Headlines

ಶಿವಮೊಗ್ಗದಲ್ಲಿ ಮೇ 27ರಂದು ಬೃಹತ್ ಉದ್ಯೋಗ ಮೇಳ : ಪ್ರತಿಷ್ಠಿತ ಕಂಪನಿಗಳಿಂದ ನೇರ ನೇಮಕಾತಿ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 27/05/2022 ರಂದು ಬೆಳಗ್ಗೆ 10.00ಕ್ಕೆ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.  ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ…

Read More

ಗೃಹ ಸಚಿವರಿಗೂ ತಟ್ಟಿದ ಚುನಾವಣಾ ನೀತಿ ಸಂಹಿತೆಯ ಬಿಸಿ – ಸಭೆ ಅರ್ಧಕ್ಕೆ ಮೊಟಕುಗೊಳಿಸಿದ ಸಚಿವರು|election-code-of-conduct

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಸಮೀಪದಲ್ಲಿ ಇರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ವಿಶ್ವಕರ್ಮ ಸಮುದಾಯ ಮುಖಂಡರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕರೆಸಿ ಸಭೆಯನ್ನು ಹಮ್ಮಿಕೊಂಡಿದ್ದರು.ಈ ಸಭೆಯಲ್ಲಿ ನೂರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಚುನಾವಣೆಯ ನಿಯಮಾವಳಿಯ ಅನುಸಾರ ಚುನಾವಣಾ ಅಧಿಕಾರಿಗಳಿಂದ ಈ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕಾಗಿತ್ತು. ಆದರೆ ಮಂಗಳವಾರ ಸಮುದಾಯ ಭವನದಲ್ಲಿ ನಡೆಯಬೇಕಿದ್ದ ಸಭೆಗೆ ಚುನಾವಣ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಚುನಾವಣಾ ಅಧಿಕಾರಿಗಳು ದಿಡಿರ್ ದಾಳಿ…

Read More

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ಸಾಗರ: “ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳು. ಅವರಿಗೆ ಈ ನೆಲದಲ್ಲಿ ಬದುಕುವ ಹಕ್ಕಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, “ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅತ್ಯಂತ ಖಂಡನೀಯ ಕೃತ್ಯ. ಇಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಈ…

Read More

ಪಾಲೀಶ್ ಮಾಡಿಕೊಡುವ ನೆಪದಲ್ಲಿ ಮಹಿಳೆಯ ಎರಡೂವರೆ ಲಕ್ಷ ಮೌಲ್ಯದ ಮಾಂಗಲ್ಯ ಸರ ಅಪಹರಣ :

ಒಂಟಿ ಮಹಿಳೆಯ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಆಭರಣಗಳನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ  ಮಹಿಳೆಯ ಮಾಂಗಲ್ಯ ಸರ  ಅಪಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಟೆ ಕೊಪ್ಪ ಗ್ರಾಮದ ಸರೋಜಮ್ಮ ಅವರೇ ಮಾಂಗಲ್ಯ ಸರ ಕಳೆದುಕೊಂಡವರು. ಪಾಲಿಶ್ ಮಾಡಿಕೊಡುವ ನೆಪದಲ್ಲಿ ಸರೋಜಮ್ಮ ಅವರ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಅವರ ಗಮನ ಬೇರೆಡೆ ಸೆಳೆದು ಕ್ಷಣ ಮಾತ್ರದಲ್ಲಿ ನಲವತ್ತು ಗ್ರಾಂ ತೂಕದ ಮಾಂಗಲ್ಯ ಸರವನ್ನು ಅಪಹರಿಸಿ ಪರಾರಿಯಾಗಿದ್ದಾರೆ.ಮೊದಲು ಬೆಳ್ಳಿಯ ಗೆಜ್ಜೆಯನ್ನು…

Read More

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ | Thirthahalli

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ! ತೀರ್ಥಹಳ್ಳಿ : ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್. ಪಿ ಇಂದು ಸಂಜೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.  ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ .ಸಂಜೆ ಸಮಯಕ್ಕೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಜುನಾಥ್ ರವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಶ್ರೀ ರಾಮನವಮಿ ಸಂಭ್ರಮ: ವಿನಾಯಕ ವೃತ್ತದಲ್ಲಿ ಕೋಸಂಬರಿ–ಪಾನಕ ವಿತರಣೆ

