೆ ಕೈ ಮತ್ತು ಕಾಲು ಉಚಿತವಾಗಿ ಜೋಡಿಸುವ ಕಾರ್ಯಕ್ರಮದಲ್ಲಿ ಕಣ್ಣಂಚನ್ನು ತೇವಗೊಳಿಸುವಂತಹ ಕೆಲವೊಂದು ಘಟನೆಗಳು ನಡೆದವು. ಹನ್ನೊಂದು ವರ್ಷದ ವಿಕಲಚೇತನ ಬಾಲಕ ಅಪಘಾತದಲ್ಲಿ ಎರಡು ವರ್ಷದ ಹಿಂದೆ ಕಾಲು ಕಳೆದುಕೊಂಡು ತನ್ನ ಬಾಳಿನಲ್ಲಿನ ಇನ್ನು ನಡೆಯಲು ಸಾಧ್ಯವೇ ಇಲ್ಲವೆನೋ ಎಂಬ ಮನಸ್ಥಿತಿಯಲ್ಲಿದ್ದ… ಆ ಬಾಲಕನಿಗೆ ಕಾಲು ಜೋಡಿಸುತ್ತಲೇ…

Read Full News

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ತೀರ್ಥಹಳ್ಳಿ ಕಾಂಗ್ರೆಸ್ ನ ಜೋಡೆತ್ತುಗಳ ವಾಗ್ದಾಳಿ|RMM-KIMMANE

ತೀರ್ಥಹಳ್ಳಿ : ಜನರಿಂದ ಆಯ್ಕೆಯಾದಂತಹ ಒಬ್ಬ ಜನಪ್ರತಿನಿಧಿಯನ್ನು ಒಬ್ಬ ಅಧಿಕಾರಿ ಹೊಡಿಯುತ್ತಾರೆ ಅಂದ್ರೆ ಏನರ್ಥ ? ಜ್ಞಾನೇಂದ್ರ ಗೆ ವಿಧಾನಸಭೆಯಲ್ಲಿ ಯಾವುದಾದರೂ ಅಧಿಕಾರಿ ಹೊಡೆದರೆ ಅದರ ಉತ್ತರ ಏನು ?ಒಬ್ಬ ಅಧಿಕಾರಿ ಆರಗ ಜ್ಞಾನೇಂದ್ರ ಅವರಿಗೆ ಹೊಡೆದರೆ ಅವರನ್ನು ಅಧಿಕಾರದಲ್ಲಿ ಇಡುತ್ತಾರ ಇವರಿಗೆ ಕಾಮನ್ ಸೆನ್ಸ್ ಬೇಡವಾ ? ನನ್ನ ಅನಿಸಿಕೆ ಜ್ಞಾನೇಂದ್ರರಂತವರಿಗೆ ಅಧಿಕಾರ ಕೊಟ್ಟಿದ್ದೆ ತಪ್ಪು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ಪಿಡಿಓ ಅವರನ್ನು ಕೆಲಸದಿಂದ ತೆಗೆಯಬೇಕು ಎಂದು ಮಂಗಳವಾರ…

Read Full News

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೊಟ್ಟಮೊದಲ ವಿಮಾನ|airport

ಶಿವಮೊಗ್ಗದ ಸೋಗಾನೆಯ ನೂತನ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಇವತ್ತು ಮಧ್ಯಾಹ್ನ ಬಂದಿಳಿದಿದೆ. ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಸೋಗಾನೆಯ ಕುವೆಂಪು ವಿಮಾನ ನಿಲ್ದಾಣದ ರನ್ ವೇಯಲ್ಲಿ ಬಂದಿಳಿದಿದ್ದು ಯಾವುದೇ ಅಡೆತಡೆ ಉಂಟಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ವಾಯು ಸೇನೆಯ ಬೋಯಿಂಗ್ 737 – 7HI ಮಾದರಿಯ ವಿಮಾನ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದೆ. ಮಧ್ಯಾಹ್ನ 12 ಗಂಟೆಗೆ ಈ ವಿಮಾನ ದೆಹಲಿಯಿಂದ ಹೊರಟಿತ್ತ್ತು. ಮಧ್ಯಾಹ್ನ 2.30ರ ಹೊತ್ತಿಗೆ ವಿಮಾನ ಲ್ಯಾಂಡ್…

Read Full News

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು ಸಂಪುಟ ನಿರ್ಧಾರ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸೋಮವಾರ ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ಈ ಹಿಂದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಕುವೆಂಪು ಅವರ ಹೆಸರನ್ನು ಪ್ರಸ್ತಾಪಿಸಿದ್ದರು.  ’20ನೇ ಶತಮಾನ ಕಂಡ ಈ ದೇಶದ ಶ್ರೇಷ್ಠ ಕವಿ. ಜ್ಞಾನಪೀಠ ಪ್ರಶಸ್ತಿ ಪಡೆದವರು. ರಾಜ್ಯದ ಗೀತೆಯನ್ನು ರಚಿಸಿದ ರಾಷ್ಟ್ರಕವಿ ಕುವೆಂಪು ಅವರ…

