ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ

ರಿಪ್ಪನ್‌ಪೇಟೆ : ಜಗತ್ತಿಗೆ ಶಾಂತಿ ಸಂದೇಶವನ್ನು ನೀಡುವುದರ ಮೂಲಕ ಶಾಂತಿದೂತರಾದ ಯೇಸು ಕ್ರೈಸ್ತರ ಆದರ್ಶ ಜೀವನಶೈಲಿ ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಎಂದು ಗುಡ್ ಶಫರ್ಡ್ ಚರ್ಚ್‌ನ ಧರ್ಮ ಗುರು ಫಾದರ್ ಬಿನೋಯ್ ತಿಳಿಸಿದರು. ಪಟ್ಟಣದಲ್ಲಿನ ಗುಡ್ ಶಫರ್ಡ್ ಚರ್ಚ್ ಧರ್ಮಸಭೆಯಲ್ಲಿ ಮಾತನಾಡಿದ ಫಾದರ್ ಪ್ರತಿಯೊಬ್ಬರ ಹೃದಯದಲ್ಲಿ ಯೇಸು ಜನಿಸಬೇಕು. ಇರುವವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಅಪರೂಪ ಕಾರ್ಯದ ಮೂಲಕ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು. ಎಲ್ಲರ ನಡುವೆ ಐಕ್ಯತೆ, ಸಮಾನತೆ ಮೂಡಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ….

Read More

ಕುಮುಧ್ವತಿ ನದಿಯಲ್ಲಿ ಕೊಚ್ಚಿಹೋದ ವೃದ್ದೆ : ಶೋಧ ಕಾರ್ಯಾಚರಣೆ ಚುರುಕು

ಮಲೆನಾಡು ಭಾಗದಲ್ಲಿ ಅಧಿಕ ಮಳೆಯಿಂದಾಗಿ ಕುಮಧ್ವತಿ ನದಿಯು ಭೋರ್ಗರೆಯುತ್ತಿದ್ದು ಇಂದು ಓರ್ವ ವೃದ್ದೆ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ(64) ಎಂದು ಗುರುತಿಸಲಾಗಿದೆ.  ಚೋರಡಿ ನದಿಯ ದಡದಲ್ಲಿರುವ ಚೌಡೇಶ್ವರಿ ದೇವಸ್ಥಾನಕ್ಕೆನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ ಎಂದು ಗುರುತಿಸಲಾಗಿದೆ.  ಪೂಜೆಗೆ ಹೋಗಿದ್ದ 64 ವರ್ಷದ ವೃದ್ಧೆ ಕುಮಧ್ವತಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.  ನೀರಿನಲ್ಲಿ ಮುಳುಗಿರುವ ವೃದ್ದೆಗಾಗಿ ಶೋಧಕಾರ್ಯ ನಡೆದಿದೆ.ವೃದ್ದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೊ ಅಥವಾ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೋ…

Read More

ಕೆರೆ ಕಾಮಗಾರಿ ಹಣ ದುರ್ಬಳಕೆ – 6 ವರ್ಷ ಕಠಿಣ ಶಿಕ್ಷೆ ,20 ಸಾವಿರ ದಂಡ

ಕೆರೆ ಬಳಕೆದಾರರ ಸಂಘಗಳಿಗೆ ತಪ್ಪು ಮಾಹಿತಿ, ಚೆಕ್‌ಗಳಿಗೆ ಪೋರ್ಜರಿ ಸಹಿ ಮಾಡಿ ₹ 2.54 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಜಲ ಸಂವರ್ಧನೆ ಯೋಜನಾ ಸಂಘದ ಸಾಮಾಜಿಕ ತಜ್ಞನಿಗೆ ಶಿಕಾರಿಪುರದ ಎರಡನೇ ಅಧಿಕ ಸಿಜೆ ಮತ್ತು ಜೆಎಂಎಫ್ ನ್ಯಾಯಾಲಯ ಆರು ವರ್ಷ ಕಠಿಣ ಶಿಕ್ಷೆ ಹಾಗೂ ₹ 20,000 ದಂಡ ವಿಧಿಸಿ ಆದೇಶಿಸಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿನೋದ್ ಎಲ್. ರಾಮದುರ್ಗ (29) ಶಿಕ್ಷೆಗೆ ಒಳಗಾದವರು. ವಿನೋದ್ 2011ರ ಮಾರ್ಚ್ 23ರಿಂದ 2013ರ ಮಾರ್ಚ್…

Read More

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ A M ಕೃಷ್ಣರಾಜು ಕಾರ್ಯದರ್ಶಿಯಾಗಿ ರವೀಂದ್ರ ಬಲ್ಲಾಳ್ ಪದವಿ ಸ್ವೀಕಾರ ರಿಪ್ಪನ್‌ಪೇಟೆ ;-ಜುಲೈ ೧೯ ರಂದು ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ೨೦೨೫-೨೬ ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ.ಎ.ಎಂ.ಕೃಷ್ಣರಾಜು ತಿಳಿಸಿದರು. ಪಟ್ಟಣದ…

Read More

ಉಪ ಚುನಾವಣೆಯಲ್ಲಿ ಬಿಜೆಪಿ ಕವರ್ ನಲ್ಲಿ ಹಣ ಹಂಚಿದರೆ, ಕಾಂಗ್ರೆಸ್ ನೇರವಾಗಿ ಹಣ ಹಂಚಿದೆ : ಸಚಿವ ಈಶ್ವರಪ್ಪ ಆರೋಪ

