w
Headlines

ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆಯ ಸಮಗ್ರ ಚಿತ್ರಣವನ್ನು ಬದಲಾಯಿಸುತ್ತೇನೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಪಟ್ಟಣದಲ್ಲಿ 4.85 ಕೋಟಿ ರೂಪಾಯಿ ವೆಚ್ಚದ ಬಾಲಕರ ವಸತಿ ನಿಲಯದ ಶಂಕುಸ್ಥಾಪನೆ ಹಾಗೂ 1.65 ಕೋಟಿ ವೆಚ್ಚದ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು ಮುಂದಿನ ದಿನಗಳಲ್ಲಿ ರಿಪ್ಪನ್ ಪೇಟೆ ಯನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು, ವಿದ್ಯಾರ್ಥಿಗಳು ವಿದ್ಯಾರ್ಜನೆಯ ಸದುಪಯೋಗ ಪಡೆದು ಉನ್ನತ ಮಟ್ಟದಲ್ಲಿ ಬೆಳೆದು ಸಮಾಜಕ್ಕೆ ಮಾದರಿಯಾಗಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ…

Read Full News

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಸಾರ್ವಜನಿಕರ ಆಗ್ರಹ :

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಅರಸಾಳುವಿನಲ್ಲಿ ಇರುವ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಎಲ್ಲಾ ರೈಲು ನಿಲುಗಡೆ ಮಾಡಬೇಕೆಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.  ಅರಸಾಳುವಿನಲ್ಲಿ ರೈಲು ನಿಲುಗಡೆಯಿಂದ ರಿಪ್ಪನ್‌ಪೇಟೆ, ಅರಸಾಳು, ಬೆಳ್ಳೂರು, ಬಸವಾಪುರ, ಕಳಸೆ, ಬುಕ್ಕಿವರೆ, ಹುಂಚ, ಅಮೃತ, ಹೆದ್ದಾರಿಪುರ, ಹಾರೋಹಿತ್ತಲು, ಹೆದ್ದಾರಿಪುರ, ಕಲ್ಲೂರು, ಹೊಸನಗರ, ರಾಮಚಂದ್ರಪುರಮಠ, ಕೊಲ್ಲೂರು ಮೂಕಾಂಬಿಕ ದೇವಸ್ಥಾನ, ಕುಂದಾಪುರ, ಬೈಂದೂರು, ಭಟ್ಕಳ, ಉಡುಪಿ, ಕೋಣಂದೂರು, ಆರಗ, ತೀರ್ಥಹಳ್ಳಿ, ಹೊಸಗಂಡಿ, ಸಿದ್ದಾಪುರ, ಆಗುಂಬೆ, ಹರತಾಳು, ಹೀಗೆ ಕೊಡಚಾದ್ರಿ, ಸಿಗಂದೂರು ಕವಲೆದುರ್ಗ ಕೋಟೆ, ಜೋಗ ಜಲಪಾತ ಇನ್ನಿತರ…

Read Full News

ಪ್ರಧಾನಿ‌ ಮೋದಿಗೆ ಪಂಜಾಬ್ ಸರಕಾರ ಅವಮಾನ ಮಾಡಿದ್ದನ್ನು ಖಂಡಿಸಿ ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಜಿನ ಮೆರವಣಿಗೆ :

ರಿಪ್ಪನ್ ಪೇಟೆ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿನಾಯಕ ವೃತ್ತದಲ್ಲಿ  ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾಡಿ ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್…

Read Full News

ಅಸಮರ್ಪಕ ರಸ್ತೆ ನಿರ್ವಹಣೆ : ಜೀರಿಗೆಮನೆ ಗ್ರಾಮಸ್ಥರ ದಿಡೀರ್ ಪ್ರತಿಭಟನೆ

ರಿಪ್ಪನ್ ಪೇಟೆ: ಅಸಮರ್ಪಕ ರಸ್ತೆ ನಿರ್ವಹಣೆ ಹಾಗೂ ಹೊಂಡ ಗುಂಡಿಗಳಿಗೆ ತೇಪೆ ಹಾಕುವ ಪ್ರಕ್ರಿಯೆಯಲ್ಲಿ ಲೋಪ ಎಸಗಲಾಗಿದೆ. ಸರಿಯಾದ ರೀತಿಯಲ್ಲಿ ಹೊಂಡ ಗುಂಡಿಗಳನ್ನು ಮುಚ್ಚದೆ ಬೇಕಾಬಿಟ್ಟಿಯಾಗಿ ರಸ್ತೆ ಕಾಮಗಾರಿಯನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಡಾಂಬರೀಕರಣದ ವಾಹನವನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆಮನೆ ಎಂಬಲ್ಲಿ ನಡೆದಿದೆ. ಹಲವಾರು ವರ್ಷಗಳ ಹಿಂದೆ ರಿಪ್ಪನ್ ಪೇಟೆ ಯಿಂದ  ಹೆದ್ದಾರಿಪುರ ಮಾರ್ಗವಾಗಿ ಜೀರಿಗೆಮನೆ ವಡಹೊಸಹಳ್ಳಿ ಮಾರ್ಗವನ್ನು ಮಾಡಲಾಗಿತ್ತು. ಆದರೆ ಇದೀಗ ಡಾಂಬರೀಕರಣ ಮಾಡಿ ಕೆಲವು…

