ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು | SAGARA
ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು ಡೆಂಗ್ಯೂವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತ (40) ಮೃತ ದುರ್ದೈವಿ. ಜ್ವರ ಹಾಗೂ ವಾಂತಿಯಿಂದ ಬಳಲುತ್ತಿದ್ದ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದಾಗ ಡೆಂಗ್ಯೂ ಎಂದು ದೃಢಪಟ್ಟಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವಸಂತಾ ಅವರಿಗೆ ಏಕಾಏಕಿ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ವೈದ್ಯರು…