Headlines

KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ

KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಒಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ – ಶಿಕಾರಿಪುರ ಮಾರ್ಗದಲ್ಲಿ ನಡೆದಿದೆ. ಶಿವಮೊಗ್ಗ-ಶಿಕಾರಿಪುರ ಮಾರ್ಗದ ಚಿನ್ನಿಕಟ್ಟೆ ಬಿದರಳ್ಳಿ ಗ್ರಾಮದ ಬಳಿ KSRTC ಬಸ್ ಒಮಿನಿ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಓಮಿನಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಒಮಿನಿ ಕಾರಿನಲ್ಲಿ ಸೂರಗೊಂಡನಕೊಪ್ಪದಿಂದ ನಾಲ್ವರು…

Read More

POCSO| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಓರ್ವ ಮಹಿಳೆ ಸೇರಿ ಮೂವರ ಬಂಧನ

ಮದ್ಯ ಮಾಂಸಕ್ಕಾಗಿ ಅಪ್ರಾಪ್ತ ಬಾಲಕಿಯನ್ನು ಪಾಪದ ಕೂಪಕ್ಕೆ ತಳ್ಳಿದಳಾ ಚಿಕ್ಕಮ್ಮ..!!?? ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಮಹಿಳೆಯ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಎರಡು ಪ್ರಕರಣದಲ್ಲಿ ಮೂವರು ಆರೋಪಿಯನ್ನು ಬಂಧಿಸಲಾಗಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಯುವರಾಜ್ (25) ,ವಿಜಯ್ ಕುಮಾರ್ ಹಾಗೂ ಸಾವಿತ್ರಿ ಬಂಧಿತ ಆರೋಪಿಗಳಾಗಿದ್ದಾರೆ. ಮದ್ಯ ಮತ್ತು ಮಾಂಸಕ್ಕಾಗಿ ಸ್ವಂತ ಅಕ್ಕನ ಮಗಳನ್ನೆ ಪಾಪದ ಕೂಪಕ್ಕೆ ತಳ್ಳಿರುವ ಚಿಕ್ಕಮ್ಮಳ ಕ್ರೌರ್ಯಕ್ಕೆ ಅಪ್ರಾಪ್ತ ಯುವತಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದಿರುವ…

Read More

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಆದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ.  ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 161 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.  43 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 28…

Read More

Ripponpete |ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ – ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

Ripponpete | ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More

ದ್ವಿತೀಯ ಪಿಯುಸಿ ಫಲಿತಾಂಶ – ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 97.78% ಫಲಿತಾಂಶ

ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ  97.78% ಫಲಿತಾಂಶ  ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜೆಗೆ  2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ರಲ್ಲಿ 97.78 ಫಲಿತಾಂಶ  ಬಂದಿದೆ.ಕಲಾ ವಿಭಾಗ 98.57% ವಿಜ್ಞಾನ ವಿಭಾಗ ದಲ್ಲಿ 95.77%, ವಾಣಿಜ್ಯ ವಿಭಾಗ 98.82% ರಷ್ಟು ವಿದ್ಯಾರ್ಥಿಗಳು ಉತ್ತೀರಣರಾಗಿದ್ದಾರೆ. ಈ ಬಾರಿಯ ಪರೀಕ್ಷೆಯಲ್ಲಿ  226 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು.221 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಾಲೇಜಿನ ಹಂತದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು  ಭೂಮಿಕಾ –…

Read More

Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ

Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ ಬಂಕಾಪುರ : ಭಕ್ತಿಯಿಂದ ಬರುವ ಭಕ್ತರ ಕಷ್ಟವನ್ನು ಕಳೆದು, ಇಷ್ಟಾರ್ಥಗಳನ್ನು ಈಡೇರಿಸುವ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಬಂಕಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಅಂಕದ ಕಣದ ಓಣಿಯಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆಗೆ ಶ್ರೀ ಸಿದ್ದಯ್ಯಸ್ವಾಮಿಗಳು ಕೆಂಡದ ಮಠ ಚಾಲನೆ ನೀಡಿದರು. ತನ್ನ ಮಹಾ ಮಹಿಮೆಯಿಂದ ಜನರ ಮನದಲ್ಲಿ ಮನೆ ಮಾಡಿರುವ ಶ್ರೀ ಬೀರಲಿಂಗೇಶ್ವರನ ಪೌರಾಣಿಕ ಕಥೆಯಿದೆ….