Read Full News

ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್ ಸರ್ಕಾರ ಅವಮಾನ ಮಾಡಿದ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ಮೋದಿ ನಿನ್ನೆ ಪಂಜಾಬ್ ನಲ್ಲಿರುವ ಭಟಿಂಡಾದಿಂದ ಫಿರೋಜ್ ಪುರದ ಹುಸೇನ್ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕಿತ್ತು. ಅಲ್ಲಿ ಅವರು ಭಗತ್ ಸಿಂಗ್ ಇತರ ಸ್ವಾತಂತ್ರ್ಯವೀರ ಹುತಾತ್ಮರಿಗೆ ಗೌರವ ಸಲ್ಲಿಸುವ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮಾಡುವ ಕಾರ್ಯಕ್ರಮವಿತ್ತು…

Read Full News

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ: ಗೊಂದಲ ಮತ್ತು ಭಯ ಪಡದೆ ನಿರಂತಕವಾಗಿ ಲಸಿಕೆ ಪಡೆಯಬೇಕು : ಮಂಜುಳಾ

ರಿಪ್ಪನ್ ಪೇಟೆ : ಮಕ್ಕಳಿಗೆ ಕೋರೋಣ ಲಸಿಕೆ ನೀಡುವ ಅಭಿಯಾನ ಇಡೀ ದೇಶಾದ್ಯಂತ ಆರಂಭವಾಗಿದ್ದು. ಈ ಹಿನ್ನೆಲೆಯಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು.  ಕುಟುಂಬ ಕಲ್ಯಾಣ ಇಲಾಖೆ. ಜಿಲ್ಲಾ ಪಂಚಾಯತ್. ಗ್ರಾಮ ಪಂಚಾಯತ್ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹ ಯೋಗದಲ್ಲಿ ಆಯೋಜಿಸಲಾಗಿದ್ದ ಕೊ ರೊ ನಾ ಲಸಿಕಾ ಅಭಿಯಾನವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ  ಉದ್ಘಾಟಿಸಿದರು.  ಕೋವಿಡ್ ಮತ್ತು ಇದರ ರೂಪಾಂತರಿ ಸೋಂಕನ್ನು ನಿಯಂತ್ರಿಸಲು ಸರಕಾರ…

Read Full News

ಹೊಸನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ಡಾ.ಸಾಯಿಲ್ ಜೈವಿಕ ಗೊಬ್ಬರದ ಶಾಖೆ :

ಹೊಸನಗರ : ಅಡಕೆ ಬೆಳೆಗಾರರ ಮನೆ ಮಾತಗಿರುವ ಡಾ ಸಾಯಿಲ್ ಜೈವಿಕ ಗೊಬ್ಬರದ ಶಾಖೆ ಈಗ  ಹೊಸನಗರದಲ್ಲೂ ಪ್ರಾರಂಭವಾಗಿದೆ.  ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದಿರುವ ಮತ್ತು ಹೊಸನಗರದ ಕೃಷಿ ಇಲಾಖೆ ವತಿಯಿಂದ ದೃಡೀಕರಿಸಿ ಪರವಾನಿಗೆ ನೀಡಲಾಗಿರುವ ವೀರಭದ್ರೇಶ್ವರ ‌ಟ್ರೇಡರ್ಸ್ ಶುಭಾರಂಭಗೊಂಡಿದೆ. ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ‌ ಗುರುಶಕ್ತಿ ಟ್ರಾನ್ಸ್ ಪೋರ್ಟ್ ಮಾಲೀಕರಾದ ವಿದ್ಯಾದರ್  ಜೈವಿಕ ಗೊಬ್ಬರಗಳು ಅಡಕೆ, ಕಬ್ಬು, ತೆಂಗು ಮತ್ತು ಎಲ್ಲಾ ರೀತಿಯ ಬೆಳೆಗಳಿಗೆ ಲಭ್ಯ. ಜೈವಿಕ ಗೊಬ್ಬರಗಳ ಬಳಕೆ ಇಂದ ಭೂಮಿಯಲ್ಲಿ ತ್ವರಿತವಾಗಿ…

Read Full News

ಲಾಕ್ ಡೌನ್ ಗೆ ವಿರೋಧ ವ್ಯಕ್ತಪಡಿಸಿದ ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಿರುವ ಬೆಂಗಳೂರಿನ ಕಠಿಣ ನಿಯಮಗಳು ಕೋವಿಡ್‌ ಕಡಿಮೆ ಇರುವ ಇತರೆ ಜಿಲ್ಲೆಗಳಿಗೆ ಬೇಡ ಎಂದು ಸಿಎಂಗೆ ಮನವಿ ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವಿ ಸಂಖ್ಯೆ ಹೆಚ್ಚಿದೆ. ಆದರೆ, ಇತರೆ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ ಎರಡು, ಐದು ಹೆಚ್ಚಿದ್ರೆ ಹತ್ತು ಇರಬಹುದು. ಬೆಂಗಳೂರಿನಲ್ಲಿ ಕೊರೊನಾ ಕಂಟ್ರೋಲ್ ಮಾಡುವುದು ಎಲ್ಲರ ಜವಾಬ್ದಾರಿ ಇದೆ. ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ…

Read Full News

ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ : ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನ

ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ.ಇದೇ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕಫ್ಯೂ೯ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ರಾಜ್ಯದಲ್ಲಿ ಕಫ್ಯೂ೯ ಜಾರಿ ಇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಬಗ್ಗೆ ವಿಸ್ತೃತವಾಗಿ…

