Headlines

ಸಕಾಲದಲ್ಲಿ ಚಿಕಿತ್ಸೆ ಲಭಿಸದೇ ವ್ಯಕ್ತಿ ಸಾವು ಆರೋಪ – ಆಲುವಳ್ಳಿ ವೀರೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ದಿಡೀರ್ ಪ್ರತಿಭಟನೆ

ಸಕಾಲದಲ್ಲಿ ಚಿಕಿತ್ಸೆ ಲಭಿಸದೇ ವ್ಯಕ್ತಿ ಸಾವು ಆರೋಪ – ಆಲುವಳ್ಳಿ ವೀರೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ದಿಡೀರ್ ಪ್ರತಿಭಟನೆ ರಿಪ್ಪನ್‌ಪೇಟೆ;- ಪಟ್ಟಣದ ಪ್ರಾಥಮಿಕಆರೋಗ್ಯಕೇಂದ್ರದಲ್ಲಿ  ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ಶುಕ್ರವಾರ ಬೆಳಗ್ಗೆ  ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆಂದು ಆರೋಪಿಸಿ  ಬಿಜೆಪಿ ಪಕ್ಷದವರು  ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷ ವಿರೇಶ್ ಆಲುವಳ್ಳಿ  ನೇತೃತ್ವದಲ್ಲಿ ಆಸ್ಪತ್ರೆಗೆ ಬೇಟಿ ನೀಡಿ  ಇರುವ ವೈದ್ಯರ ಬಳಿ ಚರ್ಚೆ ನಡೆಸಿ…

Read More

ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ – ಕೆ ಟಿ ಈಶ್ವರ್

ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ “ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ” – ಕೆ ಟಿ ಈಶ್ವರ್ ರಿಪ್ಪನ್ ಪೇಟೆ :ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ. ಮರಗಳು ಉಸಿರಾಟಕ್ಕೆ ಆಮ್ಲಜನಕ ನೀಡುತ್ತವೆ, ನದಿಗಳು ನಮಗೆ ನೀರು ನೀಡುತ್ತವೆ, ಮಣ್ಣು ಆಹಾರ ಬೆಳೆಸುತ್ತದೆ. ಆದರೆ ಇಂದಿನ ಜಗತ್ತಿನಲ್ಲಿ ನಾವು ಈ ಸಂಪತ್ತುಗಳನ್ನು ದುರ್ಬಳಕೆ ಮಾಡುತ್ತಿದ್ದೇವೆ. ಎಂದು ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರದ ಉಪನ್ಯಾಸಕ  ಕೆ. ಟಿ.ಈಶ್ವರ್ ಹೇಳಿದರು. ಪಟ್ಟಣದ…

Read More

ಬುಲೆರೋ-ಬೈಕ್ ಮುಖಾಮುಖಿ ಡಿಕ್ಕಿ : ಗರ್ತಿಕೆರೆ ಮೂಲದ ಯುವಕ ಸ್ಥಳದಲ್ಲೇ ಸಾವು

ಬುಲೆರೋ-ಬೈಕ್ ಮುಖಾಮುಖಿ ಡಿಕ್ಕಿ : ಗರ್ತಿಕೆರೆ ಮೂಲದ ಯುವಕ ಸ್ಥಳದಲ್ಲೇ ಸಾವು ತೀರ್ಥಹಳ್ಳಿ ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಇಂದು ಸಂಜೆ ನಡೆದ ದುರಂತ ಅಪಘಾತದಲ್ಲಿ ಬೈಕ್ ಹಾಗೂ ಬುಲೆರೋ ವಾಹನ ಮುಖಾಮುಖಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಗರ್ತಿಕೆರೆ ಸಮೀಪದ ನಿಟ್ಟೂರು ಗ್ರಾಮದ ನಿವಾಸಿ ಚರಣ್ (23) ಎಂಬ ಯುವಕನೇ ದುರ್ದೈವಿ. ಈತ ತೀರ್ಥಹಳ್ಳಿಯಿಂದ ಮನೆಗೆ ವಾಪಸ್ಸಾಗುವ ವೇಳೆ ಅಪಘಾತ ಸಂಭವಿಸಿದೆ. ಚರಣ್ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಪದವಿ ವ್ಯಾಸಾಂಗ ಮುಗಿಸಿದ್ದನು. ಇನ್ನೂ ಚರಣ್…

Read More

ರಾಜಕಾರಣಿ ಹಾಗೂ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಅರೆಬೆತ್ತಲೆಯಾಗಿ ಉದ್ಘಾಟಿಸಿದ ಹೋರಾಟಗಾರ ಟಿ ಆರ್ ಕೃಷ್ಣಪ್ಪ|TRK

ರಾಜಕಾರಣಿ ಹಾಗೂ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಅರೆಬೆತ್ತಲೆಯಾಗಿ ಉದ್ಘಾಟಿಸಿದ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಗೈರಿನಲ್ಲಿ ಸರ್ಕಾರಿ ಯೋಗ ಮಂದಿರವನ್ನು ಜನಪರ ಹೋರಾಟಗಾರನೊಬ್ಬ ಅರೆ ಬೆತ್ತಲೆಯಾಗಿ ಉದ್ಘಾಟನೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿತಿ ಕೇಂದ್ರದವರು ಅನುಷ್ಟಾನಗೊಳಿಸಿದ 6 ಲಕ್ಷ…

