w
Headlines

ವಲಸೆ ಬಂದು ಹೋಗುವ ಶಾಸಕರಿಗೆ ಸಾಗರ ತಾಲೂಕಿನ ಬಗ್ಗೆ ಏನು ಗೊತ್ತು : ಬೇಳೂರು ಗೋಪಾಲಕೃಷ್ಣ

ಸಾಗರ. ಇಂದು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರೀಕಾ ಗೋಷ್ಟಿಯಲ್ಲಿ  ಸಾಗರದ ಮಾಜಿ ಶಾಸಕರಾದ ಗೋಪಾಲ ಕೃಷ್ಣ ಬೇಳೂರು  ಶಾಸಕ ಹಾಲಪ್ಪನವರ ವಿರುದ್ಧ ಹರಿಹಾಯ್ದಿದ್ದಾರೆ ಶಾಸಕ ಹಾಲಪ್ಪ ತುಮರಿ ಭಾಗದ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ನೀಡುವಲ್ಲಿ ವಿಫಲವಾಗಿದ್ದಾರೆ. ಕ್ರಿಕೇಟ್ ನೋಡುತ್ತ ಕುಳಿತ ಶಾಸಕ ಹಾಲಪ್ಪ ಸರಿಯಾದ ಸಮಯಕ್ಕೆ ತುಮರಿ ಗ್ರಾಮಕ್ಕೆ ಹೋಗಿದ್ದರೆ ಎರಡು ಜೀವ ಉಳಿಯುತ್ತಿತ್ತು ಇವರಿಗೆ ಎರಡು ಜೀವಕ್ಕಿಂತ ಕ್ರಿಕೆಟ್ ನೋಡುವುದೆ ಮುಖ್ಯವಾಗಿದೆ. ಆಕ್ಸಿಜನ್ ವ್ಯವಸ್ಥೆ ಇಲ್ಲದ ಸೆಕೆಂಡ್ ಹ್ಯಾಂಡ್ ಆಂಬುಲೆನ್ಸ್ ನೀಡಿ ಪ್ರಚಾರಕ್ಕಾಗಿ ನಗರಸಭೆಯಲ್ಲಿ ಸಮಾರಂಭ…

Read Full News

ಕೆಂಚನಾಲದಲ್ಲಿ ಮಾರಿಕಾಂಬ ಕನ್ನಡ ಯುವಕ ಸಂಘದ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ : ಎರಡು ದಿನದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲದಲ್ಲಿ ಮಾರಿಕಾಂಬ ಕನ್ನಡ ಯುವಕ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿದ ಕೆಂಚನಾಲ  ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಮಾತನಾಡಿ ಕ್ರೀಡೆ ಎನ್ನುವುದು ಯುವಕರ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಾಗಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಕಂಪ್ಯೂಟರ್‌ ಚಟುವಟಿಕೆಗಳಲ್ಲಿ ತೊಡಗದೆ, ದೈಹಿಕ ಸದೃಢತೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸಬೇಕು `ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ…

Read Full News

ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ಬಿಜೆಪಿ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ: ಮಾಜಿ ಸಭಾಪತಿ ಹಾಗೂ ಹಾಲಿ ಶಾಸಕ ರಮೇಶ್ ಕುಮಾರ್ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲೂಕ್ ಬಿಜೆಪಿ ಮಹಿಳಾ ಮೋರ್ಚಾ ಮತ್ತು ರಿಪ್ಪನ್ ಪೇಟೆಯ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೇತೃತ್ವವಹಿಸಿ ಮಾತನಾಡಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿನ್ನೆ ಮಾಜಿ ಸ್ಪೀಕರ್ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ರವರು…

Read Full News

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿಧನ : ಗಣ್ಯರ ಸಂತಾಪ

ಮಾಜಿ ಕೇಂದ್ರ ಸಚಿವ,ಹಿರಿಯ ಕಾಂಗ್ರೆಸ್ ನಾಯಕ ಆರ್.ಎಲ್.ಜಾಲಪ್ಪ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 96 ವರ್ಷ ಪ್ರಾಯವಾಗಿತ್ತು. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಾಲಪ್ಪ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ದೊಡ್ಡಬಳ್ಳಾಪುರದ ತೂಬಗೆರೆ ನಿವಾಸದಲ್ಲಿ ಪಾರ್ಶುವಾಯುವಿಗೆ ತುತ್ತಾಗಿದ್ದ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು, ಕೋಲಾರದ ಆರ್. ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಗಡೆ ಅವರ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಅವರು,ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1996…

Read Full News

ಶಿವಮೊಗ್ಗದಲ್ಲಿ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ : ನಗರದ ಮುಸ್ಲಿಂ ಸ್ಮಶಾನದ ಮುಂಭಾಗದ ಕಬ್ಬಿನ ಹಾಲಿನ ಮಶೀನ್ ಪಕ್ಕದ ಮರದಲ್ಲಿ ಸುಮಾರು 35 ವರ್ಷದ ಅನಾಮಧೇಯ ಪುರುಷನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಶವವನ್ನು ಇರಿಸಲಾಗಿದೆ. ಅನಾಮಧೇಯ ವ್ಯಕ್ತಿಯು ಸುಮಾರು 5.6 ಅಡಿ ಎತ್ತರ, ದುಂಡು ಮುಖ ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಸುಮಾರು 02 ಇಂಚು ಉದ್ದದ ಕಪ್ಪು ಕೂದಲು ಹಾಗೂ 01 ಇಂಚು ಉದ್ದದ ಕುರುಚಲು ಗಡ್ಡ ಮೀಸೆ ಇರುತ್ತದೆ. ಮೃತನು ಕಂದು ಕೆಂಪು…

Read Full News

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರ ಸಾವು,ಒಬ್ಬರ ಸ್ಥಿತಿ ಗಂಭೀರ

ಶಿವಮೊಗ್ಗ : ನಗರದ ಸವಳಂಗ ಬ್ರಿಡ್ಜ್ ಬಳಿ ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾರಿನಲ್ಲಿದ್ದ ನಾಲ್ವರಲ್ಲಿ ಮೂರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಾಲಕ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಒಬ್ಬರು ಸದ್ಯಕ್ಕೆ ಬಚಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಿ ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಳಂಗ ಬ್ರಿಡ್ಜ್ ಬಳಿ ಮರಳು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಯಲ್ಲಾಪುರ-ಬೆಂಗಳೂರು ಕೆಎಸ್ಆರ್ ಟಿ ಸಿ ಬಸ್…

Read Full News

ಕನ್ನಡದ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್ ಕೃತ್ಯ ಖಂಡಿಸಿ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ : ಕನ್ನಡ ಧ್ವಜ ಸುಟ್ಟುಹಾಕಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ನಾಡಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.  ಪ್ರತಿಭಟನೆಯ ವೇಳೆ ಮಾತನಾಡಿದ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾದ ಅರ್ ಎ ಚಾಬುಸಾಬ್ ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ…

Read Full News

ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾಗಿ ಆದರ್ಶ್ ಹುಂಚದ ಕಟ್ಟೆ ನೇಮಕ :

ರಾಷ್ಟ್ರೀಯ ಯುವ ಕಾಂಗ್ರೆಸ್ ನ ವಕ್ತಾರನ್ನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ್ ಹುಂಚದಕಟ್ಟೆ ರವರನ್ನು ಆಯ್ಕೆ ಮಾಡಲಾಗಿದೆ. 27 ಜನರನ್ನ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದ್ದು, ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ ಹುಂಚದ ಕಟ್ಟೆ ಮತ್ತು ಮಂಗಳೂರಿನ ಸುರಯ್ಯ ಅಂಜುಂ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಿರುವ‌ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ‌ ಬಿ.ವಿ.ಶ್ರೀನಿವಾಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್…

Read Full News

ಶಿವಮೊಗ್ಗದ ಖಾಸಗಿ ಲಾಡ್ಜ್ ನಲ್ಲಿ ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ : ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

ಶಿವಮೊಗ್ಗ : ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಖಾಸಗಿ ಲಾಡ್ಜ್ ನಲ್ಲಿ ಪತ್ತೆಯಾಗಿದ್ದಾಳೆ ಎಂದು ಆರೋಪಿಸಿ ಇಂದು ಬಜರಂಗರಂಗ ದಳ ಸಂಘಟನೆಯ ಕಾರ್ಯಕರ್ತರು ಖಾಸಗಿ ಹೋಟೆಲ್ ಎದುರು ಪ್ರತಿಭಟನೆ ನಡೆಸಿತು ನಿನ್ನೆಯ ದಿನ ಹೊನ್ನಾಳಿ ರಸ್ತೆ ಯಲ್ಲಿರುವ ಖಾಸಗಿ ಲಾಡ್ಜ್ ನಲ್ಲಿ ಅನ್ಯಕೋಮಿನ ಯುವಕನು ಹಿಂದೂ ಯುವತಿಯನ್ನ ಕರೆದುಕೊಂಡು ಬಂದು ಉಳಿದಿರುವುದು ಬಜರಂಗದಳದ ಸಂಘಟನೆಯ ಕಾರ್ಯಕರ್ತರ ಕಣ್ಣು ಕೆಂಪಾಗುವಂತೆ ಮಾಡಿದೆ. ದಾವಣಗೆರೆ ಜಿಲ್ಲೆಯ ಯುವಕ ಮತ್ತು ಯುವತಿಯರು ಹಳೆಯ ಪರಿಚಯದ ಮೇಲೆ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದಾರೆ ಎನ್ನಲಾಗಿದ್ದು….

Read Full News

ಸೂಕ್ತ ಸಮಯಕ್ಕೆ ಆಂಬುಲೆನ್ಸ್ ಸೇವೆ ದೊರಕದೇ ಸಾಗರದಲ್ಲಿ ನವಜಾತ ಶಿಶು ಸಾವು !

ಸಾಗರ :  ಸೂಕ್ತ ಸಮಯಕ್ಕೆ ಆಂಬುಲೆನ್ಸ್ ಸೇವೆ ದೊರಕದೇ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತುಮರಿಯಲ್ಲಿ ನಡೆದಿದೆ. ತುಮರಿ ಸಮೀಪದ ಚದರವಳ್ಳಿ ಗ್ರಾಮದ ಚೈತ್ರಾ ಎನ್ನುವವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಅ್ಯಂಬುಲೆನ್ಸ್ ಇಲ್ಲದೇ ಖಾಸಗಿ ವಾಹನದಲ್ಲಿ ಗರ್ಭಿಣಿಯನ್ನು ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಈ ವೇಳೆ ಮಹಿಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಡವಾಗಿ ಬಂದಿದ್ದರಿಂದ ತಾಯಿ- ಹಾಗೂ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದೆ. ಹೆಚ್ಚಿನ ಚಿಕಿತ್ಸೆಗೆ ಸಾಗರ ತಾಲೂಕು…

Read Full News

ಕರ್ನಾಟಕ ರಾಜ್ಯ ಕಿರಿಯರ ವಾಲಿಬಾಲ್ ತಂಡಕ್ಕೆ ರಿಪ್ಪನ್ ಪೇಟೆಯ ಯುವಕ ಆಯ್ಕೆ :

ರಿಪ್ಪನ್ ಪೇಟೆ : ಪಶ್ಚಿಮ ಬಂಗಾಳ ದ ಬುಡ್ವಾರ್ನ್ ಜಿಲ್ಲೆ ಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಕಿರಿಯರ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿದಿಸುವ ಅವಕಾಶವನ್ನು ರಿಪ್ಪನ್ ಪೇಟೆ ಯ ವಾಲಿಬಾಲ್ ಆಟಗಾರ ವರುಣ್ ಆರ್ ಎಂ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಕಿರಿಯರ ವಾಲಿಬಾಲ್ (18ವರ್ಷದೊಳಗಿನ ವಯೋಮಿತಿ ) ಪಂದ್ಯವು ಇದೇ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಚೌಡೇಶ್ವರಿ ಬೀದಿಯ ನಿವಾಸಿಗಳಾದ ಮಂಜುನಾಥ್ ಆಚಾರ್ ಹಾಗೂ ಕಮಲ ದಂಪತಿಗಳ ತೃತೀಯ ಪುತ್ರನಾದ ವರುಣ್ ಎಂ…

Read Full News

ಒಕ್ಕಲಿಗರ ಸಂಘದ ಚುನಾವಣೆ ಸಿರಿಬೈಲ್ ಧರ್ಮೇಶ್ ಮುನ್ನಡೆ : ಗೆಲುವು ಬಹುತೇಕ ಖಚಿತ

ರಾಜ್ಯ ಒಕ್ಕಲಿಗರ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶದ ಮೂರನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಮೂರನೇ ಸುತ್ತಿನಲ್ಲಿ ಧರ್ಮೇಶ್ ಸಿರಿ ಬೈಲ್ ಮುನ್ನಡೆ ಸಾಧಿಸಿದ್ದಾರೆ. ಎರಡನೇ ಸುತ್ತಿನಲ್ಲಿ ಎಸ್ ಕುಮಾರ್ ಮುನ್ನಡೆ ಪಡೆದಿದ್ದ ಎಸ್ ಕುಮಾರ್ ಮೂರನೇ ಸುತ್ತಿನಲ್ಲಿ ಹಿನ್ನಡೆ ಆಗಿದೆ. ಎರಡನೇ ಸುತ್ತಿನಲ್ಲಿ 2436 ಮತ ಪಡೆದಿದ್ದ ಕುಮಾರ್ ಮೂರನೇ ಸುತ್ತಿನಲ್ಲಿ 2912 ಮತ ಪಡೆದುಕೊಂಡಿದ್ದಾರೆ. ಅದರಂತೆ ಧರ್ಮೇಶ್ ಸಿರಿಬೈಲ್ 3265 ಮತಗಳನ್ನ ಪಡೆದು ಮುನ್ನಡೆ ಸಾಧಿಸಿದ್ದಾರೆ. ಧರ್ಮೇಶ್ ಅವರು ನಾಲ್ಕನೇ ಸುತ್ತಿನಲ್ಲಿಯೂ ಹೆಚ್ಚು…

Read Full News

ಶಿವಮೊಗ್ಗ ವಿಪ ಚುನಾವಣೆಯಲ್ಲಿ ಬಿಜೆಪಿ ಗೆಲುವು : ರಿಪ್ಪನ್ ಪೇಟೆಯಲ್ಲಿ ವಿಜಯೋತ್ಸವ

ರಿಪ್ಪನ್ ಪೇಟೆ : ಭಾರಿ ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಡಿ ಎಸ್ ಅರುಣ್ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಇಂದು ವಿನಾಯಕ ವೃತ್ತದಲ್ಲಿ ವಿಜಯೋತ್ಸವ ಆಚರಿಸಿ,ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರ ಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಪ್ರಧಾನಿ ನರೇಂದ್ರಮೋದಿ, ರಾಷ್ಟ್ರಾಧ್ಯಕ್ಷ ಅಮಿತ್‌ಷಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ಕಟೀಲ್‌, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ,ಶಾಸಕ ಹರತಾಳು ಹಾಲಪ್ಪ ಅವರ ಪರ ಜೈಕಾರಗಳನ್ನು ಕೂಗುತ್ತಾ,ಪಟಾಕಿ ಸಿಡಿಸುವ ಮೂಲಕ…

Read Full News

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಡಿ ಎಸ್ ಅರುಣ್ ಜಯಭೇರಿ

ಶಿವಮೊಗ್ಗ : ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಇಂದು ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಇಂದು ಮುಂಜಾನೆ ಸಹ್ಯಾದ್ರಿ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಆರಂಭಿಸಲಾಯಿತು. 11:30ರ ಸುಮಾರಿಗೆ ಫಲಿತಾಂಶ ಘೋಷಣೆಯಾಗಿದ್ದು, ಅರುಣ್ ಮೊದಲ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದ ಹಿರಿಯ ರಾಜಕಾರಣಿ ಡಿ.ಹೆಚ್. ಶಂಕರಮೂರ್ತಿ ಅವರ ಪುತ್ರ ತಮ್ಮ ಮೊದಲ ಚುನಾವಣೆಯ ಗೆಲುವಿನಿಂದ…

Read Full News

ಶಿವಮೊಗ್ಗದ ಟಿಪ್ಪುನಗರದಲ್ಲಿ ಕೋಟಿ ರೂ ಮೌಲ್ಯದ ಶ್ರೀಗಂಧ ಪತ್ತೆ : ಆರೋಪಿ ಸೈಯದ್ ಅಪ್ಸರ್ ವಶಕ್ಕೆ

ಶಿವಮೊಗ್ಗದ ಟಿಪ್ಪುನಗರದಲ್ಲಿ ನಿನ್ನೆ ಸುಮಾರು ಒಂದು ಸಾವಿರ ಕೆಜಿ ತೂಕದ, ಅಂದಾಜು ಕೋಟಿ ರೂ ಬೆಲೆಬಾಳುವ ಭಾರೀ ಶ್ರೀಗಂಧವನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆ ದಾಳಿಯಲ್ಲಿ ವಶಪಡಿಸಿಕೊಂಡಿದೆ. ಅರಣ್ಯ ಇಲಾಖೆಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಡಿಸಿಎಫ್ ಶಂಕರ್ ಹಾಗೂ ಇತರೆ ಅಧಿಕಾರಿಗಳು,, ಪೊಲೀಸ್ ಇಲಾಖೆಯ ಪ್ಸ್ಪ ಪ್ರಬಾರ ಡಿವೈಎಸ್ ಪಿ, ತುಂಗಾನಗರ ಇನ್ಸ್ ಸ್ಪೆಕ್ಟರ್ ದೀಪಕ್ ಅವರ ತಂಡ ಕೈ ಜೋಡಿಸಿ ದಾಳಿ ನಡೆಸಿದಾಗ ಈ ಶ್ರೀಗಂಧ ಪತ್ತೆಯಾಗಿದೆ. ಟಿಪ್ಪುನಗರ ಸರಹದ್ದಿನ ಅಂಬೇಡ್ಕರ್…

Read Full News

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ವಿಧಿವಶ :

ರಾಷ್ಟ್ರ ಕವಿ ಕುವೆಂಪು ಅವರ ಸೊಸೆ, ಪೂರ್ಣಚಂದ್ರ ತೇಜಸ್ವಿ (84) ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಲ್ಲಿ ವಾಸವಾಗಿದ್ದ ರಾಜೇಶ್ವರಿ ತೇಜಸ್ವಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಬೆಂಗಳೂರಿಗೆ ಆಗಮಿಸಿದ್ದರು.ಕಳೆದ ನಾಲ್ಕು ದಿನಗಳಿಂದ ನಗರದ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಪತಿ ಪೂರ್ಣಚಂದ್ರ ತೇಜಸ್ವಿ ನಿಧನದ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದ…

Read Full News

21 ವರ್ಷಗಳ ನಂತ್ರ ಭಾರತಕ್ಕೆ ವಿಶ್ವಸುಂದರಿ ಪಟ್ಟ- ಹರ್ನಾಜ್ ಕೌರ್ ಸಂಧು ಮಿಸ್ ಯೂನಿವರ್ಸ್ :

2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ನೂತನ ವಿಶ್ವ ಸುಂದರಿ ಪಟ್ಟ ಅಲಂಕರಿಸಿದ್ದಾಳೆ. ಮಿಸ್ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ನಟಿ ಮತ್ತು ಮಾಡೆಲ್ ಹರ್ನಾಜ್ ಕೌರ್ ಸಂಧು ಅವರನ್ನು ಸ್ಪರ್ಧೆಯ ವಿಜೇತೆ ಎಂದು ಘೋಷಿಸುತ್ತಿದ್ದಂತೆ ಭಾರತದ ತ್ರಿವರ್ಣ ಧ್ವಜವು ಎತ್ತರಕ್ಕೆ ಹಾರಾಡಿದೆ. ಇಸ್ರೇಲ್‌ನ ದಕ್ಷಿಣ ನಗರವಾದ ಇಲಾಟ್‌ನಲ್ಲಿ ಡಿಸೆಂಬರ್ 12(ಭಾನುವಾರ) ರಂದು ವಿಶ್ವ ಸುಂದರಿ ಸ್ಪರ್ಧೆ ನಡೆದಿದೆ. ಮಿಸ್ ಯೂನಿವರ್ಸ್ 2021 ಹರ್ನಾಜ್ ಸಂಧು ಪಂಜಾಬ್‌ನ ಚಂಡೀಗಢ ಮೂಲದ ಮಾಡೆಲ್‌…

Read Full News

ಸಿನಿಮೀಯ ರೀತಿಯಲ್ಲಿ ಸರಗಳ್ಳನನ್ನು ಬೆನ್ನತ್ತಿ ಹಿಡಿದ ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಮುನೇಶಪ್ಪ

ಶಿವಮೊಗ್ಗ: ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್ ಹೋಂ ಬಳಿ ತಾಯಿ ಮತ್ತು ಮಗಳು ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಯುವತಿಯ ಕತ್ತಿನಲ್ಲಿದ್ದ ಸರಕ್ಕೆ ಕೈಹಾಕಿದ್ದಾರೆ. ಯುವತಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಾಗ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. ಆಗ, ಯುವತಿ…

Read Full News

ಜಿಂಕೆ ಭೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಇಬ್ಬರ ಬಂಧನ :

ಸಾಗರ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದುದನ್ನು ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯತಿ ಬಳಸಗೋಡು ಗ್ರಾಮದಲ್ಲಿ ಜಿಂಕೆ ಮಾಂಸ ಸಮೇತ ಆರೋಪಿಗಳನ್ನು ಬಂದಿಸಲಾಗಿದೆ. ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನಕುಮಾರ ಹಾಗೂ ಸಾಗರ ACF ಶ್ರೀಧರ್ ಮತ್ತು RFO ಪ್ರಮೋದ್ ರವರ ಮಾರ್ಗದರ್ಶನದಲ್ಲಿ  ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ ತಂಡ ನೇತೃತ್ವದಲ್ಲಿ ದಾಳಿ ನಡೆಸಿದಾಗ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ…

Read Full News

ಪ್ರೀತಿಸಿದ ಹುಡುಗಿಯ ಮನೆ ಮುಂದೆ ವಿಷ ಕುಡಿದು ಆಸ್ಪತ್ರೆಗೆ ಸೇರಿದ ಪಾಗಲ್ ಪ್ರೇಮಿ.!! ಪ್ರೇಮ್ ಕಹಾನಿ ಮೆ ಪಾಯಿಸನ್ ಸ್ಟೋರಿ !!!

ಹೊಸನಗರ : ಎಂಟು ವರ್ಷದ ಪ್ರೀತಿಯನ್ನು ಪ್ರಿಯತಮೆ ನಿರಾಕರಿಸಿದ್ದಕ್ಕೆ ಯುವತಿಯ ಮನೆಯ‌ ಮುಂದೆಯೇ ಯುವಕನೋರ್ವ ವಿಷ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದಿದೆ. ಯುವಕನ ವರ್ತನೆಗೆ ರೋಸತ್ತು,ಬೇಸರವಾಗಿ ಯುವತಿಯ ತಾಯಿ ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನಿಗೆ 8 ವರ್ಷದ ಹಿಂದೆ ಜಯನಗರ ಯುವತಿಯೊಂದಿಗೆ ಪ್ರೀತಿ ಹುಟ್ಟಿದೆ. ಆರಂಭದಲ್ಲಿ ಇಬ್ವರಿಗೂ ಚೆನ್ನಾಗಿದ್ದ ಪ್ರೀತಿ ಕಾಲಕ್ರಮೇಣ ಯುವತಿಗೆ ಬೇಸರವೆನಿಸಿದೆ. ಯುವಕನ ವಿಪರೀತಿ ಕುಡಿತ ಹಾಗೂ ಆತನ ಇತರೆ ಚಟುವಟಿಕೆಗಳಿಗೆ ಯವತಿ ರೋಸತ್ತಿ…

Read Full News

ಯಶಸ್ವಿಯಾಗಿ ನಡೆದ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾವಳಿ : ಪುನೀತ್ ರಾಜ್‍ಕುಮಾರ್ ರಂತವರು ಪದೇ ಪದೇ ಕನ್ನಡ ನಾಡಿನಲ್ಲಿ ಜನಿಸಬೇಕು : ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ಪಟ್ಟಣದ ಆರ್ ಸಿಸಿ ಆಟದ ಮೈದಾನದಲ್ಲಿ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಇಲೆವೆನ್ ಸ್ಟಾರ್ ಕ್ರಿಕೆಟ್ ತಂಡ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಗೆದ್ದ ಎಕೆ ಲಯನ್ಸ್ ಕ್ರಿಕೆಟ್ ಕ್ಲಬ್ ಶಿವಮೊಗ್ಗ ತಂಡಕ್ಕೆ ಪುನೀತ್ ರಾಜ್‍ಕುಮಾರ್ ಟ್ರೋಫಿಯನ್ನು ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ನಂತರ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಆರೋಗ್ಯದ ಜೊತೆಗೆ ನಾಯಕತ್ವ ಗುಣ…

Read Full News

ಸೊರಬದಲ್ಲಿ ಎತ್ತು ತೊಳೆಯುವಾಗ ಕಾಲುಜಾರಿ ಬಿದ್ದು ವ್ಯಕ್ತಿ ಸಾವು :

ಸೊರಬ : ನದಿಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಕಾಲು ಜಾರಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ತಾಲೂಕಿನ ಮೂಡಿ ಗ್ರಾಮದಲ್ಲಿ ನಡೆದಿದೆ. ಮೂಡಿ ಗ್ರಾಮದ ಶಶಿಧರ ಗೂಳೇರ್ (42) ಮೃತ ದುರ್ದೈವಿ. ಇಂದು ಬೆಳಗ್ಗೆ ಗ್ರಾಮದ ವರದಾ ನದಿಯಲ್ಲಿ ಎತ್ತುಗಳ ಮೈತೊಳೆಯಲು ಹೋದ ಸಂದರ್ಭದಲ್ಲಿ ಶಶಿಧರ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ….

Read Full News

ಕಾರಿನಲ್ಲಿ ಆಂಧ್ರದಿಂದ ಶಿವಮೊಗ್ಗ ಸಾಗಿಸುತ್ತಿದ್ದ 21 ಕೆ.ಜಿ ಗಾಂಜಾ ವಶಕ್ಕೆ: ನಾಲ್ವರ ಬಂಧನ

ಶಿವಮೊಗ್ಗ: ಆಂಧ್ರದಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದ್ದ 21 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿರುವ ತುಂಗಾ ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಗರಕ್ಕೆ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ ನಡೆದಿದೆ.‌ ಶಿವಮೊಗ್ಗ ತಾಲೂಕಿನ ಹಾಲಲಕ್ಕವಳ್ಳಿ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೋವಾ ಕಾರಿನಲ್ಲಿ ಗಾಂಜಾವನ್ನು ಶಿವಮೊಗ್ಗಕ್ಕೆ ತರಲಾಗುತ್ತಿತ್ತು. ಕಾರಿನಲ್ಲಿದ್ದ ದೌಲತ್ ಅಲಿಯಾಸ್ ಗುಂಡು, ಮುಜೀಬ್ ಖಾನ್ ಅಲಿಯಾಸ್ ಬ್ರಸ್ಟ್, ಶೋಯೆಬ್ ಅಲಿಯಾಸ್ ಚೂಡಿ ಹಾಗೂ ಜಪ್ರುಲ್ಲಾ ಎಂಬುವರನ್ನು ಬಂಧಿಸಲಾಗಿದೆ. ಗಾಂಜಾ ಮೌಲ್ಯವು ಅಂದಾಜು 6…

Read Full News

ರಿಪ್ಪನ್ ಪೇಟೆಯ ನೇತ್ರಾ ಟೈಲರ್ ಗುರುಪಾದಪ್ಪ ನಿಧನ :

ರಿಪ್ಪನ್ ಪೇಟೆ: ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ನಿವಾಸಿ, ಟೈಲರ್ ಗುರುಪಾದಪ್ಪ (ನೇತ್ರಾ ಟೈಲರ್) (65) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು. ರಿಪ್ಪನ್ ಪೇಟೆಯಲ್ಲಿ ನೇತ್ರಾ ಟೈಲರ್ ಎಂದೇ ಪ್ರಸಿದ್ದರಾಗಿದ್ದ ಇವರು ಕೆಲವು ವರ್ಷಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ,ಇಬ್ಬರು ಪುತ್ರಿಯರು ಇದ್ದಾರೆ. ಭಾನುವಾರ ಬೆಳಿಗ್ಗೆ 10ಕ್ಕೆ ಬೈರಾಪುರ ಗ್ರಾಮದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನೇರವೆರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read Full News

ಬಸ್ ನಲ್ಲಿ ಶೃಂಗೇರಿ ಮೂಲದ ಮುಸ್ಲಿಂ ಯುವಕ, ಹಿಂದೂ ಯುವತಿಯ ರೋಮ್ಯಾನ್ಸ್ ; ಸಾರ್ವಜನಿಕರಿಂದ ತರಾಟೆ

ಶೃಂಗೇರಿ : ತಾಲೂಕು ಹಾಗೂ ತೀರ್ಥಹಳ್ಳಿ ಗಡಿಭಾಗದ ಬಿದರಗೋಡು ಗ್ರಾಮದ ಯುವಕನೊಬ್ಬ ಉಡುಪಿ ಮೂಲದ ಹಿಂದೂ ಯುವತಿಯಳೊಡನೆ ಅಸಭ್ಯವಾಗಿ ವರ್ತಿಸಿ ಹಿಂದೂ ಸಂಘಟಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಬಿದರಗೋಡಿನ ಸುನೈಫ್ ಇಬ್ರಾಹಿಂ ಎಂಬಾತ ಉಡುಪಿ-ಮಂಗಳೂರು ಬಸ್ ನಲ್ಲಿ ಉಡುಪಿ ಮೂಲದ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಹಾಗೂ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡು, ಥಳಿಸಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ. ಲವ್ ಜಿಹಾದ್ ಆರೋಪ;…

Read Full News

ಅನಂದಪುರದಲ್ಲಿ ಭರ್ಜರಿಯಾಗಿ ಆರಂಭಗೊಂಡ ಕಾಂಗ್ರೆಸ್ ಸದಸ್ಯತ್ವ ಅಭಿಯಾನ !!

ರಾಜ್ಯಾದ್ಯಂತ ಇಂದು ಡಿಕೆ ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಪ್ರಾರಂಭ ಮಾಡಲಾಗಿದೆ. ಜೂಮ್ ಆ್ಯಪ್ ನ ಮೂಲಕ ಇದೀಗ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ರಾಜ್ಯಾದ್ಯಂತ ಯುವ ಪೀಳಿಗೆಯನ್ನು ಸೆಳೆಯುವ ಉದ್ದೇಶದಿಂದ ಭರ್ಜರಿಯಾಗಿ ಇಂದಿನಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಚಾಲನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾಕ್ಟರ್  ರಾಜ ನಂದಿನಿ. ಪ್ರಧಾನ ಕಾರ್ಯದರ್ಶಿಯಾದ ಅಘ ಸುಲ್ತಾನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರತ್ನಾಕರ…

Read Full News

ಯೋಧರ ಸಾವು ಸಂಭ್ರಮಿಸುತ್ತಿರುವ ವಿಕೃತರಿಗೆ ನಡು ರಸ್ತೆಯಲ್ಲಿಯೇ ಗುಂಡಿಟ್ಟರು ತಪ್ಪಿಲ್ಲ ಎಂದ ಶಿವಮೊಗ್ಗ ಗ್ರಾಮಾಂತರ ಶಾಸಕ..