Read Full News

ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಪ್ರಾರಂಭವಾದ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ :

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದ ಜೋಹರ ಪ್ಲಾಜಾದಲ್ಲಿ ನೂತನವಾಗಿ ಶ್ರೀ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ ಆರಂಭವಾಗಿದೆ. ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಜನತೆಗೆ ಅಗತ್ಯವಾಗಿ ಬೇಕಾಗಿದ್ದ ಸುಸಜ್ಜಿತ ಆಧುನಿಕ ಡೆಂಟಲ್ ಕ್ಲಿನಿಕ್ ಪ್ರಾರಂಭವಾಗಿದ್ದು ಜನತೆಯಲ್ಲಿ ಸಂತಸ ತಂದಿದೆ. ಟೇಪ್ ಕತ್ತರಿಸುವ ಮೂಲಕ ಕ್ಲಿನಿಕ್ ನ್ನು ಉಧ್ಘಾಟಿಸಿದ ಜೋಹರ ಪ್ಲಾಜಾ ಮಾಲೀಕರು ಹಾಗೂ ಉದ್ಯಮಿಗಳಾದ ಎ ಕೆ ಮಹಮ್ಮದ್ ಸಾಬ್ ಮಾತನಾಡಿ ಹಲ್ಲುಗಳ ಆರೋಗ್ಯ ಕಾಪಾಡಿಕೊಂಡಾಗ ವ್ಯಕ್ತಿಗಳ ಸೌಂದರ್ಯವೂ ವೃದ್ಧಿಸುತ್ತದೆ. ನಮ್ಮಲ್ಲಿ ಪಾಶ್ಚಿಮಾತ್ಯ…

Read Full News

ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ : ಇಬ್ಬರು ಶ್ರೀಗಂಧ ಕಳ್ಳರ ಬಂಧನ

ಸಾಗರ : ಇಲ್ಲಿನ ಅರಣ್ಯ ವಲಯ ವ್ಯಾಪ್ತಿಯ ಮಂಕೋಡು ಗ್ರಾಮ ಜೆ.ಪಿ ನಗರದಲ್ಲಿ ಅಕ್ರಮವಾಗಿ ಶ್ರೀಗಂಧದ ಚಕ್ಕೆಗಳನ್ನು ಕೆತ್ತುತ್ತಿದ್ದ ಇಬ್ಬರು ಆರೋಪಿಗಳನ್ನು ಸಾಗರ ಅರಣ್ಯ ಇಲಾಖೆ ಸಿಬ್ಬಂದಿಗಳು ಸೋಮವಾರ ಬಂಧಿಸಿದ್ದಾರೆ.   ಆರೋಪಿಗಳಾದ ಅಬ್ದುಲ್ ರಜಾಕ್ ಮತ್ತು ವೆಂಕಟರಮಣ ಇವರನ್ನು ಬಂಧಿಸಿ ಅವರಿಂದ  ಐದೂ ಕಾಲು ಕೆಜಿ ಶ್ರೀಗಂಧದ ಚಕ್ಕೆ, ಒಂದು ಹೀರೋ ಸ್ಪ್ಲೆಂಡರ್ ಬೈಕ್ ಅನ್ನು ವಶಪಡಿಸಿಕೊಂಡು ಅರಣ್ಯ ಮೊಕದ್ದಮೆ ದಾಖಲು ಮಾಡಿದ್ದಾರೆ. ವಲಯ ಅರಣ್ಯಾಧಿಕಾರಿ ಡಿ ಆರ್ ಪ್ರಮೋದ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ…

Read Full News

ಡಿ.ಕೆ. ಸುರೇಶ್ ವಿರುದ್ಧ ಸಾಗರ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಪ್ರತಿಭಟನೆ…! ಡಿ.ಕೆ. ಸುರೇಶ್ ಪ್ರತಿಕೃತಿ ದಹನ…!

ಸಾಗರ: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ಎಂಎಲ್ಸಿ ರವಿ ಅವರು ಸಚಿವ ಅಶ್ವಥ್ ನಾರಾಯಣ್ ಅವರ ಭಾಷಣಕ್ಕೆ ಅಡ್ಡಿ ಪಡಿಸಿ, ಗೂಂಡಾ ವರ್ತನೆ ತೋರಿದ್ದಾರೆಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಂಗಳವಾರ ನಗರ ಸಾಗರ್ ಹೋಟೆಲ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ  ಡಿ.ಕೆ.ಸುರೇಶ್ ಅವರ ಭಾವಚಿತ್ರವನ್ನು ಧಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಡಿ.ಕೆ.ಸುರೇಶ್ ಹಾಗೂ ಎಂಎಲ್ಸಿ ರವಿ ಇಬ್ಬರಿಗೂ ಕಾಂಗ್ರೆಸ್ ಪಕ್ಷ ಶಿಸ್ತು ಕ್ರಮ ಜರುಗಿಸಬೇಕು.ಹಾಗೂ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು…

Read Full News

ಶಿವಮೊಗ್ಗದ ನಗರ ಮತ್ತು ಗ್ರಾಮಾಂತರ ಯೋಜನೆ ಕಚೇರಿಯಲ್ಲಿ ಭೂಪರಿವರ್ತನೆಗೆ ಉದ್ದೇಶ ಪೂರಕ ವಿಳಂಭ : ರಿಪ್ಪನ್ ಪೇಟೆ ಗ್ರಾಪಂ ಸದಸ್ಯನಿಂದ ಏಕಾಂಗಿ ಧರಣಿ

