ಒಂದೇ ಕುಟುಂಬದ ನಾಲ್ವರ ಸಜೀವ ದಹನ ಪ್ರಕರಣ – ಮೂವರ ವಿರುದ್ದ ಪ್ರಕರಣ ದಾಖಲು|FIR
ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಬ್ರಾಹ್ಮಣವೊಂದರ ಕುಟುಂಬದ ಸಜೀವ ದಹನದ ಕುರಿತಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅ. 8 ರಂದು ರಾಘವೇಂದ್ರ ಕೇಕುಡ, ನಾಗರತ್ನ, ಶ್ರೀರಾಮ್ ಮತ್ತು ಭರತ್ ಎಂಬ ಒಂದೇ ಕುಟುಂಬದ ನಾಲ್ವರು ಮನೆಯ ಕೊಠಡಿಯೊಂದರಲ್ಲಿ ಕಟ್ಟಿಗೆ ಜೋಡಿಸಿಕೊಂಡು ಸಜೀವ ದಹನಕ್ಕೆ ಮುಂದಾಗಿದ್ದರು. ಭರತ್ ಸಾವಿನ ನಂತರ ಪ್ರಕರಣವನ್ನು ಯುಡಿಆರ್ (ಅಸಹಜ ಸಾವಿನ ವರದಿ) ಎಂದು ದಾಖಲಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಭರತ್ ಸಾವಿನ ನಂತರ ರಾಘವೇಂದ್ರ ಅವರ ಪತ್ನಿಯ ಸಹೋದರನ…