ಶಿವಮೊಗ್ಗ : ಚುನಾವಣೆಯಲ್ಲಿ ಮತ ಪಡೆಯಲು ಬಿಜೆಪಿ ಕವರ್ ಹಂಚಿದೆ ಎಂಬ ಡಿಕೆಶಿ ಆರೋಪಕ್ಕೆ ಸಚಿವ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಬಿಜೆಪಿ ಕವರ್ ನೀಡಿದರೆ ಕಾಂಗ್ರೆಸ್ ನೇರವಾಗಿ ಹಣ ನೀಡಿದೆ ಎಂದು ಹೇಳುವ ಮೂಲಕ ಸಚಿವರು ಅಚ್ಚರಿ ಮೂಡಿಸಿದ್ದಾರೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನವರು ಬಿಜೆಪಿ ಕವರ್ ನೀಡಿ ಚುನಾವಣೆ ಗೆಲ್ಲಲು ತಂತ್ರಗಾರಿಕೆ ಮಾಡುತ್ತಿದೆ ಎಂದು ಆರೋಪಿಸಿದೆ. ನಾವು ಕವರ್ ನಲ್ಲಿ ಕೊಟ್ಟರೆ ಕಾಂಗ್ರೆಸ್ ನೇರವಾಗಿ ಹಣ ಹಂಚುತ್ತಿದೆ ಎಂದು ತಿರುಗೇಟು ನೀಡಿದರು. ನಾವು ಕದ್ದುಮುಚ್ಚಿ…

Read More

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ….

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ಸ್ಥಳದಲ್ಲಿಯೇ ಯುವಕ ಸಾವು|accident

ಶಿವಮೊಗ್ಗ ನಗರದ ಹೊರವಲಯದ ಅಗಸವಳ್ಳಿಯಲ್ಲಿ  ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಹಿಂಬದಿಯ ಸವಾರ ಸ್ಥಳದಲ್ಲಿಯೇ ಸಾವು ಕಂಡಿದ್ದಾನೆ. ಗೋವಿಂದಾಪುರದ ನಿವಾಸಿ ಕಿಶನ್ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಶಿವಮೊಗ್ಗ ನಗರದಲ್ಲಿ ಗಾರೆ ಕೆಲಸಕ್ಕೆಂದು ಗೋವಿಂದಾಪುರದಿಂದ ಲಕ್ಷಣ.ಪಿ ಎಂಬುವವರ ಜೊತೆ ಬೈಕ್ ನಲ್ಲಿ ಬರುವಾಗ‌ ಈ ಅಪಘಾತ ಸಂಭವಿಸಿದೆ. ಅಗಸವಳ್ಳಿಯ ಸಂಪತ್ ಮನೆಯ ಎದುರಿನ ರಸ್ತೆಯಲ್ಲಿ ಕೆಎ28-7851 ಕ್ರಮ ಸಂಖ್ಯೆಯ ನೀರಿನ ಟ್ಯಾಂಕ್ ಲಾರಿಯು ಎದುರಿನಿಂದ ಬಂದು ಡಿಕ್ಕಿಯಾದ ಪರಿಣಾಮ ಕಿಶನ್ (19) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ….

Read More

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಡಿಕೆ ತೋಟಕ್ಕೆ ಬೆಂಕಿ : 350ಕ್ಕೂ ಹೆಚ್ಚು ಅಡಿಕೆ ಮರಗಳು ಭಸ್ಮ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಡಿಕೆ ತೋಟಕ್ಕೆ ಬೆಂಕಿ : 350ಕ್ಕೂ ಹೆಚ್ಚು ಅಡಿಕೆ ಮರಗಳು ಭಸ್ಮ A short circuit from an electric line triggered a fire in a farmer’s areca plantation near Ripponpet, destroying over 350 areca, coconut, and banana trees and causing heavy financial loss. ರಿಪ್ಪನ್‌ಪೇಟೆ: ವಿದ್ಯುತ್ ಲೈನ್‌ನಿಂದ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಪರಿಣಾಮವಾಗಿ ರೈತನ ಅಡಿಕೆ ತೋಟದಲ್ಲಿ ಭಾರೀ ಅಗ್ನಿ ಅವಘಡ…

Read More

ಡಿ.15 ಕ್ಕೆ ಶಿವಮೊಗ್ಗದಲ್ಲಿ ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್

ಶಿವಮೊಗ್ಗ : ಅಲ್ ಹಿದಾಯ ಇಹ್ವಾನ್ ಸೆಂಟರ್ ಆಶ್ರಯದಲ್ಲಿ   ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್ ಡಿ.15 ರಂದು ಮರ್ಹೂಂ ಹೈದರ್ ಅಲಿ ನಿಝಾಮಿ ವೇದಿಕೆ, ಯುನಿಟಿ ಹಾಲ್ ಮುಂಭಾಗ, ಆರ್ ಎಂಎಲ್ ನಗರದಲ್ಲಿ ನಡೆಯಲಿದೆ. ಶುಕ್ರವಾರ ಮಗ್ರಿಬ್ ನಮಾಜ್ ನಂತರ ಸಯ್ಯಿದ್ ಶಿವಮೊಗ್ಗ ತಂಗಳ್ , ಸಯ್ಯದ್ ತೀರ್ಥಹಳ್ಳಿ ತಂಗಳ್, ಶೈಖುನಾ ಕಾರ್ಗಲ್ ಉಸ್ತಾದ್ , ಸಯ್ಯದ್ ಯೂಸುಫ್ ತಂಗಲ್ , ಸಯ್ಯದ್ ಶಫೀಖ್ ತಂಗಲ್ ರವರ ನೇತೃತ್ವದಲ್ಲಿ ಹುಬ್ಬೂರಸೂಲ್ ಕಾನ್ಪರೆನ್ಸ್ ನಡೆಯಲಿದೆ  ಹಾಫಿಲ್ ಸ್ವಾದಿಖ್…

Read More

Shivamogga | ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಱ್ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ. ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ…

Read More