ರಿಪ್ಪನ್ ಪೇಟೆ : ಭೂ ಪರಿಪರ್ವತನೆಗಾಗಿ ಒತ್ತಾಯಿಸಿ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಸದಸ್ಯ ನಿರೂಪ್ ಕುಮಾರ್ ಆರ್.ವಿ. ಶಿವಮೊಗ್ಗದ ಕೆಎಸ್ ಆರ್ ಟಿ ಸಿ ಬಸ್ ಡಿಪೋ ಹಿಂಭಾಗದ ಆನಂದರಾವ್ ಬಡಾವಣೆಯಲ್ಲಿರುವ ನಗರ ಮತ್ತು ಗ್ರಾಮಾಂತರ ಯೋಜನೆ ಕಚೇರಿಯಲ್ಲಿ ಏಕಾಂಗಿ ಹೋರಾಟ ನಡೆಸಿದ್ದಾರೆ. ಹೊಸನಗರ ತಾ. ಬೆನವಳ್ಳಿ ಸರ್ವೆ ನಂಬರ್158 2 ಎಕರೆ ಜಮೀನಿಗೆ ಸೈಟ್ ನಿರ್ಮಿಸಲು ಭೂಪರಿವರ್ತನೆಗೆ ನಿರೂಪ್ ಕುಮಾರ್ ಅಕ್ಟೋಬರ್ ತಿಂಗಳಲ್ಲಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಭೂ ಪರಿವರ್ತನೆಯನ್ನು…

Read Full News

ರಿಪ್ಪನ್ ಪೇಟೆ ಹೊಸನಗರ ರಸ್ತೆ ನಿವಾಸಿ ಶಫ಼ಿ ಅಹಮದ್ ಬ್ಯಾರಿ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾಗಿದ್ದ ದಿವಂಗತ ಅಹಮ್ಮದ್ ಬ್ಯಾರಿಯವರ ತೃತೀಯ ಪುತ್ರ ಶಫಿ ಅಹಮದ್ ಬ್ಯಾರಿ (48) ಇಂದು ಮಧ್ಯಾಹ್ನ ಚೆನ್ನೈ ನಗರದಲ್ಲಿ ನಿಧನ ಹೊಂದಿದ್ದಾರೆ. ಅಲ್ಪಕಾಲದ ಖಾಯಿಲೆಯಿಂದ ಬಳಲುತಿದ್ದ ಶಫ಼ಿ ಅಹಮದ್ ಬ್ಯಾರಿ ರವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ನಂತರ ಇತ್ತಿಚೆಗೆ ಹೆಚ್ಚಿನ ಚಿಕಿತ್ಸೆಗೆ ಚೆನೈ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದರು….

Read Full News

ರಿಪ್ಪನ್ ಪೇಟೆ ಪಟ್ಟಣದಲ್ಲಿ ರಸ್ತೆ ಅಗಲೀಕರಣ : ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಹರತಾಳು ಹಾಲಪ್ಪ ಚರ್ಚೆ

ರಿಪ್ಪನ್ ಪೇಟೆ : ಪಟ್ಟಣದ ರಸ್ತೆಗಳ  ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಇಂದು ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪರವರು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗಾಗಲೇ ಪಟ್ಟಣದ ರಸ್ತೆಗಳ ಅಗಲೀಕರಣಕ್ಕೆ 6ಕೋಟಿ ಹಣ ಬಿಡುಗಡೆಯಾಗಿದ್ದು ಇನ್ನೂ ಹೆಚ್ಚಿನ 2ಕೋಟಿ ಅನುದಾನ ನೀಡುವಂತೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಹಾಗೆಯೇ ಸಾಗರದ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಶಾಸಕರು ಇದೇ ಸಂದರ್ಭದಲ್ಲಿ ಚರ್ಚೆ ನಡೆಸಿದರು.

Read Full News

ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೆ ಸಾವು :

ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಭಾನುವಾರ ಮುಂಜಾನೆ ಸಂಚರಿಸುತ್ತಿದ್ದ ಕಾರನ್ನು ಅದರ ಚಾಲಕ ಬೆಂಗಳೂರು ನಿವಾಸಿ ಸುರೇಶ್ ನಾವಡ (43) ಅವರು ಯಾವುದೋ ಶಬ್ದ ಕೇಳಿದ್ದಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಿ ನೋಡುತ್ತಿದ್ದ ವೇಳೆ ಮರವೊಂದು ಕಾರಿನ ಮೇಲೆ ಹಠಾತ್ ಆಗಿ ಬಿದ್ದ ಪರಿಣಾಮ ಚಾಲಕ ಸುರೇಶ್ ನಾವಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಮೃತ ಸುರೇಶ್ ನಾವಡ ಅವರು ಬೆಂಗಳೂರು ಐಬಿಎಂ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು ಡಿಸೆಂಬರ್ 23 ರಂದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಯಾದ ಪಾವಂಜೆಗೆ…

Read Full News

ಗವಟೂರು ಹೊಳೆಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆದ ಎಳ್ಳಮವಾಸ್ಯೆ ಜಾತ್ರಾ ಮಹೋತ್ಸವ:

ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಹೊಳೆಸಿದ್ದೇಶ್ವರ ಸ್ವಾಮಿಯ ಎಳ್ಳಮವಾಸ್ಯೆ ಜಾತ್ರಾಮಹೋತ್ಸವ ಕಾರ್ಯಕ್ರಮ ಮತ್ತು ಧರ್ಮಸಮಾರಂಭ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಜಾತ್ರಾಮಹೋತ್ಸವ ಕಾರ್ಯಕ್ರಮ ಮತ್ತು ಧರ್ಮಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅಶೀರ್ವಚನ ನೀಡಿದ ಮಳಲಿಮಠದ ಷ.ಬ್ರ.ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿಗಳು ಸಂಘಟನೆ ಸದ್ಭಾವನೆಯೊಂದಿಗೆ ಯುವಜನಾಂಗ ಧಾರ್ಮಿಕ ಅಚರಣೆಗಳಲ್ಲಿ ತೊಡಗಿಸಿಕೊಂಡು ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು,  ದುಡಿಮೆಯಿಂದ ಗಳಿಸಿದ ಹಣವನ್ನು ದಾನ, ಧರ್ಮಕ್ಕಾಯಕ್ಕೆ ವಿನಿಯೋಗಿಸಿದರೆ ಪುಣ್ಯನಾದರು ಬರುತ್ತದೆ ಅದೇ ಬಚ್ಚಿಟ್ಟರೆ ಪರರ ಪಾಲಾಗುತ್ತದೆ ಈಗಲಾದರೂ ಗಳಿಸಿದ ಸಂಪತ್ತು ಇನ್ನೊಬ್ಬರಿಗೆ ದಾನ…

Read Full News

ಎಳ್ಳಮವಾಸ್ಯೆ ನಿಮಿತ್ತ ಶ್ರೀ ಕ್ಷೇತ್ರ ರಾಮತೀರ್ಥದಲ್ಲಿ ಮಿಂದೆದ್ದ ಭಕ್ತ ಸಮೂಹ

ರಿಪ್ಪನ್‌ಪೇಟೆ: ಇಲ್ಲಿಗೆ ಸಮೀಪದ  ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆಯ ಶರ್ಮೀಣ್ಯಾವತಿ ನದಿ ತೀರದಲ್ಲಿ ನೆಲೆಸಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಭಾನುವಾರ ಎಳ್ಳಮಾವಾಸ್ಯೆ ನಿಮಿತ್ತ ಸಾವಿರಾರು ಭಕ್ತರು ತೀರ್ಥಸ್ನಾನ ಮಾಡಿದರು. ಸುತ್ತಮುತ್ತಲ ಗ್ರಾಮಗಳಿಂದ ತಂಡೋಪತಂಡವಾಗಿ ಬಂದ ಭಕ್ತರು ನದಿಯಲ್ಲಿ ಮಿಂದೆದ್ದು, ನದಿ ತೀರದಲ್ಲಿ ನೆಲೆಸಿರುವ ರಾಮೇಶ್ವರನ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.  ಕೆಂಜಿಗಾಪುರದ ಶ್ರೀಧರ್ ಭಟ್ ಹಾಗೂ ದೇವಸ್ಥಾನದ ಅರ್ಚಕ ಎ.ವಿ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹೋಮ…

Read Full News

ತುಂಗಾ ನದಿಯಲ್ಲಿ ತೇಲುತ್ತಿದ್ದ ಅರ್ಧಂಬರ್ಧ ಸುಟ್ಟ ಶವ : ಹಲವು ಅನುಮಾನಕ್ಕೆ ಎಡೆ

ಶಿವಮೊಗ್ಗದ ತುಂಗನದಿಯಲ್ಲಿ ಅರ್ಧಂಬರ್ಧ ಸುಟ್ಟ ಶವವೊಂದು ದೊರೆತಿದೆ. ಇಷ್ಟುದಿನ‌ ಗಂಗಾನದಿಯಲ್ಲಿ ಇಂತಹ ಅರ್ದಂಬರ್ಧ ಸುಟ್ಟ ಹೆಣ ದೊರೆಯುವ ದೃಶ್ಯಾವಳಿಗಳು ಕಂಡುಬರುತ್ತಿದ್ದವು ಆದರೆ ತುಂಗ ನದಿಯಲ್ಲಿ ಈ ಶವ ದೊರೆತಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂದು ಸಂಜೆ 6 ಗಂಟೆಯ ವೇಳೆಗೆ ರೋಟರಿ ಚಿತಾಗಾರದಿಂದ ತುಂಗಾನದಿಗೆ ಹೋಗುವ ಜಾಗದಲ್ಲಿ ಈ ಶವ ಪತ್ತೆಯಾಗಿದೆ. ಈ ಶವ ಸೊಂಟದ ಕೆಳಭಾಗ ಪೂರ್ತಿ ಸುಟ್ಟು ಹೋಗಿದೆ. ಆದರೆ ಇದು ಗಂಡೋ ಹೆಣ್ಣೋ ಎಂಬುದು ಮರಣೋತ್ತರ ಪರೀಕ್ಷೆಯ ನಂತರ ತಿಳಿದು ಬರಬೇಕಿದೆ. ಜೊತೆಗೆ ಯಾವ…

Read Full News

ರಿಪ್ಪನ್ ಪೇಟೆ : ಅತ್ಯಂತ ಯಶಸ್ವಿಯಾಗಿ ನಡೆದ ಸಾಮೂಹಿಕ ಗಣಹೋಮ ಮತ್ತು ಸುಮಂಗಲಿ ಪೂಜೆ

ರಿಪ್ಪನ್ ಪೇಟೆ :ಮನುಷ್ಯ ತಂತ್ರಜ್ಞಾನದ ಮೂಲಕ  ಸಂಚರಿಸುತ್ತಿದ್ದಾನೆ. ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾನೆ. ಮಾನವೀಯ ಮೌಲ್ಯಗಳೆಂದರೆ ಮನೆಯಲ್ಲಿ ಭಜನೆಗಳು,ದೇವತಾ ಆರಾಧನೆಗಳು, ಮಕ್ಕಳಿಗೆ ವಿಶೇಷವಾಗಿರುವಂತಹ ಧರ್ಮ ಚಿಂತನೆಗಳನ್ನು  ಕಡಿಮೆ ಮಾಡುತ್ತಿದ್ದೇವೆ.ಮಕ್ಕಳನ್ನು ಸಧ್ರಡವಾದ ವ್ಯಕ್ತಿಗಳನ್ನು ಮಾಡಬೇಕಾದರೆ ತಂದೆ ತಾಯಿಗಳಾದವರು ಒಳ್ಳೆಯ ಸಂಸ್ಕಾರವಂತರಾಗಬೇಕಾಗಿದೆ. ಇಂದು ರಾಜಮಹಾರಾಜರ ಚರಿತ್ರೆಯನ್ನು ಹೇಳಬೇಕಾದರೆ ಅವರ ಹಿಂದೆ ಅವರ ತಾಯಿಯ ಪರಿಶ್ರಮ ಎಷ್ಟಿರಬಹುದು ಎಂಬುದನ್ನು ಊಹಿಸಬೇಕಾಗುತ್ತದೆ. ನಾವು ಮಕ್ಕಳನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಿದಾಗ ಸಮಾಜಕ್ಕೆ ಒಳ್ಳೆಯ ವ್ಯಕ್ತಿಯನ್ನು ಕೊಟ್ಟಂತಾಗುತ್ತದೆ, ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳನ್ನು ಕೊಟ್ಟಾಗ ಸಮಾಜ ಸದೃಢವಾಗುತ್ತದೆ. ಅಂತಹ ಸದೃಡವಾದ…

Read Full News

ಎಳ್ಳಮವಾಸ್ಯೆ ಪ್ರಯುಕ್ತ ಜ.2 ರಂದು ರಾಮತೀರ್ಥದಲ್ಲಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ: ಎಳ್ಳಮವಾಸ್ಯೆ ಪ್ರಯುಕ್ತ ಜ.2 ರಂದು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆಯ ಐತಿಹಾಸಿಕ ಹಿನ್ನೆಲೆಯುಳ್ಳ ಪುರಾಣ ಪ್ರಸಿದ್ಧ ಅಗಸ್ತ್ಯ ಮಹರ್ಷಿಗಳ ಪುಣ್ಯಾಶ್ರಮವಾದ ಶರ್ಮೀಣ್ಯಾವತಿ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ 40ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 9ನೇ ವರ್ಷದ ವಾರ್ಷಿಕೋತ್ಸವ ಏರ್ಪಡಿಸಲಾಗಿದೆ ಎಂದು ಶ್ರೀ ರಾಮೇಶ್ವರ ದೇವಸ್ಥಾನದ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 8.00 ಗಂಟೆಯಿಂದ ಪ್ರಧಾನ ಪುರೋಹಿತರಾದ ಕೆಂಜಿಗಾಪುರದ ಶ್ರೀಧರ್ ಭಟ್, ಶ್ರೀ ಸತ್ಯನಾರಾಯಣ…

Read Full News

ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಪ್ರಕರಣ : ಕಿಡಿಗೇಡಿಗಳ ಬಂಧಿಸುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ರಿಪ್ಪನ್ ಪೇಟೆ : ಕರ್ನಾಟಕದ ಮೇರುನಟ ಕರ್ನಾಟಕರತ್ನ ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ  ಪ್ರತಿಭಟನೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ  ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read Full News

ಕುವೆಂಪುರವರ ವಿಚಾರದಾರೆ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ನಡವಳಿಕೆಗಳಲೂ ಬದಲಾವಣೆ ಮಾಡಿಕೊಳ್ಳೋಣ : ಎಂ ಬಿ ಲಕ್ಷ್ಮಣಗೌಡ

ರಿಪ್ಪನ್‌ಪೇಟೆ : ಇಲ್ಲಿನ ವಿಶ್ವಮಾನವ ಕಲ್ಯಾಣ ಮಂದಿರದಲ್ಲಿ ರಾಷ್ಟ್ರಕವಿ ಕುವೆಂಪು ಅವರ 118ನೇ ಜನ್ಮ ದಿನಾಚರಣೆಯನ್ನು ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಬಿ.ಲಕ್ಷ್ಮಣ ಗೌಡ  ಕೇವಲ ಮನುಷ್ಯ ಅಥವಾ ಮಾನವರಾಗದೆ ವಿಶ್ವಮಾನವರಾಗೋಣ ಎಂದು ಕುವೆಂಪು ಸಂದೇಶ ನೀಡಿದ್ದಾರೆ ಇಂತಹ ಮಹನೀಯರನ್ನು ಭಾವಚಿತ್ರಕ್ಕೆ ಅಷ್ಟೆ ಸೀಮಿತಗೊಳಿಸದೆ ಅವರ ವಿಚಾರದಾರೆ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ನಡವಳಿಕೆಗಳಲೂ ಬದಲಾವಣೆ ಮಾಡಿಕೊಳ್ಳೋಣ,ಆಧ್ಯಾತ್ಮಿಕವಾಗಿ ಧರ್ಮವನ್ನು ರಾಷ್ಟ್ರ ಕವಿ ಕುವೆಂಪು ಅವರು ಒಪ್ಪಿಕೊಂಡಿದ್ದರು…

Read Full News

ಕರ್ತವ್ಯದ ನಡುವೆಯೂ ಮಾನವೀಯತೆ ಮೆರೆದ ಕಾರ್ಗಲ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್ ನಾಯ್ಕ್…

ಸಾಗರ: ಇಂದು ಬೆಳಗ್ಗೆ ಸಾಗರ ಹೊರವಲಯದ ಗ್ರಾಮಾಂತರ ವ್ಯಾಪ್ತಿಯ ಜೋಗ ರಸ್ತೆಯ ಕಾನ್ಲೆ ತಿರುವಿನ ಬಳಿ ಸಾಗರದಿಂದ ಜೋಗ ಕಡೆಗೆ  ಯುವಕ ಯುವತಿ ಒಂದೇ  ಹೋಗುತ್ತಿದ್ದ ಒಂದೇ  ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಎದುರಿನಿಂದ ಹೋಗುತ್ತಿದ್ದ ಬಸ್ಸನ್ನು  ಹಿಂದಿಕ್ಕಿ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ  ಎದುರಿನಿಂದ ಬರುತ್ತಿದ್ದ ಕಾರ್ ಗೆ ತಗುಲಿ ಯುವಕನಿಗೆ ಅಲ್ಪ ಸ್ವಲ್ಪ ಹಾಗೂ ಯುವತಿಗೆ ಗಂಭೀರ ಸ್ವರೂಪದ ಗಾಯಗಳಾಗಿ ರಕ್ತದ ಮಡುವಿನಲ್ಲಿ  ಬಿದ್ದಿದ್ದರು.  ಈ ಸಂದರ್ಭದಲ್ಲಿ ಕರ್ತವ್ಯಕ್ಕೆಂದು ಅದೇ…

Read Full News

ಖ್ಯಾತ ಅಂಕಣಕಾರ,ಲೇಖಕ ಕೆ ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆ :

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ  ಉದ್ಯಮದಲ್ಲೇ ಹೊಸ ಅಲೆಯನ್ನೇ ಎಬ್ಬಿಸಿದಂತಹ ಖ್ಯಾತ ಉದ್ಯಮಿ, ಅಂಕಣಕಾರ, ಲೇಖಕ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ, ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆಗೊಳಿಸಲಾಯಿತು. ಕಥಾ ಪುಸ್ತಕವಾದ ” ಭಟ್ಟರ ಬೊಂಡಾದ ಬಾಂಡ್ಲಿಯಲ್ಲಿ ಬಿಲಾಲಿ ಬಿಲ್ಲಿ ಅಭ್ಯಂಜನ” ಪುಸ್ತಕವನ್ನು ಖ್ಯಾತ ಜಲತಜ್ಞ ಶಿವಾನಂದ ಕಳವೆ ಬಿಡುಗಡೆ ಮಾಡಿದರು. ಇನ್ನೂ ಈ ಪುಸ್ತಕದಲ್ಲಿ ಆನಂದಪುರ ಕೇಂದ್ರವಾಗಿಸಿ ಗ್ರಾಮೀಣ ಬದುಕಿನ ಅನುಭವವನ್ನು ಕಥಾ ರೂಪದಲ್ಲಿ ಬರೆದಿದ್ದಾರೆ ಈ…

Read Full News

ಕಚ್ಚಿಗೆಬೈಲು ಗ್ರಾಮದಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ಪುತ್ಥಳಿ ಅನಾವರಣ :

ಹೊಸನಗರ : ಸಮೀಪದ ಕಚ್ಚಿಗೆಬೈಲು ಗ್ರಾಮದಲ್ಲಿ ಪುನೀತ್‌ ರಾಜ್‌ಕುಮಾರ್ ಪುತ್ಥಳಿ ಅನಾವರಣ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಹಾಗೂ ಇದೇ ಸಂಧರ್ಭದಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕಚ್ಚಿಗೆಬೈಲು ಮುಖ್ಯ ರಸ್ತೆಯಿಂದ ಸಂಪಳ್ಳಿ ಗ್ರಾಮದವರೆಗೂ   ಎತ್ತಿನಗಾಡಿ ಹಾಗೂ ಟ್ರಾಕ್ಟರ್ ಗಳ ಮೂಲಕ ಪುನೀತ್ ರಾಜ್‌ಕುಮಾರ್ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಈ ಸಂಧರ್ಭದಲ್ಲಿ ನಾಮಫಲಕ ಉದ್ಘಾಟಿಸಿದ ಶ್ರೀ ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಸ್ವಾಮಿಗಳಾದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳು…

