ಬಂಗಾರಪ್ಪ ಮನೆಯಲ್ಲಿ ಸಿದ್ದರಾಮಯ್ಯ ವಾಸ್ತವ್ಯ: ಮಧು ಬಂಗಾರಪ್ಪ ಜೊತೆ ವಾಕಿಂಗ್..ಟಾಕಿಂಗ್
ಸೊರಬ : ತಾಲೂಕಿನ ಕುಬಟೂರಿನ ಮಾಜಿ ಸಿಎಂ ಎಸ್.ಬಂಗಾರಪ್ಪ ಅವರ ಮನೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದಾರೆ. ಹಾನಗಲ್ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ನಿನ್ನೆ ರಾತ್ರಿ ಬಂಗಾರಪ್ಪ ಮನೆಯಲ್ಲಿ ತಂಗಿದ್ದರು. ಇಂದು ಬೆಳಗ್ಗೆ ಕುಬಟೂರಿನ ಮನೆಯ ಆವರಣದಲ್ಲಿ ಮಧು ಬಂಗಾರಪ್ಪ ಜೊತೆ ಸಿದ್ದರಾಮಯ್ಯ ವಾಕಿಂಗ್ ಮಾಡಿದ್ದಾರೆ. ಬಳಿಕ ಮಧು ಬಂಗಾರಪ್ಪ ಹಾಗೂ ಇತರ ನಾಯಕರ ಜೊತೆ ಚರ್ಚೆ ನಡೆಸಿದ ಸಿದ್ದರಾಮಯ್ಯ ಪಕ್ಷ ಸಂಘಟನೆ ಮತ್ತು ರಾಜಕೀಯ ಬೆಳವಣಿಗೆ ಬಗ್ಗೆ ಸ್ಥಳೀಯ ಮುಖಂಡರ ಜೊತೆ ಚರ್ಚೆ…