Read More

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು – ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ , ಮಾಜಿ ಸಚಿವ ಹರತಾಳು ಹಾಲಪ್ಪ | Kagodu thimmappa

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು – ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ , ಮಾಜಿ ಸಚಿವ ಹರತಾಳು ಹಾಲಪ್ಪ ಅನಾರೋಗ್ಯದ ಕಾರಣ ವಿಧಾನಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿದ ಸಚಿವ ಮಧು ಬಂಗಾರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ. ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ರೈತರ…

Read More

ಬಿಜೆಪಿ ಪಕ್ಷ ಅಮಾಯಕರ ಶವದ ಮೇಲೆ ಸೌಧ ನಿರ್ಮಿಸಲು ಹೊರಟಿದೆ : ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ

ಹೊಸನಗರ: ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇನ್ನೊಬ್ಬರ ಶವದ ಮೇಲೆ ಸೌಧ ಕಟ್ಟಲು ಹೊರಟಿದೆ ಎಂದು ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ಆಡಳಿತ ವ್ಯವಸ್ಥೆಯ ವಿರುದ್ಧ ಕಿಡಿಕಾರಿರುವ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಹಿಂದುತ್ವದ ಹೆಸರಲ್ಲೇ ಅಧಿಕಾರಕ್ಕೆ ಬಂದ ರಾಜ್ಯ ಹಾಗೂ ಕೇಂದ್ರ ಬಿಜೆಪಿಯ ನಾಯಕರೇ ನೀವು ಅಧಿಕಾರಕ್ಕೆ ಬಂದ ನಂತರ ದೇಶದ, ರಾಜ್ಯದ ಜನತೆ ಮನೆಯಿಂದ ಹೊರಗೆ ಬರಲು…

Read More

ಮಣಿಪುರದಲ್ಲಿ ಮಡಿದ ರಿಪ್ಪನ್‌ಪೇಟೆ ಯೋಧನಿಗೆ ಯುವ ಕಾಂಗ್ರೆಸ್ ವತಿಯಿಂದ ಶ್ರದ್ದಾಂಜಲಿ|Tribute

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ಬೆಳಗಿನಜಾವ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದಾಗ ಮರಣವನ್ನಪ್ಪಿದ ರಿಪ್ಪನ್‌ಪೇಟೆಯ ಯೋಧ ಸಂದೀಪ್ ರವರಿಗೆ ಶದ್ಧಾಂಜಲಿ ಅರ್ಪಿಸಲಾಯಿತು. ಅಸ್ಸಾಂನ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ರಿಪ್ಪನ್‌ಪೇಟೆಯ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿರುವುದು ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಯುವ ಕಾಂಗ್ರೆಸ್ ಸಾಗರ ತಾಲೂಕು ಅಧ್ಯಕ್ಷ ಅಶೋಕ ಬೇಳೂರು ಹೇಳಿದರು. ಈ ಸಂಧರ್ಭದಲ್ಲಿ ರಾಷ್ಟೀಯ ಯುವ ಕಾಂಗ್ರೆಸ್ ನ…

Read More

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್  ಗುರುವಾರ  ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್ ಅವರಿಗೆ ಆತ್ಮೀಯವಾಗಿ ಶುಭಾಶಯ ಕೋರಿದರು. ಈ ಕುರಿತು ಕೇಕ್ ಕತ್ತರಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಮಧು ಬಂಗಾರಪ್ಪ,…

Read More

ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ

Recruitment process for 35,000 teachers begins in the upcoming academic year: Minister Madhu Bangarappa ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ Recruitment process for 35,000 teachers begins in the upcoming academic year: Minister Madhu Bangarappa ರಿಪ್ಪನ್‌ಪೇಟೆ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಈ ಸೌಲಭ್ಯಗಳ ಸದುಪಯೋಗ ಪಡೆದು ವಿದ್ಯಾರ್ಥಿಗಳು…

Read More

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು  ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ 17 ಬಿ.ಇಡಿ ಕಾಲೇಜುಗಳ 911 ಪ್ರ-ಶಿಕ್ಷಣಾರ್ಥಿಗಳು 4ನೇ ಸೆಮಿಸ್ಟರ್ ಪರೀಕ್ಷೆಯನ್ನು ಬರೆದು 5 ತಿಂಗಳೇ ಕಳೆದಿದ್ದರೂ, ಇನ್ನೂ ಫಲಿತಾಂಶ ಬಾರದ ಕಾರಣ ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರಕ್ಕೀಡಾಗಿದೆ. 2022-23ನೇ ಸಾಲಿನ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಅಂತಿಮ ಸೆಮಿಸ್ಟರ್‌ನ ಪರೀಕ್ಷೆಗಳು ಕಳೆದ ಜನವರಿ 10ರಂದು ಮುಕ್ತಾಯವಾಗಿದೆ.ಆದರೆ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಈ ಮಧ್ಯೆ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ…

Read More
Exit mobile version