ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING
ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ನಿರ್ಮಾಪಕಿ ಗೀತಾ ಶಿವರಾಜ್ಕುಮಾರ್ ಅವರ ಪರವಾಗಿ ಪತಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬೇಸಿಗೆಯ ತೀವ್ರತೆಯಿಂದಾಗಿ ಶಿವರಾಜ್ ಕುಮಾರ್ ಸುಸ್ತಾಗಿದ್ದರು. ಶಿವಣ್ಣ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ….