ಕಾಂಗ್ರೆಸ್ ಸರ್ಕಾರ ಹಿಂದೂ ಹಾಗೂ ಬಡವರ ವಿರೋಧಿ ಸರ್ಕಾರ – ಕೆ ಎಸ್ ಈಶ್ವರಪ್ಪ|KSE
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳ ಒಳಗೆ ಹಿಂದೂ ಧರ್ಮ ವಿರೋಧಿ ಮತ್ತು ಬಡವರ ವಿರೋಧಿ ಸರ್ಕಾರ ಎಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗೆ ಪ್ರತಿ ತಿಂಗಳಿಗೆ 10 ಕೆ ಜಿ ಅಕ್ಕಿ ಕೊಡುವುದಾಗಿ ಹೇಳಿ ಪ್ರಧಾನಿ ಮೋದಿ ಅಡ್ಡ ಬರ್ತಾ ಇದ್ದಾರೆ ಎಂಬ ಭಾವನೆಯನ್ನ ಕಾಂಗ್ರೆಸ್ ಆರೋಪಿಸುತ್ತಿದೆ. ಕೇಂದ್ರವನ್ನು ಕೇಳಿ ಕಾಂಗ್ರೆಸ್ ಗ್ಯಾರೆಂಟಿ ಘೋಷಣೆ ಮಾಡಿದ್ರಾ.ಎಂದು ಪ್ರಶ್ನಿಸಿದ ಈಶ್ವರಪ್ಪ ಬಡವರಿಗೆ ಮೋಸ ಆಗುತ್ತಿದೆ…


