ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ಶಿವಮೊಗ್ಗ ಹಾಗೂ ತೀರ್ಥಹಳ್ಳಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ಆರ್‌.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು…

Read More

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅನಾಮಧೇಯ ಶವ ಪತ್ತೆ|Thirthahalli

ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದ್ದು,ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ತೂದೂರು ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದೆ. ತೂದೂರು ಗ್ರಾಮದ ಸರ್ಕಾರಿ ಶಾಲೆ ಹಿಂಬಾಗ ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಉಕ್ಕಡದಲ್ಲಿ ಶವವನ್ನು ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತಿದ್ದು ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ.

Read More

ಉರುಳಿಗೆ ಸಿಲುಕಿ ಚಿರತೆ ಸಾವು | Leopard died after falling

ಉರುಳಿಗೆ ಸಿಲುಕಿ ಚಿರತೆ ಸಾವು  ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆ ವೃತ್ತದ ಮೇಲಿನ ಕಿರುಗುಣಸೆ ಗ್ರಾಮದಲ್ಲಿ ಬುಧವಾರ ನಡೆದಿದೆ. ಚಿರತೆ ಉರುಳಿಗೆ ಸಿಲುಕಿ ಕೂಗುವುದನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಶಿವಮೊಗ್ಗದಿಂದ ಅರವಳಿಕೆ ತಜ್ಞರು ಆಗಮಿಸಿ ಗಾಯಗೊಂಡಿದ್ದ ಚಿರತೆಗೆ ಚಿಕಿತ್ಸೆ ನೀಡುವಷ್ಟರಲ್ಲಿ ಚಿರತೆ ಮೃತಪಟ್ಟಿದೆ. ಜಮೀನಿನೊಂದರ ತಂತಿ ಬೇಲಿಗೆ ಹಂದಿ‌ ಹಿಡಿಯಲು ಅಳವಡಿಸಿದ್ದ ಉರುಳಿಗೆ ಸಿಲುಕಿ ಸುಮಾರು…

Read More

ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ

Religious leader Roman Pinto delivers a powerful message on love, forgiveness, and peaceful living during the Good Shepherd Church annual festival in Ripponpete, Karnataka. ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಗೌರವಿಸಬೇಕು; ಪ್ರೀತಿ ಮತ್ತು ಕ್ಷಮೆಯಿಂದಲೇ ಜಗತ್ತನ್ನೇ ಗೆಲ್ಲಬಹುದು ಎಂಬ ಪ್ರಭು ಏಸು ಸ್ವಾಮಿಯವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ…

Read More

ಶಿವಮೊಗ್ಗದಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ಭೇದಿಸಿದ ಪೊಲೀಸರು; ಐವರು ಅರೆಸ್ಟ್

ಶಿವಮೊಗ್ಗದಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ಭೇದಿಸಿದ ಪೊಲೀಸರು; ಐವರು ಅರೆಸ್ಟ್ Vinobanagar police in Shivamogga busted an illegal IPL online betting racket and arrested five accused involved in cricket betting through a mobile app. Cash, mobiles, and a Mahindra XUV300 car worth Rs 6.35 lakh were seized. ಶಿವಮೊಗ್ಗ: ನಗರದಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳ ಹಿನ್ನೆಲೆ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ದಂಧೆಯಲ್ಲಿ…

Read More

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕರು ಹಾಗೂ ಸಮಾಜಮುಖಿ ವ್ಯಕ್ತಿತ್ವದ ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡರು ಇಂದು ಬೆಳಗ್ಗೆ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರ ಹೊಸನಗರ ತಾಲೂಕು ಒಕ್ಕಲಿಗ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಕುಲಬಾಂಧವರು ಆಘಾತ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು…

Read More

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ : ಶಾಸಕ ಗೋಪಾಲಕೃಷ್ಣ ಬೇಳೂರು|gkb

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ  : ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದಾರೆ ಆದರೆ ಅವರುಗಳಿಗೆ ಅವಕಾಶಗಳು ಸಿಗುತ್ತಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ  ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು…

Read More

ರಿಪ್ಪನ್‌ಪೇಟೆ : ಆಟೋ ಮತ್ತು ಬೈಕ್‌ನಡುವೆ ಭೀಕರ ಅಪಘಾತ – ಓರ್ವನ ಸ್ಥಿತಿ ಗಂಭೀರ : ರಕ್ತದ ಮಡುವಿನಲ್ಲಿ ಸಹಾಯಕ್ಕೆ ಅಂಗಲಾಚಿದ ಗಾಯಾಳು|Accident

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆ ಬಳಿ ಬೈಕ್ ಹಾಗೂ ಲಗೇಜ್ ಆಟೋ ಭೀಕರ ಅಪಘಾತವಾಗಿ ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಬಳಿ ಲಗೇಜ್ ಆಟೋ (KA-15 A 4679) ಹಾಗೂ ಹೀರೋ ಹೋಂಡಾ ಸ್ಪೆಂಡರ್ (KA 01 S 8450) ಬೈಕ್ ಗಳ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಗವಟೂರು ನಿವಾಸಿ ಗಣೇಶ್ (46) ರವರಿಗೆ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ಅಪಘಾತ…

Read More

ಹೊಸನಗರ : ಚಲಿಸುತಿದ್ದ ಟ್ರಾಕ್ಟರ್ ಪಲ್ಟಿ – ನೀರುಗಂಟಿ ಸಾವು|Accident

ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ನೀರುಗಂಟಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರಿನಲ್ಲಿ(ನಗರ) ನಡೆದಿದೆ. ಬಿದನೂರು ನಗರದ ಚಿಕ್ಕಪೇಟೆ ನಿವಾಸಿ ತುಕರಾಂ(46) ಎಂಬಾತ ಮೃತ ದುರ್ದೈವಿ. ಕುಡಿಯುವ ನೀರು ಪೂರೈಸುವ ಟ್ರಾಕ್ಟರ್ ಪಲ್ಟಿಯಾದ ಕಾರಣ ನೀರುಗಂಟಿ ಸಾವನ್ನಪ್ಪಿದ್ದಾನೆ. ನಗರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೀರುಗಂಟಿ ಕೆಲಸ ಮಾಡುತ್ತಿದ್ದ ತುಕರಾಂ.ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಮನೆಗಳಿಗೆ ಟ್ಯಾಂಕರ್ ಗಳ ಮೂಲಕ ನೀರು ಪೂರೈಸಲು ಮುಂದಾದಾಗ ಈ ಅವಘಡ ಸಂಭವಿಸಿದೆ. ನೀರು ಪೂರೈಸುವ ಟ್ರ್ಯಾಕ್ಟರ್…

Read More

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್ ರಿಪ್ಪನ್‌ಪೇಟೆ : ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಮತ್ತು…

Read More