Read Full News

ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು|robbery

ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ನಗರದ ವಿನೋಬನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಒಬ್ಬಂಟಿಯಾಗಿ ಬರುವ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಖತರ್ ನಾಕ್ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಬಸವನ ಗಂಗೂರು ಚಾನೆಲ್ ಮೇಲೆ ಬೊಮ್ಮನ್ ಕಟ್ಟೆಯ ಅನಿಲ್ ಕುಮಾರ್(42), ಕೋಹಳ್ಳಿಯ ಶಿವನಾಯ್ಕ (34), ಆಯನೂರಿನ ಶಿವಕುಮಾರ್ (45) ಮತ್ತು ಸಿರಿಗೆರೆಯ ಖಲೀಂ ಬಂಧಿತ ಆರೋಪಿಗಳು. ಈ ದರೋಡೆ ಸಂಚಿನ ಬಗ್ಗೆ ಮಾಹಿತಿ ತಿಳಿದ ವಿನೋಬನಗರ ಪಿಎಸ್ಐ ಸಾಗರ್ಕರ್ ನೇತೃತ್ವದಲ್ಲಿ ಪೊಲೀಸರ ತಂಡ…

Read Full News

ಫೆ.24 ರ ಶುಕ್ರವಾರ ಶ್ರೀಕ್ಷೇತ್ರ ಹೊಂಬುಜಾಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ – ಹುಂಚದಕಟ್ಟೆಯಲ್ಲಿ ಗ್ರಾಮ ವಾಸ್ತವ್ಯ|JDS

ತೀರ್ಥಹಳ್ಳಿ : ಫೆ 23 ಮತ್ತು 24 ರಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ ನಡೆಯಲಿದ್ದು ಫೆ.24 ರ ಶುಕ್ರವಾರ ಶ್ರೀ ಕ್ಷೇತ್ರ ಹೊಂಬುಜಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಫೆ.23 ರಂದು ಹುಂಚದಕಟ್ಟೆ ಗ್ರಾಮದಲ್ಲಿ ರಾತ್ರಿ ಗ್ರಾಮ ವಾಸ್ತವ್ಯ ಹೂಡಲಿರುವ ಮಾಜಿ ಸಿಎಂ ಕುಮಾರಸ್ವಾಮಿ ಶುಕ್ರವಾರ ಬೆಳಿಗ್ಗೆ ನಿಟ್ಟೂರು ನಾರಾಯಣ ಗುರು ಮಠಕ್ಕೆ ಭೇಟಿ ನೀಡಿ ನಂತರ ಹೊಂಬುಜಾ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಕುಮಾರಸ್ವಾಮಿಯವರ ಪಂಚರತ್ನ ರಥಯಾತ್ರೆ ಸಾಗುವುದು…

Read Full News

ಶಿವ ನಾಮ ಸ್ಮರಣೆಯಿಂದ ಸಂಕಷ್ಟ ಪರಿಹಾರ – ಮಳಲಿ ಶ್ರೀಗಳು|shivarathri

ಶಿವ ನಾಮಸ್ಮರಣೆಯಿಂದ ಸಂಕಷ್ಟ ಪರಿಹಾರ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ : ಸಂಸ್ಕೃತಿ ಸಂಸ್ಕಾರ ಪ್ರತಿಯೊಬ್ಬರು ನಿತ್ಯ ಬದುಕಿನಲ್ಲಿ ಅಳವಡಿಸಿಕೊಂಡಾಗ ಬದುಕು ನೆಮ್ಮದಿಯಿಂದ ಕೂಡಿರುತ್ತದೆ. ಶಿವರಾತ್ರಿಯ ದಿನ ಮಾತ್ರ ಶಿವನಾಮಸ್ಮರಣೆ ಮಾಡಿದರೆ ಸಾಲದು ನಿತ್ಯ ಶಿವಮಂತ್ರ ಪಠಿಸುವುದರಿಂದ ಸಂಕಷ್ಟ ಹರಿಹಾರವಾಗುವುದು ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡಯ ಇತಿಹಾಸ ಪ್ರಸಿದ್ದ ಹಾಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಮಹಾಶಿವರಾತ್ರಿಯ ಅಂಗವಾಗಿ ಹಾಲೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಧರ್ಮಸಭೆಯ…