Read Full News

ಮಂಡಗದ್ಧೆಯ ಬಳಿ ಲಾರಿ ಮತ್ತು ಸಹ್ಯಾದ್ರಿ ಬಸ್ ನಡುವೆ ಡಿಕ್ಕಿ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ : ಮಂಡಗದ್ದೆ ಸಮೀಪ ಲಾರಿ ಮತ್ತು ಸಹ್ಯಾದ್ರಿ ಬಸ್ ನಡುವೆ ಅಪಘಾತ ಸಂಭವುಸಿದ್ದು 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಲಾರಿ ಚಾಲಕನಿಗೆ ತೀವ್ರ ಗಾಯ ಉಂಟಾಗಿದ್ದು ಆತನನ್ನ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಕ್ರೆಬೈಲು ಮತ್ತು ಮಂಡಗದ್ದೆಯ ರಸ್ತೆ ಮಧ್ಯೆ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುತ್ತಿದ್ದ ಸಹ್ಯಾದ್ರಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕುಂಟವಳ್ಳಿಯ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಲಾರಿ ಚಾಲಕ ಆದರ್ಶ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಅವರನ್ನ ಮಣಿಪಾಲ್…

Read Full News

ರಿಪ್ಪನ್ ಪೇಟೆ : ಪೋಲಿಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ :

ರಿಪ್ಪನ್ ಪೇಟೆ :  ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನುನ್ನು ಪಾಲನೆ ಮಾಡುವ ಕಡೆ ಸಾರ್ವಜನಿಕರ ಗಮನ ನೀಡಬೇಕು ಎಂದು ರಿಪ್ಪನ್ ಪೇಟೆಯ ಪೊಲೀಸ್‌ ಠಾಣೆಯ ಪಿಎಸ್‌ಐ ಶಿವಾನಂದ ಕೋಳಿ  ತಿಳಿಸಿದರು. ಬುಧವಾರ ರಿಪ್ಪನ್ ಪೇಟೆಯ ಪದವಿಪೂರ್ವ ಕಾಲೇಜಿನಲ್ಲಿ  ಪೊಲೀಸ್‌ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಮಾತನಾಡಿದರು. ಪಟ್ಟಣದ ನಿವಾಸಿಗಳು ಮನೆಗಳನ್ನು ಬೀಗ ಹಾಕಿ ಬೇರೆಡೆಗೆ ಹೋಗುವಾಗ ಪೊಲೀಸ್‌ ಠಾಣೆಗೆ ಲಿಖೀತ ಪತ್ರದೊಂದಿಗೆ ಮಾಹಿತಿ…

Read Full News

ಮಾರುತಿಪುರದ ಯುವತಿ ನಾಪತ್ತೆ : ಸುಳಿವು ಪತ್ತೆಗೆ ಮನವಿ

ಮಾರುತಿಪುರ : ಇಲ್ಲಿನ ಸಮೀಪದ ಗುಬ್ಬಿನಜೆಡ್ಡು ಪುಣಜೆ ಗ್ರಾಮದ ವಾಸಿ ಕುಮಾರಿ ಅನುಷಾ ತಂದೆ ದೇವೇಂದ್ರ, 22 ವರ್ಷ, ಈ ಯುವತಿಯು ಡಿಸೆಂಬರ್ 24 ರ ಬೆಳಿಗ್ಗೆ 8.30 ಕ್ಕೆ ಎಂದಿನಂತೆ ಮಾರುತಿಪುರ ಒಕ್ಕೂಟ ಸಂಘದ ಕೆಲಸಕ್ಕೆ ಹೋದವಳು ಮನೆಗೆ ವಾಪಸ್ ಬಂದಿರುವುದಿಲ್ಲ.     ಈಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪರಿಚಯದವರು, ಸಂಬಂಧಿಕರಲ್ಲಿ ವಿಚಾರಿಸಿದರೂ ಈಕೆಯ ಸುಳಿವು ಇರುವುದಿಲ್ಲ. ನಾಪತ್ತೆಯಾದ ಯುವತಿ ಸುಮಾರು 05 ಅಡಿ ಎತ್ತರ, ಕೋಲುಮುಖ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ತಲೆಯಲ್ಲಿ 15…

Read Full News

ಹುಂಚಾ : ಶೆಟ್ಟಿಬೈಲ್ ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಾಣಾಂತಿಕ ಹಲ್ಲೆ :

ಹುಂಚಾ: ಕ್ಷುಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ಇತ್ತೀಚೆಗೆ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹುಂಚಾ ಗ್ರಾಮದ ಶೆಟ್ಟಿಬೈಲ್ ನಲ್ಲಿ ನಡೆದಿದೆ. ಶೆಟ್ಟಿಬೈಲ್ ನಿವಾಸಿ ಲಿಂಗಾರ್ಜುನ ಗೌಡ (49) ಮತ್ತು ಮಲ್ಲಿಕಾರ್ಜುನ (45) ಹಲ್ಲೆಗೊಳಾಗದ ವ್ಯಕ್ತಿಗಳಾಗಿದ್ದು, ಅದೇ ಗ್ರಾಮದ ನಿವಾಸಿಗಳಾದ ಯೋಮಕೇಶ, ನಾಗಾರ್ಜುನ, ಪರಮೇಶಪ್ಪ, ಅವಿನಾಶ್,ಚರಣ್ ಎಂಬುವವರು ಕತ್ತಿ ಮತ್ತು ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಶೆಟ್ಟಿಬೈಲ್ ನ  ಊರೊಟ್ಟಿನ ಜಾಗದಲ್ಲಿ ರಕ್ತದ ಮಡುವಿನಿನಲ್ಲಿ ಬಿದ್ದಿದ್ದ ಲಿಂಗಾರ್ಜುನ ಹಾಗೂ ಮಲ್ಲಿಕಾರ್ಜುನ ರನ್ನು ಗ್ರಾಮಸ್ಥರು…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.