Sri Ram Navami celebrated with devotion at Vinayaka Circle in Ripponpete, where Hindu Jagarana Vedike distributed kosambari and panaka to devotees ರಿಪ್ಪನ್ ಪೇಟೆ: ಪಟ್ಟಣದ ವಿನಾಯಕ ವೃತ್ತದಲ್ಲಿ ಶ್ರೀ ರಾಮನವಮಿ ಹಬ್ಬವನ್ನು ಭಕ್ತಿಭಾವದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಮಭಕ್ತರು ಉತ್ಸಾಹದಿಂದ ಪಾಲ್ಗೊಂಡರು. ಹಬ್ಬದ ಅಂಗವಾಗಿ ಭಕ್ತರಿಗೆ ಕೋಸಂಬರಿ ಹಾಗೂ ಪಾನಕವನ್ನು ಪ್ರಸಾದವಾಗಿ ವಿತರಿಸಲಾಯಿತು. ಬಿಸಿಲಿನ ತಾಪಮಾನದಲ್ಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವುದು ಹೇಗೆ, ವೇತನವೆಷ್ಟು..?? – ವಿವರ ಇಲ್ಲಿದೆ ನೋಡಿ | forest guard

ಕರ್ನಾಟಕ ಅರಣ್ಯ ಇಲಾಖೆಯ 13 ವೃತ್ತಗಳಲ್ಲಿ ಒಟ್ಟು 540 ಗಸ್ತು ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇವು ಗ್ರೂಪ್​ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಅಧಿಕೃತ ಮಂಡಳಿಗಳಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ…

Read More

ಇಂದಿನಿಂದ ಫೋನ್ ಪೇ, ಗೂಗಲ್ ಪೇ, ಪೇಟಿಎಂ ಬಳಕೆದಾರರಿಗೆ ಹೊಸ ನಿಯಮ: ಕೇವಲ OTP ಸಾಕಾಗುವುದಿಲ್ಲ!

ಇಂದಿನಿಂದ ಫೋನ್ ಪೇ, ಗೂಗಲ್ ಪೇ, ಪೇಟಿಎಂ ಬಳಕೆದಾರರಿಗೆ ಹೊಸ ನಿಯಮ: ಕೇವಲ OTP ಸಾಕಾಗುವುದಿಲ್ಲ! ಡಿಜಿಟಲ್ ಪಾವತಿಗಳಿಗೆ ಹೊಸ ಭದ್ರತಾ ನಿಯಮ: RBI ದಿಟ್ಟ ಹೆಜ್ಜೆ RBI introduces new digital payment security rules with mandatory two-factor authentication to curb online fraud and enhance customer protection in India. ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದೆ. ಚಹಾ ಅಂಗಡಿಯಿಂದ ಹಿಡಿದು ದೊಡ್ಡ ಮಾಲ್‌ಗಳವರೆಗೆ ಎಲ್ಲೆಡೆ…

Read More

ಸೈಕಲ್‌ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ :ಬಾಲಕ ಸ್ಥಳದಲ್ಲಿಯೇ ಸಾವು

ಸೊರಬ : ಸೈಕಲ್ ಗೆ ಯಮಸ್ವರೂಪಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಕಾನುಗೋಡು ಗ್ರಾಮದ ಜೀವ (13) ಮೃತ ದುರ್ದೈವಿ. ಸಿದ್ದಾಪುರದಿಂದ ಚಂದ್ರಗುತ್ತಿಯಡೆಗೆ ತೆರಳುತ್ತಿದ್ದ ಯಮ ಸ್ವರೂಪಿ ಟಿಪ್ಪರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಸೈಕಲ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೈಕಲ್ ಸವಾರ ಕಾನುಗೋಡು ಗ್ರಾಮದ ಸಂದೀಪ (32) ಎಂಬ ವ್ಯಕ್ತಿಯು ತೀವ್ರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ….

Read More

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ : ಲಾರಿ ಕ್ಲೀನರ್ ಸ್ಥಳದಲ್ಲೇ ಸಾವು…!!!

ಆನಂದಪುರ ಸಮೀಪದ ಹೊಸಗುಂದ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಭೀಕರ ಅಪಘಾತವಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಸಗುಂದ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಲಾರಿ (KA 05 AA 5068 ) ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಗುದ್ದಿದ ಪರಿಣಾಮ ಲಾರಿ ಕ್ಲೀನರ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.ಮೃತರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಈ ಅಪಘಾತದಲ್ಲಿ ಲಾರಿ ಡ್ರೈವರ್ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ….

Read More
Exit mobile version