Read Full News

ತುಂಗಾ ನದಿಯಲ್ಲಿ ಯುವಕನ ಶವ ಪತ್ತೆ – ಆತ್ಮಹತ್ಯೆ ಶಂಕೆ|TUNGA

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾನಿ ಬಳಿಯ ಹಿಂಭಾಗದ ತುಂಗಾ ನದಿಯಲ್ಲಿ ಭಾನುವಾರ ತೆಂಗಿನ ಕೊಪ್ಪದ ಯುವಕನ ಶವ ಪತ್ತೆಯಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರಜತ್(26) ಮೃತಪಟ್ಟ ಯುವಕ. ಸಾಲೂರು ಹೊಸಮನೆ ತೆಂಗಿನಕೊಪ್ಪದ ಪ್ರಜತ್  4 ವರ್ಷದ ಹಿಂದೆ ಹಾವು ಕಚ್ಚಿದ ಕಾರಣ ತಾಯಿಯನ್ನು ಕಳೆದುಕೊಂಡಿದ್ದರು ಹಾಗೂ ತಂದೆ ಕೂಡ ಕ್ಯಾನ್ಸರ್ ರೋಗಕ್ಕೆ ಇತ್ತೀಚಿಗೆ ಬಲಿಯಾಗಿದ್ದರು. ಪ್ರಜತ್ ಸಾಲದ ಕಾರಣ ಹಾಗೂ ಒಳ್ಳೆಯ ಉದ್ಯೋಗ ಇಲ್ಲದ ಕಾರಣ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗುತ್ತಿದೆ….

Read Full News

ಕಾಂಬೋಡಿಯಾದಲ್ಲಿ ತೀರ್ಥಹಳ್ಳಿ ಟೆಕ್ಕಿ ಒತ್ತೆ|software engineer

ತೀರ್ಥಹಳ್ಳಿ : ಸಾಫ್ಟ್‌ವೇರ್‌(software) ಕಂಪೆನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ತೀರ್ಥಹಳ್ಳಿಯ ಟೆಕ್ಕಿಯೊಬ್ಬರನ್ನು ಕಾಂಬೋಡಿಯಾದಲ್ಲಿ ಒತ್ತೆಯಾಳಾಗಿ ಇರಿಸಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ವಿಷಯ ಕೇಂದ್ರ ಸರಕಾರದ ಅಂಗಳಕ್ಕೆ ತಲುಪಿದೆ. ತೀರ್ಥಹಳ್ಳಿಯ ಕಿರಣ್‌ ಶೆಟ್ಟಿ ಅವರಿಗೆ ಥಾಯ್ಲ್ಯಾಂಡ್(thayland) ಕಂಪೆನಿಯಲ್ಲಿ ಉದ್ಯೋಗ ಹಾಗೂ ಒಳ್ಳೆಯ ಸಂಬಳದ ಭರವಸೆ ನೀಡಲಾಗಿತ್ತು. ಇದನ್ನು ನಂಬಿದ ಕಿರಣ್‌ ಕಾಂಬೋಡಿಯಾಕ್ಕೆ ಪ್ರಯಾಣ ಬೆಳೆಸಿದ್ದರು. ಆದರೆ ಬಳಿಕ ಅವರನ್ನು ಒತ್ತೆಯಾಳಾಗಿಟ್ಟುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಕಿರಣ್‌ ಶೆಟ್ಟಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದು, ಚಿಕ್ಕ ಮಗು ಕೂಡ ಇದೆ. ಈಗ…

Read Full News

ರಿಪ್ಪನ್‌ಪೇಟೆ : ಸಡಗರ, ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಜರುಗಿದ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮ|shivarathri

ರಿಪ್ಪನ್‌ಪೇಟೆ : ಮಹಾಶಿವರಾತ್ರಿಯ ಅಂಗವಾಗಿ ಪಟ್ಟಣದ ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ದೇವಸ್ಥಾನ,ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ,ಗವಟೂರು ರಾಮೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜಾ ಸೇವೆಯನ್ನು ನೆರವೇರಿಸಿದರು. ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕಂತೆ  ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ರುದ್ರಾಭಿಷೇಕ ಪೂಜೆಗೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಸೇರಿದ್ದರು,ಮಧ್ಯಾಹ್ನ ಎಲ್ಲಾ ಭಕ್ತಾಧಿಗಳಿಗೂ ಸಾಮೂಹಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಹಾಗೂ ಕೆಪಿಸಿಸಿ…