Read More

ರಿಪ್ಪನ್‌ಪೇಟೆ ,ಉಡುಪಿ,ಮಂಗಳೂರು ಮತ್ತು ಚಿಕ್ಕಮಗಳೂರಿನಲ್ಲಿ ನಾಳೆ(10-04-2024) ಈದ್ ಉಲ್ ಫಿತರ್ ಹಬ್ಬ ಆಚರಣೆ

ರಿಪ್ಪನ್‌ಪೇಟೆ ,ಕರಾವಳಿ ಭಾಗ ಮತ್ತು ಚಿಕ್ಕಮಗಳೂರಿನಲ್ಲಿ ನಾಳೆ(10-04-2024) ಈದ್ ಉಲ್ ಫಿತರ್ ಹಬ್ಬ ಆಚರಣೆ ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ತೀರ್ಮಾನಿಸಲಾಗಿದೆ.ಅದರದೊಂದಿಗೆ ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲೂ ಈದುಲ್ ಫಿತರ್ ಆಚರಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ,ರಿಪ್ಪನ್‌ಪೇಟೆ ಪಟ್ಟಣದಲ್ಲಿಯೂ ನಾಳೆಯೇ ಈದುಲ್ ಫಿತ್ ರ್ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಗುರುವಾರ ಈದುಲ್ ಫಿತ್ ರ್ ಆಚರಣೆ…

Read More

ನಾಳೆ (10-04-2024) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ನಾಳೆ (10-04-2024) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ ಶಿವಮೊಗ್ಗ : ದ್ವಿತೀಯ ಪಿಯುಸಿ(PUC) ಪರೀಕ್ಷೆಯ ಫಲಿತಾಂಶ ಬುಧವಾರ ( ನಾಳೆ ) ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ  ಪ್ರಕಟವಾಗಲಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.  2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ…

Read More

ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಗೆ ಕಂಟಕಪ್ರಾಯವಾಗಿರುವ ಕಟ್ಟಡ – ತೆರವುಗೊಳಿಸಲು ಮುಂದಾಗುತ್ತಾರ ಅಧಿಕಾರಿಗಳು – ಜನಹಿತಕ್ಕಾಗಿ | The building is a thorn in the development of Ripponpet town

ಜನಹಿತಕ್ಕಾಗಿ ಯಾವುದೇ ಒಂದು ಗ್ರಾಮ, ನಗರದ ಅಭಿವೃದ್ಧಿಗೆ ಆ ಭಾಗವನ್ನು ಪ್ರತಿನಿಧಿಸುವ ವಿವಿಧ ಹಂತದ ಚುನಾಯಿತ ಪ್ರತಿನಿಧಿಗಳು,ಅಧಿಕಾರಿ ಜೊತೆ ಗ್ರಾಮಸ್ಥರ ಸಹಕಾರ ಇದ್ದಾಗ ಮಾತ್ರ ನಿರೀಕ್ಷಿತ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯ­ವಾಗುತ್ತದೆ. ಅದರ ಜೊತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆ ಊರಿನ ಅಭಿವೃದ್ಧಿ ಕುಂಠಿತಕ್ಕೂ ಬೆರಳೆಣಿಕೆ ಗ್ರಾಮಸ್ಥರೇ ಕಾರಣರಾಗುತ್ತಾರೆ ಎನ್ನುವುದಕ್ಕೆ ನಮ್ಮ ಗ್ರಾಮ ನಿದರ್ಶನ’ ಎನ್ನುತ್ತಾರೆ ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿ ಪರ ಚಿಂತಕರು. ಹೌದು ರಿಪ್ಪನ್‌ಪೇಟೆ ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ನಾಲ್ಕು ರಸ್ತೆಗಳನ್ನು…

Read More

Shivamogga | ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

ಶಿವಮೊಗ್ಗ : ಆಟೋ ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಗೋಪಾಳ ನಿವಾಸಿ ಸಮೀರ್ @ ಸಯ್ಯದ್ ಸಮೀರ್ ಬಂಧಿತ ಆರೋಪಿಯಾಗಿದ್ದಾನೆ.  ನಗರದ ಕಾಮತ್ ಲೇಔಟ್ ನ ಖಾಲಿ ಜಾಗದಲ್ಲಿ ಆಟೋ ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ 23 ವರ್ಷದ ಯುವಕನನ್ನ‌ ಬಂಧಿಸಲಾಗಿದೆ. ನಡೆದಿದ್ದೇನು..??? ದಿನಾಂಕ: 08-04-2024 ರಂದು ಮದ್ಯಾಹ್ನ ತುಂಗಾ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಕಾಮತ್‌ ಲೇಔಟ್‌ ಖಾಲಿ ಜಾಗದಲ್ಲಿ ಯಾರೋ ಆಸಾಮಿಗಳು ಆಟೋ ಒಂದನ್ನು…

Read More