ಶಿವಮೊಗ್ಗ : ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಇತರೆ ಯೋಧರ ಸಾವಿನ ಕುರಿತಂತೆ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಮಾಡಿದವರ ವಿರುದ್ದ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್ ಗರಂ ಆಗಿದ್ದಾರೆ. ಇಂತಹ ವಿಕೃತರನ್ನು ನಡು ರಸ್ತೆಯಲ್ಲಿಯೇ ಗುಂಡಿಟ್ಟು ಕೊಂದರು ತಪ್ಪಿಲ್ಲ..! ಎಂದು ಟ್ವೀಟ್ ಮಾಡಿದ್ದಾರೆ.  ಈ ಕುರಿತಂತೆ ಶುಕ್ರವಾರ ತಮ್ಮ ಅದಿಕೃತ ಟ್ವಿಟರ್ ಖಾತೆಯಲ್ಲಿ ಕೆ.ಬಿ.ಅಶೋಕನಾಯ್ಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ.ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ತರವಾದ ಪಾತ್ರವಹಿಸಿ ದೇಶಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿರುವ…

Read Full News

ರಿಪ್ಪನ್ ಪೇಟೆಯಲ್ಲಿ ಶ್ರದ್ದಾ ಭಕ್ತಿಯ ಷಷ್ಟಿ ಆಚರಣೆ :

ರಿಪ್ಪನ್‌ಪೇಟೆ: ಸುಬ್ರಹ್ಮಣ್ಯ ಷಷ್ಟಿಯ ಅಂಗವಾಗಿ ಇಲ್ಲಿನ ಇತಿಹಾಸ ಪ್ರಸಿದ್ದ ಸಿದ್ದಿ ವಿನಾಯಕ ಸ್ವಾಮಿ ದೇವಸ್ಥಾನ, ಬರುವೆ ಚೌಡೇಶ್ವರಿ ಅಮ್ಮನವರ  ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಷಷ್ಟಿ ಉತ್ಸವವು ವೈಭವದೊಂದಿಗೆ ಸಂಪನ್ನಗೊಂಡಿತು. ರಿಪ್ಪನ್‌ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಚಂದ್ರಶೇಖರ್‌ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ  ಮತ್ತು ಮಹಾಮಂಗಳಾರತಿಯೊಂದಿಗೆ ಕಾರ್ತೀಕ ದೀಪೋತ್ಸವ ಜರುಗಿತು. ಕಾರ್ತಿಕ ದೀಪೋತ್ಸವ ವು ಸುತ್ತಮುತ್ತಲಿನ ಅಲಸೆ, ಬರುವೆ, ಹುಂಚದಕಟ್ಟೆ, ಶಿವಪುರ ಇನ್ನಿತರ ಹಲವು ಗ್ರಾಮಗಳಲ್ಲಿನ ದೇವಸ್ಥಾನದಲ್ಲಿ ಒಂದು ತಿಂಗಳ ಕಾಲ…

Read Full News

ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಿಯೇ ತೀರುತ್ತೇವೆ : ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಮತಾಂತರ ಕಾಯ್ದೆ ಜಾರಿಗೆ ತರಲಿಕ್ಕಾದರೂ ವಿಧಾನ ಪರಿಷತ್ ನಲ್ಲಿ ಬಿಜೆಪಿಗೆ ಬಹುಮತ ಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಗೆಲುವಿಗೆ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅದ್ಯಾವ ಬುದ್ದಿ ಇದೆಯೋ ಗೊತ್ತಿಲ್ಲ. ಹಿಂದೂ ಧರ್ಮದ ಅವನತಿ ನಡೆಯುತ್ತಿದ್ದರೂ ಕೂಡ ಕೇವಲ ವೋಟಿನ ರಾಜಕಾರಣಕ್ಕಾಗಿಯೇ ಧರ್ಮ ವಿರೋಧ…

Read Full News

ವಿಧಾನ ಪರಿಷತ್ ಚುನಾವಣೆ : ಬಿಎಸ್ ವೈ,ಈಶ್ವರಪ್ಪ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಯ ಸದಸ್ಯರಿಂದ ಮತದಾನ : ರಿಪ್ಪನ್ ಪೇಟೆಯಲ್ಲಿ ಗ್ರಾಪಂ ಸದಸ್ಯರಿಂದ ಮತದಾನ

ವಿಧಾನ ಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ ಮಧ್ಯಾಹ್ನದವರೆಗೂ ಅನೇಕ ಪ್ರಮುಖರು ಮತ ಚಲಾಯಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಮತದಾನ ಮಾಡಿದರು. ಶಿಕಾರಿಪುರದಲ್ಲಿ ನಿಕಟಪೂರ್ವ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ರಾಘವೇಂದ್ರ ಮತಚಲಾಯಿಸಿದರೆ, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ, ಆಯನೂರು ಮಂಜುನಾಥ್, ರುದ್ರೇಗೌಡ, ಮೇಯರ್ ಸುನೀತ ಅಣ್ಣಪ್ಪ ಒಳಗೊಂಡತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಒಟ್ಟಿಗೆ ಬಂದು ಮತ ಚಲಾಯಿಸಿದರು. ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ರವರು ತೀರ್ಥಹಳ್ಳಿ ಪಟ್ಟಣ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.