Read Full News

ರಿಪ್ಪನ್‌ಪೇಟೆ : 396 ನೇ ಶಿವಾಜಿ ಜಯಂತಿ ಆಚರಣೆ

ರಿಪ್ಪನ್‌ಪೇಟೆ : ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿ. ಭಾರತೀಯರ ಕಣ ಕಣದಲ್ಲೂ ಶಿವಾಜಿಯ ಆದರ್ಶ ಗುಣಗಳು ಕರಗತವಾಗಬೇಕು. ಸಂಸ್ಕಾರಯುತ ಸಮಾಜದ ನಿರ್ಮಾಣದಲ್ಲಿ ಶಿವಾಜಿಯ ಹೋರಾಟದೊಂದಿಗೆ ಆತನಿಗೆ ಸ್ಫೂರ್ತಿ ನೀಡಿದ್ದ ತಾಯಿ ಜೀಜಾಬಾಯಿಯ ಕೊಡುಗೆಯೂ ಸ್ಮರಣೀಯ ಎಂದು ರಿಪ್ಪನ್‌ಪೇಟೆ ಮರಾಠ ಸಮಾಜದ ಅಧ್ಯಕ್ಷ ನಾಗೇಶ್ ಹೊಸಮನೆ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಾಗರ ರಸ್ತೆಯ ಶಿವಾಜಿ ಸರ್ಕಲ್  ನಡೆದ ಶಿವಾಜಿ ಜಯಂತಿ ಆಚರಣೆಯಲ್ಲಿ ಮಾತನಾಡಿ ಪರಕೀಯರ ಅಟ್ಟಹಾಸದಿಂದ ಭಾರತವನ್ನು ರಕ್ಷಿಸುವಲ್ಲಿ…

Read Full News

ಈಜಲು ಹೋದ ಎಂಬಿಬಿಎಸ್ ವಿದ್ಯಾರ್ಥಿ ಶವವಾಗಿ ಪತ್ತೆ|death

ಶಿವರಾತ್ರಿಯ ನಿಮಿತ್ತ ಜಾಲಿ ಮೂಡ್ ನಲ್ಲಿದ್ದ ವಿದ್ಯಾರ್ಥಿಗಳ ಗುಂಪೊಂದಕ್ಕೆ ಆಘಾತವಾಗಿದೆ ಶಿವಮೊಗ್ಗ ಜಿಲ್ಲೆಯ ಭದ್ರಾ ಚೆಕ್ ಡ್ಯಾಂ ನ ನೀರಿನಲ್ಲಿ ಈಜಲು ಹೋಗಿದ್ದ ಸಿಮ್ಸ್ ನ ವಿದ್ಯಾರ್ಥಿ ನೀರುಪಾಲಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಇಂದು ನಡೆದಿದೆ. ಭದ್ರಾ ನದಿಯ ಗೋಂದಿ ಚೆಕ್ ಡ್ಯಾಂಗೆ ಶಿವಮೊಗ್ಗದ ಸಿಮ್ಸ್ ನ ವಿದ್ಯಾರ್ಥಿ ಜಗತ್ ಮತ್ತು ಇತರೆ ಐವರು ಸ್ನೇಹಿತರು ಈಜಲು ತೆರಳಿದ್ದಾರೆ. ಜಗತ್(21) ಜೊತೆಗೆ  ಓರ್ವ ನೀರಿಗೆ ಇಳಿದಿದ್ದಾನೆ. ಜಗತ್ ನೀರಿನಲ್ಲಿ ಮುಂದೆ ಹೋಗಿದ್ದು ಆಳವಿದ್ದುದ್ದರಿಂದ ನೀರಿನಲ್ಲಿ ಮುಳುಗಿದವನು ಮೇಲೆ…

Read Full News

ಜಮೀನು ಮಂಜೂರು ವಿಚಾರದಲ್ಲಿ ಯಾರಿಗೂ ನಯಾ ಪೈಸೆ ಹಣ ಕೊಡಬೇಡಿ – ಗೃಹ ಸಚಿವ ಆರಗ ಜ್ಞಾನೇಂದ್ರ|94c

94ಸಿ ಹಾಗೂ ಬಗರ್‌ಹುಕುಂ ಹಕ್ಕು ಪತ್ರ ವಿತರಣೆ ; ಜಮೀನು ಮಂಜೂರು ವಿಚಾರದಲ್ಲಿ ನಯಾ ಪೈಸೆ ಹಣ ಕೊಡಬೇಡಿ ; ಸಚಿವ ಆರಗ ಜ್ಞಾನೇಂದ್ರ ಹೊಸನಗರ: ಜಮೀನು ಮಂಜೂರಾತಿ ವಿಚಾರದಲ್ಲಿ ಅಧಿಕಾರಿಗಳು ಹಣ ಕೇಳುವ ಕುರಿತಾಗಿ ಸಾಕಷ್ಟು ದೂರು ಬಂದಿದ್ದು ರೈತರು ನಯಾ ಪೈಸೆ ಕೊಡಬೇಡಿ. ಅರ್ಹ ಫಲಾನುಭವಿ ರೈತರಿಗೆ ಹಕ್ಕುಪತ್ರ ಸಿಕ್ಕೆ ಸಿಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ 94 ಸಿ ಹಾಗೂ ರೈತರಿಗೆ ಬಹರ್‌ಹುಕುಂ ಸಾಗುವಳಿ ಹಕ್ಕು…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.